ನೆಲ್ಯಾಡಿ: ಮತ್ತೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಮೂರು ದಿನದ ಹಿಂದೆ ಸಾಯಂಕಾಲದ ವೇಳೆಗೆ ಉದನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜಗಾಂಭೀರ್ಯದಿಂದ ಸಂಚರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯೊಂದು ಇದೀಗ ಮತ್ತೆ ಉದನೆಯಲ್ಲಿ ಹಗಲು ವೇಳೆಯಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಉದನೆ- ಶಿಬಾಜೆ ರಸ್ತೆಯಲ್ಲಿರುವ ಉದನೆ ಹೈಸ್ಕೂಲ್‌ ಸಮೀಪ ಶುಕ್ರವಾರದಂದು ಬೆಳಗ್ಗೆ 9.30ರ ವೇಳೆಗೆ ಕಾಡಾನೆಯೊಂದು ಹೆದ್ದಾರಿ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಶಿರಾಡಿ ಗ್ರಾ.ಪಂ.ನ ಕುಡಿಯುವ ನೀರು ನಿರ್ವಾಹಕ ಸನಿಲ್‌ಕುಮಾರ್ ಅವರು ಉದನೆಯಿಂದ ಕಳಪ್ಪಾರುಗೆ ತೆರಳುತ್ತಿದ್ದ […]

ನೆಲ್ಯಾಡಿ: ಮತ್ತೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ಸ್ಥಾಪನೆ- ಸ್ಥಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳ ಮಾರಾಟದ ಹಿನ್ನೆಲೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾರಾಗೃಹದ ಮುಂಭಾಗದ ಆವರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತ ಸ್ಥಳ ಎಂದು ಅಂತಿಮಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರಾಗ್ರಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹದಲ್ಲಿ ಬಂಧಿತರಾಗಿರುವ ಕೈದಿಗಳು

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ಸ್ಥಾಪನೆ- ಸ್ಥಳ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕರ್ನಾಟಕ ರಾಜ್ಯದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸೇರಿಸುವಂತೆ ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಇಂದು ಪತ್ರ ಬರೆದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಅವರು, “ನಾನು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 12. ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು ಮಾಡಿರುವ  ಘಟನೆ ಬಿಸಿರೋಡು ಬಸ್ ನಿಲ್ದಣದಲ್ಲಿ  ನಡೆದಿದೆ.   ಪ್ರೇಮ ಎಂಬವರು  ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟು, ಬಿಸಿರೋಡಿಗೆ ಬಂದಿಳಿದು ಬಳಿಕ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.      

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತದ ಅತೀ ಉದ್ದದ ಸಮುದ್ರ ಸೇತುವೆ ಜ. 12ರಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮುಂಬೈ, ಜ. 12. ಭಾರತದ ಅತೀ ಉದ್ದನೆಯ ಸಾಗರ ಸೇತುವೆಯನ್ನು ಪ್ರದಾನಿ ನರೇಂದ್ರ ಮೋದಿ ಅವರು ಜನವರಿ 12ರಂದು ಉದ್ಘಾಟಿಸಲಿದ್ದಾರೆ. ಈ ಸೇತುವೆಯನ್ನು ದಕ್ಷಿಣ ಮುಂಬೈನಿಂದ ನವ ಮುಂಬೈವರೆಗೆ ಸಮುದ್ರದಲ್ಲಿ ನಿರ್ಮಿಸಲಾಗಿದ್ದು, ಇದು ಬರೋಬ್ಬರಿ 21.8 ಕಿಲೋ ಮೀಟರ್‌ ಉದ್ದದ ಸೇತುವೆಯಾಗಿದೆ. ಇದರಿಂದಾಗಿ ದಕ್ಷಿಣ ಮುಂಬೈನಿಂದ ನವ ಮುಂಬೈವರೆಗಿನ ಎರಡು ಗಂಟೆಗಳ ಪ್ರಯಾಣವನ್ನು ಇನ್ನು ಕೇವಲ 15-20 ನಿಮಿಷಗಳಲ್ಲಿ ಕ್ರಮಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ಹೊಸ ಸೇತುವೆ ನಿರ್ಮಾಣದಿಂದಾಗಿ ಪ್ರಯಾಣಿಕರಿಗೆ, ವಾಹನ ಸವಾರರಿಗೆ

ಭಾರತದ ಅತೀ ಉದ್ದದ ಸಮುದ್ರ ಸೇತುವೆ ಜ. 12ರಂದು ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 12. ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಎಂದು ಗುರುತಿಸಲಾಗಿದೆ. ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದ ಈತನಿಗೆ, ಪ್ರಸ್ತುತ ಪ್ರಥಮ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಗುರುವಾರದಂದು ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಈತ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಸಾಗಾಟ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಮಾದಕ ವಸ್ತು ಎಂಡಿಎಂಎನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಯುವಕನೋರ್ವನನ್ನು ಮಂಗಳೂರು ಆ್ಯಂಟಿ ಡ್ರಗ್‌ ಟೀಮ್‌ನ ತಂಡವು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೋಟೆಕಾರು ಕೆ.ಸಿ. ರೋಡ್‌ ನಿವಾಸಿ ಆಸೀಫ್‌ (27)ಎಂದು ಗುರುತಿಸಲಾಗಿದೆ. ಆರೋಪಿಯಿಂದ 4.41 ಗ್ರಾಂ ಎಂಡಿಎಂಎ ಸಹಿತ ಸಾಗಾಟಕ್ಕೆ ಬಳಸಿದ್ದ ಬೈಕ್‌ ಹಾಗೂ ಸುಮಾರು 68 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಂಡಿಎಂಎ ಸಾಗಾಟ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ – 156 ನಕಲಿ ವೈದ್ಯರು ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಇಡೀ ದೇಶವೇ ಬೆಚ್ಚಿಬೀಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇದರಿಂದಾಗಿ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ

ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ – 156 ನಕಲಿ ವೈದ್ಯರು ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗರ್ಭಿಣಿಯಾದ 9ನೇ ತರಗತಿ ಬಾಲಕಿ- ಹಾಸ್ಟೆಲ್ ವಾರ್ಡನ್ ಅಮಾನತು

(ನ್ಯೂಸ್ ಕಡಬ) newskadaba.com ತುಮಕೂರು, ಜ. 11. 9ನೇ ತರಗತಿಯಲ್ಲಿ ಕಲಿಯುತ್ತಿದ್ದ ಹಾಸ್ಟೆಲ್ ವಿದ್ಯಾರ್ಥಿನಿಯೋರ್ವಳು ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ‌‌ ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದು, 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಈಕೆ ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಈಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿಯ ದೇಹದ

ಗರ್ಭಿಣಿಯಾದ 9ನೇ ತರಗತಿ ಬಾಲಕಿ- ಹಾಸ್ಟೆಲ್ ವಾರ್ಡನ್ ಅಮಾನತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ. 11. ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮ ಮಂದಿರ ನಿರ್ಮಾಣವಾಗಲಿದ್ದು, ಈ ಮೂಲಕ ಭಾರತೀಯರ ಅನೇಕ ವರ್ಷದ ಕನಸು ಹಾಗೂ ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ದಿನ ಭಾವನಾತ್ಮಕವಾಗಿ ಕೋಟ್ಯಂತರ ಭಕ್ತರ ಪಾಲಿಗೆ ಅವಿಸ್ಮರಣೀಯವಾಗಿದೆ. ಮಹತ್ಕಾರ್ಯದ ನೇತೃತ್ವ ವಹಿಸಿದ ದೇಶದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ. ಶ್ರೀರಾಮನ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top