“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಕುಕ್ಕರ್ ಸ್ಫೋಟಗೊಂಡ ಘಟನೆ ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ಸಂಭವಿಸಿದೆ. ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡುಗೆ ಮಾಡಲು ಗ್ಯಾಸ್ ಸ್ಟೌವ್‌​ ಮೇಲೆ ಕುಕ್ಕರ್​ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೋಸಿನ್ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಗೊಂಡ ವ್ಯಕ್ತಿ​ ಸಮೀರ್​ಗೆ ಚಿಕಿತ್ಸೆ ಮುಂದುವರೆಯುತ್ತಿದೆ ಎನ್ನಲಾಗಿದೆ. […]

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾಂಡವರಕಲ್ಲು: ಎಸ್ಡಿಪಿಐ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಧ್ವಜಾರೋಹಣ

(ನ್ಯೂಸ್ ಕಡಬ) newskadaba.com ಬಂಟ್ವಾಳ,‌ ಆ. 15. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ 78ನೇ ಸ್ವಾತಂತ್ರ್ಯ ದಿನದ ಭಾಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಪಾಂಡವರಕಲ್ಲಿನ‌ ಕೊಮಿನಡ್ಕದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಎಸ್ಡಿಪಿಐ ಸರಪಾಡಿ ಬ್ಲಾಕ್ ಇದರ ಜೊತೆ ಕಾರ್ಯದರ್ಶಿ ಮಹಮ್ಮದ್ ಶಾಕಿರ್ ಮಾತನಾಡಿ, “ದೇಶವು ಬ್ರಿಟಿಷರ ಕಪಿಮುಷ್ಟಿಯಿಂದ ಸ್ವಾತಂತ್ರ್ಯಗೊಂಡ ಹಾಗೆ ಇಲ್ಲಿರುವ ಕೆಲವು ಕೋಮುವಾದಿ ದುಷ್ಟಶಕ್ತಿಗಳ ವಿರುದ್ಧ ಇನ್ನೂ ಭಾರತ ಸ್ವಾತಂತ್ರ್ಯಗೊಳ್ಳಬೇಕಾಗಿದೆ” ಎಂಬ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಮಾತುಗಳನ್ನಾಡಿದ ಬಡಗ‌ ಕಜೆಕಾರು ಗ್ರಾಮ

ಪಾಂಡವರಕಲ್ಲು: ಎಸ್ಡಿಪಿಐ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಧ್ವಜಾರೋಹಣ Read More »

ಕರಾವಳಿ, ಕರ್ನಾಟಕ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ನಿ) ಹಲವು ಉದ್ಯೋಗಗಳು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಆ. 15. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆಯು ಖಾಲಿಯಿರುವ ನೂರಾರು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಹೆಸ್ಕಾಂ ಒಟ್ಟು 338 ಅಪ್ರೆಂಟಿಸ್‌ ಟ್ರೈನಿಂಗ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಆಗಸ್ಟ್‌ 20ರಂದು ಕೊನೆ ದಿನವಾಗಿದೆ. ನೀವು ಡಿಪ್ಲೊಮಾ ಇಲ್ಲವೇ ಎಂಜಿನಿಯರಿಂಗ್‌ ಮಾಡಿದ್ದಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಿ ಹುದ್ದೆ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ   ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ ನೇಮಕಾತಿ ಸಂಸ್ಥೆ:

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ನಿ) ಹಲವು ಉದ್ಯೋಗಗಳು ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

SBI ಮತ್ತು PNB ಬ್ಯಾಂಕ್ ಖಾತೆಗಳು ರದ್ದು          ರಾಜ್ಯ ಸರ್ಕಾರ ಆದೇಶ..!             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ರಾಜ್ಯ ಸರ್ಕಾರವು ತನ್ನ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು ವಿಶ್ವವಿದ್ಯಾಲಯಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ (SBI) ನ್ಯಾಷನಲ್ ಬ್ಯಾಂಕ್‌ನಲ್ಲಿನ (PNB) ಎಲ್ಲಾ ಠೇವಣಿ ಮತ್ತು ಹೂಡಿಕೆಗಳನ್ನು ಹಿಂಪಡೆಯಲು ಮತ್ತು ಬ್ಯಾಂಕ್ ಜೊತೆ ಯಾವುದೇ ವ್ಯವಹಾರವನ್ನು ನಿಲ್ಲಿಸುವಂತೆ ಆದೇಶಿಸಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ರಾಜಾಜಿನಗರ ಶಾಖೆಯಲ್ಲಿ ಒಂದು ವರ್ಷ ಅವಧಿಯ ನಿಶ್ಚಿತ ಠೇವಣಿಯಲ್ಲಿ ಹೂಡಿಕೆ

SBI ಮತ್ತು PNB ಬ್ಯಾಂಕ್ ಖಾತೆಗಳು ರದ್ದು          ರಾಜ್ಯ ಸರ್ಕಾರ ಆದೇಶ..!              Read More »

ಕರ್ನಾಟಕ

ಸಮಹಾದಿ: ರಿಫಾಯಿ ಜುಮಾ ಮಸೀದಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಸಮಹಾದಿ, ಆ. 15. ರಿಫಾಯಿ ಜುಮ್ಮಾ ಮಸೀದಿ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮಸೀದಿ ಅಧ್ಯಕ್ಷರಾದ ಸಾದಿಕ್ ಸಮಹಾದಿ ರವರು ಅಧ್ಯಕ್ಷತೆ ವಹಿಸಿ ಧ್ವಜಾರೋಹಣಗೈದರು. ಖತೀಬರಾದ ರಫೀಕ್ ‌ನಿಝಾಮಿ ಉಸ್ತಾದ್ ಮತ್ತು ಮುಅಲ್ಲಿಮರಾದ ಇಬ್ರಾಹಿಂ ಮುಈನಿ ಉಸ್ತಾದರು ಸಂದೇಶ ಭಾಷಣ ಮಾಡಿದರು. ನಂತರ ಸ್ವಾತಂತ್ರ್ಯ ಪ್ರಯುಕ್ತ ಮದ್ರಸದಲ್ಲಿ ನಡೆದ ಭಾಷಣ, ಹಾಡು, ಕ್ವಿಝ್ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಸಂವಿಧಾನ

ಸಮಹಾದಿ: ರಿಫಾಯಿ ಜುಮಾ ಮಸೀದಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ          

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ           Read More »

ಕರ್ನಾಟಕ

ಶಿರೂರು: ‘ಭಾರತೀಯ ನೌಕಾಪಡೆ ಕಾರ್ಯಾಚರಣೆ’ ಪುನರಾರಂಭ      ಅಪಾರ ಪ್ರಮಾಣದ ಭಗ್ನಾವಶೇಷ ಪತ್ತೆ..!              

(ನ್ಯೂಸ್ ಕಡಬ) newskadaba.c0m ಶಿರೂರು, ಆ. 15.  ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡ ಎರಡನೇ ದಿನದಲ್ಲಿ ಭಾರತೀಯ ನೌಕಾಪಡೆಯು ಗಂಗವಳ್ಳಿ ನದಿಯಲ್ಲಿ ಲಾರಿಯ ಹೆಚ್ಚಿನ ಭಾಗಗಳನ್ನು ಪತ್ತೆಯಾಗಿದ್ದು ಹೂಳೆತ್ತುವ ಅಗತ್ಯವಿದೆ ಎಂದು ಹೇಳಲಾಗಿದೆ. ಭಾರತೀಯ ಸೇನೆಯ ಡೈವರ್‌ಗಳು ಮತ್ತು ಈಶ್ವರ್ ಮಲ್ಪೆ ಇಬ್ಬರೂ, ನಾಪತ್ತೆಯಾದ ಅರ್ಜುನ್ ಮತ್ತು ಇತರ ಇಬ್ಬರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಟ್ರಕ್‌ನ ಒಂದು ಭಾಗ ಮಾತ್ರ ಕಂಡುಬಂದಿದ್ದರಿಂದ ಸ್ವಲ್ಪ ಭರವಸೆ ಕಂಡು ಬಂದಿದ್ದು, ನೌಕಾಪಡೆಯು ನದಿಯನ್ನು ಶೋಧಿಸಲು

ಶಿರೂರು: ‘ಭಾರತೀಯ ನೌಕಾಪಡೆ ಕಾರ್ಯಾಚರಣೆ’ ಪುನರಾರಂಭ      ಅಪಾರ ಪ್ರಮಾಣದ ಭಗ್ನಾವಶೇಷ ಪತ್ತೆ..!               Read More »

ಕರ್ನಾಟಕ

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಆ. 15. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಇಂದು ರಾಜಧಾನಿಯ ಕೆಂಪು ಕೋಟೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಮೂಲಕ ಕಳೆದ 10 ವರ್ಷಗಳಲ್ಲಿ ಪಾಲ್ಗೊಂಡ ಲೋಕಸಭೆಯ ಮೊದಲ ವಿಪಕ್ಷ ನಾಯಕರಾಗಿದ್ದಾರೆ.   ಭಾರತದ ಒಲಿಂಪಿಕ್‌ ಕಂಚಿನ ಪದಕ ವಿಜೇತ ಹಾಕಿ ತಂಡ ಹಾಗೂ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ರಾಹುಲ್‌ ಗಾಂಧಿ ಜೊತೆಗಿದ್ದು, ಒಲಿಂಪಿಕ್ಸ್‌ ಪದಕ ವಿಜೇತರಾದ ಮನು ಭಾಕರ್‌, ಸರಬ್‌ಜೋತ್‌ ಸಿಂಗ್‌, ಪಿ ಆರ್‌ ಶ್ರೀಜೇಶ್‌

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರಸ್ವತೀ ವಿದ್ಯಾಲಯ ಕಡಬ- ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಕಡಬ, ಆ. 15. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ.) ಬೆಳ್ತಂಗಡಿ ಮತ್ತು ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇವುಗಳ ಜಂಟಿ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರ ಯೋಜನೆಯಂತೆ ನಶಾ ಮುಕ್ತ ಭಾರತ ಅಭಿಯಾನದಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆಗಸ್ಟ್ 13ರಂದು  ಹನುಮಾನ್ ನಗರ ಕೇವಳ, ಕಡಬದಲ್ಲಿ ನಡೆಯಿತು. ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯರು ಸರಸ್ವತೀ

ಸರಸ್ವತೀ ವಿದ್ಯಾಲಯ ಕಡಬ- ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಾದಕ ದ್ರವ್ಯ ಸೇವನೆ..! ಶೇ.30 ರಷ್ಟು ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 15.  ಈ ವರ್ಷದ ಆರಂಭದಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಶೇ.30 ರಷ್ಟು ಪ್ರಕರಣಗಳು ವರದಿಯಾಗಿವೆ ಎನ್ನಲಾಗಿದೆ. ದಾಖಲಾದ 1,791 ಪ್ರಕರಣಗಳಲ್ಲಿ 521 ಕರಾವಳಿ ನಗರದಿಂದ ಬಂದಿವೆ. ಇದು ಬೆಂಗಳೂರನ್ನು ಹಿಂದಿಕ್ಕಿದೆ ಮತ್ತು ಅತಿ ಹೆಚ್ಚು ಮಾದಕ ದ್ರವ್ಯ ಸೇವನೆ ಪ್ರಕರಣಗಳನ್ನು ದಾಖಲಿಸಿದೆ. ವರ್ಷದ ಮೊದಲಾರ್ಧದಲ್ಲಿ 231 ಪ್ರಕರಣಗಳೊಂದಿಗೆ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಆದಾಗ್ಯೂ,

ಮಾದಕ ದ್ರವ್ಯ ಸೇವನೆ..! ಶೇ.30 ರಷ್ಟು ಪ್ರಕರಣ ದಾಖಲು..! Read More »

ಕರಾವಳಿ
Scroll to Top