ಕಡಬ: ವಾರಿಸುದಾರರಿಲ್ಲದ ದಲಿತ ಕುಟುಂಬದ ಭೂಮಿ ಅತಿಕ್ರಮಣ ಆರೋಪ – ದಲಿತ ಹಾಗೂ ಹಿಂದೂ ಪರ ಸಂಘಟನಾ ಸದಸ್ಯರ ಜಮಾವಣೆ – ಅಧಿಕಾರಿಗಳಿಗೆ ದೂರು

ಕಡಬ, ಫೆ.14. ಕಡಬ ಗ್ರಾಮದ ಪಿಜಕಳ ಎಂಬಲ್ಲಿ ದಲಿತರೋರ್ವರ ಹೆಸರಿನಲ್ಲಿರುವ ಸ್ಥಿರಾಸ್ಥಿಯನ್ನು ವ್ಯಕ್ತಿಯೋರ್ವರು ಅತಿಕ್ರಮಿಸಿಕೊಂಡು ಜೆಸಿಬಿ ಮೂಲಕ ಸಮತಟ್ಟುಗೊಳಿಸಿದ್ದಾರೆ ಎಂದು ಆರೋಪಿಸಿ ಬುಧವಾರ ಕಡಬದ ದಲಿತ ಸಂಘಟನೆ ಮತ್ತು ಹಿಂದೂಪರ ಸಂಘಟನೆಗಳು ಸ್ಥಳದಲ್ಲಿ ಪ್ರತಿಭಟಿಸಿದರು. ಬಳಿಕ ಸ್ಥಳಕ್ಕೆ ಬಂದ ಕಂದಾಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ನೀಡಿದರು. ಈ ವೇಳೆ ಮಾತನಾಡಿದ ಭೀಮ್ ಆರ್ಮಿ ಕಡಬ ತಾಲೂಕು ಅಧ್ಯಕ್ಷ ರಾಘವ ಕಳಾರ, ಪರಿಶಿಷ್ಟ ಜಾತಿಗೆ ಸೇರಿದ ಕುಂಞ ಮೇರ ಎಂಬುವವರಿಗೆ ಸೇರಿದ ಸರ್ವೆ ನಂಬ್ರ […]

ಕಡಬ: ವಾರಿಸುದಾರರಿಲ್ಲದ ದಲಿತ ಕುಟುಂಬದ ಭೂಮಿ ಅತಿಕ್ರಮಣ ಆರೋಪ – ದಲಿತ ಹಾಗೂ ಹಿಂದೂ ಪರ ಸಂಘಟನಾ ಸದಸ್ಯರ ಜಮಾವಣೆ – ಅಧಿಕಾರಿಗಳಿಗೆ ದೂರು Read More »

ಕರಾವಳಿ

ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ – ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 14. 2022ರ  ಏಪ್ರಿಲ್ 14ರಂದು ಅಂದಿನ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ವಿರುದ್ದ ಪ್ರತಿಭಟನೆ ನಡೆಸುವ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌, ಸಿಎಂ ಸಿದ್ದರಾಮಯ್ಯ ರವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಇದನ್ನು ಪ್ರಶ್ನಿಸಿ ಸಿಎಂ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಆರೋಪ ಎದುರಿಸಿದ್ದ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ – ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ..! Read More »

ಕರ್ನಾಟಕ

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 14. ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (ಹೆಚ್​​​ಎಸ್​ಆರ್​ಪಿ) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, HSRP ನಂಬರ್​ ಪ್ಲೇಟ್​​ ಅಳವಡಿಸಲು ಫೆ 17ರ ವರೆಗೆ ನೀಡಿದ್ದ ಗಡುವನ್ನು ಮೂರು ತಿಂಗಳುಗಳ ವಿಸ್ತರಿಸಲಾಗುತ್ತದೆ. ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ತಿಳಿಸಿದ್ದಾರೆ.

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ Read More »

ಕರ್ನಾಟಕ

ಚಿರತೆ ಕೊಂದು ಮರಕ್ಕೆ ನೇತುಹಾಕಿದ ಗ್ರಾಮಸ್ಥರು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಫೆ. 14. ಚಿರತೆಯೊಂದನ್ನು ಕೊಂದು ಹಗ್ಗದಿಂದ ಕಟ್ಟಿ ಮರದಲ್ಲಿ ನೇತುಹಾಕಿರುವ ವಿಲಕ್ಷಣ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಕುರಿತು ಗ್ರಾಮಸ್ಥರಿಂದ ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟ ನೀಡಿ ಚಿರತೆಯ ಶವವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿ, ಚಿರತೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ವರದಿ ತಿಳಿಸಿದೆ.

ಚಿರತೆ ಕೊಂದು ಮರಕ್ಕೆ ನೇತುಹಾಕಿದ ಗ್ರಾಮಸ್ಥರು..! Read More »

ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 14. ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರದಂದು ರಾತ್ರಿ 11.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಡಾಂಬರು ಸಾಗಿಸುತ್ತಿದ್ದ ಲಾರಿ ಉದನೆ ತಲುಪುತ್ತಿದ್ದಂತೆಯೇ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವು ಸಿಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿದಿದ್ದು, ತಕ್ಷಣವೇ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಕಾರ್ಮಿಕರು

ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಟೆಲಿಗ್ರಾಮ್ ಮೂಲಕ ಡಾಟಾ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಂಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂ. ವಂಚನೆಯಾದ ಘಟನೆ ನಡೆದಿರುವ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಡಾಟ ರೇಡ್‌ ಎಂಬ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋರ್ವ ತಾನು ಕೆಲಸ ನಿರ್ವಹಿಸುವ ವೇಳೆ 900 ರೂ. ಅನ್ನು ಅವರ ಖಾತೆಗೆ ವರ್ಗಾಯಿಸಿರುತ್ತಾರೆ. ಬಳಿಕ ಫೆಬ್ರವರಿ

ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಸಭೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 14. ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯಸಭೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಭೂಮಾಪಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತಪಟ್ಟವರನ್ನು ವಿಶ್ವನಾಥ ರಾವ್ (45) ಎಂದು ಗರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಅವರು, ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕರಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು

ಹೃದಯಾಘಾತ- ಭೂಮಾಪಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಬದಿ ಸ್ಕೂಟರ್‌ ನಿಲ್ಲಿಸಿ ನಿದ್ದೆಗೆ ಜಾರಿದ ಸವಾರ – ಎದ್ದು ನೋಡಿದಾಗ ಸ್ಕೂಟರ್‌ ಕಳ್ಳತನ

(ನ್ಯೂಸ್ ಕಡಬ) newskadaba.com ಕಾಪು, ಫೆ. 14. ರಸ್ತೆ ಬದಿಯಲ್ಲಿ ಸ್ಕೂಟರ್‌ ನಿಲ್ಲಿಸಿ ಪಕ್ಕದಲ್ಲಿ ಮಲಗಿ ನಿದ್ರಿಸಿದ್ದ ಸವಾರನಿಗೆ ತಿಳಿಯದಂತೆ ಸ್ಕೂಟರ್‌ ಸಹಿತ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಎಂಬಲ್ಲಿ ನಡೆದಿದೆ. ಸ್ಕೂಟರ್ ಸವಾರ ಕಾರ್ಕಳ ಮುಡಾರು ಗ್ರಾಮದ ಚೇತನ್‌ ಎಂಬಾತ ಫೆ. 11ರಂದು ಮಧ್ಯರಾತ್ರಿ 12 ಗಂಟೆಯ ವೇಳೆಗೆ ರಾ.ಹೆ. 66ರ ಮೂಲಕ ಸುರತ್ಕಲ್‌ಗೆ ಹೋಗುತ್ತಿದ್ದಾಗ ಕೊಪ್ಪಲಂಗಡಿ ಬಳಿ ಬರುತ್ತಿದ್ದಂತೆ ನಿದ್ದೆ ಬಂದು ಸ್ಕೂಟರ್‌ ಸವಾರಿ ಮಾಡಲು

ರಸ್ತೆ ಬದಿ ಸ್ಕೂಟರ್‌ ನಿಲ್ಲಿಸಿ ನಿದ್ದೆಗೆ ಜಾರಿದ ಸವಾರ – ಎದ್ದು ನೋಡಿದಾಗ ಸ್ಕೂಟರ್‌ ಕಳ್ಳತನ Read More »

ಕರಾವಳಿ

ಪುಲ್ವಾಮಾ ದಾಳಿಗೆ ಇಂದಿಗೆ 5 ವರ್ಷ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 14. ಭಾರತದ ಇತಿಹಾಸದಲ್ಲಿಯೇ 2019ರ ಫೆಬ್ರವರಿ 14 ಅತ್ಯಂತ ಕರಾಳ ದಿನ. 5 ವರ್ಷಗಳ ಹಿಂದೆ ಫೆ. 14ರಂದು ಜಮ್ಮು- ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಭದ್ರತಾ ಪಡೆಗಳು ಪ್ರಯಾಣಿಸುತ್ತಿದ್ದ 2 ಬಸ್‌ಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (ಸಿಆರ್‌‌ಪಿಎಫ್‌) ಯೋಧರು ಹುತಾತ್ಮರಾಗಿದ್ದರು. ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಭಯೋತ್ಪಾದಕರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ 40 ಯೋಧರು ಹುತಾತ್ಮರಾಗಿದ್ದು, ಈ ಕರಾಳ ಘಟನೆಯ ಬಗ್ಗೆ BlackDay ಹೆಸರಿನಲ್ಲಿ

ಪುಲ್ವಾಮಾ ದಾಳಿಗೆ ಇಂದಿಗೆ 5 ವರ್ಷ Read More »

ರಾಷ್ಟ್ರೀಯ ನ್ಯೂಸ್
Scroll to Top