ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 24. ಕಳೆದ ವಾರ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾರೊಂದರಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು ನರಗ ಠಾಣಾ ನಿರೀಕ್ಷಕ ಸತೀಶ್ ಜಿ.ಜೆ ಅವರು ಸಿಬ್ಬಂದಿಗಳೊಂದಿಗೆ ವಾಹನ ತಪಾಸಣಾ ನಿರತರಾಗಿದ್ದ ವೇಏಲ ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿತ್ತು. ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, […]

ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅರಣ್ಯಶಾಸ್ತ್ರ ಓದಿದವರಿಗೆ ಮಾತ್ರ ಅರಣ್ಯ ಇಲಾಖೆಯಲ್ಲಿ ಅವಕಾಶ ಕೊಡಿ- ವಿದ್ಯಾರ್ಥಿಗಳ ಆಗ್ರಹ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 24. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪವಲಯ ಅರಣ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವಿ ಪಡೆದವರಿಗೆ ಮಾತ್ರ ಮೀಸಲಿಡಬೇಕು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ವಿ.ವಿ.ಯ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಥಿಗಳು ಆಗ್ರಹಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿನಿ ಶ್ರೀನಿಧಿ, ಸರಕಾರವು ಅರಣ್ಯ ಇಲಾಖೆಯ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರವಲ್ಲದ ಇತರೆ ವಿಜ್ಞಾನ ವಿಭಾಗದ ಪದವಿ ವಿದ್ಯಾರ್ಥಿಗಳಿಗೂ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದು, ಅರಣ್ಯ

ಅರಣ್ಯಶಾಸ್ತ್ರ ಓದಿದವರಿಗೆ ಮಾತ್ರ ಅರಣ್ಯ ಇಲಾಖೆಯಲ್ಲಿ ಅವಕಾಶ ಕೊಡಿ- ವಿದ್ಯಾರ್ಥಿಗಳ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ರೂ.7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತನಿಖಾ ತಂಡವು ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿವೆ ಎಂದು ಹೇಳಿದೆ. ಈ ಪೈಕಿ ಜನವರಿಯಲ್ಲಿ ಒಟ್ಟು 17,967 ಟ್ರಿಪ್‌ ಗಳನ್ನು ತಪಾಸಣೆ ನಡೆಸಿ, 3,696 ಟಿಕೆಟ್

ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC Read More »

ಕರ್ನಾಟಕ

ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 24. ಸಾಲದ ಕಂತು ಪಾವತಿಸದ ಹಿನ್ನೆಲೆ ಧರ್ಮಸ್ಥಳ ಸಂಘದವರು ಮನೆಗೆ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಎಂದು ಗುರುತಿಸಲಾಗಿದೆ.   ಮೃತ ಅರ್ಪಿತಾರವರು, ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ

ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕಳೆದ 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮಾದಾಪುರದ ಈರಪ್ಪ ಎಂದು ಗುರುತಿಸಲಾಗಿದೆ. ಈತ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದು, 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿವಿಲ್ ನ್ಯಾಯಾಧೀಶೆಯಾಗಿ ಕಡಬದ ಗೀತಾ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕರ್ನಾಟಕ ಸಿವಿಲ್ ನ್ಯಾಯಾಧೀಶರ 2023ನೆ ಸಾಲಿನ ಪರೀಕ್ಷೆಯಲ್ಲಿ ತುಮಕೂರು ಮೂಲದ ಗೀತಾ ಡಿ. ಉತ್ತೀರ್ಣರಾಗಿದ್ದು, ಸಿವಿಲ್ ನ್ಯಾಯಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ.   ಮೂಲತಃ ತುಮಕೂರಿನವರಾದ ಗೀತಾ ಅವರು ಪ್ರಸಕ್ತ ಕಡಬ ಸಮೀಪದ ಚಾರ್ವಾಕದಲ್ಲಿ ಪತಿಯೊಂದಿಗೆ ನೆಲೆಸಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಕರಾವಳಿಗೆ ಕೀರ್ತಿ ತಂದಿದ್ದಾರೆ.

ಸಿವಿಲ್ ನ್ಯಾಯಾಧೀಶೆಯಾಗಿ ಕಡಬದ ಗೀತಾ ಆಯ್ಕೆ Read More »

ಕರಾವಳಿ, ಕರ್ನಾಟಕ

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಣಂಬೂರು, ಫೆ. 24. ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರದಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಎಂದು ಗುರುತಿಸಲಾಗಿದೆ. ಪೂರ್ಣಿಮಾ ತನ್ನ ಸಹೋದರಿಯ ಜೊತೆ ದ್ವಿಚಕ್ರ ವಾಹನದಲ್ಲಿ ಸಹ ಸವಾರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ, ಅವರಿದ್ದ ಸ್ಕೂಟರ್ ಪಣಂಬೂರು ಗೇಲ್ ಗ್ಯಾಸ್ ಬಂಕ್ ಬಳಿ ತಲುಪಿದಾಗ ಹಿಂದಿನಿಂದ ಎಡಭಾಗದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯಿಂದ ನುಗ್ಗಿ ಬಂದ ಸಿಮೆಂಟ್ ಮಿಕ್ಸರ್

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ. ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ನಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಮಗುಚಿ ಬಿದ್ದಿದ್ದು, ರಸ್ತೆಗೆಸೆಯಲ್ಪಟ್ಟ

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಲ್ ಬಸ್ ನಡಿಗೆ ಬಿದ್ದ ಬಾಲಕ- ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 24. ಶಾಲಾ ಬಸ್ಸಿನಿಂದ ಇಳಿದು ರಸ್ತೆ ದಾಟಲು ಮುಂದಾದ ವಿದ್ಯಾರ್ಥಿಯೋರ್ವ ಅದೇ ಬಸ್ಸಿನಡಿಗೆ ಬಿದ್ದ ಘಟನೆ ಸುರತ್ಕಲ್ ನ ಕುಳಾಯಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತದ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುರತ್ಕಲ್ ನ ಖಾಸಗಿ ಶಾಲೆಯ ಬಸ್ ಎಂದಿನಂತೆ ವಿದ್ಯಾರ್ಥಿಗಳನ್ನು ಕರೆತಂದು, ವಿದ್ಯಾರ್ಥಿಯೋರ್ವನನ್ನು ಮನೆ ಮುಂದೆ ಇಳಿಸಿದೆ. ಆದರೆ, ಬಸ್ಸಿನಿಂದ ಇಳಿದ ಬಾಲಕ ಬಸ್ ಮುಂಭಾಗದಿಂದಲೇ ರಸ್ತೆ ದಾಟಿದ್ದು,

ಸ್ಕೂಲ್ ಬಸ್ ನಡಿಗೆ ಬಿದ್ದ ಬಾಲಕ- ಪ್ರಾಣಾಪಾಯದಿಂದ ಪಾರು Read More »

ಕರಾವಳಿ

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 24. ಮುಂಬೈಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡು ಮೂಲದ ಕಯ್ಯಾರ್ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಯ್ಯಾರ್ ಚನ್ನಿಕುಡೇಲ್ ನ ರೂಬನ್ ಚಾರ್ಲ್ಸ್ ಕ್ರಾಸ್ತ (39) ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಉದ್ಯಮ ನಡೆಸುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ರೂಬನ್ ನನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದಾರೆ.

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top