‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ’           ಕೇಂದ್ರ ಸಚಿವೆ ಕರಂದ್ಲಾಜೆ                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದು ಕೇಂದ್ರ ಎಂಎಸ್‌ಎಂಇ, ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಮೈಸೂರಿನಲ್ಲಿಂದು ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ನ್ಯಾಯಾಲಯದಲ್ಲಿರುವ ಕಾರಣ, ಕೇಂದ್ರ ಸರ್ಕಾರ ಈ ಯೋಜನೆಗೆ ಆರ್ಥಿಕ ನೆರವು ನೀಡಲು ಸಾಧ್ಯವಾಗುವುದಿಲ್ಲ ಎಂದರು. ರಾಜ್ಯದ ಎರಡು ಹಗರಣಗಳ ಬಗ್ಗೆ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಯೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಕಾನೂನು ಸಲಹೆ ಪಡೆದು, ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ […]

‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ’           ಕೇಂದ್ರ ಸಚಿವೆ ಕರಂದ್ಲಾಜೆ                   Read More »

ಕರ್ನಾಟಕ

‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್             

(ನ್ಯೂಸ್ ಕಡಬ) newskadaba.com ಮಂಗಳೂರು, ಆ.03.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಸುಮಾರು

‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್              Read More »

ಕರಾವಳಿ

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡಲ ತೀರದಲ್ಲಿ ಗೋಣಿ ಚೀಲದಲ್ಲಿ ದನದ ಅವಶೇಷ ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಅಕ್ರಮ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದಕ್ಕೆ ಟಕ್ಕರ್ ಕೊಡಲು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಮನಗರದಲ್ಲಿ ಇಂದು ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ. ರಾಮನಗರದಲ್ಲಿ ಸಭೆ, ನಾಳೆ ಚನ್ನಪಟ್ಟಣ, ಆಗಸ್ಟ್ 5 ಮದ್ದೂರು, ಆಗಸ್ಟ್ 6 ಮಂಡ್ಯ, ಆಗಸ್ಟ್ 9ರಂದು ಮೈಸೂರಿನಲ್ಲಿ ಬಹಿರಂಗ ಸಮಾರೋಪ ಸಭೆ ನಡೆಸಲಿದ್ದೇವೆ. ಬಿಜೆಪಿ, ಜೆಡಿಎಸ್‌

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ..! Read More »

ಕರ್ನಾಟಕ

ವಯನಾಡು ಭೂ ಕುಸಿತ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಕನ್ನಡತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಭೂ ಕುಸಿತದಿಂದ ತತ್ತರಗೊಂಡಿರುವ ವಯನಾಡ್ ನಲ್ಲಿ ಜಿಲ್ಲಾಧಿಕಾರಿ ಮೇಘಶ್ರೀ ಡಿ.ಆರ್ ದುರಂತ ಸಂಭವಿಸಿದ ದಿನದಿಂದಲೂ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾರ್ಯಾಚರಣೆಯ ಸಂಪೂರ್ಣ ಉಸ್ತುವಾರಿ ವಹಿಸಿರುವ ಮೇಘಶ್ರೀ ಕರ್ನಾಟಕದವರು. ಮೇಘಶ್ರೀ ಡಿಆರ್ ಅವರು ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ ಮತ್ತು ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಸೇವೆ ಸಲ್ಲಿಸಲು ದಣಿವರಿಯದೆ ಕೆಲಸ ಮಾಡುದ್ದಾರೆ ಎನ್ನಲಾಗಿದೆ.

ವಯನಾಡು ಭೂ ಕುಸಿತ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಕನ್ನಡತಿ..! Read More »

ಕರ್ನಾಟಕ

ಬಾಹ್ಯಾಕಾಶ ಯಾನಕ್ಕೆ ಇಬ್ಬರ ಹೆಸರು ಖಚಿತ ಪಡಿಸಿದ ಇಸ್ರೋ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕದ ಕಂಪೆನಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಸಹಯೋಗದಲ್ಲಿ ಭಾರತ ಕೈಗೊಳ್ಳಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಇಬ್ಬರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಇಸ್ರೋ  ಬಹಿರಂಗಪಡಿಸಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿದೆ ಎನ್ನಲಾಗಿರುವ ಪ್ರವಾಸ ಸಂಬಂಧ ಇಸ್ರೋ ಮತ್ತು ಅಮೆರಿಕದ ಆ್ಯಕ್ಸಿಯೋಂ ಸ್ಪೇಸ್‌ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಒಪ್ಪಂದದ ಅನ್ವಯ ಆ್ಯಕ್ಸಿಯೋಂ ಸ್ಪೇಸ್ ಕಂಪನಿ ‘ಆ್ಯಕ್ಸಿಯೋಂ-4’ ಮಿಷನ್‌ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದೆ.

ಬಾಹ್ಯಾಕಾಶ ಯಾನಕ್ಕೆ ಇಬ್ಬರ ಹೆಸರು ಖಚಿತ ಪಡಿಸಿದ ಇಸ್ರೋ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕದ ಕಂಪೆನಿ..! Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಆತಂಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ರಾಜ್ಯದಲ್ಲಿರುವ 46 ಸಾವಿರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪೈಕಿ ಸುಮಾರು 18 ಸಾವಿರ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 30 ದಾಟಿಲ್ಲ. ಆಶ್ಚರ್ಯವೆಂದರೆ ಈ ಪೈಕಿ 4300 ಕ್ಕೂ ಹೆಚ್ಚು ಶಾಲೆಗಳಲ್ಲಿ 10ಕ್ಕಿಂತ ಕಡಿದು ಮಕ್ಕಳಿದ್ದಾರೆ. ಇದರಲ್ಲಿ ಶೂನ್ಯ ದಾಖಲಾತಿಯ ಶಾಲೆಗಳೂ ಇವೆ. ಇದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಇತ್ತೀಚೆಗೆ ಮುಕ್ತಾಯಗೊಂಡ ಮುಂಗಾರು ಅಧಿವೇಶನದಲ್ಲಿ ಮಂಡಿಸಿರುವ ಅಧಿಕೃತ ಮಾಹಿತಿ. ಈ ಹಿಂದೆ 10ಕ್ಕಿಂತ ಕಡಿಮೆ ಮಕ್ಕಳಿರುವ

ಕರ್ನಾಟಕದಲ್ಲಿ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಆತಂಕ..! Read More »

ಕರ್ನಾಟಕ

ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭೂಕುಸಿತ ಕಂಡು ಬಂದಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಸುಳ್ಯ ತಾಲೂಕು, ಉಡುಪಿಯ ಬೈಂದೂರು ವ್ಯಾಪ್ತಿಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆ ಕೆಲಗ್ರಾಮಗಳಲ್ಲಿ

ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..! Read More »

ಕರಾವಳಿ, ಕರ್ನಾಟಕ

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ.03. ಮನೆಗೆ ನುಗ್ಗಿ ಕಳವುಗೈದ ಮರುದಿನವೇ ಆರೋಪಿ ಬಂಧನ ಕ್ಕೊಳಗಾದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಇಚ್ಲಂಗೋಡು ಪಚ್ಚಂಬಳದ ಮುರ್ಶಿದ್ (19) ಎಂದು ಗುರುತಿಸಲಾಗಿದೆ. ಅಬ್ದುಲ್ ಮಜೀದ್ ರವರ ಮನೆಗೆ ನುಗ್ಗಿದ ಈತ 29,700 ರೂ.ಕಳವು ಗೈದಿದ್ದನು. ಎರಡು ಅಂತಸ್ತಿನ ಈ ಮನೆಯ ಟೆರೆಸ್ ನ ಬಾಗಿಲು ತೆರಳುವ ಬಾಗಿಲು ಮುರಿದು ಒಳನುಗ್ಗಿದ್ದು, ಕಪಾಟಿನಲ್ಲಿ ರಿಸಲಾಗಿದ್ದ ಹಣವನ್ನು ಕಳವುಗೈದು ಪರಾರಿ ಯಾಗಿದ್ದನು .ವಿಚಾರಣೆ ನಡೆಸಿದಾಗ ಮುರ್ಶಿದ್ ತಪ್ಪೊಪ್ಪಿ ಕೊಂಡನು ಎಂದು ಪೊಲೀಸರು

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇವಲ 2 ಅಂಕಗಳಿಂದ UPSC ಪರೀಕ್ಷೆಯಲ್ಲಿ ವಿಫಲ ಮುಂದೆ IAS ಆದ ಆದಿತ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ಕಿಡಿಗೇಡಿಯಾಗಿದ್ದ ಹುಡುಗ ಈಗ ದೊಡ್ಡ ಅಧಿಕಾರಿಯಾಗಿರುವುದು ಹಳ್ಳಿಯ ಜನಕ್ಕೆ ನಂಬಲೂ ಅಸಾಧ್ಯವಾಗಿದೆ. ಮೊದಲು ಇಂಜಿನಿಯರ್ ಆದ ಆದಿತ್ಯ ನಂತರ ಎಂಬಿಎ ಪದವಿ ಪಡೆದರು. ಇದು ಅವರಿಗೆ ತೃಪ್ತಿ ನೀಡದಿದ್ದಾಗ, ಅವರು UPSC ನಾಗರಿಕ ಸೇವೆಗಳ ಪರೀಕ್ಷೆಗೆ ತಯಾರಿ ಆರಂಭಿಸಿದರು. ಅಂತಿಮವಾಗಿ IAS ಅಧಿಕಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. 12ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ, ಆದಿತ್ಯ ಪಾಂಡೆ ಪಂಜಾಬ್ ನಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಿಂದ ಬಿ.ಟೆಕ್ ಮಾಡಿದರು. ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು

ಕೇವಲ 2 ಅಂಕಗಳಿಂದ UPSC ಪರೀಕ್ಷೆಯಲ್ಲಿ ವಿಫಲ ಮುಂದೆ IAS ಆದ ಆದಿತ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top