ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಆ್ಯಂಟಿ ರೇಬಿಸ್ ಲಸಿಕೆ ನೀಡಲು ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ಪ್ರಾಣಿ ಕಡಿತಕ್ಕೊಳಗಾದವರಿಗೆ ರೇಬೀಸ್‌ ಚಿಕಿತ್ಸೆಗಾಗಿ ಆ್ಯಂಟಿ ರೇಬೀಸ್‌ ವ್ಯಾಕ್ಸಿನ್‌ ಹಾಗೂ ರೇಬೀಸ್‌ ಇಮ್ಯುನೋಗ್ಲಾಬಿಲಿನ್‌ ವ್ಯಾಕ್ಸಿನ್‌ಗಳನ್ನು ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುವಂತೆ ಸರಕಾರ ಆದೇಶ ನೀಡಿದ್ದರೂ ಜಿಲ್ಲೆಯ ಹೆಚ್ಚಿನ ಸರಕಾರಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್‌ ನೀಡಲು ಶುಲ್ಕ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ರೇಬೀಸ್‌ ಎನ್ನುವುದು ಮಾರಣಾಂತಿಕ ಕಾಯಿಲೆಯಾಗಿದ್ದರೂ ಸಂದರ್ಭೋಚಿತ ಸೂಕ್ತ ಚಿಕಿತ್ಸೆಯಿಂದ ರೇಬಿಸ್ ರೋಗಕ್ಕೆ ಒಳಗಾದ ವ್ಯಕ್ತಿಯ ಪ್ರಾಣವನ್ನು ಉಳಿಸಬಹುದು. 2030ರ ವೇಳೆಗೆ ನಾಯಿ ಕಡಿತದಿಂದ ಬರುವ […]

ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಆ್ಯಂಟಿ ರೇಬಿಸ್ ಲಸಿಕೆ ನೀಡಲು ಆದೇಶ Read More »

ಕರಾವಳಿ, ಕರ್ನಾಟಕ

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15. ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರವಾಹನ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ‌ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಎಂದು ಗುರುತಿಸಲಾಗಿದೆ. ಸಿದ್ದಕಟ್ಟೆಯ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ತಂಗಮ್ಮರವರು ಚಹಾ ಕುಡಿಯಲೆಂದು ಹೋಟೆಲ್ ಗೆ ಹೋಗುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಮಹಿಳೆಗೆ ಮೂಡಬಿದಿರೆಯಲ್ಲಿ ಪ್ರಾಥಮಿಕ‌

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ:- ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳು. ಬೆಂಗಳೂರಿನಲ್ಲಿ 33, ಬೆಳಗಾವಿ 20, ಬಳ್ಳಾರಿ 20, ಚಾಮರಾಜನಗರ 32, ಚಿಕ್ಕಮಗಳೂರು 25, ಧಾರವಾಡ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರ್ನಾಟಕ

ಕೃಷಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ರಾಜ್ಯದಲ್ಲಿ ವಿದ್ಯುತ್‌ ಕೊರತೆಯ ಹಿನ್ನೆಲೆ ಲೋಡ್‌ ಶೆಡ್ಡಿಂಗ್‌ ಮಾಡಲಾಗುತ್ತಿದ್ದು, ಇದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯರವರು, ಕೃಷಿ ಪಂಪ್‌ಸೆಟ್‌ಗೆ ಕನಿಷ್ಠ 5 ಗಂಟೆ ನಿರಂತರ ವಿದ್ಯುತ್‌ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಇದರ ಜೊತೆಗೆ ನವೆಂಬರ್‌ ತಿಂಗಳಿನಿಂದ ಉತ್ತರ ಪ್ರದೇಶದಿಂದ 300 ಮೆಗಾವ್ಯಾಟ್‌, ಪಂಜಾಬ್‌ ನಿಂದ 600 ಮೆಗಾವ್ಯಾಟ್‌, ಮತ್ತು KERC ಅನುಮೋದನೆಯೊಂದಿಗೆ 1,300-1,500

ಕೃಷಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಅಗರಬತ್ತಿ ತಯಾರಿಕಾ ಪ್ರದೇಶಕ್ಕೆ ಬೆಂಕಿ ತಗುಲಿ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡ ಘಟನೆ ಮಾಸುವ ಬೆನ್ನಲ್ಲೇ ನಗರದಲ್ಲಿ ಇನ್ನೆರಡು ಅಗ್ನಿ ಅವಘಡಗಳು ಸಂಭವಿಸಿದ್ದು, ಓರ್ವ ವ್ಯಕ್ತಿ ಗಾಯಗೊಂಡ ಕುರಿತು ಪೈಪ್​ಲೈನ್ ರಸ್ತೆಯ ಚೋಳರಪಾಳ್ಯದ ಅಗರಬತ್ತಿ ಕಾರ್ಖಾನೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿದ್ದು, ಅಗ್ನಿ ಶಾಮಕದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಗಾಯಗೊಂಡವರನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗರಬತ್ತಿ ತಯಾರಿಕಾ ಪ್ರದೇಶಕ್ಕೆ ಬೆಂಕಿ ತಗುಲಿ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಸ್ಟಿಯಾನೊ ರೊನಾಲ್ಡೊಗೆ 99 ಛಡಿ ಏಟಿನ ಶಿಕ್ಷೆ..?

(ನ್ಯೂಸ್ ಕಡಬ) newskadaba.com ಟೆಹ್ರನ್, ಅ. 14. ಬ್ರಿಜಿಲ್‍ನ ಖ್ಯಾತ ಪುಟ್‍ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ, ಇರಾನ್‍ಗೆ ಭೇಟಿ ನೀಡಿದ ಸಂದರ್ಭ ವಿಕಲಚೇತನ ಅಭಿಮಾನಿಯೊಬ್ಬಳಿಗೆ ಸಹಿ ಮಾಡಿದ ಶರ್ಟ್ ನೀಡಿ ತಬ್ಬಿಕೊಂಡು ಕೆನ್ನೆಗೆ ಮುತ್ತು ನೀಡಿದ್ದಾರೆ ಎಂಬ ಆರೋಪದಡಿ ಇರಾನ್ ನ ನ್ಯಾಯಾಲಯವು 99 ಛಡಿ ಏಟಿನ ಶಿಕ್ಷೆಯನ್ನು ವಿಧಿಸಿರುವುದಾಗಿ ಮೀಡಿಯಾವೊಂದು ವರದಿ ಮಾಡಿದೆ. ಇರಾನಿನ ಮಾಧ್ಯಮಗಗಳ ಪ್ರಕಾರ ಕಳೆದ ಸೆಪ್ಟೆಂಬರ್ ನಲ್ಲಿ ಏಷ್ಯನ್ ಚಾಂಪಿಯನ್ಸ್ ಲೀಗ್‍ನಲ್ಲಿ ಆಡಲು ತನ್ನ ತಂಡದೊಂದಿಗೆ ಟೆಹ್ರಾನ್‍ಗೆ ಪ್ರಯಾಣಿಸಿದಾಗ ಈ ಘಟನೆ

ಕ್ರಿಸ್ಟಿಯಾನೊ ರೊನಾಲ್ಡೊಗೆ 99 ಛಡಿ ಏಟಿನ ಶಿಕ್ಷೆ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಸರಣಿ ಅಪಘಾತ- ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 14. ಕ್ಯಾಂಟರ್‌, ಕಾರು ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಡಿಕೇರಿ- ಸುಂಟಿಕೊಪ್ಪ ಹೆದ್ದಾರಿಯಲ್ಲಿ ಶುಕ್ರವಾರದಂದು ನಡೆದಿದೆ. ಮೃತ ಸವಾರನನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭೈರವ(30) ಎಂದು ಗುರುತಿಸಲಾಗಿದೆ. ಬೈರವ ಅವರು ಮಡಿಕೇರಿಯಿಂದ ಕೆ.ಆರ್.ನಗರದ ಕಡೆಗೆ ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ನ ಹಿಂದಿನ ಚಕ್ರ ಇವರ

ಸರಣಿ ಅಪಘಾತ- ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್ – ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ದುರ್ಮರಣ

(ನ್ಯೂಸ್ ಕಡಬ) newskadaba.com ರಾಮನಗರ, ಅ. 14. ಲಾರಿ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಶನಿವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ಓಮ್ನಿ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಪರಿಣಾಮ ಓಮ್ನಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಢಿಕ್ಕಿಯ

ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಣ್ಣ ಬಂದಿದ್ದಾನೆಂದು ಕರೆದುಕೊಂಡು ಬಂದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಕೊಪ್ಪಳ, ಅ. 14. ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ಒಂದರಲ್ಲಿ ನಡೆದಿದೆ. ಘಟನೆಯ ಸಂಬಂಧ ನವೀನ್, ಸಾಕೀವ್ ಹಾಗೂ ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಯುವತಿಯು ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆತಂದ ಕಿರಾತಕರು, ಆಕೆಯನ್ನು

ಅಣ್ಣ ಬಂದಿದ್ದಾನೆಂದು ಕರೆದುಕೊಂಡು ಬಂದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಬಳದಲ್ಲಿ ಕೋಣಗಳಿಗೆ ಹೊಡೆದರೆ ಶಿಕ್ಷೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಕಂಬಳವನ್ನು 24 ಗಂಟೆಯಲ್ಲಿ ಮುಕ್ತಾಯಗೊಳಿಸುವ ಹಿನ್ನೆಲೆ ಹೊಸ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಬಳ ಹಾಗೂ ಶಿಸ್ತು ಸಮಿತಿ ಸಭೆ ಒಮ್ಮತದ ತೀರ್ಮಾನವನ್ನು ಕೈಗೊಂಡಿದೆ. ಖಾಸಗಿ ಹೊಟೇಲೊಂದರ ಸಭಾಂಗಣದಲ್ಲಿ ಶುಕ್ರವಾರದಂದು ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನವೆಂಬರ್‌ನಲ್ಲಿ ವರ್ಷದ ಕಂಬಳ ಋತು ಆರಂಭಗೊಳ್ಳುವ ಹಿನ್ನೆಲೆ ಏರ್ಪಡಿಸಿದ ಸಭೆಯಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಪ್ರಕಾರ

ಕಂಬಳದಲ್ಲಿ ಕೋಣಗಳಿಗೆ ಹೊಡೆದರೆ ಶಿಕ್ಷೆ…! Read More »

ಕರ್ನಾಟಕ
Scroll to Top