ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.01. ಮಳೆಯ ಆರ್ಭಟ ಮುಂದುವರಿದಿದ್ದು, ನೆರೆಯಿಂದ ಆವೃತವಾದ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. […]

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌             Read More »

ಕರಾವಳಿ, ಕ್ರೈಮ್ ನ್ಯೂಸ್

ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್

(ನ್ಯೂಸ್ ಕಡಬ)newskadaba.com ಬೆಂಗಳೂರ, ಜು.31. ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಅವರ ಮದುವೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಆರಂಭವಾಗಿದೆ. ಇದೀಗ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಪೂರ್ತಿಯಾಗಿ ಪರಿಸರ ಸ್ನೇಹಿಯಾಗಿ ಮಾಡಿಸಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರೆಟಿಗಳು ಪತ್ರಿಕೆಯೊಂದಿಗೆ ಒಂದು ಗಿಡ ಕೊಟ್ಟು ಮದುವೆಗೆ ಕರೆಯುತ್ತಾರೆ. ಆದರೆ ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್

ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್ Read More »

ಕರ್ನಾಟಕ

ಕೊಡಗಿಗೆ ರೆಡ್ ಅಲರ್ಟ್ ಘೋಷಣೆ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ

(ನ್ಯೂಸ್ ಕಡಬ)newskadaba.com ಕೊಡಗು, ಜು..31. ಮಳೆಯ ಅಬ್ಬರ ಮುಂದುವರಿದ್ದು, ಆಗಸ್ಟ್ 1 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ ಎಂದು ಕೊಡಗು

ಕೊಡಗಿಗೆ ರೆಡ್ ಅಲರ್ಟ್ ಘೋಷಣೆ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.31. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲ ಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿಯ ಮೇಲೇರಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ   Read More »

ಕರ್ನಾಟಕ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಬಾಲಮಂದಿರದಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ. ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ Read More »

ಕರ್ನಾಟಕ

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ Read More »

ಕರಾವಳಿ

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದೂಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ವಯನಾಡಿಗೆ ತೆರಳುವುದು ಕಷ್ಟಕರವಾಗಿದೆ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಆದಷ್ಟು ಬೇಗ ವಯನಾಡಿಗೆ ಭೇಟಿ ನೀಡುತ್ತೇನೆ. ಈ ಮಧ್ಯೆ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಜು.31. ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top