ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇಂದು (ಬುಧವಾರ) ಕಡಬ ತಾಲೂಕಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ […]

ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಯ್ಯೂರು ಉದ್ದೋಳೆ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಸಚಿನ್ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸನದಲ್ಲೊಬ್ಬ ವಿಕೃತ ಮನುಷ್ಯ – ಲೇಡಿಸ್ ಚಪ್ಪಲಿಗಳನ್ನೇ ಟಾರ್ಗೆಟ್ ಮಾಡುವ ಭೂಪ…!

(ನ್ಯೂಸ್ ಕಡಬ) newskadaba.com ಹಾಸನ, ಆ. 20. ರಾಜ್ಯದಲ್ಲಿ ಎಂತೆಂತಾ ವಿಕೃತಕಾಮಿಗಳು ಇರುತ್ತಾರೆ ಅಂದರೆ ಮಹಿಳೆಯರ ಒಳ ಒಡುಪು ಕದಿಯೋ ವಿಕೃತಿ ಕಾಮಿಯನ್ನು ನೀವು ನೋಡಿರ್ತೀರಾ. ಆದರೆ ಈ ವಿಕೃತಕಾಮಿಯೋರ್ವ ಪ್ರತ್ಯಕ್ಷನಾಗಿದ್ದು, ಲೇಡೀಸ್ ಚಪ್ಪಲಿಗಳೇ ಈತನ ಟಾರ್ಗೆಟ್ ಮಾಡುತ್ತಿರುವ ಘಟನೆ ಹಾಸನದ ಚನ್ನಪಟ್ಟಣ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಮಧ್ಯರಾತ್ರಿಯಲ್ಲಿ ಮನೆ, ಅಪಾರ್ಟ್ ಮೆಂಟ್ ಗೆ ನುಗ್ಗುವ ಈ ಕಾಮುಕ ಹೊರಗಡೆ ಬಿಟ್ಟ ಮಹಿಳೆಯರ ಚಪ್ಪಲಿಗಳನ್ನು ಎತ್ತಿಕೊಂಡು ಹೋಗಿ ಮುತ್ತು ಕೊಡುತ್ತಾನೆ ಎನ್ನಲಾಗಿದೆ. ಮನೆಯೊಂದರ ಸಿಸಿಟಿವಿಯಲ್ಲಿ ವಿಕೃತ ಕಾಮಿಯ

ಹಾಸನದಲ್ಲೊಬ್ಬ ವಿಕೃತ ಮನುಷ್ಯ – ಲೇಡಿಸ್ ಚಪ್ಪಲಿಗಳನ್ನೇ ಟಾರ್ಗೆಟ್ ಮಾಡುವ ಭೂಪ…! Read More »

ಕರ್ನಾಟಕ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕ ವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.   ಇಂದಿನ (ಆಗಸ್ಟ್ 20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಜಾಗೃತಿ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ ಮಾತನಾಡಿ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ Read More »

ಕರ್ನಾಟಕ

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪ್ರಥಮ ಪಿಯುಸಿಯ ಪ್ರಥಮೇಶ್ ಎಂದು ಗುರುತಿಸಲಾಗಿದೆ. ಪ್ರಥಮೇಶ್ ಸೋಮವಾರದಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಗ್ಗೆ ಆತನ ಮೃತದೇಹ ಅವರ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವೈದ್ಯರ ರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ – ವೈದ್ಯರ ಮೇಲೆ ಹಲ್ಲೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20.‌ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ- 2024ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.   ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನ ಪರಿಷತ್‍ನಲ್ಲಿ

ವೈದ್ಯರ ರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ – ವೈದ್ಯರ ಮೇಲೆ ಹಲ್ಲೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್ – ದೇಶದಲ್ಲಿ ಕರ್ನಾಟಕ ನಂ.1                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20. ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಕ್ರಾಂತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ (BEE) ಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು (PEVCS) ಹೊಂದಿದೆ, ಅವುಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲಿವೆ. ರಾಜ್ಯದಲ್ಲಿ 5,765 ಪಿಇವಿಸಿಎಸ್‌ಗಳಿದ್ದು, ಅದರಲ್ಲಿ 4,462 ಬೆಂಗಳೂರು ನಗರವೊಂದರಲ್ಲೇ ಇವೆ. 2023 ಮತ್ತು 2024 ರಲ್ಲಿ ಕ್ರಮವಾಗಿ ವಾಹನ್ ಮತ್ತು ಯಾತ್ರಾ ಪೋರ್ಟಲ್‌ಗಳು

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್ – ದೇಶದಲ್ಲಿ ಕರ್ನಾಟಕ ನಂ.1                 Read More »

ಕರ್ನಾಟಕ

HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗಣಿ ಪ್ರಕರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಎಡಿಜಿಪಿ ಪತ್ರ ಬರೆದಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.   ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಗಣಿ ಗುತ್ತಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ

HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..! Read More »

ಕರ್ನಾಟಕ

ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 20. ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು, ಬ್ರಿಟನ್‌ ನ ಪ್ರತಿಷ್ಠಿತ ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರದಿಂದ ಹಿಡಿದು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಕುರಿತು ಇಮ್ರಾನ್ ಅವರ ಮೇಲೆ ಆರೋಪವಿದೆ. ಆದರೆ, ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ತನ್ನನ್ನು ಅಧಿಕಾರದಿಂದ ದೂರವಿಡಲು ಈ ರೀತಿಯ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ  

ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್ Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ಭಾರತೀಯ ರೈಲ್ವೇ ಇಲಾಖೆಯು ಇದೀಗ ಖಾಲಿಯಿರುವ 12000 TTE ಹುದ್ದೆಗೆ ನೇಮಕಾತಿ ಆರಂಭಿಸಿ, 2024ರ ಸಾಲಿನ TTE ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ. ಈ ಮೂಲಕ ಭಾರತೀಯ ರೈಲ್ವೇಯಲ್ಲಿ ಅತೀ ದೊಡ್ಡ ನೇಮಕಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಬಯಸುವರಿಗೆ ಇರಬೇಕಾದ ಅರ್ಹತೆಗಳು- ವಯಸ್ಸು ಜನವರಿ 1, 2024ಕ್ಕೆ ಅನುಗುಣವಾಗಿ ಕನಿಷ್ಠ 18 ಹಾಗೂ ಗರಿಷ್ಠ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್
Scroll to Top