ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್ ಕೆ ಸಿಂಗ್ ಆಯ್ಕೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಕ್ಯಾಬಿನೆಟ್ ನೇಮಕಾತಿ ಸಮಿತಿಯು ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್​ಕೆ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಕೆ. ಶ್ರೀನಿವಾಸ್ ಅವರನ್ನು ವಸತಿ ಮತ್ತು ನಗರ ಕಾರ್ಯದರ್ಶಿಯಾಗಿ, ವಿವೇಕ್ ಜೋಶಿ ಅವರನ್ನು ಸಿಬ್ಬಂದಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜಾರಿಗೆ ತಂದ ಅಧಿಕಾರಶಾಹಿ ಪುನರ್ರಚನೆಯ ಭಾಗವಾಗಿ ಹಿರಿಯ ಅಧಿಕಾರಿ ಪುಣ್ಯ ಸಲಿಲ ಶ್ರೀವಾಸ್ತವ ಅವರನ್ನು ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಪ್ರಧಾನಿ ಕಾರ್ಯಾಲಯದಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ ಶ್ರೀವಾಸ್ತವ ಅವರು ಸಿಬ್ಬಂದಿ ಸಚಿವಾಲಯದ ಆದೇಶದ […]

ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್ ಕೆ ಸಿಂಗ್ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಕಳೆದ ವಾರವಷ್ಟೇ ರಾಜ್ಯ ರಾಜಕಾರಣದಲ್ಲಿ ಸಿಎಂ ವಿರುದ್ದ ಬಹಳಷ್ಟು ಸದ್ದು ಮಾಡಿದ್ದ ಮುಡಾ ಕೇಸ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿರುವುದಾಗಿ ಮೂಲಗಳು ವರದಿ ಮಾಡಿವೆ.   ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತ ಆದೇಶವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..! Read More »

ಕರ್ನಾಟಕ

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                            

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17.  ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ನಗರದ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳ್ಳಾಲ ಎಎಸ್‌ಐ ಪತ್ನಿ, ಶಿಕ್ಷಕಿ ಶಾಹಿದಾ (47) ಎಂದು ಗುರುತಿಸಲಾಗಿದೆ. ಶಾಹಿದಾ ತನ್ನ ಸ್ಕೂಟಿಯಲ್ಲಿ ಶಾಲೆಯ ಕಡೆಗೆ ಹೋಗುತ್ತಿದ್ದಳು. ಈ ವೇಳೆ ಆಕೆಗೆ ಕಾರೊಂದು ಢಿಕ್ಕಿ ಹೊಡೆದಿದ್ದು, ತಕ್ಷಣ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                             Read More »

ಕರಾವಳಿ, ಕ್ರೈಮ್ ನ್ಯೂಸ್

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ- ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮುಂಬೈ, ಆ. 17. ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರನ್ನು ಕ್ಯಾಬ್‌ ಚಾಲಕ ಮತ್ತು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.   ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನುಮುಂಬೈನ ಈಶಾನ್ಯ ಭಾಗದಲ್ಲಿರುವ ಮುಲುಂಡ್‌ ಪ್ರದೇಶದ ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದೆ. ಸೇತುವೆ ಮೇಲೆ ಹತ್ತಿದ ಮಹಿಳೆ ರೀಮಾ, ಏಕಾಏಕಿ ನೀರಿಗೆ ಹಾರಲು ಯತ್ನಿಸಿದ್ದು ಇದನ್ನು ಗಮನಿಸಿದ ಟ್ಯಾಕ್ಸಿ ಚಾಲಕ ಆಕೆ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ- ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂಧ್ರ ಪ್ರದೇಶದಲ್ಲಿ ಬಡವರಿಗೆ 5ರೂ.ಗೆ ಅನ್ನ ನೀಡುವ ಕ್ಯಾಂಟೀನ್ ಪುನರಾರಂಭ

(ನ್ಯೂಸ್ ಕಡಬ) newskadaba.c0m ಅಮರಾವತಿ, ಆ. 17.  ಆಂಧ್ರಪ್ರದೇಶದಲ್ಲಿ ಮತ್ತೆ ಅನ್ನ ಕ್ಯಾಂಟೀನ್‌ಗಳು ಪುನರಾರಂಭ ಆಗಿದ್ದು, ಬಡವರಿಗೆ 5 ರೂ.ಗೆ ಅನ್ನ ನೀಡುವ ಅನ್ನ ಕ್ಯಾಂಟೀನ್‌ಗಳು ಪುನಾರಂಭ ಆಗಿವೆ. ವೈಎಸ್‌ಆರ್‌ಸಿಪಿ ಸರ್ಕಾರವು 2019 ಮತ್ತು 2024 ರ ನಡುವೆ ಟಿಡಿಪಿಯ ಹಿಂದಿನ ಆಡಳಿತದಲ್ಲಿ ಪ್ರಾರಂಭಿಸಲಾದ ಕ್ಯಾಂಟೀನ್‌ಗಳನ್ನು ಸ್ಥಗಿತಗೊಳಿಸಿತ್ತು. ಮತ್ತೆ ಅಧಿಕಾರದಲ್ಲಿರುವ ಟಿಡಿಪಿ ಈ ಕ್ಯಾಂಟೀನ್‌ಗಳನ್ನು ಮತ್ತೆ ಆರಂಭಿಸಿವೆ ಎನ್ನಲಾಗಿದೆ.ಬಡವರು ಹಸಿವಿನಿಂದ ಬಳಲಬಾರದು ಎಂಬುದು ಈ ಕ್ಯಾಂಟೀನ್‌ಗಳ ಮುಖ್ಯ ಉದ್ದೇಶವಾಗಿದೆ ಎಂದು ಗುಡಿವಾಡದಲ್ಲಿ ಅನ್ನ ಕ್ಯಾಂಟೀನ್‌ಗೆ ಚಾಲನೆ ನೀಡಿದ

ಆಂಧ್ರ ಪ್ರದೇಶದಲ್ಲಿ ಬಡವರಿಗೆ 5ರೂ.ಗೆ ಅನ್ನ ನೀಡುವ ಕ್ಯಾಂಟೀನ್ ಪುನರಾರಂಭ Read More »

ಕರ್ನಾಟಕ

ರಾಜ್ಯದ ಹಲವೆಡೆ ವಿಪರೀತ ಮಳೆಯಾಗುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮುಂದಿನ ನಾಲ್ಕು ವಾರಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಚರ್ಚೆಸಿದರು.  

ರಾಜ್ಯದ ಹಲವೆಡೆ ವಿಪರೀತ ಮಳೆಯಾಗುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ Read More »

ಕರ್ನಾಟಕ

ಗುರುಪುರ ಅಡ್ಡೂರು ಸೇತುವೆ: ಸಂಚಾರ ಮಾರ್ಗದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ  101ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ  ಹಾಗೂ ಸಂಚಾರ ಮಾರ್ಗ ಬದಲಾವಣೆ ಮಾಡುವಂತೆ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ  ಆದೇಶಿಸಿದ್ದಾರೆ. ಅಡ್ಡೂರು ಸೇತುವೆಯ ಮೂಲಕ ಸುರತ್ಕಲ್ – ಕಬಕ ರಾಜ್ಯ ಹೆದ್ದಾರಿ  101ರ ರಸ್ತೆಯಲ್ಲಿ

ಗುರುಪುರ ಅಡ್ಡೂರು ಸೇತುವೆ: ಸಂಚಾರ ಮಾರ್ಗದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ಅನುಮತಿ ಇಲ್ಲದೆ ಪ್ರತಿಭಟನೆ..!       ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ 28 ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ರೇಸ್‌ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ಜಮಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನೀತಿಗಳು ಜನ ವಿರೋಧಿಯಾಗಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು ಎಂದು ವರದಿಯಾಗಿದೆ.

ಅನುಮತಿ ಇಲ್ಲದೆ ಪ್ರತಿಭಟನೆ..!       ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲೆ..! Read More »

ಕರ್ನಾಟಕ

ಕೆಎಸ್ಆರ್ಟಿಸಿ; ಉತ್ತಮ ಸೇವಾ ನೌಕರರಿಗೆ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು ಬಸ್ ನಿಲ್ದಾಣದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಿರಿಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಧ್ವಜಾರೋಹಣಗೈದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ನೌಕರರಿಗೆ ಶ್ಲಾಘನೀಯ ಮತ್ತು ವಿಶೇಷ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ದರೋಡೆಕೋರರನ್ನು ಪತ್ತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೆ.ಎಸ್.ಆರ್.ಟಿ.ಸಿ ಡಿಪೋ 3 ಕಂಡಕ್ಟರ್ ಸೀನಪ್ಪ ಮತ್ತು ಹನುಮಂತ್ ಹಟಗಲ್ ಅವರನ್ನು

ಕೆಎಸ್ಆರ್ಟಿಸಿ; ಉತ್ತಮ ಸೇವಾ ನೌಕರರಿಗೆ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗಣೇಶ ಚತುರ್ಥಿ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಬಾವಿ ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು

ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »

ಕರಾವಳಿ
Scroll to Top