ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ. ಪತಿ-ಪತ್ನಿ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹಸಚಿವ ಪರಮೇಶ್ವರ್​ ಡಿಜಿ ಮತ್ತು ಐಜಿಪಿ ಅಲೋಕ್‌ ಮೋಹನ್‌ ಗೆ ಸೂಚಿಸಿದ್ದರು. ಇನ್ನು ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿದ್ದು, ಈ ಕುರಿತಾಗಿ […]

ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ Read More »

ಕರ್ನಾಟಕ

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ. 27. ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​ ಸ್ಪೋಟ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಶಮಿ- ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 27. ಭಾರತ ಕ್ರಿಕೆಟ್ ತಂಡದ ಮೊಹಮ್ಮದ್ ಶಮಿ ಅವರು ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 2024ರ ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಸ್ಪತ್ರೆಯ ಬೆಡ್‌ ನಲ್ಲಿರುವ ಫೋಟೊಗಳನ್ನು ಹಂಚಿಕೊಂಡಿರುವ ಶಮಿ ಅವರು, ‘ನನ್ನ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ಆಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ ನನ್ನ ಪಾದಗಳು ಮೊದಲಿನಂತಾಗಲು ಎದುರು ನೋಡುತ್ತಿದ್ದೇನೆ, ಎಂದು ಪೋಸ್ಟ್ ಮಾಡಿದ್ದಾರೆ.  

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಶಮಿ- ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆ Read More »

ಕ್ರೀಡಾ ನ್ಯೂಸ್

ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಪಾಟ್ನಾ, ಫೆ. 27. ಆರ್.ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಈ ಅಪಘಾತವು ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬದಿಯ ಮತ್ತೊಂದು ಕಡೆಯಿಂದ ಬರುತ್ತಿದ್ದ ವಾಹನಕ್ಕೆ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ- ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್

ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ

(ನ್ಯೂಸ್ ಕಡಬ) newskadaba.com ಲಾಹೋರ್, ಫೆ. 27. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ನಾಯಕಿಯಾಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮರ್ಯಮ್ ಅವರು 12 ಕೋಟಿ ಜನಸಂಖ್ಯೆ ಹೊಂದಿರುವ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಸಿಎಂ ಆಗಿದ್ದಾರೆ. 2012ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಮರ್ಯಮ್ ಅವರು, 2013ರ ಸಾರ್ವತ್ರಿಕ ಚುನಾವಣೆಯ ವೇಳೆ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು.

ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಗೆ ತೆರಳಿದ್ದ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆಗೆ ಬಂದಿದ್ದು, ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತು, ಮಗುವು

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಮೈಸೂರು ಸಂಸದ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ತನ್ನ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಮೈಸೂರು ಸಂಸದ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂದು

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಮೈಸೂರು ಸಂಸದ Read More »

ಕರ್ನಾಟಕ

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮಾದಕ ದ್ರವ್ಯ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರ ತಂಡ ಕೇರಳದಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಟಿ.ಇ.ಜೋಸೆಫ್ ಎಂದು ಗುರುತಿಸಲಾಗಿದೆ. ಈತನ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಈತನು 16 ವರ್ಷಗಳಿಂದ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದು, ಈತನ ವಿರುದ್ದ ನ್ಯಾಯಾಲಯವು ದಸ್ತಗಿರಿ

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಲೋಕೋಪಯೋಗಿ ಇಲಾಖೆಯಿಂದ ಫೆಬ್ರವರಿ 29 ರಿಂದ ರಸ್ತೆ ಸಂಚಾರ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಲೋಕೋಪಯೋಗಿ ಇಲಾಖೆಯಿಂದ  2024 ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಫೆಬ್ರವರಿ 29 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 2, ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 2 ದಿನಗಳ ಕಾಲ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸುಮಾರು 124 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ಸಮೀಕ್ಷೆಯ ಮುಖ್ಯ ಉದ್ದೇಶವೇನೆಂದರೆ, ವಾಹನ ಸಂಚಾರದ ಬೆಳವಣಿಗೆ

ಲೋಕೋಪಯೋಗಿ ಇಲಾಖೆಯಿಂದ ಫೆಬ್ರವರಿ 29 ರಿಂದ ರಸ್ತೆ ಸಂಚಾರ ಸಮೀಕ್ಷೆ Read More »

ಕರ್ನಾಟಕ

ಮಾರ್ಚ್ 1ರಿಂದ ಜಾನಪದ ಕಡಲೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮವು ಪಣಂಬೂರು ಬೀಚ್‍ ನಲ್ಲಿ ಮಾರ್ಚ್ 1ರಿಂದ 3ರ ವರೆಗೆ ನಡೆಯಲಿದೆ. ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮಾರ್ಚ್ 1ರಿಂದ ಜಾನಪದ ಕಡಲೋತ್ಸವ Read More »

ಕರಾವಳಿ
Scroll to Top