ಪದವಿ ಪರೀಕ್ಷೆ ಮುಗಿದ 12 ದಿನದಲ್ಲೇ ಫಲಿತಾಂಶ ಪ್ರಕಟಿಸಿದ ಬೆಂಗಳೂರು ವಿವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24.  ಪದವಿ ಪರೀಕ್ಷೆ ನಡೆದ 12 ದಿನಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ಬೆಂಗಳೂರು ವಿಶ್ವವಿದ್ಯಾಲಯವು ಫಲಿತಾಂಶ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿಯನ್ನು ನೀಡಿದೆ. ಬೆಂಗಳೂರು ವಿವಿಯು 6ನೇ ಸೆಮಿಸ್ಟರ್‌ ಬಿ.ಕಾಂ, ಬಿಬಿಎ ಮತ್ತು ಬಿಸಿಎ ಪದವಿ ಪರೀಕ್ಷೆಯನ್ನು ಸೆ.11 ರಂದು ನಡೆಸಿದ್ದು, ಶನಿವಾರದಂದು ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ಮೂರು ಕೋರ್ಸ್‌ಗಳಿಂದ 72 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 35 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು […]

ಪದವಿ ಪರೀಕ್ಷೆ ಮುಗಿದ 12 ದಿನದಲ್ಲೇ ಫಲಿತಾಂಶ ಪ್ರಕಟಿಸಿದ ಬೆಂಗಳೂರು ವಿವಿ Read More »

ಕರ್ನಾಟಕ

ಉದ್ಯಮಿಗೆ ವಂಚನೆ ಪ್ರಕರಣ – ಚೈತ್ರಾ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಸೇರಿ 7 ಮಂದಿ ಆರೋಪಿಗಳನ್ನು ಅ. 06ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೂರನೆ ಎಸಿಎಂಎಂ ನ್ಯಾಯಾಲಯವು ಶನಿವಾರದಂದು ಆದೇಶ ಹೊರಡಿಸಿದೆ. ಚೈತ್ರಾ ಜೊತೆಗೆ ಉಳಿದ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ ಏಳು ಮಂದಿಯನ್ನೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದ್ದು, ಇದರ ಬೆನ್ನಲ್ಲೇ ಚೈತ್ರಾ ಮತ್ತು

ಉದ್ಯಮಿಗೆ ವಂಚನೆ ಪ್ರಕರಣ – ಚೈತ್ರಾ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಂಟಿ ಪಕ್ಕಕ್ಕೆ ಸರಿಯಿರಿ ಎಂದಿದ್ದಕ್ಕೆ ಚಪ್ಪಲಿಯಿಂದ ಹೊಡೆದ ಮಹಿಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಆಂಟಿ ಎಂದು ಕರೆದರು ಎಂಬ ಕಾರಣಕ್ಕೆ ಮಹಿಳೆಯೊಬ್ಬರು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಟಿಎಂ ಕೇಂದ್ರದ ಬಾಗಿಲ ಬಳಿ ನಿಂತಿದ್ದ ಮಹಿಳೆಯೋರ್ವರಿಗೆ ‘ಆಂಟಿ ಪಕ್ಕಕ್ಕೆ ಸರಿಯಿರಿ’ ಎಂದ ಸೆಕ್ಯೂರಿ ಗಾರ್ಡ್‌ಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ಮಲ್ಲೇಶ್ವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜಾಜಿನಗರದ ಪೊಲೈಟ್‌ ಸೆಕ್ಯೂರಿ ಏಜೆನ್ಸಿಯ ಸೆಕ್ಯೂರಿ ಗಾರ್ಡ್‌ ಕೃಷ್ಣಯ್ಯ ಎಂಬವರು ನೀಡಿದ ದೂರಿನಂತೆ

ಆಂಟಿ ಪಕ್ಕಕ್ಕೆ ಸರಿಯಿರಿ ಎಂದಿದ್ದಕ್ಕೆ ಚಪ್ಪಲಿಯಿಂದ ಹೊಡೆದ ಮಹಿಳೆ Read More »

ಕರ್ನಾಟಕ

ಏಷಿಯನ್ ಗೇಮ್ಸ್ 2023- ಭಾರತಕ್ಕೆ 2 ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಹಾಂಗ್‌ಝೌ, ಸೆ. 24. ಚೀನಾದ ಹಾಂಗ್‌ಝೌ ನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ ನ ಮೊದಲ ದಿನ ಭಾರತದ ಕ್ರೀಡಾಪಟುಗಳು 2 ಬೆಳ್ಳಿ ಪದಕದೊಂದಿಗೆ ಶುಭಾರಂಭ ಮಾಡಿದ್ದಾರೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕ ಪಡೆಯಿತು. ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರು 2023 ರ ಏಷ್ಯನ್ ಗೇಮ್ಸ್‌ ನಲ್ಲಿ ಭಾರತಕ್ಕೆ ಮೊದಲ ಪದಕವನ್ನು ತಂದುಕೊಟ್ಟಿದ್ದಾರೆ. ಪುರುಷರ ಲೈಟ್‌

ಏಷಿಯನ್ ಗೇಮ್ಸ್ 2023- ಭಾರತಕ್ಕೆ 2 ಬೆಳ್ಳಿ ಪದಕ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 24. ಗಣೇಶೋತ್ಸವದ ಸಂದರ್ಭ ಗಣಪತಿ ವಿಸರ್ಜನೆ ವೇಳೆ ಯುವಕನೋರ್ವ ಕೆರೆಯ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಗಣೇಶ್ (25) ಎಂದು ಗುರುತಿಸಲಾಗಿದೆ. ಕುರುಬರಹಳ್ಳಿ ಕೆರೆಯಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನರ್ಸರಿಗೆ ಕಾಡಾನೆಗಳು ದಾಳಿ- 3,200ಕ್ಕೂ ಅಧಿಕ ಗಿಡಗಳು ಧ್ವಂಸ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 24. ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ ಕುರಿತು ಮುಂಡಾಜೆ ಎಂಬಲ್ಲಿ ನಡೆದಿದೆ. ಈ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು ಹಾಗೂ ಬಲೀಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು ಆನೆಗಳು ತುಳಿದು ಧ್ವoಸಗೊಳಿಸಿವೆ. ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ. ಕೆಲವು ದಿನಗಳ ಹಿಂದೆ ಧರ್ಮಸ್ಥಳದ

ನರ್ಸರಿಗೆ ಕಾಡಾನೆಗಳು ದಾಳಿ- 3,200ಕ್ಕೂ ಅಧಿಕ ಗಿಡಗಳು ಧ್ವಂಸ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಮೃತರನ್ನು ಸಜಿಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಎಂಬವರ ಪುತ್ರ ರಾಜ್ ಕುಮಾರ್ ಎಂದು ಗುರುತಿಸಲಾಗಿದೆ. ವಾಮದಪದವು ಎಂಬಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ಇಂದು ಬೆಳಗ್ಗೆ ವಾಮದಪದವಿನಿಂದ ಸಜಿಪದಲ್ಲಿರುವ ತನ್ನ ಮೂಲ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಪಾಣೆಮಂಗಳೂರು ಸೇತುವೆ ಬಳಿ ತಲುಪಿದಾಗ ಎದುರಿನಿಂದ ಬಂದ ಜಲ್ಲಿಕಲ್ಲು

ಬೈಕ್ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಿತ್ತೂರಿನಲ್ಲಿ ಭಾನುವಾರದಂದು ನಡೆದಿದೆ. ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ. ಪುತ್ತೂರಿನ ಮುರ ಎಂಬಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದಿಂದ ಇದ್ದು ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ತೀರ್ಮಾನಿಸಿದ್ದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅನರ್ಹರಾಗಿರುತ್ತಾರೆ. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ.

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ – ಕಡಬ ಸೈಂಟ್ ಆನ್ಸ್ ಪ್ರಾಥಮಿಕ ಶಾಲೆ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 24. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಲಿಟಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಸಲೀತ್, ರಿಝ್ವಾನ್, ನಿರ್ಭಯ್ ಹಾಗೂ ಕೌಶಿಕ್

ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ – ಕಡಬ ಸೈಂಟ್ ಆನ್ಸ್ ಪ್ರಾಥಮಿಕ ಶಾಲೆ ದ್ವಿತೀಯ Read More »

ಕರಾವಳಿ
Scroll to Top