ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು     

(ನ್ಯೂಸ್ ಕಡಬ)newskadaba.com ಕೇರಳ, ಜು.22. ನಿಫಾ ಸೋಂಕು ತಗುಲಿದ್ದ 14 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದ್ದು, ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಬಾಲಕ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಡಿಸಿತ್ತು. ಬಾಲಕನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತ್ಯಕ್ರಿಯೆಯ ಕುರಿತು ನಿರ್ಧಾರ […]

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ಮನೆಯೊಂದರ ಮುಖ್ಯ ಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ ನಿಂದ ಒಡೆಯಲು ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿ ಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ.  ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22.  ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ ಎಂದು ವರದಿ ತಿಳಿಸಿದೆ. ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, 19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದು, ನಾಳೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿಯಾಗುವ ಸಾಧ್ಯತೆ ಇದ್ದು, ನೀಟ್,

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.! Read More »

ರಾಷ್ಟ್ರೀಯ ನ್ಯೂಸ್

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಫೋನ್ ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದು, “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯು ಇಂದು (ಜು.22) ಪೂರ್ವಾಹ್ನ 10.30ಕ್ಮೆ ಸರಿಯಾಗಿ ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಸಂಚಾಲಕರಾದ ದಯಾನಂದ ರೈ ಮನವಳಿಕೆ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ವಹಿಸಲಿದ್ದು,

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ Read More »

ಕರಾವಳಿ

ಉಳ್ಳಾಲ ಖಾಝಿಯಾಗಿ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ನೇಮಕ – ಅಗಸ್ಟ್ 05 ರಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.22. ಉಳ್ಳಾಲ ನೂತನ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ನೇಮಕವಾಗಿದ್ದಾರೆ. ಇತ್ತೀಚೆಗಷ್ಟೇ ಉಳ್ಳಾಲ ಖಾಝಿಯಾಗಿದ್ದ ಫಝಲ್‌ ಕೋಯಮ್ಮ ಕೂರತ್ ತಂಙಳ್ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ಖಾಝಿ‌ ಸ್ಥಾನಕ್ಕೆ ಭಾನುವಾರದಂದು ನಡೆದ ಸಭೆಯಲ್ಲಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಆಗಸ್ಟ್ 05ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸ್ಪೀಕರ್‌ ಯು.ಟಿ ಖಾದರ್‌, ನೂತನ ಖಾಝಿ ಕಾಂತಪುರಂ ಎ.ಪಿ. ಅಬೂಬಕ್ಕರ್

ಉಳ್ಳಾಲ ಖಾಝಿಯಾಗಿ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ನೇಮಕ – ಅಗಸ್ಟ್ 05 ರಂದು ಅಧಿಕಾರ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು.21. ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28) ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ ನದಿಗಳಲ್ಲಿ ತಗ್ಗಿದ ನೀರಿನ ಮಟ್ಟ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.20. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರಾಗಿದ್ದ ಮಳೆ ಅಬ್ಬರ ಇಂದು ಕಡಿಯಾದಂತಿದ್ದು, ಬೆಳಿಗ್ಗೆಯಿಂದಲೇ ಬಿಸಿಲಿನ ಕೂಡಿದ ವಾತವರಣ ಕಂಡುಬಂದಿದೆ. ಅಪಾಯದ ಮಟ್ಟ ಮೀರಿ 8.6ಮೀ ವರೆಗೂ ತಲುಪಿದ್ದ ನೀರಿನ ಹರಿವಿನ ಮಟ್ಟ7.4 ಮೀ ಗೆ ಇಳಿಕೆಯಾಗಿದ್ದು, ಜಿಲ್ಲೆಯ ನೇತ್ರಾವತಿ, ಕುಮಾರಧಾರ, ನಂದಿನಿ ಹಾಗೂ ಶಾಂಭವಿ ನದಿಗಳಲ್ಲೂ ನೀರು ಹರಿವಿನ ಮಟ್ಟ ತಗ್ಗಿರುವ ಬಗ್ಗೆ ವರದಿಯಾಗಿದೆ.  

ದ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ ನದಿಗಳಲ್ಲಿ ತಗ್ಗಿದ ನೀರಿನ ಮಟ್ಟ.! Read More »

ಕರಾವಳಿ

ರಾಜ್ಯದ್ಯಂತ ಹೆಚ್ಚಾದ ಡೆಂಘಿ ಹಾವಳಿ ಮತ್ತೋರ್ವ ಯುವತಿ ಬಲಿ.!

(ನ್ಯೂಸ್ ಕಡಬ)newskadaba.com ಬಳ್ಳಾರಿ, ಜು.20. ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ ಎನ್ನಲಾಗಿದೆ. ಇದೀಗ, ಮಹಾಮಾರಿ ಡೆಂಗ್ಯೂ ಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಮೃತ ಯುವತಿಯನ್ನು ರೇಖಾ (19) ಎಂದು ಗುರುತಿಸಲಾಗಿದ್ದು,  ತೀವ್ರ ಜ್ವರ ಕಾಣಿಸಿಕೊಂಡ ಪರಿಣಾಮ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಯುವತಿಗೆ ಶಂಕಿತ ಡೆಂಗ್ಯೂ ಜ್ವರವಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.  

ರಾಜ್ಯದ್ಯಂತ ಹೆಚ್ಚಾದ ಡೆಂಘಿ ಹಾವಳಿ ಮತ್ತೋರ್ವ ಯುವತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿ ಚಕ್ರ ವಾಹನಕ್ಕೆ ನಾಯಿಯ ಶವ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಉಡುಪಿ, ಜು.20. ದ್ವಿಚಕ್ರ ವಾಹನದಲ್ಲಿ ನಾಯಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಸಾರ್ವಜನಿಕರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈ ವ್ಯಕ್ತಿ ನಾಯಿಯ ಕುತ್ತಿಗೆಗೆ ಸರಪಳಿಯನ್ನು ಜೋಡಿಸಿ ನಂತರ ತನ್ನ ಸ್ಕೂಟರ್‌ ನ ಸೀಟಿಗೆ ಇನ್ನೊಂದು ತುದಿಯನ್ನು ಕಟ್ಟಿದ್ದಾನೆ. ವ್ಯಕ್ತಿಗಾಗಿ ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಾರ್ವಜನಿಕರು ಕ್ರೂರ ಕೃತ್ಯವನ್ನು ಖಂಡಿಸಿದ್ದು ಮುಂದೆ ಇಂತಹ ಘಟನೆಗಳು ನಡೆಯದಂತೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.  

ದ್ವಿ ಚಕ್ರ ವಾಹನಕ್ಕೆ ನಾಯಿಯ ಶವ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ Read More »

ಕರಾವಳಿ
Scroll to Top