ಭೂಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 14. ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಉಂಟಾದ ಭೂಕುಸಿತದಿಂದಾಗಿ ಹಾನಿಗೊಳಗಾದ ರೈಲ್ವೇ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಹೀಗಾಗಿ ಇಂದಿನಿಂದ ಬೆಂಗಳೂರು- ಮಂಗಳೂರು ನಡುವೆ ರೈಲು ಸೇವೆಯನ್ನು ಪುನರಾರಂಭಿಸುವುದಾಗಿ ನೈಋತ್ಯ ರೈಲ್ವೇ ಇಲಾಖೆ ತಿಳಿಸಿದೆ. ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮಂಗಳೂರು ಹಾಗೂ ಕಾರವಾರ ಸೆಕ್ಟರ್‌ನಲ್ಲಿ ರಾತ್ರಿಯ ಮೂರು ರೈಲುಗಳನ್ನು ಕಡಿಮೆ ಅವಧಿಗೆ ನಿಲ್ಲಿಸಲಾಗಿದೆ. ಆಗಸ್ಟ್‌ 10 ರಂದು ಮುಂಜಾನೆ ವೇಳೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ […]

ಭೂಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ಪುನರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ವಿತ್.ಪಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 14. ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜೈಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ರಾಮಮೂರ್ತಿ ನಗರ ಬೆಂಗಳೂರು ಇಲ್ಲಿ ನಡೆದ ಪ್ರಾಂತೀಯ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬದ 10ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್.ಪಿ. (ಕಿಶೋರ ವರ್ಗದ -75 ಕೆಜಿ ) ವಿಭಾಗದಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಬಾಲವರ್ಗ ಬಾಲಕಿಯರ-30 ಕೆಜಿ ವಿಭಾಗ ಕರಾಟೆ ಸ್ಪರ್ಧೆಯಲ್ಲಿ

ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ವಿತ್.ಪಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಆ. 14. ಈ ವರ್ಷದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅ.12 ರ ವರೆಗೆ ಜರುಗಲಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸುವ ಅವಕಾಶವನ್ನು ಕಲ್ಪಿಸುವ ಮೂಲಕ ಸರಕಾರವು ಗುಡ್ ನ್ಯೂಸ್ ನೀಡಿದೆ.   ಹೀಗಾಗಿ ಇನ್ನುಮುಂದೆ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರು ಟಿಕೆಟ್ ಗಾಗಿ ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ Read More »

ಕರ್ನಾಟಕ

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ

(ನ್ಯೂಸ್ ಕಡಬ) newskadba.com ಬೆಂಗಳೂರು, ಆ. 14.‌ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪುರಸ್ಕೃತರು- ಎಂ.ಚಂದ್ರಶೇಖರ್‌- ಎಡಿಜಿಪಿ, ಐಎಸ್‌‍ಡಿ ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಜೋಷಿ ಶ್ರೀನಾಥ್‌ ಮಹದೇವ- ಪೊಲೀಸ್‌‍ ಅಧೀಕ್ಷಕರು, ಲೋಕಾಯುಕ್ತ ಸಿ.ಕೆ.ಬಾಬ- ಪೊಲೀಸ್‌‍ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮಗೊಂಡ ಬಿ.ಬಸರಗಿ- ಅಪರ ಪೊಲೀಸ್‌‍ ಅಧೀಕ್ಷಕರು,

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ Read More »

ಕರ್ನಾಟಕ

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 14. ಪಡಿತರ ಚೀಟಿದಾರರಿಗೆ ವಿತರಿಸಲು ಅಗತ್ಯವಾದ ಅಕ್ಕಿಯನ್ನು ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದು, ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದ ಪಡಿತರ ಫಲಾನುಭವಿಗಳಿಗೆ ವಿತರಿಸಲು ಬೇಕಾದ ಅಕ್ಕಿಯ ಪ್ರಮಾಣದ ಕುರಿತು ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅಗತ್ಯವಿರುವ ಅಕ್ಕಿಯನ್ನು ನೀಡಲು ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ. ಮಂಗಳವಾರದಂದು ಕೇಂದ್ರ ಸಚಿವರನ್ನು ಭೇಟಿಯಾದ

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದ 24 ಸೇರಿ 1,037 ಪೊಲೀಸರಿಗೆ ‘ರಾಷ್ಟ್ರಪತಿ ಪದಕ’ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 14. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು(ಬುಧವಾರ) ಸರ್ಕಾರವು ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ (ಎಚ್ಜಿ &ಸಿಡಿ) ಮತ್ತು ಸುಧಾರಣಾ ಸೇವೆಗಳ ಒಟ್ಟು 1037 ಸಿಬ್ಬಂದಿಗಳಿಗೆ 2024 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶೌರ್ಯ ಮತ್ತು ಸೇವಾ ಪದಕಗಳನ್ನು ಘೋಷಿಸಿದೆ. ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪದಕ (ಪಿಎಂಜಿ) ಮತ್ತು ಶೌರ್ಯಕ್ಕಾಗಿ ಪದಕ (ಜಿಎಂ) ಅನ್ನು ಜೀವ ಉಳಿಸುವಲ್ಲಿ, ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು

ಕರ್ನಾಟಕದ 24 ಸೇರಿ 1,037 ಪೊಲೀಸರಿಗೆ ‘ರಾಷ್ಟ್ರಪತಿ ಪದಕ’ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಖನಿಜ ಸಂಪತ್ತಿನ ಅಗರ, ವನ್ಯ ಜೀವಿಗಳ ನೆಚ್ಚಿನ ತಾಣ, ಪ್ರವಾಸಿಗರ ಸ್ವರ್ಗ “ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಗದಗ, ಆ. 14. ತೋಂಟದಾರ್ಯ ಮಠದ ಶ್ರೀಗಳಾದ ಡಾ.ಸಿದ್ದರಾಮ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದಂತಹ ಪತ್ರಕರ್ತರಿಂದ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಖ್ಯಾತವಾಗಿರುವ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ “ಕಪ್ಪತ್ತಗುಡ್ಡ ಉಳಿಸಿ, ರಕ್ಷಿಸೋಣ” ಎಂಬ ಅಭಿಯಾನ ಆಗಸ್ಟ್ 11ರಂದು ಬಾನುವಾರ ಕಪ್ಪತ್ತಗುಡ್ಡದ ಮೇಲೆ ನಡೆಯಿತು. ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಖ್ಯಾತವಾಗಿರುವ ಕಪ್ಪತಗುಡ್ಡ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರನ್ನು ಕೈಬೀಸಿ ಕರೆಯುವ ಕಪ್ಪತ್ತಗುಡ್ಡಕ್ಕೆ ದಿನನಿತ್ಯ ನೂರಾರು

ಖನಿಜ ಸಂಪತ್ತಿನ ಅಗರ, ವನ್ಯ ಜೀವಿಗಳ ನೆಚ್ಚಿನ ತಾಣ, ಪ್ರವಾಸಿಗರ ಸ್ವರ್ಗ “ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ Read More »

ಕರ್ನಾಟಕ, ವಿಶೇಷ ಲೇಖನಗಳು

ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಜಪ್ಪಿನಮೊಗರಿನಲ್ಲಿ ವಿಭಿನ್ನ ಪರಿಕಲ್ಪನೆಯ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ದೇಶದೆಲ್ಲೆಡೆ ಸಾರ್ಥಕಗೊಳಿಸುವಂತೆ ಪ್ರಧಾನಿ ಮೋದಿ ಅವರು ಈಗಾಗಲೇ ಕರೆ ನೀಡಿದ್ದು, ಅದರಂತೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ಎಲ್ಲ ಪಿಎಂ ಆವಾಸ್ ಫಲಾನುಭವಿಗಳ ಯೋಜನೆಯ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಾಡಿಸುವ ವಿನೂತನ ಪ್ರಯತ್ನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಂದಾಗಿದ್ದಾರೆ. ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ಶ್ರೀಮತಿ ವಿನಯಾ ಶ್ರೀನಿವಾಸ್ ಅವರ ಮನೆ ಮೇಲೆ ಮಂಗಳವಾರ ಬೆಳಗ್ಗೆ ಹರ್ ಘರ್ ಅಭಿಯಾನದಡಿ ತ್ರಿವರ್ಣ ಧ್ವಜ ಹಾರಾಡಿಸುವ ಮೂಲಕ ಈ ವಿನೂತನ ದೇಶಪ್ರೇಮ ಮೊಳಗಿಸುವ ಪ್ರಯತ್ನಕ್ಕೆ ಕ್ಯಾ. ಚೌಟ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದಲ್ಲಿರುವ ಎಲ್ಲ ಪಿಎಂ ಆವಾಸ್ ಗೃಹ ಫಲಾನುಭವಿಗಳನ್ನು ಭೇಟಿಯಾಗಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಾಡಿಸುವ ಮೂಲಕ ಈ ಬಾರಿಯ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಗೊಳಿಸುವುದಕ್ಕೆ ನಮ್ಮ ಜನಪ್ರತಿನಿಧಿಗಳು ಮುಂದಾಗುವಂತೆ ಕರೆ ನೀಡಿದ್ದಾರೆ. ಹರ್ ಘರ್ ಅಭಿಯಾನದ ಪ್ರಯುಕ್ತ ನಮ್ಮ ಎಲ್ಲ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಜನಪ್ರತಿನಿಧಿಗಳು, ಮಹಾನಗರ ಪಾಲಿಕೆ ಸದಸ್ಯರು ಪಿಎಂ ಆವಾಜ್ ಯೋಜನೆ ಫಲಾನುಭವಿಗಳ ಮನೆಗಳಿಗೆ ಭೇಟಿ ಕೊಟ್ಟು ಹೆಚ್ಚಿನ ಸಂಖ್ಯೆಯ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡಿಸುವಂತೆ ಪ್ರೇರಣೆ, ಉತ್ತೇಜನ ನೀಡಬೇಕು. ಆ ಮೂಲಕ ಅವರೊಂದಿಗೆ ಪ್ರಧಾನಿ ಮೋದಿ ಅವರ ವಿಷನ್ ಹಂಚಿಕೊಳ್ಳುವಂತೆ ಸಂಸದರು ಮನವಿ ಮಾಡಿದ್ದಾರೆ. “ಪ್ರತಿಯೊಂದು ಪಿಎಂ ಅವಾಜ್ ಮನೆಯೂ ನಮ್ಮ ದೇಶದ ಬಡವರು, ಮಹಿಳೆಯರು ಮತ್ತು ಯುವಕರ ಬಗ್ಗೆ ನಮ್ಮ ಪ್ರಧಾನಿಯವರ ಕಾಳಜಿಯ ಸಂಕೇತವಾಗಿದೆ. ಹೀಗಿರುವಾಗ ಅಂತಹ ಮನೆಗಳ ಮೇಲೆ ನಮ್ಮ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅವರನ್ನು ರಾಷ್ಟ್ರೀಯತೆಯ ದಾರದಿಂದ ಒಗ್ಗೂಡಿಸುವ ಪ್ರಯತ್ನವಾಗಿದೆ” ಎಂದು ಅವರು ವಿವರಿಸಿದ್ದಾರೆ. ತ್ರಿವರ್ಣ ದ್ವಜದ ಬಗ್ಗೆ ಹಾಗೂ ತಮ್ಮ ಸೇನಾ ಅನುಭವದ ಬಗ್ಗೆ ಮಾತನಾಡುತ್ತಾ, “ನಮ್ಮ ದೇಶದ ಸೈನಿಕರ ಪಾಲಿಗೆ ತ್ರಿವರ್ಣ ದ್ವಜ ಎನ್ನುವುದು ಅವರ ಪಾಲಿನ ಉಸಿರು. ದೇಶದ ಪ್ರತೀಕವಾದ ಧ್ವಜಕ್ಕಾಗಿಯೇ ಬದುಕುತ್ತಾನೆ ಮತ್ತು ಸಾಯುತ್ತಾನೆ. ಪ್ರತಿ ಸೈನಿಕನೂ ದೇಶಕ್ಕಾಗಿ ವೀರಮರಣವನ್ನಪ್ಪಿ ಧ್ವಜದಲ್ಲಿ ಸುತ್ತಿ ಮನೆಗೆ ಹಿಂದಿರುಗುವ ಕನಸು ಕಾಣುತ್ತಾನೆ. ಬದುಕಿರುವ ಪ್ರತಿ ಕ್ಷಣವೂ ತಿರಂಗವನ್ನು ಇನ್ನಷ್ಟು ಎತ್ತರದಲ್ಲಿ ಹಾರಾಡಬೇಕೆನ್ನು ದೃಢಸಂಕಲ್ಪ ಹೊಂದಿರುತ್ತಾರೆ ” ಎಂದು ಹೇಳಿದ್ದಾರೆ . ಪ್ರಧಾನಿ ಮೋದಿ ಅವರ ಹರ್ ಘರ್ ತಿರಂಗಾ ಅಭಿಯಾನವು ದೇಶದ ಪ್ರತಿ ಮನೆಯ ಮಕ್ಕಳಲ್ಲಿ ರಾಷ್ಟ್ರೀಯತೆ ಜತೆಗೆ ದೇಶಭಕ್ತಿ ಬೆಳೆಸಲಿದೆ. ಸ್ವಾತಂತ್ರ್ಯ ದಿನಾಚರಣೆ ಎಂಬುದು ಕೇವಲ ಐತಿಹಾಸಿಕ ಆಚರಣೆಯಾಗಬಾರದು. ಉಳಿದ ಎಲ್ಲ ವಾರ್ಷಿಕ ಹಬ್ಬಗಳಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಕೂಡ ದೇಶದೆಲ್ಲೆಡೆ ಔಚಿತ್ಯಪೂರ್ಣ ಹಬ್ಬದ ವಾತಾವರಣ ಉಂಟುಮಾಡಬೇಕು. ಇದನ್ನೇ ನಮ್ಮ ಮುಂದಿನ ತಲೆಮಾರು ಕೂಡ ಎದುರು ನೋಡುತ್ತಿದೆ. ಹೀಗಿರುವಾಗ, ಸ್ವಾಂತ್ರ್ಯ ದಿನಾಚರಣೆ ಯುವ ಸಮುದಾಯಕ್ಕೆ ಆಗಸ್ಟ್ 15 ಸ್ಫೂರ್ತಿ ಮತ್ತು ದೇಶಪ್ರೇಮ ಮೂಡಿಸುವ ಹಬ್ಬವಾಗಬೇಕೆಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಜಪ್ಪಿನಮೊಗರಿನಲ್ಲಿ ನಡೆದ ಪಿಎಂ ಆವಾಸ್ ಯೋಜನೆ ಫಲಾನುಭವಿಯ ಮನೆಯಲ್ಲಿ ನಡೆದ ಹರ್ ಘರ್ ತಿರಂಗಾ ಅಭಿಯಾನ ಚಾಲನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಜಪ್ಪಿನಮೊಗರಿನಲ್ಲಿ ವಿಭಿನ್ನ ಪರಿಕಲ್ಪನೆಯ ಅಭಿಯಾನಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಅಡಿಕೆ ಬೆಂಬಲ ಬೆಳೆ; ಸರಕಾರಕ್ಕೆ ಪ್ರಸ್ತಾವನೆ – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಈ ಕುರಿತು ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ರೈತ ಮುಖಂಡರೊಂದಿಗೆ ನಡೆದ ಚರ್ಚೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂದು ರೈತರಿಂದ ಒತ್ತಾಯ ಇದೆ. ಈ ಬಗ್ಗೆ ಪರಿಶೀಲಿಸಿ, ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದರು. ಬೆಳೆಗಳ

ಅಡಿಕೆ ಬೆಂಬಲ ಬೆಳೆ; ಸರಕಾರಕ್ಕೆ ಪ್ರಸ್ತಾವನೆ – ಜಿಲ್ಲಾಧಿಕಾರಿ Read More »

ಕರಾವಳಿ

ಸ್ವಾತಂತ್ರ್ಯ ದಿನಾಚರಣೆ- ಇಂದಿನಿಂದ ಜಿಲ್ಲ್ಲಾ ಉಸ್ತುವಾರಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಾದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 14 ರಿಂದ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 14 ರಂದು ರಾತ್ರಿ 7.45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಚಿವರು, ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ನೆಹರು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ, 10.30ಕ್ಕೆ

ಸ್ವಾತಂತ್ರ್ಯ ದಿನಾಚರಣೆ- ಇಂದಿನಿಂದ ಜಿಲ್ಲ್ಲಾ ಉಸ್ತುವಾರಿ ಪ್ರವಾಸ Read More »

ಕರಾವಳಿ, ಕರ್ನಾಟಕ
Scroll to Top