ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬೆಂಗಳೂರು ನಗರವು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದ್ದು, ಹಾಗೂ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್ ​ಮತ್ತು ಆಫ್​ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ […]

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಮಂಗಳೂರು ನಗರದ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಂದಿನಂತೆ ಈ ವರ್ಷ ವಾಡಿಕೆಯ ಮಳೆಯಾಗದೇ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗುವುದು ಖಂಡಿತ. ಇದನ್ನು ಸರಿಪಡಿಸಲು ಹೆಣಗಾಡುತ್ತಿರುವ ವೇಳೆ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಕಾರ್ಯವಾಗುತ್ತಿದೆ. ಮಂಗಳೂರು ನಗರದ ನಂತೂರಿನಿಂದ ಕೆಪಿಟಿವರೆಗೆ ಉಂಟಾಗುವ ಟ್ರಾಫಿಕ್ ಜಾಮ್ ಕಡಿಮೆ ಮಾಡುವ ಉದ್ದೇಶದಿಂದ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿರುವ ಮರಗಳನ್ನು ತೆರವು ಮಾಡಲು ಗುರುತಿಸಲಾಗಿತ್ತು.

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ Read More »

ಕರಾವಳಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಮನೆ ಮೇಲೆ ಇಡಿ ದಾಳಿ..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 05. ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಗುರುವಾರ ನಸುಕಿನ ಜಾವ 3:30ರ ಸುಮಾರಿಗೆ ದಾಳಿ ನಡೆಸಿದ ಕುರಿತು ವರದಿಯಾಗಿದೆ. ಡಿಸಿಸಿ ಬ್ಯಾಂಕ್​​ನಲ್ಲಿ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟು ಸಾಲ ನೀಡಿದ ಆರೋಪದಡಿ ಬಹುಕೋಟಿ ಹಗರಣದಲ್ಲಿ ಮಂಜುನಾನಾಥ್ ಗೌಡ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಈ ವಿಚಾರದ ಕುರಿತು ಇಡಿ ಇಲಾಖೆಗೆ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಮನೆ ಮೇಲೆ ಇಡಿ ದಾಳಿ..! Read More »

ಕರ್ನಾಟಕ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದ್ದು, ಹೀಗಾಗಿ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕರ್ನಾಟಕ

ಲಾರಿಗೆ ವಿದ್ಯುತ್ ತಂತಿ ಸಿಲುಕಿ ರಸ್ತೆಗೆ ವಾಲಿದ ವಿದ್ಯುತ್ ಕಂಬ – ತಪ್ಪಿದ ಭಾರೀ ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಲಾರಿಯೊಂದಕ್ಕೆ ವಿದ್ಯುತ್ ತಂತಿ ಸಿಲುಕಿದ ಪರಿಣಾಮ, ವಿದ್ಯುತ್ ಕಂಬವೊಂದು ಕಿತ್ತು ರಸ್ತೆಗೆ ವಾಲಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಾಹನ ಸವಾರರು ಪಾರಾದ ಘಟನೆ ತುಂಬೆ ಬಳಿ ನಡೆದಿದೆ. ಬೆಂಗಳೂರಿನಿಂದ ಎಚ್‌ಪಿಸಿಎಲ್‌ ಗೆ ತೆರಳುತ್ತಿದ್ದ ಲಾರಿಯ ಹಿಂಬಾಂಗದಲ್ಲಿ ಲೋಡ್ ಆಗಿದ್ದ ಕೆಲವು ವಸ್ತುಗಳಿಗೆ ರಸ್ತೆ ಬದಿಯ ವಿದ್ಯುತ್ ಕಂಬದ ತಂತಿಗಳು ಸಿಲುಕಿದೆ. ಇದರ ಅರಿವಿರದ ಚಾಲಕ ಲಾರಿಯನ್ನು ಮುಂದಕ್ಕೆ ಚಲಾಯಿಸಿದಾಗ ವಿದ್ಯುತ್ ತಂತಿಗಳು ಎಳೆದಾಡಿದಂತಾಗಿ, ವಿದ್ಯುತ್ ಕಂಬವು

ಲಾರಿಗೆ ವಿದ್ಯುತ್ ತಂತಿ ಸಿಲುಕಿ ರಸ್ತೆಗೆ ವಾಲಿದ ವಿದ್ಯುತ್ ಕಂಬ – ತಪ್ಪಿದ ಭಾರೀ ದುರಂತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗುದದ್ವಾರದಲ್ಲಿಟ್ಟು ಅಕ್ರಮ ಚಿನ್ನಸಾಗಾಣೆ – ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಗುದದ್ವಾರದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅ. 04 ರಂದು ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯ ತಪಾಸಣೆ ವೇಳೆ ಡಿಟೆಕ್ಟರ್ ನಲ್ಲಿ ಬೀಪ್ ಶಬ್ದ ಬಂದಿದ್ದ, ಈ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಧೃಡಪಟ್ಟಿದೆ. ಎರಡು ಗೋಳಾಕಾರದ ಕ್ಯಾಪ್ಸುಲ್ ಮಾದರಿಗಳಲ್ಲಿ ಪೇಸ್ಟ್ ರೂಪದ ಚಿನ್ನವನ್ನು ಗುದದ್ವಾರದಲ್ಲಿ

ಗುದದ್ವಾರದಲ್ಲಿಟ್ಟು ಅಕ್ರಮ ಚಿನ್ನಸಾಗಾಣೆ – ಮಹಿಳೆ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯೋತ್ಸವಕ್ಕೆ ಜಿಲ್ಲಾದ್ಯಂತ ಸಂಭ್ರಮದ ಸಿದ್ಧತೆ- ಡಾ.ಎಂ.ಪಿ.ಶ್ರೀನಾಥ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶನದಲ್ಲಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ ಅವರು ತಿಳಿಸಿದರು. ಅವರು ಉಪ್ಪಿನಂಗಡಿಯಲ್ಲಿ ಜರುಗಿದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಜರುಗಿದ ರಾಜ್ಯ ಕಾರ್ಯಕಾರಿಣಿಯಲ್ಲಿ ಕೈಗೊಂಡ ತೀರ್ಮಾನಗಳನ್ನು ವಿವರಿಸಿದರು. ದತ್ತಿನಿಧಿ ಕಾರ್ಯಕ್ರಮಗಳನ್ನು ಇನ್ನಷ್ಟು ಏರ್ಪಡಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನವನ್ನು

ರಾಜ್ಯೋತ್ಸವಕ್ಕೆ ಜಿಲ್ಲಾದ್ಯಂತ ಸಂಭ್ರಮದ ಸಿದ್ಧತೆ- ಡಾ.ಎಂ.ಪಿ.ಶ್ರೀನಾಥ Read More »

ಕರಾವಳಿ

ಇಂದು ದಡಾರ, ರುಬೆಲ್ಲಾ ನಿರ್ಮೂಲನ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. 2023ನೇ ಸಾಲಿನ 3ನೇ ಸುತ್ತಿನ ದಡಾರ ಮತ್ತು ರುಬೆಲ್ಲಾ ನಿರ್ಮೂಲನಾ ನಗರ ಮಟ್ಟದ ಚಾಲನಾ ಸಮಿತಿ ಸಭೆಯು ಇಂದು(ಅ. 5) ಬೆಳಗ್ಗೆ 10.30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಲಿಕೆಯ 2ನೇ ಮಹಡಿಯಲ್ಲಿರುವ ಆಯುಕ್ತರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ದಡಾರ, ರುಬೆಲ್ಲಾ ನಿರ್ಮೂಲನ ಸಭೆ Read More »

ಕರಾವಳಿ

ದಕ್ಷಿಣ ಕನ್ನಡದ ಹಲವು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ – ಕಡಬದ ರುಕ್ಮಯ ಗೌಡರವರಿಗೂ ಸಂದ ಪ್ರಶಸ್ತಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. 2021-2022 ಹಾಗೂ 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಜಿಲ್ಲೆಯ ಅಗ್ನಿಶಾಮಕ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಜನರಾಗಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್, ಕದ್ರಿ ಅಗ್ನಿಶಾಮಕ ಠಾಣೆಯ ಜಿಲ್ಲಾಧಿಕಾರಿ ಮಹಮ್ಮದ್ ಜುಲ್ಫಿಕರ್ ನವಾಜ್ ಕೆ ಪಿ, ಜಿಲ್ಲೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ್, ಜಿಲ್ಲೆಯ ಮಂಗಳೂರು ತಾಲೂಕಿನ ಆದರ್ಶ ನಗರದ ಪ್ರಮುಖ ಅಗ್ನಿಶಾಮಕ-1647 ಸುದರ್ಶನ್.ಕೆ, ಕಡಬ ತಾಲೂಕಿನ ಕೊಂಬಾರು ಪ್ರಮುಖ ಅಗ್ನಿಶಾಮಕ-2119

ದಕ್ಷಿಣ ಕನ್ನಡದ ಹಲವು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ – ಕಡಬದ ರುಕ್ಮಯ ಗೌಡರವರಿಗೂ ಸಂದ ಪ್ರಶಸ್ತಿ..! Read More »

ಕರಾವಳಿ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 04. ಮಾರ್ಬಲ್‌ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್ ಲೋಡ್ ಗಾಗಿ ರಿವರ್ಸ್ ತೆಗೆಯುವ ಸಂದರ್ಭ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top