ಹುಚ್ಚುನಾಯಿ ಕಡಿತ- ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಅ. 09. ಹಳೆಯಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಭಾನುವಾರದಂದು ಹಲವರಿಗೆ ಹುಚ್ಚು ನಾಯಿ ಕಡಿದಿರುವ ಕುರಿತು ವರದಿಯಾಗಿದೆ. ಪಾದಾಚಾರಿಗಳ ಸಹಿತ ದ್ವಿಚಕ್ರ ವಾಹನ ಸವಾರರಿಗೆ ಹುಚ್ಚು ನಾಯಿ ಕಡಿದಿದ್ದು ಹುಚ್ಚು ನಾಯಿ ಹಾಗೂ ಬೀದಿ ನಾಯಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಗ್ರಾಮ ಪಂಚಾಯತ್‌ ಗೆ ಆಗ್ರಹಿಸಿದ್ದಾರೆ. ತಿಂಗಳ ಹಿಂದೆಯಷ್ಟೇ ಹಳೆಯಂಗಡಿ ಗ್ರಾಮ ಪಂಚಾಯತ್‌ ಇದರ ಬಗ್ಗೆ ಉಲ್ಲೇಖೀಸಿ ಬೀದಿ ನಾಯಿ ಹಾಗೂ ಹುಚ್ಚು ನಾಯಿಗಳ […]

ಹುಚ್ಚುನಾಯಿ ಕಡಿತ- ಹಲವರಿಗೆ ಗಾಯ Read More »

ಕರ್ನಾಟಕ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ಅಕ್ಟೋಬರ್ 31ರಿಂದ ಸಂಪೂರ್ಣವಾಗಿ ಅದಾನಿ ಸಮೂಹಕ್ಕೆ ಹಸ್ತಾಂತರಗೊಳ್ಳಲಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಸಹಿತ ಭಾರತದ 6 ವಿಮಾನ ನಿಲ್ದಾಣಗಳ ಆಡಳಿತ, ಅಭಿವೃದ್ಧಿ ಹಾಗೂ ನಿರ್ವಹಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ ಹರಾಜಿನಲ್ಲಿ ಮಂಗಳೂರು ಏರ್ಪೋರ್ಟ್ ಅದಾನಿ ಸಮೂಹಕ್ಕೆ ಒಳಗಾಗಿತ್ತು. ಬಳಿಕ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಜವಾಬ್ದಾರಿಯನ್ನು 2020ರ ಅಕ್ಟೋಬರ್ 30ರಂದು ಅದಾನಿ ಸಮೂಹ ಕೈಗೆತ್ತಿಕೊಂಡಿತ್ತು. ಒಪ್ಪಂದದ ಪ್ರಕಾರ ಮೂರು ವರ್ಷಗಳ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…! Read More »

ಕರಾವಳಿ, ಕರ್ನಾಟಕ

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ನ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವ ಹಿನ್ನೆಲೆ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಯುದ್ದ ಸಾರಿದೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ಭಾರೀ ಕಾಳಗ ನಡೆಯುತ್ತಿದ್ದು, ಇಸ್ರೇಲ್ ನಾಗರಿಕರ ಗುರಿಯಾಗಿಸಿ ಹಮಾಸ್ ಉಗ್ರರು ರಾಕೇಟ್ ಉಡಾಯಿಸಿರುವುದಾಗಿ ವರದಿಯೊಂದು ತಿಳಿಸಿದೆ. ಇಸ್ರೇಲ್ ಒಳಗೆ ಸಾವಿರಾರು ಹಮಾಸ್ ಉಗ್ರರು ನುಗ್ಗಿ ಗುಂಡಿನ ಸುರಿಮಳೆ ಗೈದಿದ್ದಾರೆ. ಕ್ಷಣ ಕ್ಷಣಕ್ಕೂ ಇಸ್ರೇಲ್‌ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಅಷ್ಟೇ ಅಲ್ಲದೇ ಇಸ್ರೇಲ್ ನಲ್ಲಿ

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09. ಬಹುನಿರೀಕ್ಷಿತ ವೈಟ್ ಫೀಲ್ಡ್- ಚಲ್ಲಘಟ್ಟ ಮೆಟ್ರೋ ಕಾರಿಡಾರ್ (ನೇರಳೆ ಮಾರ್ಗ) ಇಂದಿನಿಂದ ಪ್ರಯಾಣಿಕರ ಸೇವೆಗಾಗಿ ಕಾರ್ಯನಿರ್ವಹಿಸಲಿದ್ದು, ಬೆಂಗಳೂರು ಜನರ ದೀರ್ಘಕಾಲದ ಕನಸು ನನಸಾಗಲಿದೆ. ಉದ್ಘಾಟನಾ ಸಮಾರಂಭವನ್ನು ಗುರುತಿಸಲು ಯಾವುದೇ ಔಪಚಾರಿಕ ಉದ್ಘಾಟನಾ ಸಮಾರಂಭ ಇರುವುದಿಲ್ಲ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಪತ್ರದ ಮೂಲಕ ಕರ್ನಾಟಕ ಸರ್ಕಾರಕ್ಕೆ ತಿಳಿಸಿದೆ. ಬೆಂಗಳೂರಿನ ಪ್ರಯಾಣಿಕರ ದೃಷ್ಟಿಕೋನದಿಂದ ಈ ಎರಡು ವಿಭಾಗಗಳು ಅತ್ಯಗತ್ಯ, ಏಕೆಂದರೆ ಎರಡೂ ನಗರದ ಪೂರ್ವದಿಂದ ಪಶ್ಚಿಮ

ಇಂದಿನಿಂದ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.09. ಇನ್‍ವರ್ಟರ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರದಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಬೊಮ್ಮಾರಿನ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ (55) ಎಂದು ಗುರುತಿಸಲಾಗಿದೆ. ಲಲಿತಾರವರು ಪ್ರತಿ ದಿನ ರಾತ್ರಿ ಮಲಗುವ ಸಮಯದಲ್ಲಿ ಇನ್‍ವರ್ಟರ್‍ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್‍ನ್ನು ತೆಗೆದು ಮಲಗುತ್ತಿದ್ದರು. ಎಂದಿನಂತೆ ಶನಿವಾರ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ – ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 06. ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ ಚೂಂತಾರುರವರ ಸ್ಮರಣಾರ್ಥ ವೈದಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅವರ ಪುಣ್ಯತಿಥಿಯ ದಿನವಾದ ಅ. 03ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಚೂಂತಾರು ಉಪಾಸನದಲ್ಲಿ ನಡೆಯಿತು. ಪ್ರಥಮ ವರ್ಷದ ಪುರಸ್ಕಾರವನ್ನು ಕೊಳ್ತಿಗೆ ಗ್ರಾಮದ ಚೌರ್ಕಾಡು ಮನೆತನದವರಾದ ದರ್ಬೆ ವೆಂಕಟ್ರಮಣ ಭಟ್ ಮತ್ತು ಐವರ್ನಾಡು ದೇವಸ್ಥಾನದ ಅರ್ಚಕರಾದ ಪರಕ್ಕಜೆ ಮೂಲದ ಪದ್ಮನಾಭ ಭಟ್ ರಿಗೆ ನೀಡಲಾಯಿತು. ಪ್ರಶಸ್ತಿಯನ್ನು ರೂ. 5000/- ಮೊತ್ತದೊಂದಿಗೆ,

ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ – ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ Read More »

ಕರಾವಳಿ

ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸುವುದು ತರವಲ್ಲ – ಕಿಟ್ಟು ಕಲ್ಲುಗುಡ್ಡೆ

(ನ್ಯೂಸ್ ಕಡಬ) newskadaba.com ಕಡಬ, ಅ. 06. ನಮ್ಮ ಧಾರ್ಮಿಕ ಆಚರಣೆಯ ಮೆರವಣಿಗೆಗಳಲ್ಲಿ ದೈವಾರಾಧನೆಯ ನರ್ತನ ಪ್ರದರ್ಶನ ಮಾಡುವುದು ಸರಿಯಲ್ಲ. ಈ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ ಎಂದು ನಲಿಕೆ ಸಮಾಜ ಸೇವಾ ಸಂಘದ ದೈವ ಆರಾಧನಾ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಕಿಟ್ಟು ಕಲ್ಲುಗುಡ್ಡೆ ಹೇಳಿದರು. ಅವರು ಗುರುವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೈವಗಳ ನರ್ತನ ದೈವದ ಕೊಠಡಿಯಡಿಯಲ್ಲೇ ನಡೆಯಬೇಕೇ ಹೊರತು ಹಾದಿಬೀದಿಯಲ್ಲಿ ನಡೆಯಬಾರದು. ಯಾಕೆಂದರೆ ಅದಕ್ಕೊಂದು ಕಟ್ಟುಕಟ್ಟಲೆ ನೀತಿ ನಿಯಮವಿದೆ. ಗಣೇಶೋತ್ಸವ, ಶಾರದೋತ್ಸವ,

ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸುವುದು ತರವಲ್ಲ – ಕಿಟ್ಟು ಕಲ್ಲುಗುಡ್ಡೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಸಿಜಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 06. ನಗರದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಡಾ|| ಅಕ್ಷಯ್ ಕುಮಾರ್ ಎಂ.ಹಾಕೆ, ಐಪಿಎಸ್ ಮಾನ್ಯ ಉಪ ಮಹಾ ಸಮಾದೇಷ್ಟರು, ಗೃಹರಕ್ಷಕದಳ ಹಾಗೂ ಉಪ ನಿರ್ದೇಶಕರು, ಪೌರರಕ್ಷಣೆ, ಕರ್ನಾಟಕ ರಾಜ್ಯ ಬೆಂಗಳೂರು ಇವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು ಪರಿಶೀಲಿಸಿದ ಅವರು, ಕಾಲ ಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ಇತರೆ ಇಲಾಖೆಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ ಹೆಚ್ಚಿನ ಪ್ರೋತ್ಸಾಹದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಸಿಜಿ ಭೇಟಿ Read More »

ಕರಾವಳಿ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಕೊಲೆ ಪ್ರಕರಣ – ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 05. ಕಳೆದ ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರದಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಡಾ.‌ ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೊ.ಎ.ಎಸ್.ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೇ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು. ಡಾ. ರೇಣುಕಾ ಪ್ರಸಾದ್ ಕೆ.ವಿ.

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಕೊಲೆ ಪ್ರಕರಣ – ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್‌ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top