ವಿಮಾನ ಪತನ  19 ಮಂದಿ ಸಜೀವ ದಹನದ ಶಂಕೆ

(ನ್ಯೂಸ್ ಕಡಬ)newskadaba.com  ನೇಪಾಳ, ಜು.25.  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್​ ಆಗುವ ವೇಳೆ ಶೌರ್ಯ ಏರ್​ಲೈನ್ಸ್​ ವಿಮಾನ ಪತನಗೊಂಡು 19 ಮಂದಿ ಪ್ರಯಾಣಿಕರು ಸಜೀವ ದಹನಗೊಂಡ ಘಟನೆ ನೇಪಾಳದಲ್ಲಿ ನಡೆದಿದೆ. ವಿಮಾನದಲ್ಲಿ ಪೈಲಟ್​ ಸೇರಿ 19 ಮಂದಿ ಇದ್ದರು. ಸದ್ಯ ಐವರ ಮೃತದೇಹವನ್ನು ಹೊರತೆಗೆಯಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. ಶೌರ್ಯ ಏರ್​ಲೈನ್ಸ್​ ವಿಮಾನವು ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನದ ಪೈಲಟ್ ಮತ್ತು ಇತರ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.  

ವಿಮಾನ ಪತನ  19 ಮಂದಿ ಸಜೀವ ದಹನದ ಶಂಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಹೋರಾತ್ರಿ ಧರಣಿ ರಾಜಕೀಯ ನಾಟಕ    ಹೆಚ್‌.ಕೆ. ಪಾಟೀಲ್ ಕಿಡಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.25. ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನಿರಾಕರಣೆಯಿಂದ ಕೆರಳಿರುವ ಪ್ರತಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನಡೆಸಿರುವ ಅಹೋರಾತ್ರಿ ಧರಣಿ ರಾಜಕೀಯ ನಾಟಕವಷ್ಟೇ ಎಂದು ಕಾನೂನು ಸಚಿವ ಹೆಚ್‌.ಕೆ. ಪಾಟೀಲ್ ಅವರು ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಪರ್ಯಾಯ ನಿವೇಶನ (ಪ್ಲಾಟ್‌) ಹಗರಣ ವಿಚಾರವನ್ನು ಚರ್ಚೆಗೆ ಏಕೆ ಕೈಗೆತ್ತಿಕೊಳ್ಳಲಾಗುತ್ತಿಲ್ಲ ಎಂಬುದನ್ನು ವಿವರಿಸಿದರೂ ಬಿಜೆಪಿಯು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು

ಅಹೋರಾತ್ರಿ ಧರಣಿ ರಾಜಕೀಯ ನಾಟಕ    ಹೆಚ್‌.ಕೆ. ಪಾಟೀಲ್ ಕಿಡಿ Read More »

ಕರ್ನಾಟಕ

ಪ್ರವಾಹ ತಗ್ಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಬಿಡಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ

(ನ್ಯೂಸ್ ಕಡಬ)newskadaba.com ಮುಂಬೈ, ಜು.25. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರಿ ಮಳೆಯ ಪರಿಣಾಮ ಸಾಂಗ್ಲಿ, ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿಯನ್ನು ತಡೆಯುವುದಕ್ಕೆ ಆಲಮಟ್ಟಿ ಜಲಾಯಶಯದಿಂದ ನೀರು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ. ಈ ಬಗ್ಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ (ಆಲಮಟ್ಟಿ ಡ್ಯಾಮ್) ಕೃಷ್ಣಾ ನದಿಗೆ ಕಟ್ಟಲಾಗಿರುವ ಜಲಾಶಯವಾಗಿದ್ದು, ಜಲವಿದ್ಯುತ್ ಯೋಜನೆಯದ್ದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಜಿತ್ ಪವಾರ್, ‘ಆಲಮಟ್ಟಿ ಅಣೆಕಟ್ಟಿನಿಂದ ನೀರು ಹರಿಸುವುದನ್ನು

ಪ್ರವಾಹ ತಗ್ಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಬಿಡಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ Read More »

ರಾಷ್ಟ್ರೀಯ ನ್ಯೂಸ್

ಹರಿಯಾಣದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

(ನ್ಯೂಸ್ ಕಡಬ)newskadaba.com ಹರಿಯಾಣ, ಜು.25. ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಭೂಕಂಪನಗಳು ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಕಂಪನದ ಅನುಭವವಾಗಿದೆ ಎಂದು ವರದಿ ತಿಳಿಸಿದೆ. ಫರಿದಾಬಾದ್ ಜಿಲ್ಲೆಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪನಶಾಸ್ತ್ರದ ಕೇಂದ್ರದ ಮಾಹಿತಿಯ ಪ್ರಕಾರ, ಮೊದಲ ಕಂಪನವು ಬೆಳಗ್ಗೆ 10.54ಕ್ಕೆ ಸಂಭವಿಸಿದೆ, ಇದಾಗಿ 1 ಗಂಟೆಯೊಳಗೆ ಎರಡನೆಯ ಬಾರಿಗೆ 11.43ಕ್ಕೆ ಭೂಮಿ ಕಂಪಿಸಿದೆ. ದೇಶದ ರಾಜಧಾನಿ ದೆಹಲಿ-ಎನ್‌ಸಿಆರ್‌ನ ಹಲವಾರು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹರಿಯಾಣದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ Read More »

ರಾಷ್ಟ್ರೀಯ ನ್ಯೂಸ್

‘ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳ ಧರಣಿ’    ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.25. ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ವಿಪಕ್ಷಗಳ ಪ್ರತಿಭಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ವಿರುದ್ದ ಕಿಡಿಕಾರಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವರು ವಿಷಯವೇ ಇಲ್ಲದ್ದನ್ನ ವಿಷಯ ಮಾಡ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಿಯಮಾವಳಿ ಪ್ರಕಾರವೇ ಸೈಟ್ ಪಡೆಯಲಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಆಗಿದೆ.

‘ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳ ಧರಣಿ’    ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ಸಾಲ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಸರ್ಕಾರಿ ಯೋಜನೆಗಳು ಮತ್ತು ನೀತಿಗಳ ಅಡಿಯಲ್ಲಿ ಯಾವುದೇ ಪ್ರಯೋಜನಕ್ಕೆ ಅನರ್ಹರಾಗಿರುವ ವಿದ್ಯಾರ್ಥಿಗಳು ಈಗ ದೇಶೀಯ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಶೇಕಡಾ 3ರ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024ರಲ್ಲಿ ಘೋಷಿಸಿದ್ದಾರೆ ಎನ್ನಲಾಗಿದೆ. ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರ ಇ-ವೋಚರ್‌ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಸರ್ಕಾರವು ಯುವಜನರಿಗೆ ಕೌಶಲ್ಯ ಮತ್ತು ಅವಕಾಶಗಳನ್ನು ಒದಗಿಸುವ ಉದ್ದೇಶವನ್ನು

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ಸಾಲ    Read More »

ಕರ್ನಾಟಕ

ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ ಮತ್ತೆ ಸೆರೆಮನೆ ವಾಸ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಟ್ರಾಫಿಕ್ ಕೋರ್ಟ್‌ ನಿಂದ ಪರಾರಿಯಾಗಿದ್ದ ರಸ್ತೆ ಅಪಘಾತದಲ್ಲಿ ಶಿಕ್ಷೆಗೊಳಗಾಗಿದ್ದ ಅಪರಾಧಿಯನ್ನು ಜೀವನ್ ಭೀಮಾ ನಗರ ಸಂಚಾರ ಪೊಲೀಸರು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ. 2015ರಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಆರೋಪಿ ದಿನೇಶ್ (32) ಮೊಪೆಡ್‌ನಲ್ಲಿದ್ದ ಗುರುಪ್ಪ (54) ಅವರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಪೊಲೀಸರು ಐಪಿಸಿಯ ಸೆಕ್ಷನ್ 279 (ನಿರ್ಲಕ್ಷ್ಯದ ಸವಾರಿ) ಮತ್ತು 304 (ಎ) (ಸಾವಿಗೆ ಕಾರಣ)

ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ ಮತ್ತೆ ಸೆರೆಮನೆ ವಾಸ ಫಿಕ್ಸ್ Read More »

ಕರ್ನಾಟಕ

ಒಲಂಪಿಕ್ಸ್-2024 ಕ್ಕೆ ಅಡಚಣೆ ಯೋಜನೆ       ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ

(ನ್ಯೂಸ್ ಕಡಬ)newskadaba.com ಪ್ಯಾರೀಸ್, ಜು.25. ಒಲಂಪಿಕ್ಸ್ 2024 ಕ್ಕೆ ಅಡಚಣೆ ಉಂಟು ಮಾಡಲು ಯೋಜಿಸಿದ್ದ ರಷ್ಯಾ ಪ್ರಜೆಯನ್ನು ಫ್ರಾನ್ಸ್ ನ ರಾಜಧಾನಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ರಷ್ಯಾ ಪ್ರಜೆ 14 ವರ್ಷಗಳಿಂದ ಪ್ಯಾರಿಸ್ ನಲ್ಲಿ ವಾಸವಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೀನ್ ನದಿ ದಡದಲ್ಲಿ ದೋಣಿ ಮೆರವಣಿಗೆ ಒಳಗೊಂಡ ಕಾರ್ಯಕ್ರಮದ ಮೂಲಕ ಒಲಂಪಿಕ್ಸ್ ಗೆ ಚಾಲನೆ ಸಿಗಲಿದೆ.  

ಒಲಂಪಿಕ್ಸ್-2024 ಕ್ಕೆ ಅಡಚಣೆ ಯೋಜನೆ       ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ  ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ವಿಮಾನಯಾನ ವಲಯದ ಪ್ರಮುಖರ ಜೊತೆ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ‌ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ  ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….! Read More »

ಕರ್ನಾಟಕ

ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಳೆಗಾಲದ ಅಧಿವೇಶನ ಮುಗಿಯಲು 2 ದಿನ ಬಾಕಿ ಇರುವಂತೆ ರಾಜ್ಯ ಸರ್ಕಾರ ಪ್ರಮುಖ ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು 26 ರಂದು ಪರಿಷತ್ತಿನ ಕಾಂಗ್ರೆಸ್ ಪಕ್ಷದ ಎಲ್ಲಾ ಸದರ್ಯರು ಕಡ್ಡಾಯವಾಗಿ ಹಾಜರಿರುವಂತೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ವಿಪ್ ನೀಡಿದ್ದಾರೆ. ಇನ್ನೆರಡು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರ ಸುಮಾರು 10 ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಸದಸ್ಯರ ಹಾಜರಾತಿ ಕಡ್ಡಾಯಗೊಳಿಸಿ ವಿಪ್ ನೀಡಲಾಗಿದೆ ಎಂದು

ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ Read More »

ಕರ್ನಾಟಕ
Scroll to Top