ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 26. ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ. ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫ (43) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದ ಬಸ್ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. […]

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಬಂದ್- ಜೆಡಿಎಸ್ ಸಂಪೂರ್ಣ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ರಾಜ್ಯದಾದ್ಯಂತ ಕಾವೇರಿ ಕಿಚ್ಚು ಏರುತ್ತಿದ್ದು, ಕಾವೇರಿ ನೀರು ಉಳಿವಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಬಂದ್‍ನಲ್ಲಿ ಜೆಡಿಎಸ್ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ‘ಎಕ್ಸ್’ ಮೂಲಕ ಟ್ವೀಟ್ ಮಾಡಿರುವ ಅವರು, ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್‍ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟಗಾರರು ಶಾಂತಿಯುತವಾಗಿ ವರ್ತಿಸಬೇಕು. ಬಂದ್ ಯಶಸ್ವಿಯಾಗಲು ಜೆಡಿಎಸ್ ಕಾರ್ಯಕರ್ತರು ಕೂಡ ಸಹಕಾರ ನೀಡಲಿದ್ದಾರೆ ಎಂದು

ಬೆಂಗಳೂರು ಬಂದ್- ಜೆಡಿಎಸ್ ಸಂಪೂರ್ಣ ಬೆಂಬಲ Read More »

ಕರ್ನಾಟಕ

ಸೆ. 26: ವಿಶ್ವ ಸಂತಾನ ನಿಯಂತ್ರಣ ಜಾಗೃತಿ ದಿನ – ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 26. ಪ್ರತಿ ವರ್ಷ ವಿಶ್ವಸಂಸ್ಥೆಯು ಸೆಪ್ಟೆಂಬರ್ 26 ರಂದು ‘ವಿಶ್ವ ಸಂತಾನ ನಿಯಂತ್ರಣ ಜಾಗ್ರತಿ ದಿನ’ ಎಂದು ಆಚರಿಸಿ ಜನರಲ್ಲಿ ಜನ ಸಂಖ್ಯೆ ನಿಯಂತ್ರಣ, ಮಹಿಳೆಯರ ಆರೋಗ್ಯ ಮತ್ತು ಸಂತಾನ ನಿಯಂತ್ರಣದ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಯುವಜನರಲ್ಲಿ ಆರೋಗ್ಯದ ಜಾಗೃತಿ ಮೂಡಿಸಿ ಅವರ ದೈಹಿಕ ಮತ್ತು ಲೈಂಗಿಕ ಜೀವನದ ಬಗ್ಗೆ ಪರಿಪೂರ್ಣ ಮಾಹಿತಿ ನೀಡುವ ಕೆಲಸವನ್ನು ಮಾಡಲಾಗುತ್ತದೆ. ಈ ಆಚರಣೆ ಆರಂಭವಾಗಿ 15 ವರ್ಷ ಕಳೆದರೂ ಜನರಲ್ಲಿ ಸಂತಾನ

ಸೆ. 26: ವಿಶ್ವ ಸಂತಾನ ನಿಯಂತ್ರಣ ಜಾಗೃತಿ ದಿನ – ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಆರ್‌ಬಿಐ ಡೆಪ್ಯುಟಿ ಗವರ್ನರ್ ಅವಧಿ ಒಂದು ವರ್ಷಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 26. ಭಾರತೀಯ ರಿಸರ್ವ್ ಬ್ಯಾಂಕ್ ನ ಡೆಪ್ಯುಟಿ ಗವರ್ನರ್ ಎಂ ರಾಜೇಶ್ವರ್ ರಾವ್ ಅವರ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ. ಅಕ್ಟೋಬರ್ 9, 2023 ರಿಂದ ಜಾರಿಗೆ ಬರುವಂತೆ ಆರ್.ಬಿಐ ಡೆಪ್ಯುಟಿ ಗವರ್ನರ್ ಎಂ ರಾಜೇಶ್ವರ್ ರಾವ್ ಅವರನ್ನು ಒಂದು ವರ್ಷದ ಅವಧಿಗೆ ಮರು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಅವರನ್ನು ಮೂರು ವರ್ಷಗಳ ಅವಧಿಗೆ ಅಕ್ಟೋಬರ್ 2020 ರಲ್ಲಿ RBI

ಆರ್‌ಬಿಐ ಡೆಪ್ಯುಟಿ ಗವರ್ನರ್ ಅವಧಿ ಒಂದು ವರ್ಷಕ್ಕೆ ವಿಸ್ತರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಲಾಗಿದ್ದು, ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ಪ್ರಬಲ ಲಿಂಗಾಯಿತ ಸಮುದಾಯದ ನಾಯಕರಾಗಿದ್ದ ವೀರೇಂದ್ರ ಪಾಟೀಲ್ ಅವರು 1989

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ Read More »

ಕರ್ನಾಟಕ

ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಸೆ. 26. 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರೋಪಿಗಳು ಗೋಶಾಲೆಯನ್ನು ಸ್ವಚ್ಛಗೊಳಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದು ನಂತರ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿತ್ತು. ಸಂತ್ರಸ್ಥೆಗೆ ಮೊದಲು ನೆರೆಮನೆಯಾತ ಅತ್ಯಾಚಾರ ನಡೆಸಿ ನಂತರ ಆತನ ಇಬ್ಬರು ಸಹಚರರು ಆಕೆಯನ್ನು ಅಪಹರಿಸಿ, ಚಲಿಸುವ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ, ನಂತರ

ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 26. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ ನಡೆದಿದೆ. ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವು ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೇ ಬಾಕಿಯಾಗಿತ್ತು ಎನ್ನಲಾಗಿದೆ. ಬಳಿಕ ಪಿಕಪ್ ನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸುಬ್ರಹ್ಮಣ್ಯ ಪೊಲೀಸರು

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶೇಷಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ಪ್ರಸಕ್ತ (2023-24) ಸಾಲಿನ ಪ್ರೀ ಮೆಟ್ರಿಕ್(ಮೆಟ್ರಿಕ್ ಪೂರ್ವ) ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್‍ಎಸ್‍ಪಿ ತಂತ್ರಾಂಶದಲ್ಲಿ https://ssp.karnataka.gov.in/ssp2324/homenew.aspx ಹಾಗೂ ನವೀಕರಣಕ್ಕೆ https://ssp.karnataka.gov.in/ssp2324/signin.aspx ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಶಾಲಾ ಕಾಲೇಜುಗಳ ಲಾಗಿನ್ ಮುಖಾಂತರ ಅನುಮೋದಿಸಿ ವಿಲೇವಾರಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. 08272-295829 ನ್ನು ಹಾಗೂ 3 ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ

ವಿಶೇಷಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ Read More »

ಕರ್ನಾಟಕ

2024ರ ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 26. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯವು ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಮುಂಬರುವ ಜನವರಿಯಲ್ಲಿ ಲೋಕಾರ್ಪಣೆಗೊಳ್ಳುವುದು ಬಹುತೇಕ ಖಚಿತ ಎಂದು ಟ್ರಸ್ಟ್ ಹೇಳಿರುವುದಾಗಿ ವರದಿಯೊಂದು ಪ್ರಕಟಿಸಿದೆ. ಮಂದಿರದ ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ ಶೇ.50ರಷ್ಟು ಪಿಲ್ಲರ್ ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಟ್ರಸ್ಟ್ ಹೊಂದಿದ್ದು, 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ ಎನ್ನಲಾಗಿದೆ. ರಾಮ ಜನ್ಮಭೂಮಿಯ ಶಂಕುಸ್ಥಾಪನೆ ಸಮಾರಂಭವು

2024ರ ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ..! Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು ಬಂದ್- ಕನ್ನಡ ಚಿತ್ರೋದ್ಯಮ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ಬೆಂಗಳೂರು ಬಂದ್​ಗೆ ಕನ್ನಡ ಚಿತ್ರೋದ್ಯಮವು ಸಂಪೂರ್ಣ ಬೆಂಬಲ ಸೂಚಿಸಿದ ಹಿನ್ನೆಲೆ ಸಿನಿಮಾ ಶೂಟಿಂಗ್ ಬಂದ್​​ ಆಗಿದ್ದು, ಅಲ್ಲದೇ ಚಿತ್ರ ಮಂದಿರಗಳಲ್ಲಿಯೂ ಚಿತ್ರ ಪ್ರದರ್ಶನ ಸ್ಥಗಿತ ಮಾಡಲಾಗಿದೆ. ಬಂದ್ ಗೆ ಬೆಂಬಲ ನೀಡಿರುವ ಹಿನ್ನೆಲೆ ನಗರದ ಚಿತ್ರಮಂದಿರಗಳಲ್ಲಿ ಇವತ್ತು ಸಿನಿಮಾ ಪ್ರದರ್ಶನವಿಲ್ಲ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಟೆಲಿವಿಷನ್ ಅಸೋಸಿಯೇಷನ್ ಕೂಡ ಬೆಂಬಲ ನೀಡಿದ ಹಿನ್ನೆಲೆ ಸೀರಿಯಲ್ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಗಳು ಇವತ್ತಿನ ಮಟ್ಟಿಗೆ ನಿಲ್ಲಿಸಲಾಗಿದೆ.

ಬೆಂಗಳೂರು ಬಂದ್- ಕನ್ನಡ ಚಿತ್ರೋದ್ಯಮ ಬೆಂಬಲ Read More »

ಕರ್ನಾಟಕ
Scroll to Top