ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್‌ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ […]

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ದಸರಾ ಹಬ್ಬ – ಅ. 08ರಿಂದ ಅ. 24ರ ವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 05. ದಸರಾ ಹಬ್ಬದ ಪ್ರಯುಕ್ತ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ನೀಡಲಾಗುತ್ತಿದ್ದು, ಅದರಂತೆ ಅ. 08ರಿಂದ ಅ. 24ರ‌ವರೆಗೆ ರಜೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್‌ ತಿಂಗಳಲ್ಲಿ 17 ದಿನಗಳ ಕಾಲ ದಸರಾ ರಜೆ ನೀಡಲಾಗಿದೆ. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವಾರ್ಷಿಕ ರಜೆ ಕ್ಯಾಲೆಂಡರ್ ಪ್ರಕಾರ, ಅಕ್ಟೋಬರ್ 8 ರಿಂದ 24 ರವರೆಗೆ ದಸರಾ ರಜೆ ಇರುತ್ತದೆ.

ದಸರಾ ಹಬ್ಬ – ಅ. 08ರಿಂದ ಅ. 24ರ ವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ Read More »

ಕರ್ನಾಟಕ

ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 05. 4 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಆರಂತೋಡು ಗ್ರಾಮದ ಪಂಚಾಯತ್ ಅದ್ಯಕ್ಷರಾದ ಶ್ರೀ ಕೇಶವ ಅಡ್ತಲೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಮಾಲಿನಿ ವಿನೋದ್ ಉಳುವಾರು ಇವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷ ಶೇಷಗಿರಿ ಯು.ಎಂ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಪುರುಷೋತ್ತಮ್, ನಿರ್ದೇಶಕರಾದ ಕೆಸಿ ನಾರಾಯಣ

ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ನ ಹೊಸ ಸ್ಕೀಮ್; ಜನ ಸಮಾನ್ಯರಿಗೆ ತಲುಪುವ ವಿಶಿಷ್ಟ ಯೋಜನೆ, ಹಣ ಕಟ್ಟಿದ ಪ್ರತಿಯೊಬ್ಬರಿಗೂ ಖಚಿತ ಬಹುಮಾನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 05. ಬ್ರೈಟ್ ಭಾರತ್, ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತಹ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್ ತಮ್ಮ ಮುಂದೆ ಬಂದಿದೆ. ಇದರ ನೂತನ ಯೋಜನೆಯಲ್ಲಿ ಒಂದಾದ ಸ್ಕೀಮ್ ಯೋಜನೆ ಬಡ ಸಾಮಾನ್ಯ ಜನರಿಗೆ ಖಂಡಿತವಾಗಿಯೂ ಒಂದು ಒಳ್ಳೆಯ ಯೋಜನೆ. ಹಾಗಾದರೆ

ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ನ ಹೊಸ ಸ್ಕೀಮ್; ಜನ ಸಮಾನ್ಯರಿಗೆ ತಲುಪುವ ವಿಶಿಷ್ಟ ಯೋಜನೆ, ಹಣ ಕಟ್ಟಿದ ಪ್ರತಿಯೊಬ್ಬರಿಗೂ ಖಚಿತ ಬಹುಮಾನ Read More »

ಕರಾವಳಿ, ಕರ್ನಾಟಕ

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ’ – ಊಹಾಪೋಹಗಳಿಗೆ ತೆರೆ ಎಳೆದ ದತ್ತು ಪುತ್ರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ಅವರ ದತ್ತು ಪುತ್ರ ಉಮೇಶ್ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು‌ ಸಹ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿಗಳನ್ನು ನಂಬಬೇಡಿ’ ಎಂದಿದ್ದಾರೆ. ಮೂರು ತಿಂಗಳ ಹಿಂದೆ

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ’ – ಊಹಾಪೋಹಗಳಿಗೆ ತೆರೆ ಎಳೆದ ದತ್ತು ಪುತ್ರ..! Read More »

ಕರ್ನಾಟಕ

ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ – ಪಟ್ಟಣ ಪಂಚಾಯತ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 05. ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಪ್ರದೇಶದಲ್ಲಿ ಸಾಕು ಪ್ರಾಣಿಗಳನ್ನು ಮೇಯಲು ಬಿಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆ ಅಂತಹ ಸಾಕುಪ್ರಾಣಿಗಳನ್ನು ವಶಕ್ಕೆ ಪಡೆದು ಮಾಲಕರಿಗೆ ದಂಡ ವಿಧಿಸುವ ಬಗ್ಗೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮನೆಯಲ್ಲಿ ಸಾಕುತ್ತಿರುವ ಆಡು, ದನ- ಕರುಗಳನ್ನು ಬೇರೆಯವರ ಸ್ಥಳದಲ್ಲಿ ಸಾರ್ವಜನಿಕ ಪ್ರದೇಶ, ರಸ್ತೆಗಳಲ್ಲಿ ಮೇವುಗೆ ಬಿಡುತ್ತಿದ್ದು ಹಾಗೂ ಕಡಬ ಪಟ್ಟಣ

ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ – ಪಟ್ಟಣ ಪಂಚಾಯತ್ ಎಚ್ಚರಿಕೆ Read More »

ಕರಾವಳಿ

ಕಡಬ: ಅಕ್ರಮ ಜಾನುವಾರು ಸಾಗಾಟ- ಪಿಕಪ್ ಹಾಗೂ ಜಾನುವಾರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 05. ಪಿಕಪ್ ಒಂದರಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕಡಬ ಪೊಲೀಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕಪ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಡಬ: ಅಕ್ರಮ ಜಾನುವಾರು ಸಾಗಾಟ- ಪಿಕಪ್ ಹಾಗೂ ಜಾನುವಾರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

KSATಯಲ್ಲಿ ಸರ್ಕಾರಿ ಟೈಪಿಸ್ಟ್ ಹುದ್ದೆಗಳು- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (KSAT) ವಿವಿಧ ಹುದ್ದೆಗಳ ನೇಮಕಾತಿ ನಡೆಸುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿಗಳನ್ನು ನಿಗದಿತ ವಿಳಾಸಕ್ಕೆ ಅಂಚೆ ಮೂಲಕ ಅ. 31 ರೊಳಗೆ ಸಲ್ಲಿಸಬೇಕು ಎಂದು ತಿಳಿಸಿದೆ. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ನಲ್ಲಿ ಒಟ್ಟು 6 ಟೈಪಿಸ್ಟ್ (Typist) ಹುದ್ದೆಗಳು ಖಾಲಿ ಇವೆ. ನೇಮಕಾತಿಯಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿಯೇ ಉದ್ಯೋಗ ಸಿಗಲಿದೆ. ನೇಮಕಾತಿ ಪ್ರಕ್ರಿಯೆ ವಿವರ

KSATಯಲ್ಲಿ ಸರ್ಕಾರಿ ಟೈಪಿಸ್ಟ್ ಹುದ್ದೆಗಳು- ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬೆಂಗಳೂರು ನಗರವು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದ್ದು, ಹಾಗೂ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್ ​ಮತ್ತು ಆಫ್​ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಮಂಗಳೂರು ನಗರದ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಂದಿನಂತೆ ಈ ವರ್ಷ ವಾಡಿಕೆಯ ಮಳೆಯಾಗದೇ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗುವುದು ಖಂಡಿತ. ಇದನ್ನು ಸರಿಪಡಿಸಲು ಹೆಣಗಾಡುತ್ತಿರುವ ವೇಳೆ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಕಾರ್ಯವಾಗುತ್ತಿದೆ. ಮಂಗಳೂರು ನಗರದ ನಂತೂರಿನಿಂದ ಕೆಪಿಟಿವರೆಗೆ ಉಂಟಾಗುವ ಟ್ರಾಫಿಕ್ ಜಾಮ್ ಕಡಿಮೆ ಮಾಡುವ ಉದ್ದೇಶದಿಂದ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿರುವ ಮರಗಳನ್ನು ತೆರವು ಮಾಡಲು ಗುರುತಿಸಲಾಗಿತ್ತು.

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ Read More »

ಕರಾವಳಿ
Scroll to Top