ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ವಾಹನಗಳು ಜಖಂ, ಸವಾರ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com, ಜೂ.18 ಗುರುವಾಯನಕೆರೆ: 2 ಕಾರುಗಳು ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ನಿಯಂತ್ರಣ ತಪ್ಪಿದ ಕಾರುಗಳು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.nal
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ವಾಹನಗಳು ಜಖಂ, ಸವಾರ ಆಸ್ಪತ್ರೆಗೆ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









