ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ನ. 23. ಮುಕ್ಕ ಚೆಕ್‌ಪೋಸ್ಟ್‌ ಬಳಿ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಭಾಗಕ್ಕೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಮಯ್ಯದ್ದಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಫಲಕ ಅಳವಡಿಸದೇ ಲಾರಿ ನಿಲ್ಲಿಸಿದ ಚಾಲಕ ಕಳಸಪ್ಪ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಪ್ರೀಂ ಕೋರ್ಟ್ ನ ಮೊದಲ ನ್ಯಾಯಾಧೀಶೆ ಫಾತಿಮಾ ಬೀವಿ ವಿಧಿವಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಸುಪ್ರೀಂ ಕೋರ್ಟ್‌ನ ಮೊದಲ ನ್ಯಾಯಾಧೀಶೆ ಮತ್ತು ತಮಿಳುನಾಡಿನ ಮಾಜಿ ರಾಜ್ಯಪಾಲರಾಗಿದ್ದ ಫಾತಿಮಾ ಬೀವಿ(96) ಅವರು ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರದಂದು ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿದ್ದಾರೆ. ಫಾತಿಮಾ ಬೀವಿ ನಿಧನಕ್ಕೆ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಫಾತಿಮಾ ಬೀವಿ ಅವರು ಧೈರ್ಯಶಾಲಿ ಮಹಿಳೆಯಾಗಿದ್ದು, ಅವರ ಹೆಸರಿನಲ್ಲಿ ಅನೇಕ ದಾಖಲೆಗಳಿವೆ. ಇಚ್ಛಾಶಕ್ತಿ ಮತ್ತು ಆತ್ಮವಿಶ್ವಾಸ ಗಟ್ಟಿಯಾಗಿದ್ದರೆ ಯಾವುದೇ ಪ್ರತಿಕೂಲತೆಯನ್ನು ಜಯಿಸಬಹುದು ಎಂಬುದಕ್ಕೆ ಫಾತಿಮಾ ಬೀವಿ ಸಾಕ್ಷಿ

ಸುಪ್ರೀಂ ಕೋರ್ಟ್ ನ ಮೊದಲ ನ್ಯಾಯಾಧೀಶೆ ಫಾತಿಮಾ ಬೀವಿ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ತೀವ್ರ ವಿವಾದಕ್ಕೆ ಗುರಿಯಾಗಿದ್ದ 545 ಪಿಎಸ್‍ಐಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 2021ರ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪಿಎಸ್ಐ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದಾಗಿ ಆರೋಪಗಳು ಕೇಳಿ ಬಂದ ಹಿನ್ನೆಲೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳನ್ನು ಅಧಿಕಾರಿಗಳು ಬಂಧಿಸಿದ್ದರು.    

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..! Read More »

ಕರ್ನಾಟಕ

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 23. ರೈಲಿಗೆ ಸಿಲುಕಿ ರೈಲ್ವೇ ಸ್ಟೇಷನ್ ಮಾಸ್ಟರ್ ಓರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ, ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್‍ಕುಮಾರ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರು ಕುಮ್ಸಿ ನಿಲ್ದಾಣದಲ್ಲಿ ಇಳಿದಿದ್ದರು. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ಲೈಿನ್ ರಮ್ಮಿ ಗೇಮ್ ನ ಸಾಲ ತೀರಿಸಲು ಎಳನೀರು ಕಳ್ಳತನಗೈದ ಭೂಪ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ಆನ್‍ಲೈನ್ ಗೇಮಿನಲ್ಲಿ ಮಾಡಿಕೊಂಡಿದ್ದ ಸಾಲ ತೀರಿಸಲು ಎಳನೀರು ಕಳ್ಳತನ ಮಾಡಿ ಬೆಳಗ್ಗೆ ಮಾರಾಟ ಮಾಡುತ್ತಿದ್ದ ಟ್ಯಾಕ್ಸಿ ಚಾಲಕನೋರ್ವನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ತಮಿಳುನಾಡು ಮೂಲದ ಮೋಹನ್ ಎಂದು ಗುರುತಿಸಲಾಗಿದೆ. ಈ ಹಿಂದೆ ಎಳನೀರು ವ್ಯಾಪಾರ ಮಾಡುತ್ತಿದ್ದ ಈತ, ಬಿಡುವಿನ ಸಮಯದಲ್ಲಿ ಆನ್‍ಲೈನ್‍ನಲ್ಲಿ ರಮ್ಮಿ ಆಟವಾಡಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲು ಕಾರು ಬಾಡಿಗೆ ಪಡೆದು ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದನು.

ಆನ್ಲೈಿನ್ ರಮ್ಮಿ ಗೇಮ್ ನ ಸಾಲ ತೀರಿಸಲು ಎಳನೀರು ಕಳ್ಳತನಗೈದ ಭೂಪ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 26ರಂದು ಸಂವಿಧಾನ ದಿನ ಆಚರಣೆ – ರಾಜ್ಯ ಸರಕಾರದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ನವೆಂಬರ್ 26 ರಂದು ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡುವ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ಮಹೇಶ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಸಂವಿಧಾನ ಆಚರಣೆಯ ವಿಚಾರಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಭಾರತ ಸರ್ಕಾರದ ಪತ್ರದ ಪ್ರತಿಯೊಂದನ್ನು ಇದರೊಂದಿಗೆ ಲಗತ್ತಿಸಿದೆ.‌ ಪತ್ರದಲ್ಲಿರುವ ಸೂಚನೆ ಪ್ರಕಾರ, ಈ ವರ್ಷ ನವೆಂಬರ್ 26ರ ಭಾನುವಾರದಂದು ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.

ನವೆಂಬರ್ 26ರಂದು ಸಂವಿಧಾನ ದಿನ ಆಚರಣೆ – ರಾಜ್ಯ ಸರಕಾರದ ಆದೇಶ Read More »

ಕರ್ನಾಟಕ

ಸುಳ್ಯ: ಪರವಾನಗಿ ಇಲ್ಲದ ನಾಡ ಕೋವಿ ಹೊಂದಿದ್ದ ಪ್ರಕರಣ- ಆರೋಪಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಸುಳ್ಯ, ನ. 23. ಪರವಾನಗಿ ಇಲ್ಲದೇ ನಾಡಕೋವಿ ಹೊಂದಿದ್ದ ಪ್ರಕರಣದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ಸುಳ್ಯ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿರುವ ಕುರಿತು ವರದಿಯಾಗಿದೆ. 2013ರಲ್ಲಿ ಕಣ್ಣೂರು ಜಿಲ್ಲೆಯ ಎಂ.ಕೆ. ಅಜಿತ್ ಎಂಬಾತ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಬಟ್ಟಂಗಾಯ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿರುವ ಮನೆಯ ಅಂಗಳಕ್ಕೆ ಪರವಾನಿಗೆ ಇಲ್ಲದ ನಾಡ ಕೋವಿ, ಗನ್ ಪೌಡರ್ ಹಾಗೂ 2 ಕಬ್ಬಿಣದ ಕಡ್ಡಿಗಳನ್ನು ತಂದಿದ್ದು,

ಸುಳ್ಯ: ಪರವಾನಗಿ ಇಲ್ಲದ ನಾಡ ಕೋವಿ ಹೊಂದಿದ್ದ ಪ್ರಕರಣ- ಆರೋಪಿಗೆ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಹೊಟೇಲ್ ರೂಂ ಒಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ. ಇವರು ನ. 15ರಿಂದ ಹೊಟೇಲ್ ರೂಂನಲ್ಲಿ ವಾಸವಿದ್ದರು. ಬುಧವಾರದಂದು ರಾತ್ರಿ ಊಟದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣವೇ ಮಾಹಿತಿ ಅರಿತ

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ವಿಮಾನದಲ್ಲಿ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ವಿದೇಶದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದ ಕುರಿತು ವರದಿಯಾಗಿದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರವರು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿಯೋರ್ವರು ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದಿದ್ದಾರೆ. ಈ ವೇಳೆ

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ವಿಮಾನದಲ್ಲಿ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ

ನಾಳೆ (ನ.24) ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ಇದರ ಸಹಯೋಗದಲ್ಲಿ ನಗರದ ಎಮ್ಮೆಕೆರೆಯಲ್ಲಿ ನಿರ್ಮಿಸಲಾಗಿರುವ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆ ನವೆಂಬರ್ 24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಸ್ಪೀಕರ್ ಯುಟಿ ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆಯನ್ನು ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ನೆರವೇರಿಸುವರು. 19ನೇ ರಾಷ್ಟ್ರೀಯ ಮಾಸ್ಟರ್ ಚಾಂಪಿಯನ್‍ಶಿಪ್ ಈಜು ಸ್ಪರ್ಧೆ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಹಾಗೂ

ನಾಳೆ (ನ.24) ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆ Read More »

ಕರಾವಳಿ, ಕರ್ನಾಟಕ
Scroll to Top