ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಇಲ್ಲಿನ ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ನಡೆದಿರುವಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲಾ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ […]

ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌ Read More »

ಕರಾವಳಿ, ಕರ್ನಾಟಕ

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಮಹತ್ವದ ತೀರ್ಪೊಂದನ್ನು ಹೊರಡಿಸಿದ ಸುಪ್ರೀಂ ಕೋರ್ಟ್‌, ಇಂದು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಾಂಡ್‌ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರ ಅವರ ಪೀಠ ತೀರ್ಪು ನೀಡಿದೆ. ಈ ಚುನಾವಣಾ ಬಾಂಡ್‌

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆ. 27, 28 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ರಜೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಫೆಬ್ರವರಿ 27 ಮತ್ತು 28ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವು ನಡೆಯಲಿದ್ದು ಈ ಸಮ್ಮೇಳದಲ್ಲಿ ಭಾಗವಹಿಸಲಿರುವ ನೌಕರರಿಗೆ 2 ದಿನ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ಸಂಘಗಳ ವತಿಯಿಂದ ಫೆ 27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ನಡೆಯಲಿದ್ದು ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಫೆ. 27, 28 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ರಜೆ..! Read More »

ಕರ್ನಾಟಕ

ಕುಸಿದು ಬಿದ್ದು ಯುವ ಟೆನ್ನಿಸ್ ಆಟಗಾರ್ತಿ ಮೃತ್ಯು.!

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್, ಫೆ. 15. ಐಟಿಎಫ್ ಜೂನಿಯರ್ ಪಂದ್ಯಾವಳಿಯ ಅಭ್ಯಾಸದ ವೇಳೆ ಹೃದಯಾಘಾತ ಸಂಭವಿಸಿ ಪಾಕಿಸ್ತಾನದ ಯುವ ಟೆನಿಸ್ ಆಟಗಾರ್ತಿ ಝೈನಾಬ್ ಅಲಿ ನಖ್ವಿ ಅವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಝೈನಬ್ ಅವರು ಮುಂಬರುವ ಐಟಿಎಫ್ ಜೂನಿಯ ರ್ಟೂರ್ನಿಯಲ್ಲಿ ಆಡಲೆಂದು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ತಮ್ಮ ಕೋಣೆಯಲ್ಲಿದ್ದ ಅವರು ಹಠಾತ್ ಕುಸಿದುಬಿದ್ದಿದ್ದು, ಪ್ರಜ್ಞಾಹೀನರಾದ ಝೈನಾಬ್ ಅವರನ್ನು ತಕ್ಷಣ ಆಸ್ಪತ್ರೆ ಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

ಕುಸಿದು ಬಿದ್ದು ಯುವ ಟೆನ್ನಿಸ್ ಆಟಗಾರ್ತಿ ಮೃತ್ಯು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಫೆಬ್ರವರಿ 17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.15. ರಾಜ್ಯದ ಜನರಿಗೆ ಚುನಾವಣೋತ್ತರದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ  ಗ್ಯಾರಂಟಿಗಳನ್ನು ಅಧಿಕಾರ ವಹಿಸಿಕೊಂಡ ಬಳಿಕ ಚಾಚೂ ತಪ್ಪದೆ ಅನುಷ್ಠಾನಿಸಿ ಜನರ ಮನಗೆದ್ದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಸಾಧನೆಯನ್ನು ಜನರ ಮುಂದೆ ಪ್ರಸ್ತುತಪಡಿಸಲು ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಪರಿವರ್ತಿಸಲು ಜನರು ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಸುರಾಜ್ ಹೆಗ್ಡೆ ಹೇಳಿದರು. ಅವರು ಕಡಬದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ

ಫೆಬ್ರವರಿ 17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ Read More »

ಕರಾವಳಿ

ಪೈಶಾಚಿಕ ಕೃತ್ಯ- 2 ವರ್ಷದ ಮಗುವಿನ ಮೇಲೆ ಅತ್ಯಾಚಾರ..!

(ನ್ಯೂಸ್ ಕಡಬ) newskadaba.com ಕೊಡಗು, ಫೆ. 15. 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಬೀಭತ್ಸ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಎಸ್ಟೇಟ್ ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಕಾಮುಕ ಮಣಿ ಎಂಬಾತ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಪೈಶಾಚಿಕ ಕೃತ್ಯ- 2 ವರ್ಷದ ಮಗುವಿನ ಮೇಲೆ ಅತ್ಯಾಚಾರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪ್ರತಿಭಟನೆಯು ಗುರುವಾರದಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ರೈತ ಮುಖಂಡರನ್ನು ಭೇಟಿಯಾಗಲಿದ್ದಾರೆ.

ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರಿನ  ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತುಮಕೂರು ಜಿಲ್ಲೆಯ ನಯನ ಎಂ.ಜಿ. ಎಂದು ಆಕೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ರೈಲ್ವೇ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಇಂದು ಮೂಡಬಿದ್ರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಫೆಬ್ರವರಿ 15ರಂದು  ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧೀಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420.

ಇಂದು ಮೂಡಬಿದ್ರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 15. ಸಂವಿಧಾನ ಪೀಠಿಕೆಯ ಆಶಯ ಮತ್ತು ಮೌಲ್ಯಗಳನ್ನು ಸ್ತಬ್ದ ಚಿತ್ರದ ಮೂಲಕ ಜನರಿಗೆ ತಿಳಿಸಲು ಸಂವಿಧಾನ ಜಾಥಾವು ಫೆ. 17 ರಂದು ಅಪರಾಹ್ನ 3 ಗಂಟೆಗೆ ಆಗಮಿಸುವ ಸಂದರ್ಭದಲ್ಲಿ ಜಾಥಾವನ್ನು ಅದ್ಧೂರಿಯಾಗಿ ಸ್ವಾಗತಿಸುವ ಸಲುವಾಗಿ ರೂಪು ರೇಶೆಗಳ ಬಗ್ಗೆ ಚರ್ಚಿಸಲು ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಪೂರ್ವಭಾವಿ ಸಭೆಯು ಬುಧವಾರದಂದು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ Read More »

ಕರಾವಳಿ
Scroll to Top