ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಪ್ರಯಾಣಿಕರ ಒತ್ತಡವನ್ನು ಕಡಿಮೆಗೊಳಿಸಲು ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ತಾತ್ಕಾಲಿಕವಾಗಿ 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್‌ಗಳನ್ನು ಒದಗಿಸಲಾಗುವುದು. 2023ರ ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್‌ನಿಂದ ಹೊರಡುವ ರೈಲು (ನಂಬರ್ 01165) ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ವಿಶೇಷ ರೈಲಿಗೆ 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು […]

ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ Read More »

ಕರಾವಳಿ, ಕರ್ನಾಟಕ

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 26. ಕಾಲೇಜಿನ ಸುತ್ತ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ದೇರಳಕಟ್ಟೆ ನಿವಾಸಿ ಶರೀಫ್ (30) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆ ಸಮೀಪ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ‌ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್‌ಲೈನ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಆನ್‌ಲೈನ್ ಮೂಲಕ ಹಣ ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ವಾಟ್ಸಪ್‌ಗೆ ಕಂಪೆನಿಯೊಂದರ ಹೆಸರಿನಲ್ಲಿ ಮೆಸೇಜ್ ಬಂದಿದ್ದು, ಅದರಲ್ಲಿ ಪಾರ್ಟ್ ಟೈಮ್ ಟಾಸ್ಕ್‌ ಗಳನ್ನು ಪ್ರತಿದಿನ ಮಾಡಿದರೆ ಶೇ. 30ರಷ್ಟು ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ಬಳಿಕ ಟೆಲಿಗ್ರಾಂ ಆಯಪ್‌ನಲ್ಲಿರುವ ವ್ಯಕ್ತಿಯ ಮೂಲಕ ಕಾಶ್ಮೀರ್ 2233 ಎಂಬ ವ್ಯಕ್ತಿಯನ್ನು ಪರಿಚಯಿಸಿ ಮಾರ್ಕೆಟಿಂಗ್ ಕಂಪೆನಿಯ ಗುಂಪಿನಲ್ಲಿ ಸೇರಿಸಿ ಆಮಿಷವೊಡ್ಡಲಾಗಿತ್ತು. ಇದನ್ನು ಇದನ್ನು

ಆನ್‌ಲೈನ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಾಗಾಟದ ಮರಳು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ನಗರದ ಕಣ್ಣೂರು ಬೆಂಝ್ ಶೋ ರೂಮ್‌ನ ಹಿಂಬದಿಯಲ್ಲಿರುವ ನೇತ್ರಾವತಿ ನದಿ ಕಿನಾರೆಯಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ವರದಿಯಾಗಿದೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ಮರಳು ಸಾಗಾಟಕ್ಕೆ ಬಳಸಿದ್ದ 5 ಟಿಪ್ಪರ್ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಅಕ್ರಮ ಸಾಗಾಟದ ಮರಳು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಲಿಂಗ ನಿರ್ಣಯ ನಿರ್ಬಂಧ ಮತ್ತು ದುರ್ಬಳಕೆ ತಡೆ ಕುರಿತು ಜಿಲ್ಲಾ ಮಟ್ಟದ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಗರ್ಭ ಪೂರ್ವ ಮತ್ತು ಜನನ ಪೂರ್ವ ಲಿಂಗ ನಿರ್ಣಯ ನಿರ್ಬಂಧ ಮತ್ತು ದುರ್ಬಳಕೆ ತಡೆ ಜಿಲ್ಲಾ ಮಟ್ಟದ ಸಭೆಯು ಸೆ. 26ರಂದು ಮಧ್ಯಾಹ್ನ 3.30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ನಡೆಯಲಿದೆ ಎಂದು ಡಿಎಚ್‍ಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಿಂಗ ನಿರ್ಣಯ ನಿರ್ಬಂಧ ಮತ್ತು ದುರ್ಬಳಕೆ ತಡೆ ಕುರಿತು ಜಿಲ್ಲಾ ಮಟ್ಟದ ಸಭೆ Read More »

ಕರಾವಳಿ

ರಸ್ತೆ ಕಾಮಗಾರಿ ಹಿನ್ನೆಲೆ ಮರಗಳ ಕಡಿತ- ಆಕ್ಷೇಪಣೆಗಳಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ರಾಜ್ಯದ ಮಂಗಳೂರು – ತುಮಕೂರು ಭಾಗದ ರಾಷ್ಟ್ರೀಯ ಹೆದ್ದಾರಿ–73ರ 40 ಕಿ.ಮೀ. (ಪುಂಜಾಲ್‍ಕಟ್ಟೆ)ರಿಂದ 75 ಕಿ.ಮೀ. (ಚಾರ್ಮಾಡಿ) ವರೆಗೆ ರಸ್ತೆಯನ್ನು ಮಧ್ಯಮ ಪಥ ರಸ್ತೆಯಿಂದ ಭುಜಗಳುಳ್ಳ ದ್ವಿಪಥ ರಸ್ತೆಗೆ ಅಗಲೀಕರಿಸುವ ಕಾಮಗಾರಿಗೆ ಸಂಬಂಧಿಸಿದಂತೆ 59.60ಕಿ.ಮೀ. ರಿಂದ 73.100ರ ವರೆಗೆ ಸರಕಾರಿ / ಪಟ್ಟಾ ಸ್ಥಳದಲ್ಲಿ ಗುರುತಿಸಲಾದ 1177 ಮರಗಳ ತೆರವಿನ ಬಗ್ಗೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಅವರು ಕೋರಿಕೊಂಡಿರುತ್ತಾರೆ. ಸದ್ರಿ ಮರಗಳ ಕಡಿತಲೆಗೆ

ರಸ್ತೆ ಕಾಮಗಾರಿ ಹಿನ್ನೆಲೆ ಮರಗಳ ಕಡಿತ- ಆಕ್ಷೇಪಣೆಗಳಿಗೆ ಆಹ್ವಾನ Read More »

ಕರಾವಳಿ

ಅಕ್ಟೋಬರ್ 1ರಂದು ಹಿರಿಯ ನಾಗರಿಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಕ್ಟೋಬರ್ 1ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ

ಅಕ್ಟೋಬರ್ 1ರಂದು ಹಿರಿಯ ನಾಗರಿಕರ ದಿನಾಚರಣೆ Read More »

ಕರಾವಳಿ

ಶಾಲಾ ಬಸ್ – ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌; ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿ ಐದು ಮಂದಿ ಮೃತಪಟ್ಟ ಘಟನೆ ಇಂದು ಸಂಜೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳನ್ನು ಇಳಿಸಿ ಮರಳುತ್ತಿದ್ದ ಶಾಲಾ ಬಸ್ಸು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ನಡೆದಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟವರ

ಶಾಲಾ ಬಸ್ – ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌; ಐವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹೆಬ್ರಿ, ಸೆ. 25. ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಳಂಜೆ ಗ್ರಾಮದ ಈಶ್ವರನಗರ ಎಂಬಲ್ಲಿ ನಡೆದಿದೆ. ಮೃತರನ್ನು ವಿಷ್ಣುಮೂರ್ತಿ(48) ಎಂದು ಗುರುತಿಸಲಾಗಿದೆ. ಬೈಕಿನಿಂದ ಬಿದ್ದು ಗಾಯಗೊಂಡಿದ್ದ ಇವರು, ಸ್ನಾನ ಮಾಡಲು ಮನೆಯ ಅಂಗಳದಲ್ಲಿನ ಆವರಣವಿಲ್ಲದ ಬಾವಿಯ ಬಳಿ ಹೋಗಿದ್ದರು. ಅಲ್ಲಿ ಪಂಪ್‌ ನಲ್ಲಿ ನೀರು ಬಾರದ ಹಿನ್ನೆಲೆ ಬಾವಿಯೊಳಗೆ ಇದ್ದ ಫುಟ್ ಬಾಲ್ ಎತ್ತಿ ನೋಡಲು ಹೋಗಿದ್ದು, ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ರಾತ್ರಿ ವೇಳೆಗೆ ಬೈಕ್ ನಲ್ಲಿ ಆಗಮಿಸಿ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಕಡಬ ಪೊಲೀಸರು ಬಂಧಿಸಿದ್ದಾರೆ‌. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ಭಾನುವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top