ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 17. ಇಲ್ಲಿನ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ನೆರವೇರಿಸಿ ಭಕ್ತರಿಂದ ಹೆಚ್ಚಿನ ದಕ್ಷಿಣೆಗೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿ ದೇವಳದ ಅರ್ಚಕ ಶಿವ ಪ್ರಕಾಶ್ ಪಾಂಡೇಲು ಎಂಬವರನ್ನು ಅಮಾನತುಗೊಳಿಸಿದ ಕುರಿತು ವರದಿಯಾಗಿದೆ. ಇತ್ತೀಚಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶದ ಭಕ್ತರ ತಂಡವೊಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿಕೊಂಡು ತಮ್ಮ ಇಷ್ಟಾರ್ಥ ದಕ್ಷಿಣೆಯನ್ನೂ ಅರ್ಚಕರಿಗೆ ನೀಡಿದ್ದಾರೆ. ಆದರೆ ಭಕ್ತರು ನೀಡಿರುವ ದಕ್ಷಿಣೆ ಕಡಿಮೆಯಾಯಿತೆಂದು ಸಿಟ್ಟಿಗೆದ್ದ ಅರ್ಚಕ ಭಕ್ತರು […]

ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು             ಪ್ರಯಾಣಿಕರ ಸ್ಥಳಾಂತರ                                                

(ನ್ಯೂಸ್ ಕಡಬ) newskadaba.c0m ಲಖನೌ, ಆ. 17.  ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ನಸುಕಿನ ವೇಳೆಯಲ್ಲಿ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತ ಕುರಿತು ಮಾಹಿತಿ ನೀಡಿರುವ ನಾರ್ತ್ ಸೆಂಟ್ರಲ್ ರೈಲ್ವೇ ಹಿರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿಕಾಂತ್ ತ್ರಿಪಾಠಿ, ಮುಂಜಾನೆ 2.30 ಕ್ಕೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಎಂದರು.              

ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು             ಪ್ರಯಾಣಿಕರ ಸ್ಥಳಾಂತರ                                                 Read More »

ರಾಷ್ಟ್ರೀಯ ನ್ಯೂಸ್

ಕಡಬ ರಕ್ಷಿತಾರಣ್ಯದಲ್ಲಿ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಸಂಪೂರ್ಣ ಕೊಳೆತುಹೋದ ಮೃತದೇಹದ ಅಸ್ಥಪಂಜರವೊಂದು ಪತ್ತೆಯಾಗಿರುವ ಕುರಿತು ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೊಟ್ಟಡ್ಕ ಬಳಿಯ ಕೊಂಬಾರು ರಕ್ಷಿತಾರಣ್ಯದ ಪ್ರದೇಶದ ಉಡೆಂಜಿಪಲ್ಲ ತೋಡು ಪ್ರದೇಶದಿಂದ ವರದಿಯಾಗಿದೆ. ಸ್ಥಳೀಯರ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಪೊಲೀಸರಿಗೆ ತಲೆ ಬುರುಡೆ, ಎದೆ ಮೂಳೆಗಳು ಹಾಗೂ ಕಾಲಿನ ಮೂಳೆಗಳು ಮಾತ್ರ ಕಂಡುಬಂದಿದ್ದು, ಮಾಂಸಖಂಡಗಳು ಮತ್ತು ಚರ್ಮ ಇಲ್ಲದೇ ಇದ್ದು, ಮೃತದೇಹವು ಪುರುಷನದ್ದೋ ಅಥವಾ ಮಹಿಳೆಯದ್ದೋ ಎನ್ನುವುದು ತಿಳಿದುಬಂದಿಲ್ಲ. ಸುಮಾರು 4ರಿಂದ 6 ತಿಂಗಳ ಹಿಂದೆ

ಕಡಬ ರಕ್ಷಿತಾರಣ್ಯದಲ್ಲಿ ಅಸ್ಥಿಪಂಜರ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ, ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್‌ 4 ರಂದು ನಡೆಯಲಿದೆ ಎಂದರು.              

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ Read More »

ರಾಷ್ಟ್ರೀಯ ನ್ಯೂಸ್

ಡಿಸೆಂಬರ್ ತಿಂಗಳ ವೇಳೆಗೆ ಮೊದಲ ಗಗನಯಾನ- ಇಸ್ರೋ

(ನ್ಯೂಸ್ ಕಡಬ) newskadaba.com ಶ್ರೀಹರಿಕೋಟಾ, ಆ. 17. ಭಾರತ ದೇಶದ ಮೊದಲ ಗಗನಯಾನ ಯೋಜನೆಯನ್ನು ಈ ವರ್ಷದ ಡಿಸೆಂಬರ್‌ಗೆ ಆರಂಭಿಸಲು ಇಸ್ರೋ ನಿರ್ಧರಿಸಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಹೇಳಿದ್ದಾರೆ. ಮಾನವ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಕೆಟ್‌ನ ಕೆಲವು ಭಾಗ ಗಳು ಸತೀಶ್‌ ಧವನ್‌ ಸ್ಪೇಸ್‌ ಸೆಂಟರ್‌ ತಲುಪಿದ್ದು, ಮಾಡ್ನೂಲ್‌ ಜೋಡಣೆಯು ನಡೆದಿದೆ. ಸಿಬಂದಿ ಪಾರಾಗುವ ಹಾರ್ಡ್‌ವೇರ್‌ ಸಹ ಸಿದ್ಧವಾಗಿದೆ ಎಂದೂ ಅವರು ಹೇಳಿದ್ದಾರೆ.

ಡಿಸೆಂಬರ್ ತಿಂಗಳ ವೇಳೆಗೆ ಮೊದಲ ಗಗನಯಾನ- ಇಸ್ರೋ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಶಿವರುದ್ರಯ್ಯ (49) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                              Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯಪಾಲರಿಂದ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಗ್ರೀನ್ ಸಿಗ್ನಲ್ ಸಿಎಂ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ತುರ್ತು ಸಚಿವ ಸಂಪುಟ ಸಭೆ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಇಂದು ಸಂಜೆ 5 ಗಂಟೆಗೆ ಕರೆಯಲಾಗಿದ್ದ ತುರ್ತು ಸಚಿವ ಸಂಪುಟದ ವಿಶೇಷ ಸಭೆಯನ್ನು ರದ್ದುಗೊಳಿಸಲಾಗಿದೆ. ರಾಜ್ಯಪಾಲರ ನಡೆಯ ವಿರುದ್ದ ಈಗಾಗಲೇ ಕಾನೂನು ಹೋರಾಟದ ಸುಳಿವು ನೀಡಿರುವ ರಾಜ್ಯ ಸರಕಾರ, ಕೇರಳ ಮಾದರಿಯಲ್ಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳುವ ಸಾಧ್ಯತೆಗಳಿವೆ.

ರಾಜ್ಯಪಾಲರಿಂದ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಗ್ರೀನ್ ಸಿಗ್ನಲ್ ಸಿಎಂ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ತುರ್ತು ಸಚಿವ ಸಂಪುಟ ಸಭೆ ರದ್ದು Read More »

ಕರ್ನಾಟಕ

“ಮೆಟ್ರೋ ರೈಲು ಟಿಕೆಟ್ ದರ ಏರಿಕೆ”..! 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಶೀಘ್ರದಲ್ಲೇ ಮೆಟ್ರೋ ರೈಲು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಬಗ್ಗೆ ಸುದ್ದಿವಾಹಿನಿಯೊಂದು ವರದಿ ಮಾಡಿದ್ದು, ಹೆಚ್ಚುವರಿ ನಿರ್ವಹಣಾ ವೆಚ್ಚದ ಹಿನ್ನಲೆಯಲ್ಲಿ ಮೆಟ್ರೋ ರೈಲು ನಿರ್ವಹಣಾ ಪ್ರಾಧಿಕಾರ ಟಿಕೆಟ್ ದರ ಏರಿಕೆಗೆ ಮುಂದಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ, ಹೊಸ ಮಾರ್ಗಗಳ ಲೈನ್​ನಲ್ಲಿ ಪಿಎಸ್​ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರೂಪಾಯಿ ವೆಚ್ಚದಲ್ಲಿ ಗುತ್ತಿಗೆ

“ಮೆಟ್ರೋ ರೈಲು ಟಿಕೆಟ್ ದರ ಏರಿಕೆ”..!  Read More »

ಕರ್ನಾಟಕ

CM ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ- ರಾಜ್ಯಪಾಲರನ್ನು ಭೇಟಿಯಾಗಲಿರುವ ಡಿಸಿಎಂ ನೇತೃತ್ವದ ಸಚಿವರ ನಿಯೋಗ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.17. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿಕೆಶಿ ನೇತೃತ್ವದ ಸಚಿವರ ನಿಯೋಗವು ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ, ತಮ್ಮ ಅಭಿಪ್ರಾಯ ತಿಳಿಸಲಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ರಾಜ್ಯಪಾಲರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಆಗ್ರಹಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ

CM ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ- ರಾಜ್ಯಪಾಲರನ್ನು ಭೇಟಿಯಾಗಲಿರುವ ಡಿಸಿಎಂ ನೇತೃತ್ವದ ಸಚಿವರ ನಿಯೋಗ Read More »

ಕರ್ನಾಟಕ

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರವಾಗಿದ್ದು, ಅಲ್ಲದೇ ರಾಜ್ಯಪಾಲರ ಈ ನಡೆ ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.   ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಇದೊಂದು ಷಡ್ಯಂತ್ರ ಅನ್ನೋದು ನಮಗೆ ಮೊದಲೇ ಗೊತ್ತಿತ್ತು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ಸಂವಿಧಾನಿಕ ಹುದ್ದೆಗಳನ್ನು ಸರ್ವನಾಶ ಮಾಡುತ್ತಿದೆ.‌ ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿಕೊಂಡಿದೆ.‌

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ
Scroll to Top