ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!

(ನ್ಯೂಸ್ ಕಡಬ)newskadaba.com ಬೀಜಾಡಿ, ಜು.31. ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಈ ಕುರಿತು ಪೋಲಿಸ್ ಇಲಾಖೆಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ವರದಿ ತಿಳಿಸಿದೆ. ಸ್ಥಳೀಯರು ಈ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಂದಾಗಬೇಕೆಂದು ಕೋರಲಾಗಿದೆ. ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…! Read More »

ಕ್ರೈಮ್ ನ್ಯೂಸ್

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್‌ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜು.31) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.31 ಬುಧವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.31 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜು.31) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರ್ನಾಟಕ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…!

(ನ್ಯೂಸ್ ಕಡಬ)newskadaba.com ಕೊಡಗು, ಜು.30. ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.30. ಅರ್ಧದಷ್ಟು ದ್ವೀಪವನ್ನೇ ನುಂಗಿರುವ ಪಾವೂರು- ಉಳಿಯ ಅಕ್ರಮ ಮರಳುಗಾರಿಕೆ ಕುರಿತು ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತ ಮಂಗಳೂರು ಉಪ ವಿಭಾಗ ದಂಡಾಧಿಕಾರಿ ನೇತೃತ್ವದಲ್ಲಿ ಪೊಲೀಸ್‌ ಇಲಾಖೆ ಹಾಗೂ ಏಳು ಸದಸ್ಯರನ್ನು ಒಳಗೊಂಡ ಸಮಿತಿಗೆ ವಾರದೊಳಗೆ ಸರಕಾರಕ್ಕೆ ವರದಿ ಸಲ್ಲಿಸಲು ಆದೇಶ ನೀಡಿದ್ದರೂ, ವಾರ ಕಳೆದು ತಿಂಗಳಾದರೂ ಸಮಿತಿಯ ವರದಿ ಮಾತ್ರ ಜಿಲ್ಲಾಡಳಿತ ಕೈಸೇರಿಲ್ಲ ಎನ್ನಲಾಗಿದೆ. ಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳು ಜನಗಾಗೃತಿ ಹಿನ್ನೆಲೆಯಲ್ಲಿ ನಿರಂತರವಾಗಿ ವರದಿ ಪ್ರಕಟಿಸಿದ ಪರಿಣಾಮವಾಗಿ ತನಿಖೆಗೆ ಒತ್ತಾಯಿಸಿದ್ದ

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ Read More »

ಕರಾವಳಿ, ಕ್ರೈಮ್ ನ್ಯೂಸ್

ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ

(ನ್ಯೂಸ್ ಕಡಬ)newskadaba.com ಕೇರಳ, ಜು.30. ಕೇರಳದ ವಯನಾಡು ಪ್ರಕೃತಿ ವಿಕೋಪದಿಂದ ದುರಂತ ಭೂಮಿಯಾಗಿ ಮಾರ್ಪಾಡಾಗಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿದ್ದು ಅನೇಕ ಊರುಗಳ ಚಿತ್ರಣವೇ ಬದಲಾಗಿವೆ. ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು

ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ Read More »

ಕ್ರೈಮ್ ನ್ಯೂಸ್

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ‘ಆಪರೇಷನ್ ಟೈಗರ್’ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದ್ದು, ಇದನ್ನು ಖಂಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕು ಮತ್ತು ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಯುಕ್ತರ ಕಚೇರಿ ಮುಂದೆ ಧರಣಿ ಆರಂಭಿಸಿದ್ದಾರೆ. ನಿನ್ನೆ ನಡೆದ ಟೈಗರ್ ಕಾರ್ಯಾಚರಣೆಯಲ್ಲಿ ತಳ್ಳುಗಾಡಿ, ಗೂಡಂಗಡಿಗಳು, ಸಾಮಗ್ರಿಗಳಿಗೆ ಹಾನಿ ಮಾಡಿದ್ದಲ್ಲದೆ ಆಹಾರ, ತಿಂಡಿತಿನಿಸುಗಳನ್ನು ನಾಶಪಡಿಸಿರುವುದರ ವಿರುದ್ಧ ಪ್ರತಿಭಟನಾಕಾರರು

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ Read More »

ಕರಾವಳಿ

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.30. ಪೊಲೀಸರು ಮನೆಗೆ ನುಗ್ಗಿ ವಿನಾಕಾರಣ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಈಶ್ವರಮಂಗಲ ಪಂಚೋಡಿಯಲ್ಲಿ ನಡೆದಿದೆ. ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ. ರಾತ್ರಿ 11 ಗಂಟೆ ಸುಮಾರಿಗೆ ತಾನು ಮನೆಯಲ್ಲಿ ಮಲಗಿದ್ದಾಗ ಬಾಗಿಲು ತಟ್ಟುವ ಶಬ್ದ ಕೇಳಿಸಿತು. ಬಾಗಿಲು ತೆರೆದಾಗ ನಾಲ್ವರು ಪೊಲೀಸರು ಮನೆಯಲ್ಲಿ ಬೇರೆ ಯಾರಾದರೂ ಇದ್ದಾರೆಯೇ ಎಂದು ಕೇಳಿದರು.

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು Read More »

ಕರಾವಳಿ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್  

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.30. ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ. ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್   Read More »

ಕರಾವಳಿ
Scroll to Top