ಕರ್ನಾಟಕ

ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮಳೆ ಎಚ್ಚರಿಕೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

(ನ್ಯೂಸ್‌ ಕಡಬ) newskadaba.com,  ಮೇ.16:  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಾದ್ಯಂತ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಲಾಗಿದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು […]

ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮಳೆ ಎಚ್ಚರಿಕೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ, ಇಂದಿನಿಂದಲೇ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.15:  ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಖಾಸಗಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇಂಧನ ವೆಚ್ಚ ಹೆಚ್ಚಳದಿಂದ ಕಾರ್ಯಾಚರಣೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ, ಖಾಸಗಿ ಬಸ್ ಟಿಕೆಟ್ ದರವನ್ನು ಇಂದಿನ ಮಧ್ಯರಾತ್ರಿಯಿಂದಲೇ ಶೇ.20ರಿಂದ 30ರಷ್ಟು ಹೆಚ್ಚಿಸಲು ಬಸ್ ಮಾಲೀಕರು ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದಾದ್ಯಂತ ಲಕ್ಷಾಂತರ ಪ್ರಯಾಣಿಕರ ಮೇಲೆ ನೇರ ಪರಿಣಾಮ ಬೀಳಲಿದ್ದು, ದಿನನಿತ್ಯ ಪ್ರಯಾಣಿಸುವ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ, ಇಂದಿನಿಂದಲೇ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟ್ರೋ ನಿಲ್ದಾಣದಲ್ಲಿ ನಡೀತು ಸಿನಿಮೀಯ ದೃಶ್ಯ: ವಿದೇಶಿ ಮಹಿಳೆಯ ದುಪ್ಪಟ್ಟಾಗಾಗಿ ರೈಲ್ವೆ ಹಳಿ ಮೇಲೆ ಜಿಗಿದ ಯುವಕ!

(ನ್ಯೂಸ್‌ ಕಡಬ) newskadaba.com,  ಮೇ.15: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಕೆಲವು ದೃಶ್ಯಗಳು ನೆಟ್ಟಿಗರ ಮನ ಗೆಲ್ಲುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಹೃದಯ ಸ್ಪರ್ಶಿ ಘಟನೆಯೊಂದು ನಡೆದಿದೆ. ವಿದೇಶಿ ಪ್ರವಾಸಿಗೆ ಭಾರತೀಯ ಯುವಕನೊಬ್ಬ ನೆರವಾಗಿದ್ದು ಯುವಕನ ಸಹಾಯ ಮನೋಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ವಿದೇಶಿ ಪ್ರವಾಸಿಯೊಬ್ಬರ ದುಪ್ಪಟ್ಟಾವೊಂದು ರೈಲಿನ ಹಳಿ ಮೇಲೆ ಬಿದ್ದಿದ್ದು ತಕ್ಷಣವೇ ಯುವಕನೊಬ್ಬ ನೆರವಾಗಿ ದುಪ್ಪಟ್ಟ ವಾಪಸ್ಸು ನೀಡಿದ್ದಾನೆ. ಸದ್ಯ ಈ ಹೃದಯಸ್ಪರ್ಶಿ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್

ಮೆಟ್ರೋ ನಿಲ್ದಾಣದಲ್ಲಿ ನಡೀತು ಸಿನಿಮೀಯ ದೃಶ್ಯ: ವಿದೇಶಿ ಮಹಿಳೆಯ ದುಪ್ಪಟ್ಟಾಗಾಗಿ ರೈಲ್ವೆ ಹಳಿ ಮೇಲೆ ಜಿಗಿದ ಯುವಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದರ್ಶನ್‌ ತೂಗುದೀಪಗೆ ಸುಪ್ರೀಂ ಕೋರ್ಟ್‌ ಬಿಗ್ ಶಾಕ್‌

(ನ್ಯೂಸ್‌ ಕಡಬ) newskadaba.com,ಮೇ.15: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪಗೆ ಮತ್ತೊಮ್ಮೆ ದೊಡ್ಡ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯಲ್ಲಿ ಸಾಕ್ಷಿಗಳ ಪರಿಶೀಲನೆ ವಿಳಂಬವಾಗುತ್ತಿದೆ ಎಂಬ ಕಾರಣ ನೀಡಿ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ವೃತ್ತಿಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀಳುವ ಸಾಧ್ಯತೆ ದಟ್ಟವಾಗಿದೆ. ಸಾಕ್ಷಿ ವಿಚಾರಣೆ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಉಲ್ಲೇಖಿಸಿ, ಜಾಮೀನು ಕೋರಿ ನಟ ದರ್ಶನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೇ ವೇಳೆ

ದರ್ಶನ್‌ ತೂಗುದೀಪಗೆ ಸುಪ್ರೀಂ ಕೋರ್ಟ್‌ ಬಿಗ್ ಶಾಕ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ದಾಳಿ,18 ಭದ್ರತಾ ಸಿಬ್ಬಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,ಮೇ.15: ಪಾಕಿಸ್ತಾನ ದೇಶದ ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾನಲ್ಲಿ ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಈ ದಾಳಿಯ ಹೊಣೆ ಹೊತ್ತಿದೆ ಎಂದು ತಿಳಿದುಬಂದಿದೆ. ಬಜೌರ್ ಜಿಲ್ಲೆಯ ದಮಂಗಿ ಸ್ಕೌಟ್ಸ್ ಕ್ಯಾಂಪ್ ಮೇಲೆ ಉಗ್ರರು ಆತ್ಮಹತ್ಯಾ ದಾಳಿಯೊಂದಿಗೆ ದಾಳಿ ಆರಂಭಿಸಿದ್ದಾರೆ. ಶಿಬಿರದ ಮುಖ್ಯ ದ್ವಾರದ ಬಳಿ ಉಗ್ರನೊಬ್ಬ ಸ್ಫೋಟ ನಡೆಸಿದ ಬಳಿಕ, ಸುಮಾರು 20ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಭಯೋತ್ಪಾದಕರು

ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ದಾಳಿ,18 ಭದ್ರತಾ ಸಿಬ್ಬಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೂನ್‌ 21ರಂದು ನೀಟ್‌ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಂತರ ಎನ್‌ಟಿಎ ಹೊಸ ದಿನಾಂಕ ಪ್ರಕಟ

(ನ್ಯೂಸ್‌ ಕಡಬ) newskadaba.com,  ಮೇ.15: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್-ಯುಜಿ 2026 ಪರೀಕ್ಷೆಯನ್ನು ಜೂನ್ 21 ರಂದು ನಡೆಸುವುದಾಗಿ ಘೋಷಿಸಿದೆ. ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗಾಗಿ ದೇಶಾದ್ಯಂತ ಮೇ 3ರಂದು ನಡೆದಿದ್ದ ನೀಟ್‌ (ಯುಜಿ) 2026ರ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಅನಿವಾರ್ಯವಾಗಿ ಪರೀಕ್ಷೆಯನ್ನೇ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿತ್ತು. ರದ್ದತಿಯಿಂದಾಗಿ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳು ಪರಿಷ್ಕೃತ ವೇಳಾಪಟ್ಟಿಯ ಕುರಿತು

ಜೂನ್‌ 21ರಂದು ನೀಟ್‌ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಂತರ ಎನ್‌ಟಿಎ ಹೊಸ ದಿನಾಂಕ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ| ರಸ್ತೆಯಲ್ಲಿ ಮೀನಿನ ಎಣ್ಣೆ ಸೋರಿಕೆ: ಜಾರಿ ಬಿದ್ದ ದ್ವಿಚಕ್ರ ವಾಹನ ಸವಾರರು; ಕ್ಯಾಂಟರ್ ತಡೆದು ಸ್ಥಳೀಯರಿಂದ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಮೇ.15: ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯಿಂದ ಮೀನಿನ ಎಣ್ಣೆ ಹೊತ್ತೊಯ್ಯುತ್ತಿದ್ದ ಕ್ಯಾಂಟರ್ ತಾಂತ್ರಿಕ ದೋಷದಿಂದ ಭಾರೀ ಪ್ರಮಾಣದ ಮೀನಿನ ಎಣ್ಣೆ ಉಳ್ಳಾಲದ ರಸ್ತೆಯಲ್ಲಿ ಸೋರಿಕೆಯಾಗಿ ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯರು ಮೀನಿನ ಕ್ಯಾಂಟರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ. ಕೋಟೆಪುರದಲ್ಲಿ ಫಿಶ್ ಮೀಲ್ ಫ್ಯಾಕ್ಟರಿಗಳು ಕಾರ್ಯಾಚರಿಸುತ್ತಿದ್ದು, ಇಂದು ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಹೊತ್ತೊಯ್ಯುತ್ತಿದ್ದ

ಉಳ್ಳಾಲ| ರಸ್ತೆಯಲ್ಲಿ ಮೀನಿನ ಎಣ್ಣೆ ಸೋರಿಕೆ: ಜಾರಿ ಬಿದ್ದ ದ್ವಿಚಕ್ರ ವಾಹನ ಸವಾರರು; ಕ್ಯಾಂಟರ್ ತಡೆದು ಸ್ಥಳೀಯರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಏರಿಕೆ!

(ನ್ಯೂಸ್‌ ಕಡಬ) newskadaba.com,  ಮೇ.15: ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಭಾರೀ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ಬೆಳಗ್ಗೆ ಪರಿಷ್ಕೃತ ದರಗಳನ್ನು ಪ್ರಕಟಿಸಿದ್ದು, ತಕ್ಷಣದಿಂದಲೇ ಹೊಸ ದರ ಜಾರಿಗೆ ಬಂದಿದೆ. ಪ್ರತಿ ಲೀಟರ್‌ಗೆ ಸುಮಾರು ರೂ. 3ರಷ್ಟು ಹೆಚ್ಚಳವಾಗಿದ್ದು, ಸಾಮಾನ್ಯ ಜನರಿಗೆ ಮತ್ತೊಂದು ಬೆಲೆ ಶಾಕ್ ಎದುರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ರೂ.94.77ರಿಂದ ರೂ.97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ದರವೂ ರೂ.87.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ರಾಜ್ಯಾವಾರು

ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಏರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಕಲಿ ಪಾಸ್ ಪೋರ್ಟ್ ಸೃಷ್ಟಿ- ವಂಚನಾ ಜಾಲವನ್ನು ಭೇದಿಸಿದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಮೇ.15: ಬೇರೊಬ್ಬರ ಗುರುತಿನ ದಾಖಲೆ ಪತ್ರಗಳನ್ನು ದುರುಪಯೋಗಪಡಿಸಿ ನಕಲಿ ಪಾಸ್‌ ಫೋರ್ಟ್‌ ರಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ.ಉಳ್ಳಾಲ ನಿವಾಸಿ ಪ್ರೀತಾ ಡ.ಸೋಜಾ, ಪ್ರೇಮ್‌ ಡಿ.ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಕ್ರಿಮಿನಲ್‌ ಪ್ರಕೆಣ ದಾಖಲಿಸಿದ ಸಿಎಸ್‌ಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಳ್ಳಾಲ ನಿವಾಸಿ ಯಶೋಧ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್‌ಪೋರ್ಟ್‌ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೋಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು.

ಮಂಗಳೂರು: ನಕಲಿ ಪಾಸ್ ಪೋರ್ಟ್ ಸೃಷ್ಟಿ- ವಂಚನಾ ಜಾಲವನ್ನು ಭೇದಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರಿತ್ಯದ ಪರಿಣಾಮ; ಅರ್ಧ ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

(ನ್ಯೂಸ್‌ ಕಡಬ) newskadaba.com,  ಮೇ.15: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರಿತ್ಯದ ಪರಿಣಾಮ; ಅರ್ಧ ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ವೈಪರಿತ್ಯದ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್‌ಗೆ ತಾತ್ಕಾಲಿಕ ಅಡಚಣೆ ಉಂಟಾಯಿತು. ಏರ್‌ಪೋರ್ಟ್‌ ಸುತ್ತಮುತ್ತ ಮಳೆ ಹಾಗೂ ಕಡಿಮೆ ದೃಶ್ಯಮಾನತೆ ಕಂಡುಬಂದ ಹಿನ್ನೆಲೆ, ಎರಡು ವಿಮಾನಗಳು ಸುಮಾರು ಅರ್ಧ ಗಂಟೆ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ನಡೆದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರಿತ್ಯದ ಪರಿಣಾಮ; ಅರ್ಧ ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top