ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.20. ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ  ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ ಎನ್ನಲಾಗಿದೆ. ಯುವಕನನ್ನು ಮಹೀಂದ್ರ ಶೋರೂಂ ಉದ್ಯೋಗಿ ಸನ್ಮಿತ್ (21) ಎಂದು ತಿಳಿದುಬಂದಿದೆ. ಈತನ ಸ್ಕೂಟರ್  ಹೊಳೆಯ ಬದಿಯಿಂದ 150 ಮೀ ದೂರದಲ್ಲಿ ನಿಲ್ಲಿಸಿದ್ದ ಎನ್ನಲಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ […]

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20. ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಎಂದು ಗುರುತಿಸಲಾಗಿದೆ. ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ರವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆಗೂ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ.  

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…! Read More »

ಕರಾವಳಿ

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….!

(ನ್ಯೂಸ್ ಕಡಬ)Newskadaba.com ಮಂಗಳೂರು, ಜು.20. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ನಿಯಂತ್ರಣ ತಪ್ಪಿ ಸ್ಕಿಡ್ಡಾಗಿ ರಸ್ತೆ ವಿಭಜಕದ ಮಧ್ಯೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ಕಿ ಮತ್ತು ಆತನ ಪುತ್ರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….! Read More »

ಕರಾವಳಿ

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ  20ರಂದು ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ Read More »

ಕರಾವಳಿ, ಕರ್ನಾಟಕ

ನಾಳೆ (ಜು. 19) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 19ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

ನಾಳೆ (ಜು. 19) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 18 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ನದಿ ನೀರಿನಲ್ಲಿ ತೇಲಿ ಬಂತು ಆನೆಯ ಮೃತದೇಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 16. ಕರಾವಳಿಯಾದ್ಯಂತ ಕಳೆದ ಎರಡು ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿದ್ದು, ಇದರ ನಡುವೆ ಆನೆಯ ಮೃತದೇಹವೊಂದು ನದಿಯಲ್ಲಿ ತೇಲಿಬಂದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಿದ್ದು, ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಕುಮಾರಧಾರ ನದಿಯಲ್ಲಿ ನೀರು ಎಷ್ಟಿದೆ ಎಂದು ನೋಡಲು ತೆರಳಿದ ಮನ್ಮಥ ಬಟ್ಟೋಡಿ ಎಂಬುವರಿಗೆ ಆನೆಯ ಮೃತ ದೇಹವೊಂದು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಅವರು ವೀಡಿಯೋದಲ್ಲಿ ಆನೆಯ ಮೃತದೇಹ ತೇಲಾಡುವ

ಸುಬ್ರಹ್ಮಣ್ಯ: ನದಿ ನೀರಿನಲ್ಲಿ ತೇಲಿ ಬಂತು ಆನೆಯ ಮೃತದೇಹ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ ನಾಳೆ (ಜು. 16) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 15. ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲಾದ್ಯಂತ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು. 16ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ ನಾಳೆ (ಜು. 16) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ
Scroll to Top