ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಾರ್ಚ್ 3ರಂದು ಪಲ್ಸ್ ಪೋಲಿಯೋ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಾರ್ಚ್ 3ರಂದು ಪಲ್ಸ್ ಪೊಲಿಯೋ ದಿನಾಚರಣೆಯನ್ನು ಆಚರಿಸುತ್ತಿದ್ದು,  ಹೆಚ್ಚಾಗಿ ನಗರ ಪ್ರದೇಶದಲ್ಲಿ ಯಾವೆಲ್ಲ ಪ್ರದೇಶದಲ್ಲಿ ಪೋಲಿಯೋ ಲಸಿಕೆಯನ್ನು ತೆಗೆದುಕೊಳ್ಳದೇ ಇರುವವರು ಇದ್ದಾರೆ ಎಂಬ ಬಗ್ಗೆ ಸಮೀಕ್ಷೆಯನ್ನು ನಡೆಸಿ,  ಎಲ್ಲರಿಗೂ ಲಸಿಕೆಯನ್ನು ನೀಡುವಂತಾಗಬೇಕು. ಎಲ್ಲಾ […]

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಶಾಲಾ ಕಾಲೇಜುಗಳ ಆವರಣದ 100 ಮೀಟರ್ ಅಂತರದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ತಂಬಾಕುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದ್ದಾರೆ. ಅವರು ಮಂಗಳವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳ ಆವರಣದಿಂದ  100 ಮೀಟರ್ ಅಂತರದಲ್ಲಿ ತಂಬಾಕು ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತವರ ವಿರುದ್ಧ ಕ್ರಮವನ್ನು

ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ Read More »

ಕರಾವಳಿ, ಕರ್ನಾಟಕ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್‍ ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಇಂಜನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ Read More »

ಕರಾವಳಿ

ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ,  ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ

ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ Read More »

ಕರಾವಳಿ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ)newskadaba.com ಮುಂಬೈ, ಫೆ.20: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿ 15ರಂದೇ ಗಂಡು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದು ಈ ಸಂತಸದ ಸುದ್ದಿಯನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗುವಿಗೆ ಅಕಾಯ್ ಎಂದು ವಿಭಿನ್ನ ಹೆಸರಿಟ್ಟಿದ್ದಾರೆ. ವಾಮಿಕಾಳ ಕಿರಿಯ ಸಹೋದರನನ್ನು ಜಗತ್ತಿಗೆ ಸ್ವಾಗತ ಎಂದು ಅನುಷ್ಕಾ ಬರೆದಿದ್ದಾರೆ. ಈ ಪೋಸ್ಟ್ ಗೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅನುಷ್ಕಾ ಪೋಸ್ಟ್‌ನಲ್ಲಿ ‘ನಮ್ಮ ಹೃದಯದಲ್ಲಿ ಬಹಳ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ Read More »

ಬ್ರೇಕಿಂಗ್ ನ್ಯೂಸ್

ಕಡಬ: ಕರ್ತವ್ಯದ ವೇಳೆಯೇ ಕುಡಿದು ಬಸ್ಸಿನಲ್ಲಿ ಬಿದ್ದ ಗ್ರಾಮ ಕರಣಿಕ – ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ಕರ್ತವ್ಯದ ಮಧ್ಯೆಯೇ ಕುಡಿತದ ಮತ್ತಿನಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನೋರ್ವನನ್ನು ಬಸ್ಸು ಚಾಲಕ ನೇರವಾಗಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಳಿಸಿದ ಘಟನೆ ಮಂಗಳವಾರ ಸಂಜೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಗೋಳಿತೊಟ್ಟುವಿನ ಗ್ರಾಮ ಕರಣಿಕ ನಾಗಸುಂದರ ಎಂಬಾತ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಕುಡಿದು ಹೊರಳಾಡುತ್ತಿದ್ದ ಎನ್ನಲಾಗಿದೆ. ಪ್ರಯಾಣಿಕರ ದೂರಿನ ಮೇರೆಗೆ ಬಸ್ಸು ಚಾಲಕ ಠಾಣೆಯ ಮುಂಭಾಗಕ್ಕೆ ಬಂದು ಬಸ್ಸನ್ನು ನಿಲ್ಲಿಸಿದ್ದು, ನಾಗಸುಂದರನನ್ನು ಇಳಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ

ಕಡಬ: ಕರ್ತವ್ಯದ ವೇಳೆಯೇ ಕುಡಿದು ಬಸ್ಸಿನಲ್ಲಿ ಬಿದ್ದ ಗ್ರಾಮ ಕರಣಿಕ – ಸಾರ್ವಜನಿಕರಿಂದ ಆಕ್ರೋಶ Read More »

ಕರಾವಳಿ

ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 20. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು

ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ಭಾರತೀಯ ಕೇಂದ್ರ ರೈಲ್ವೆ ಇಲಾಖೆಯು  622 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಖಾಲಿ ಇರುವ ಹುದ್ದೆಗಳಲ್ಲಿ ಕ್ಲರ್ಕ್, ಹೆಲ್ಪರ್ ಹುದ್ದೆಗಳು ಸೇರಿವೆ. ಕೇಂದ್ರ ರೈಲ್ವೇ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಜನವರಿ 25ರಿಂದ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್ ಸೈಟ್ ಲಿಂಕ್ ಗೆ ಭೇಟಿ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ. 29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 20. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ರೂ.2500/- ಇರುತ್ತದೆ. ಸಂದರ್ಶನವು ದಿನಾಂಕ: 29.02.2024 ಪೂರ್ವಾಹ್ನ 11.00 ಗಂಟೆ, ಸಿಮ್ಸ್ ಸಂಸ್ಥೆಯ ನಿರ್ದೇಶಕರ ಸಭಾ ಕೊಠಡಿ ಶಿವಮೊಗ್ಗದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿ, ಮೂಲ ಅಧಿಸೂಚನೆ ಅರ್ಹತೆ ಮತ್ತು ಅರ್ಜಿ ನಮೂನೆ ಕುರಿತಂತೆ

ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ. 29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ Read More »

ಉದ್ಯೋಗ

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 20. ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ. ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ ಎಂಬವರು ಠಾಣೆಯ ಸಿಬ್ಬಂದಿಗಳೊಂದಿಗೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, ಮನೋಜ್, ಆಶಿಕ್ ಹಾಗೂ ಸನತ್ ಕುಮಾರ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top