ಕಾನೂನು ಬದಲಾವಣೆಗೆ ಆಗ್ರಹ..!        ನಟ ಶೈನ್ ಶೆಟ್ಟಿ ಆಕ್ರೋಶ..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಕೊಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ನಡೆದಂತಹ ವೈದ್ಯೆಯ ಅತ್ಯಾಚಾರ ಕೊಲೆ ವಿಚಾರಕ್ಕೆ ದೇಶವೇ ಆಕ್ರೋಶಗೊಂಡಿದೆ. ಇದೀಗ ಇದೇ ವಿಚಾರವಾಗಿ ನಟ, ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ನಟ ಕಾನೂನು ಬದಲಾವಣೆಗೆ ಆಗ್ರಹಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡದೊಂದು ನೋಟ್ ಬರೆದು ಶೈನ್ ಶೆಟ್ಟಿ ಬದಲಾಗಲೇಬೇಕು ಕಾನೂನು ಎಂದು ಕೇಳಿಕೊಂಡಿದ್ದಾರೆ. ಶಾಸನಾತ್ಮಕ ತಿದ್ದುಪಡಿಯ ಮೂಲಕ ಮತ್ತು ಸಾಂವಿಧಾನಿಕ ಸವಾಲಿನ ಮೂಲಕ ಎರಡು ರೀತಿಯಲ್ಲಿ ಭಾರತದಲ್ಲಿನ ಕಾನೂನುಗಳನ್ನು ಬದಲಾಯಿಸಬಹುದು […]

ಕಾನೂನು ಬದಲಾವಣೆಗೆ ಆಗ್ರಹ..!        ನಟ ಶೈನ್ ಶೆಟ್ಟಿ ಆಕ್ರೋಶ..!        Read More »

ಕರ್ನಾಟಕ

ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 17.  ಇತ್ತೀಚೆಗಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದ, ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ ದೇವಸ್ಥಾನದ ಜೀರ್ಣೋದ್ಧಾರ ಮಾಡಲಾಗಿತ್ತು. ಅಂದಾಜು 40 ಸಾವಿರಕ್ಕೂ ಅಧಿಕ ನಗದನ್ನು ಕಳ್ಳ ಕಳವು ಮಾಡಿದ್ದು, ಈ ಹಣವನ್ನು ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳ ಪರಾರಿಯಾಗಿದ್ದು, ಈತನ ಕಳ್ಳತನದ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..! Read More »

ಕರಾವಳಿ

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ರಾಜ್ಯಪಾಲರು ಕಾನೂನು ಕ್ರಮಕ್ಕೆ ಅನುಮತಿಯನ್ನು ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರದಿಂದ ಸಿಡಿದೆದ್ದ ಕಾಂಗ್ರೆಸ್ ಮುಖಂಡರು, ರಾಜ್ಯಾದ್ಯಂತ ಆ. 19ರ ಸೋಮವಾರದಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇಂದು ಮುಡಾ ಹಗರಣ ಸಂಬಂಧಿಸಿ ರಾಜ್ಯಪಾಲರ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವಂತ ಕಾಂಗ್ರೆಸ್, ಅವರ ನಿರ್ಧಾರದ ವಿರುದ್ಧ ಸಿಡಿದೆದ್ದಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕುರುಬರ ಸಂಘದ ಮುಖಂಡರು, ಹಿಂದುಳಿದ ವರ್ಗಗಳ ವೇದಿಕೆಯ ಸದಸ್ಯರು

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ Read More »

ಕರ್ನಾಟಕ

ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ            

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಗಸ್ಟ್ 20ರಿಂದ 2025 ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಾರಂಭಿಸುತ್ತದೆ. ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಿಂದ ಮೃತರ ಹೆಸರುಗಳನ್ನು ತೆಗೆದುಹಾಕುವುದು, ತಿದ್ದುಪಡಿ, ಸೇರ್ಪಡೆಯನ್ನು ಮಾಡಲಿದ್ದು, ಕಂದಾಯ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ (DEO) ಮತ್ತು ಪಾಲಿಕೆ ಮುಖ್ಯಸ್ಥ ತುಷಾರ ಗಿರಿನಾಥ್ ಮನವಿ ಮಾಡಿದರು

ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ             Read More »

ಕರ್ನಾಟಕ

ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                    

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ದೇಹದ ತೂಕ ಹೆಚ್ಚಳದಿಂದ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ವಿನೇಶ್ ಫೋಗಟ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಜಯ ಘೋಷಣೆ ಕೂಗಿ ಅಭಿನಂದನೆ ಸಲ್ಲಿಸಿದರು.ಈ ವೇಳೆ ಭಾವುಕರಾದ ವಿನೇಶ್, ದೇಶದ ಜನರಿಂದ ಇಷ್ಟೊಂದು ಪ್ರೀತಿ ಮತ್ತು

ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                     Read More »

ರಾಷ್ಟ್ರೀಯ ನ್ಯೂಸ್

4 ಗ್ರಾಮ ಪಂಚಾಯತ್ ಗಳು: BBMP ವ್ಯಾಪ್ತಿಗೆ ತರುವಂತೆ ಮನವಿ                                                          

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮೈಸೂರು ರಸ್ತೆಯ ಬಿಡದಿ ಮತ್ತು ಕೆಂಗೇರಿ ನಡುವೆ ಇರುವ ಕುಂಬಳಗೋಡು ಗ್ರಾಮ ಪಂಚಾಯಿತಿ, ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಶಾಂತಿಪುರ ಗ್ರಾಮ ಪಂಚಾಯಿತಿ, ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯಿತಿ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿಗಳು ಬಿಬಿಎಂಪಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ ಎಂದು ಪಾಲಿಕೆ ಮೂಲಗಳು ವರದಿ ತಿಳಿಸಿದೆ. ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್‌ ಅವರು ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಕುಂಬಳಗೋಡು ಗ್ರಾಮ

4 ಗ್ರಾಮ ಪಂಚಾಯತ್ ಗಳು: BBMP ವ್ಯಾಪ್ತಿಗೆ ತರುವಂತೆ ಮನವಿ                                                           Read More »

ಕರ್ನಾಟಕ

ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಆಕ್ರೋಶ..!  ದೇಶಾದ್ಯಂತ ಇಂದು ವೈದ್ಯರ ಪ್ರತಿಭಟನೆ-ಮುಷ್ಕರ..!

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 17.  ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತರಬೇತಿ ನಿರತ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಆಕ್ರೋಶ ತೀವ್ರವಾಗಿದೆ. ವೈದ್ಯರು ಆಸ್ಪತ್ರೆಯ ಸೇವೆಗಳನ್ನು ಪ್ರಮುಖವಾಗಿ ಸ್ಥಗಿತಗೊಳಿಸುವಂತೆ ಪ್ರತಿಭಟನಾಕಾರರು ದೇಶಾದ್ಯಂತ ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಪ್ರತಿಭಟನೆ ಮತ್ತು ಮುಷ್ಕರ ನಡೆಸುತ್ತಿದ್ದಾರೆ. ದೇಶದ ವೈದ್ಯಕೀಯ ಸಿಬ್ಬಂದಿಗಳ ಅತಿದೊಡ್ಡ ಸಂಘಟನೆಯಾದ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​(IMA), ಇಂದು

ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಆಕ್ರೋಶ..!  ದೇಶಾದ್ಯಂತ ಇಂದು ವೈದ್ಯರ ಪ್ರತಿಭಟನೆ-ಮುಷ್ಕರ..! Read More »

ಕರ್ನಾಟಕ

ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಕೇಸ್ ಗೆ ಸಂಬಂಧಿಸಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರು ನೀಡಿರುವ ದೂರಿನ ಅನುಸಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಂಭವವಿದೆ. ರಾಜ್ಯಪಾಲರು ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ತಮ ನೋಟೀಸ್ನಲ್ಲಿ ಉಲ್ಲೇಖ ಮಾಡಿಲ್ಲವಾದರೂ ದೂರುದಾರರು ಈಗಾಗಲೇ ಲೋಕಾಯುಕ್ತ

ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ Read More »

ಕರ್ನಾಟಕ

ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬ ಕಳೆದು ಮರುದಿನ ಇಂದು ಬೆಳ್ಳಂಬೆಳಗ್ಗೆ ಭೀಕರ ದುರಂತ  ಘಟನೆ ನಡೆದಿದ್ದು, ಟಿಪ್ಪರ್ ಹರಿದು ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.                

ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕೋಲ್ಕತ್ತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೋರ್ವಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರದ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಶಾಂತಿಯುತ ಮೆರವಣಿಗೆ ನಡೆಯಿತು.   ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಭಾಗವಹಿಸಿದ್ದರು.

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ Read More »

ಕರಾವಳಿ, ಕರ್ನಾಟಕ
Scroll to Top