ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಸೋಮವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ಸಮೂಹ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರೂ, ಪ್ರಾಥಮಿಕ ವಿಭಾಗದ ಮೇಲ್ವಿಚಾರಕಿ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಪುರಾಣ ಮಹಾಭಾರತ ಇತಿಹಾಸಗಳಲ್ಲಿ ರಕ್ಷಾಬಂಧನ ಆಚರಣೆಯಲ್ಲಿತ್ತು. ಪ್ರಸ್ತುತ ಸಮಾಜದಲ್ಲಿ ಇಂತಹ ರಕ್ಷೆಯನ್ನು ಕಟ್ಟಿ ಸಹೋದರ-ಸಹೋದರಿಯರು ಎಂಬ ಭ್ರಾತೃತ್ವದ ಭಾವವನ್ನು ಮೂಡಿಸಿ ನಮ್ಮ ಹಿಂದೂ ಸಮಾಜದ ರಕ್ಷಣೆಯಲ್ಲಿ ನಾವು ಕೈಜೋಡಿಸುವುದರ ಮೂಲಕ ಭಾರತಮಾತೆಯ ರಕ್ಷಣೆ ಮಾಡೋಣ ಎಂದು […]

ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ Read More »

ಕರಾವಳಿ, ಕರ್ನಾಟಕ
Crime

9ನೇ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ 10ನೇ ತರಗತಿ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 19. ಕ್ಷುಲ್ಲಕ ವಿಚಾರಕ್ಕೆ ಚಾಕು ಇರಿದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.   ನಗರದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೇಲೆ, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಪರಿಣಾಮ ವಿದ್ಯಾರ್ಥಿಯ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಹಲ್ಲೆ ನಡೆಸಿದ 10ನೇ

9ನೇ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ 10ನೇ ತರಗತಿ ವಿದ್ಯಾರ್ಥಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ರಷ್ಯಾ ಜೊತೆಗಿನ ಯುದ್ಧದ ನಂತರ ಈ ತಿಂಗಳ ಅಂತ್ಯಕ್ಕೆ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.ಭೇಟಿಯ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಉಕ್ರೇನ್ ಭೇಟಿಯನ್ನು ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ತಿಳಿಸಿದ್ದು ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರವಾಸದ ವಿವರಗಳನ್ನು ನಂತರ ತಿಳಿಸಲಾಗುವುದು ಎಂಬುವುದಾಗಿ ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದೆ. ಉಕ್ರೇನ್‌ಗೆ ಭೇಟಿ ನೀಡಿದ ಬಳಿಕ ಮೋದಿ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ.      

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ  ಕಾರ್ಯಕ್ರಮವನ್ನು ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಸಮಿತಿ ಕೋಶಾಧಿಕಾರಿಯಾದ ಶ್ರೀ ಲಿಂಗಪ್ಪ ಜೆ. ಇವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಹಿನ್ನೆಲೆ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು. ತದನಂತರ ಶಾಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಮಾತಾಜಿ ಶ್ವೇತಾ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ Read More »

ಕರಾವಳಿ

ಚೀನಾದ ಹಡಗಿಗೆ ಫಿಲಿಪೈನ್ ಹಡಗು ಉದ್ದೇಶಪೂರ್ವಕ ಡಿಕ್ಕಿ            ಎಚ್ಚರಿಕೆ ನೀಡಿದ ಚೀನಾ                   

(ನ್ಯೂಸ್ ಕಡಬ) newskadaba.c0m ಚೀನಾ, ಆ. 19.  ಫಿಲಿಪೈನ್ಸ್ ನೌಕೆಯು ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಅಪಾಯಕಾರಿ ರೀತಿಯಲ್ಲಿ ಚೀನಾದ ಹಡಗಿನೊಂದಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ ಎಂದು ಚೀನಾದ ಕೋಸ್ಟ್ ಗಾರ್ಡ್ ವರದಿ ತಿಳಿಸಿದೆ. ಚೀನಾ ಫಿಲಿಪೈನ್ ಮೇಲೆ ಮತ್ತೊಂದು ಆರೋಪ ಮಾಡುತ್ತಿದೆ. ಈ ಕುರಿತು ಚೈನಾ ಕೋಸ್ಟ್ ಗಾರ್ಡ್‌ನ ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿ ವೀಡಿಯೋ ಮೂಲಕ ಸಮರ್ಥಿಸಿಕೊಂಡಿದೆ. ಚೀನಾ ಕೋಸ್ಟ್ ಗಾರ್ಡ್ ವಕ್ತಾರ ಗಾನ್ ಯು ಹೇಳಿಕೆ ನೀಡಿದ ಪ್ರಕಾರ, ಮುಂಜಾನೆ

ಚೀನಾದ ಹಡಗಿಗೆ ಫಿಲಿಪೈನ್ ಹಡಗು ಉದ್ದೇಶಪೂರ್ವಕ ಡಿಕ್ಕಿ            ಎಚ್ಚರಿಕೆ ನೀಡಿದ ಚೀನಾ                    Read More »

ರಾಷ್ಟ್ರೀಯ ನ್ಯೂಸ್

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ    ಪ್ರಧಾನಿಗೆ ಪತ್ರ ಬರೆದ 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು   

(ನ್ಯೂಸ್ ಕಡಬ) newskadaba.c0m ದೆಹಲಿ, ಆ. 19.  ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮ ಪ್ರಶಸ್ತಿ ಪುರಸ್ಕೃತ 70ಕ್ಕೂ ಹೆಚ್ಚು ವೈದ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಆರೋಗ್ಯ ಸಿಬ್ಬಂದಿಯನ್ನು ಹಿಂಸಾಚಾರದಿಂದ ರಕ್ಷಿಸಲು ಸುಗ್ರೀವಾಜ್ಞೆ ಮೂಲಕ ಪ್ರತ್ಯೇಕ ಕಾನೂನು ಜಾರಿಗೆ ತರಬೇಕು. ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಂದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.      

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ    ಪ್ರಧಾನಿಗೆ ಪತ್ರ ಬರೆದ 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು    Read More »

ಕರ್ನಾಟಕ

ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ…!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 19. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫೈನಲ್ ಪ್ರವೇಶಿಸಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ತಾಯ್ನಾಡಿಗೆ ಮರಳಿದ್ದಾರೆ. ತಾಯ್ನಾಡಿಗೆ ಆಗಮಿಸಿದ ವಿನೇಶ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಅಲ್ಲದೇ ವಿನೇಶ್ ಫೋಗಟ್ ರವರ ಗ್ರಾಮಸ್ಥರು ತಮ್ಮ ಊರಿನ ಸಾಧಕಿಯನ್ನು ವಿಶೇಷ ಸಮಾರಂಭದ ಮೂಲಕ ಸನ್ಮಾನಿಸಿದಲ್ಲದೇ ಅವರಿಗೆ ಚಿನ್ನದ ಪದಕವನ್ನೂ ನೀಡಿ ಗೌರವಿಸಿದ್ದಾರೆ.

ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ರಾಜ್ಯದಲ್ಲಿ ನೋಂದಣಿಯಾಗದ ಹೋಟೆಲ್‌ಗಳು, ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದು, ಸಭೆಯಲ್ಲಿ ನೋಂದಾವಣಿಯಾಗದ ಎಲ್ಲಾ ಹೋಟೆಲ್, ಹೋಂ ಸ್ಟೇಗಳು ಮತ್ತು ರೆಸಾರ್ಟ್ ಗಳನ್ನು ಬಂದ್ ಮಾಡಲು ಹಾಗೂ ಈ ಅಂಶವನ್ನು ತನ್ನ ನೀತಿಯಲ್ಲಿ ಅಳವಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.    

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..! Read More »

ಕರ್ನಾಟಕ

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.   ಮೃತಪಟ್ಟವರನ್ನು ವೃತ್ತಿಯಲ್ಲಿ ಕ್ಷೌರಿಕರಾಗಿದ್ದ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ಸುರೇಶ್‌ ಭಂಡಾರಿ(45) ಎಂದು ಗುರುತಿಸಲಾಗಿದೆ. ಸುರೇಶ್ ರವರು ಬೈಕಿನಲ್ಲಿ ಅಮ್ಚಿನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್‌ ನಡುವೆ ಅಪಾಘಾತ ನಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರದಂದು ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಮಾಡಿರುವ ಘಟನೆ ಲಾಲ್ ಭಾಗ್ ಜಂಕ್ಷನ್ ಬಳಿ ನಡೆದಿದೆ.   ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲೆಸೆದಿದ್ದಾರೆ. ಪರಿಣಾಮ ಬಸ್‌ ನ ಎದುರಿನ ಗಾಜು

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top