ಬೆಂಗಳೂರು ಬಂದ್‌ʼಗೆ ಅವಕಾಶವಿಲ್ಲ; ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ ನಿಷೇಧಾಜ್ಞೆ ಜಾರಿ- ಕಮಿಷನರ್ ಬಿ. ದಯಾನಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ನಾಳೆ (ಸೆ.26) ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ. ಪೊಲೀಸ್‌ ಅಧಿಕಾರಿಗಳೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ನಾಳೆ ಬಂದ್ ಗೆ ಅವಕಾಶವಿಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ನಾಳೆ ಒತ್ತಾಯಪೂರ್ವಕ ಬಂದ್ ಮಾಡಿಸಿದಲ್ಲಿ ಕ್ರಮ ಖಚಿತ ಎಂದು ಎಚ್ಚರಿಸಿದರು. ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸೆ. 25ರ ಮಧ್ಯರಾತ್ರಿಯಿಂದ 26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ […]

ಬೆಂಗಳೂರು ಬಂದ್‌ʼಗೆ ಅವಕಾಶವಿಲ್ಲ; ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ ನಿಷೇಧಾಜ್ಞೆ ಜಾರಿ- ಕಮಿಷನರ್ ಬಿ. ದಯಾನಂದ್ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 25. ಕಳೆದ 9 ವರ್ಷಗಳಿಂದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೊಕ್ಯಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಎಂದು ಗುರುತಿಸಲಾಗಿದೆ. ಈತ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದರ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಇವರು ಸೆ. 24 ರಂದು ಸಂಜೆ ಮನೆಯಿಂದ ಹೊರಟಿದ್ದು, ಇಂದು ಬೆಳಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳಾ ಕುಸ್ತಿ ಸ್ಪರ್ಧೆ – ಮೆಲ್ಕಾರ್ ಮಹಿಳಾ ಕಾಲೇಜಿನ ಸನಾ ಸುಲ್ತಾನಳಿಗೆ ಚಿನ್ನದ ಪದಕ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 25. ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಆಗ್ನೇಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ಕಾಲೇಜಿನ ಒಳಾಂಗಣ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 67 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸನಾ ಸುಲ್ತಾನ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಸಾಲೆತ್ತೂರು ನಿವಾಸಿ ಅಬ್ದುಲ್ ಬಶೀರ್ ಹಾಗೂ

ಮಹಿಳಾ ಕುಸ್ತಿ ಸ್ಪರ್ಧೆ – ಮೆಲ್ಕಾರ್ ಮಹಿಳಾ ಕಾಲೇಜಿನ ಸನಾ ಸುಲ್ತಾನಳಿಗೆ ಚಿನ್ನದ ಪದಕ Read More »

ಕರಾವಳಿ, ಕ್ರೀಡಾ ನ್ಯೂಸ್

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ -ಘಟನೆ ನಡೆದು 18 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ರಾತ್ರಿ ವೇಳೆಗೆ ಬೈಕ್ ನಲ್ಲಿ ಆಗಮಿಸಿ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಕಡಬ ಪೊಲೀಸರು ಬಂಧಿಸಿದ್ದಾರೆ‌. ಬಂಧಿತ ಆರೋಪಿಯನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಗಳು ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ -ಘಟನೆ ನಡೆದು 18 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ – ಯೂಟ್ಯೂಬರ್ ವಿರುದ್ಧ BMRCL ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಮೆಟ್ರೋ ನಿಲ್ದಾಣದಲ್ಲಿ ಗೇಟ್ ಜಿಗಿದು ಟಿಕೆಟ್‌ರಹಿತ ಪ್ರಯಾಣ ಮಾಡಿರುವ ವೀಡಿಯೊ ಹಂಚಿಕೊಂಡ ಖ್ಯಾತ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಖ್ಯಾತ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಎಂಬಾತ ‘ಭಾರತದ ಮೆಟ್ರೋದೊಳಗೆ ನುಗ್ಗುವುದು ಹೇಗೆ’ ಎಂಬ ಶೀರ್ಷಿಕೆಯ ವಿಡಿಯೋವನ್ನು ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು

ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ – ಯೂಟ್ಯೂಬರ್ ವಿರುದ್ಧ BMRCL ಕ್ರಮ Read More »

ಕರ್ನಾಟಕ

ಬೆಂಗಳೂರು ಬಂದ್‌ ಗೆ ಬೆಂಬಲವಿಲ್ಲ, ಸೆ. 29ಕ್ಕೆ ‘ಕರ್ನಾಟಕ ಬಂದ್ʼ – ವಾಟಾಳ್ ನಾಗರಾಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.25. ಸೆಪ್ಟೆಂಬರ್ 29ರಂದು ʼಅಖಂಡ ಕರ್ನಾಟಕ ಬಂದ್ʼ ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಈ ಕುರಿತು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕನ್ನಡ ಒಕ್ಕೂಟ ಸಂಘಟನೆಗಳು ಕರ್ನಾಟಕ ಬಂದ್ ಬಗ್ಗೆ ಒಮ್ಮತದ ನಿರ್ಧಾರ ಕೈಗೊಂಡಿತು. “ಆರ್ಥಿಕ ಸಂಕಷ್ಟದ ಸುಳಿಯಲ್ಲಿರುವ ಚಾಲಕರು ಎರಡು ದಿನ ಬಂದ್ ಮಾಡುವ ಪರಿಸ್ಥಿತಿಯಲ್ಲಿಲ್ಲ. ಎರಡು ದಿನ ದುಡಿಮೆ ಕಳೆದುಕೊಳ್ಳಲು ಸಾಧ್ಯವಿಲ್ಲ ಎಂಬ ಕೂಗು ನಮ್ಮ ಸಂಘಟನೆಗಳ ಚಾಲಕರಿಂದ ಕೇಳಿಬರುತ್ತಿವೆ. ಹಾಗಾಗಿ

ಬೆಂಗಳೂರು ಬಂದ್‌ ಗೆ ಬೆಂಬಲವಿಲ್ಲ, ಸೆ. 29ಕ್ಕೆ ‘ಕರ್ನಾಟಕ ಬಂದ್ʼ – ವಾಟಾಳ್ ನಾಗರಾಜ್ Read More »

ಕರ್ನಾಟಕ

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಕಿಡಿಗೇಡಿಗಳು – ಆರೋಪಿಗಳ ಪತ್ತೆಗೆ ಬಲೆ ಬೀಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಸೆ.25. ರಾತ್ರಿ ವೇಳೆಗೆ ಬೈಕ್ ನಲ್ಲಿ ಆಗಮಿಸಿದ ಕಿಡಿಗೇಡಿಗಳಿಬ್ಬರು ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮಸೀದಿಯ ವರಾಂಡದಲ್ಲಿ ಬೈಕನ್ನು ಹಿಂತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಕಿಡಿಗೇಡಿಗಳು – ಆರೋಪಿಗಳ ಪತ್ತೆಗೆ ಬಲೆ ಬೀಸಿದ ಕಡಬ ಪೊಲೀಸರು Read More »

ಕರಾವಳಿ

ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ಟಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿಯಾದ ಘಟನೆ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್ ಗೆ ಮೀನು ಸಾಗಾಟ ನಡೆಸುವ ವಾಹನ, ನೇತ್ರಾವತಿ ಸೇತುವೆ ತಲುಪುತ್ತಿದ್ದಂತೆ ಎದುರುಗಡೆಯ ಟಯರ್ ಸಿಡಿದಿದೆ. ಪರಿಣಾಮ ಒಂದು ದಿಕ್ಕಿನತ್ತ ತೆರಳಿದ ಪಿಕಪ್ ವಾಹನ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಪಿಕಪ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ವಾಹನದಲ್ಲಿದ್ದ ಮೀನು

ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ 3 ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top