ಡಿ. 26 ರಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಶಿಲಾನ್ಯಾಸ – ಡಿಕೆಶಿ, ಹೆಚ್.ಡಿಕೆ ಸೇರಿದಂತೆ ರಾಜ್ಯ ನಾಯಕರು ಭಾಗಿಯಾಗುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ, ನ. 23. ಇಲ್ಲಿನ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ ಸುದೀರ್ಘ ಮಾತುಕತೆ ನಡೆಸಿರುವ ಅವರು, ಸಂಘದ ಕಾರ್ಯಚಟುವಟಿಕೆಗಳಿಗೆ […]

ಡಿ. 26 ರಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಶಿಲಾನ್ಯಾಸ – ಡಿಕೆಶಿ, ಹೆಚ್.ಡಿಕೆ ಸೇರಿದಂತೆ ರಾಜ್ಯ ನಾಯಕರು ಭಾಗಿಯಾಗುವ ನಿರೀಕ್ಷೆ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಯಾವುದೇ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರಬೇಕು. ಅಗತ್ಯವಿಲ್ಲದೇ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳುವಾಗ ಎಚ್ಚರಿಕೆ ಅತೀ ಅಗತ್ಯ ಎಂದು ಕಡಬ ತಾಲೂಕಿನ ಐತ್ತೂರು ನಿವಾಸಿ ಚಂದ್ರಶೇಖರ್ ರವರು ಹೇಳಿದರು. ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಸುಮಾರು ಒಂದು ವರ್ಷಗಳ ಕಾಲ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ವಾಪಾಸಾಗಿರುವ ಅವರು ಗುರುವಾರದಂದು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಮನವಿ ಮಾಡಿದರು. ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ ಹ್ಯಾಕರ್‌ಗಳ

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ Read More »

ಕರಾವಳಿ, ಕರ್ನಾಟಕ

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ರವರು ಶಿಮ್ಲಾದಲ್ಲಿ ಗುರುವಾರದಂದು ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪತಾನಿಯಾ ಅವರನ್ನು ಭೇಟಿಯಾಗಿ ವಿಧಾನ ಸಭೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ವಿಶಾಖಪಟ್ಟಣ, ನ. 23. ಇಲ್ಲಿನ ಡಾ.ವೈ.ಎಸ್ ರಾಜಶೇಖರ ರೆಡ್ಡಿ ಎಸಿಎ – ವಿಡಿಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ವಿಶ್ವಕಪ್ ಟೂರ್ನಿಯ ಬಳಿಕ ಆಸೀಸ್ ವಿರುದ್ಧ ನಡೆಯುತ್ತಿರುವ ಈ ಪಂದ್ಯದ ಬಗ್ಗೆ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಸೂರ್ಯ ಕುಮಾರ್ ಯಾದವ್ ಮುಂದಾಳತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು ಎದರಿಸುತ್ತಿದೆ.

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ತೊಂದರೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಅದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದ್ದು, ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಕಡಬ: ನಾಳೆ (ನ.24) ಕರ್ನಾಟಕ ಸಲಫಿ ಅಸೋಸಿಯೇಷನ್ ವತಿಯಿಂದ ಧಾರ್ಮಿಕ ಕಾರ್ಯಕ್ರಮ – ಡ್ರಗ್ಸ್ ಮುಕ್ತರಾಗೋಣ, ಸೃಷ್ಟಿಕರ್ತನಿಗೆ ವಿಧೇಯರಾಗೋಣ ಧ್ಯೇಯದಡಿ ಧಾರ್ಮಿಕ ಪ್ರಭಾಷಣ

(ನ್ಯೂಸ್ ಕಡಬ) newskadaba.com ಕಡಬ, ನ. 23. ಕರ್ನಾಟಕ ಸಲಫಿ ಅಸೋಸಿಯೇಷನ್ (ರಿ.) ಸುಳ್ಯ ಮತ್ತು ಬೆಳ್ಳಾರೆ ಘಟಕದ ವತಿಯಿಂದ ಡ್ರಗ್ಸ್ ಮುಕ್ತರಾಗೋಣ, ಸೃಷ್ಟಿಕರ್ತನಿಗೆ ವಿಧೇಯರಾಗೋಣ ಎಂಬ ಧ್ಯೇಯವಾಕ್ಯದಡಿ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮವು ನಾಳೆ (ನ.24 ಶುಕ್ರವಾರ) ಕಡಬದ ಅನುಗ್ರಹ ಸಭಾಭವನದ ವಠಾರದಲ್ಲಿ ನಡೆಯಲಿದೆ. ನಾಳೆ ಸಂಜೆ 5 ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ| ಇಬ್ರಾಹಿಂ ಖಲೀಲ್ ತಲಪಾಡಿ ಪ್ರಭಾಷಣಗೈಯಲಿದ್ದು, ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಎಂ.ಎಸ್. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ

ಕಡಬ: ನಾಳೆ (ನ.24) ಕರ್ನಾಟಕ ಸಲಫಿ ಅಸೋಸಿಯೇಷನ್ ವತಿಯಿಂದ ಧಾರ್ಮಿಕ ಕಾರ್ಯಕ್ರಮ – ಡ್ರಗ್ಸ್ ಮುಕ್ತರಾಗೋಣ, ಸೃಷ್ಟಿಕರ್ತನಿಗೆ ವಿಧೇಯರಾಗೋಣ ಧ್ಯೇಯದಡಿ ಧಾರ್ಮಿಕ ಪ್ರಭಾಷಣ Read More »

ಕರಾವಳಿ, ಕರ್ನಾಟಕ

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ನ. 23. ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯಾದ ಆರೋಗ್ಯ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್‌ವಿಎಸ್ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲ್ ಹಾಗೂ ಪಿಯು ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23. ಅಕ್ರಮವಾಗಿ ಮರಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳ ಸಮೇತ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಕಡಿದು ಸಾಗಿಸುತ್ತಿದ್ದ ಎರಡು ಪಿಕಪ್ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಟಿ20 ಕ್ರಿಕೆಟ್ ಗೆ ರೋಹಿತ್‌ ಶರ್ಮಾ ಶೀಘ್ರ ವಿದಾಯ..!

(ನ್ಯೂಸ್ ಕಡಬ) newskadaba.com ಮುಂಬೈ, ನ. 23. ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಕೊನೆಯ ಹಂತದಲ್ಲಿ ಸೋಲಾಯಿತು. ಈ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಟಿ 20 ಕ್ರಿಕೆಟ್ ಗೆ ರೋಹಿತ್ ಶರ್ಮ ವಿದಾಯ ಹೇಳುವ ಸುದ್ದಿ ಹೊರಬಿದ್ದಿದೆ. ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದ್ದು, ಏಕದಿನ ವಿಶ್ವಕಪ್ ಟೂರ್ನಿಗೂ ಮೊದಲು ಬಿಸಿಸಿಐ ಜೊತೆ ಈ ಕುರಿತು ರೋಹಿತ್

ಟಿ20 ಕ್ರಿಕೆಟ್ ಗೆ ರೋಹಿತ್‌ ಶರ್ಮಾ ಶೀಘ್ರ ವಿದಾಯ..! Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 23. ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ನಡೆದಿದೆ.   ಮೃತ ಮಹಿಳೆಯನ್ನು ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಎಂದು ಗುರುತಿಸಲಾಗಿದೆ. ಲೀಲಾವತಿಯವರು ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಲೀಲಾವತಿ ಗಾಳಿಗೆ ಹಾರಿ ರಸ್ತೆಗೆ

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top