ರಾಜ್ಯ ಮಟ್ಟದ ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆ – ಕುಮಾರಸ್ವಾಮಿ ವಿದ್ಯಾಲಯದ ಕುಶಿತ್ ಮಲ್ಲಾರನಿಗೆ ದ್ವಿತೀಯ ಸ್ಥಾನ

(ನ್ಯೂಸ್ ಕಡಬ) newskadaba.com ಕಡಬ, ಅ. 04. ಶ್ರೀ ಕ್ಷೇತ್ರ ಧರ್ಮಸ್ಥಳ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ನಡೆಸಲಾದ ರಾಜ್ಯಮಟ್ಟದ ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಐದನೇ ತರಗತಿ ವಿದ್ಯಾರ್ಥಿ ಕುಶಿತ್ ಮಲ್ಲಾರ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ. ಈತ ಶ್ರೀ ಲಿಂಗಪ್ಪ ಮಲ್ಲಾರ ಮತ್ತು ಶ್ರೀಮತಿ ಭವ್ಯ ದಂಪತಿಗಳ ಪುತ್ರ. ಈತನಿಗೆ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ತರಬೇತಿ ನೀಡಿರುತ್ತಾರೆ.

ರಾಜ್ಯ ಮಟ್ಟದ ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆ – ಕುಮಾರಸ್ವಾಮಿ ವಿದ್ಯಾಲಯದ ಕುಶಿತ್ ಮಲ್ಲಾರನಿಗೆ ದ್ವಿತೀಯ ಸ್ಥಾನ Read More »

ಕರಾವಳಿ

ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ- ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಅ. 04. ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಿಂದ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು 9 ನೇ ತರಗತಿಯ ರಾಹುಲ್ ಕೋಲಕಾರ ಎಂದು ಗುರುತಿಸಲಾಗಿದೆ. ಈತ ಅರ್ಧ ವಾರ್ಷಿಕ ಪರೀಕ್ಷೆ ಬರೆಯಲು ಶಾಲೆಗೆ ಹೋದ ವೇಳೆ ಈ ದುರ್ಘಟನೆ ಸಂಭವಿಸಿದೆ. ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಾಗ ಶಿಕ್ಷಕರು ಹಾಗೂ ಇತರ ಶಾಲಾ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದ

ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ- ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ

ಡ್ರೈವಿಂಗ್ ವೇಳೆ ಹೃದಯಾಘಾತ- ಲಾರಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಗುಂಡ್ಲುಪೇಟೆ, ಅ. 04. ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ಲಾರಿಯು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ಮೃತ ಚಾಲಕನನ್ನು ತಮಿಳುನಾಡು ಮೂಲದ ಸೆಲ್ವರಾಜ್ (50) ಎಂದು ಗುರಿತಿಸಲಾಗಿದೆ. ಇವರು ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿತ್ತು. ಪರಿಣಾಮ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ, ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು,

ಡ್ರೈವಿಂಗ್ ವೇಳೆ ಹೃದಯಾಘಾತ- ಲಾರಿ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕರ್ತವ್ಯದಲ್ಲಿದ್ದಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೆಡ್ ಕಾನ್ಸ್​ಟೇಬಲ್ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಿಜಯಪುರದ ಸೋಮನಗೌಡ ಚೌಧರಿ (32) ಎಂದು ಗುರುತಿಸಲಾಗದೆ. 2016ರ ಬ್ಯಾಚ್‌ನ ಸೋಮನಗೌಡ ಚೌಧರಿ ಅವರು, ಮಂಗಳೂರು ಸಿಎಆ‌ರ್ ಕಾನ್ಸ್​ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದರು. ಬಳಿಕ ಹೆಡ್‌ ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದು, ಸದ್ಯ ನಗರದ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್​ಪೆಕ್ಟರ್‌ ನ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು. ಮಂಗಳವಾರದಂದು

ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ಹಣದಾಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಆರೋಪ – ಹೋಟೆಲ್ ಕುಕ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 04. ಚಿಕ್ಕ ಮಕ್ಕಳಿಗೆ ಚಾಕೊಲೇಟ್ ಆಮಿಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಪ್ರತಿಷ್ಠಿತ ಹೋಟೆಲ್ ಒಂದರ ಕುಕ್ ನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಹೊಸೂರ ಬಳಿ ಇರುವ ಪ್ರತಿಷ್ಠಿತ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕುಕ್​, ಅಪ್ರಾಪ್ತ ಮಕ್ಕಳಿಗೆ ಚಾಕೊಲೇಟ್​ ಹಾಗೂ ಹಣದ ಆಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಮಕ್ಕಳನ್ನು ಬೆತ್ತಲೆಗೊಳಿಸಿ, ತಾನೇ ವಿಡಿಯೋ ಮಾಡಿ ಹಣಕ್ಕೆ

ಮಕ್ಕಳಿಗೆ ಹಣದಾಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಆರೋಪ – ಹೋಟೆಲ್ ಕುಕ್ ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ಕಲಬುರಗಿ ಮೂಲದ ಜಗದೀಶ್ ಮತ್ತು ಪೂಜಾ ದಂಪತಿಯ ಪುತ್ರ ಶ್ರೇಯನ್ ಎಂದು ಗುರುತಿಸಲಾಗಿದೆ. ಮೊದಲನೇ ಮಹಡಿಯಲ್ಲಿ ಆಟವಾಡುತ್ತಿದ್ದ ಮಗು ಆಯತಪ್ಪಿ ಕೆಳಗೆ ಬಿದ್ದಿದೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎನ್ನಲಾಗಿದೆ.

ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಮ್ಮಾರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 04. ಇಲ್ಲಿನ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಎಮ್, ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಹಾಗೂ ಉಪಾಧ್ಯಕ್ಷೆ ಶ್ರೀಮತಿ ತೇಜಾವತಿ, ಶಾಲಾಭಿವೃಧ್ದಿ ಸಮಿತಿ ಸದಸ್ಯರು, ಮತ್ತು ಅಧ್ಯಾಪಕ ವೃಂದದವರು ಸೇರಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಲಾಯಿತು. ಪ್ರಾಸ್ತಾವಿಕವಾಗಿ

ಕೆಮ್ಮಾರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ತೆರಿಗೆ ವಂಚನೆ ಆರೋಪ – ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ. ಉದ್ಯಮಿಗಳ ನಿವಾಸ, ಸಂಸ್ಥೆಗಳು, ಮನೆ ಹಾಗೂ ಕಛೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

ತೆರಿಗೆ ವಂಚನೆ ಆರೋಪ – ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತುಮಕೂರು, ಅ. 02. ಒಂದೇ ಕುಟುಂಬದ ಮೂವರು ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಸಮೀಪದ ಪಂಡಿತನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮರಳೂರು ನಿವಾಸಿಗಳಾದ ಸಿದ್ಧಗಂಗಯ್ಯ (62), ಸುನಂದಾ (50) ಹಾಗೂ ಪುತ್ರಿ ಗೀತಾ (33) ಎಂದು ಗುರುತಿಸಲಾಗಿದೆ. ಕೆಇಬಿಯಲ್ಲಿ ಕರ್ತವ್ಯ ಸಲ್ಲಿಸಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಕೆಸಿ ಜನರಲ್

ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿವಮೊಗ್ಗ ಘಟನೆಗೆ ಸಂಬಂಧಿಸಿ 43 ಜನರ ಬಂಧನ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 02. ನಗರದ ರಾಗಿಗುಡ್ಡ ಎಂಬಲ್ಲಿ ಈದ್ ಮಿಲಾದ್ ಮೆರವಣಿಗೆಯ ಸಂದರ್ಭ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಅಲ್ಲದೇ ಪೊಲೀಸರ ಮೇಲೂ ಕಲ್ಲು ಎಸೆದಿದ್ದರಿಂದ, ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಗಲಾಟೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂದಿಸಿದ್ದು ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ ಎಂದು ಶಿವಮೊಗ್ಗದ ಸಂಘರ್ಷದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದಾರೆ. ಈ ಸಂಬಂಧ ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು

ಶಿವಮೊಗ್ಗ ಘಟನೆಗೆ ಸಂಬಂಧಿಸಿ 43 ಜನರ ಬಂಧನ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top