ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..!

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 13. ಜಮ್ಮು-ಕಾಶ್ಮೀರದ ಪೂಂಛ್ ಪ್ರದೇಶದಲ್ಲಿ ಉಗ್ರಗಾಮಿಗಳು ಸಿಎಒ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸೇನಾಪಡೆ ಟ್ವೀಟ್ ಮಾಡಿರುವ ಮಾಹಿತಿ ಪ್ರಕಾರ, ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಉಗ್ರರು ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ. ಇನ್ನು ಪ್ರತಿದಾಳಿ ನಡೆಸಿದ ಸಂದರ್ಭ ಭಯೋತ್ಪಾದಕರು ಕಾಡಿನೊಳಗೆ […]

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಯ ವೇಳೆ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಸಮುದ್ರದಿಂದ ಕೆಲವು ಮಾರು ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಮೊಗವೀರಪಟ್ಣ ನಿವಾಸಿ ತುಳಸೀರಾಮ್ (62) ಎಂದು ಗುರುತಿಸಲಾಗಿದೆ. ಮೊಗವೀರಪಟ್ಣ ನಿವಾಸಿ ಕಿರನ್ ಪುತ್ರನ್ ಎಂಬವರಿಗೆ ಸೇರಿದ್ದ ‘ವಾಸವಿ’ ಪರ್ಸಿನ್ ಎಂಬ ಬೋಟ್‍ನಲ್ಲಿ ತುಳಸಿರಾಮ್ ಸೇರಿದಂತೆ 30 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮದ್ಯದಲ್ಲಿ ಬಲೆ ಹಾಕಿ ಮಲಗಿದ್ದ ಮೀನುಗಾರರು

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಸ್ವಾಮಿ ವಿವೇಕಾನಂದರು ನಡೆದು ಬಂದ ದಾರಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಬೇಕು. ಅವರ ಚಿಂತನೆಗಳನ್ನು ನಿರಂತರ ಅಭ್ಯಾಸಿಸಬೇಕು. ಅದುವೇ ಈ ಕಾರ್ಯಕ್ರಮ ಉದ್ದೇಶವಾಗಿದೆ. ವಿವೇಕಾನಂದರು ಇಡೀ ದೇಶಕ್ಕೆ ಸಂಸ್ಕೃತಿಯನ್ನು ಸಾರಿದ ವ್ಯಕ್ತಿ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸ್ವಾಮಿ ವಿವೇಕಾನಂದರು ಇಡೀ ಪ್ರಪಂಚದಲ್ಲಿ ಬದುಕಲು ಕಲಿಸಲು ಕಲಿಸಿಕೊಟ್ಟ ಮಹಾನ್ ವ್ಯಕ್ತಿ. ನಾವು

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಆಕೆಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪ್ರಕರಣವು ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಪತ್ನಿ ನೀಡಿರುವ ದೂರಿನಂತೆ  ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪುದು ಗ್ರಾಮ ನಿವಾಸಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್‌ ಫಾರೂಕ್‌, ಆತನ ಸಹೋದರರಾದ ಮುಸ್ತಾಫಾ, ರಿಯಾಜ್‌,

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಅಕ್ಟೋಬರ್ 17ರ ಬುಧವಾರದಂದು ಬೆಳಗ್ಗೆ 11 ಗಂಟೆಯಿಂದ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್

ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಜ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವು ಜನವರಿ 16ರಿಂದ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಜ.16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಜ. 17 ರಂದು, ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಜ. 20ಕ್ಕೆ ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ

ಜ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಕಡಬ: ಅನಾರೋಗ್ಯದಿಂದ ಪ್ರಥಮ ಬಿ.ಕಾಂ‌. ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.12. ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಯುವತಿಯನ್ನು ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ, ಎಡಮಂಗಲ ನಿವಾಸಿ ತೃಪ್ತಿ ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಡಬ: ಅನಾರೋಗ್ಯದಿಂದ ಪ್ರಥಮ ಬಿ.ಕಾಂ‌. ವಿದ್ಯಾರ್ಥಿನಿ ಮೃತ್ಯು Read More »

ಕರ್ನಾಟಕ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್‍ ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಶುಕ್ರವಾರದಂದು ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಕುರಿತು, ಕವಾಯತು ಹಾಜರಾತಿ ಪಟ್ಟಿಯನ್ನು ಮುಂದಿನ ತಿಂಗಳ 5ನೇ ತಾರೀಖಿನೊಳಗೆ ನೀಡುವ ಕುರಿತು, ಮುಂಬರುವ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರ್ನಾಟಕ

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com. 12. ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಆತ್ಮಹತ್ಯೆ ಮಡಿಕೊಂಡವರನ್ನು ಕೊಲ್ಲಂ ಪಟ್ಟಣಂ ಚೆಂಬಕಶ್ಸೆರಿಯ ಜವಾಹರನಗರದಲ್ಲಿನ ನಿವಾಸಿ ಜೋಸ್ ಪ್ರಮೋದ್ (41) ಎಂದು ಗುರುತಿಸಲಾಗಿದೆ. ದೇವನಾರಾಯಣನ್ (9) ಮತ್ತು ಪುತ್ರಿ ದೇವಾನಂದ (4)  ಮೃತಪಟ್ಟ ಮಕ್ಕಳು. ಪ್ರಾಥಮಿಕ ಮಾಹಿತಿ ಪ್ರಕಾರ ಪ್ರಮೋದ್ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಘಟನೆ ವೇಳೆ ಮನೆಯಲ್ಲಿ ಪ್ರಮೋದ್ ಮತ್ತು ಅವರ ಮಕ್ಕಳು ಮಾತ್ರ

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಫಲಾನುಭವಿ ಆಧಾರಿತ ಯೋಜನೆಗಳನ್ನು 2023-24ನೇ ಸಾಲಿನಲ್ಲಿ ಸೇವಾ ಸಿಂಧು ಯೋಜನೆಯಿಂದ ಡಿ.ಬಿಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಯೋಜನೆಗಳು- ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ.

ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top