ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳುರಿನಲ್ಲಿ ನಡೆದಿದೆ. ಡ್ರಗ್ಸ್ ಫ್ರೀ ಮಂಗಳೂರು ನಿಟ್ಟಿನಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 35 ಗ್ರಾಂ. ತೂಕದ 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ […]

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನಗರ ಠಾಣಾ ಎಸ್ಐ ಆಗಿ ಅನಂತ ಪದ್ಮನಾಭ ಕರ್ತವ್ಯಕ್ಕೆ ಹಾಜರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಕರ್ತವ್ಯಕ್ಕೆ ಹಾಜರಾಗಿದ್ದು, ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಈ ಮೊದಲು ಎಸ್ಐ ಆಗಿದ್ದ ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕದ್ರಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ, ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡಿದ್ದ ಆನಂತಪದ್ಮನಾಭ ಅವರನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗುವಂತೆ ‌ಸರಕಾರ

ಬಂಟ್ವಾಳ: ನಗರ ಠಾಣಾ ಎಸ್ಐ ಆಗಿ ಅನಂತ ಪದ್ಮನಾಭ ಕರ್ತವ್ಯಕ್ಕೆ ಹಾಜರ್ Read More »

ಕರಾವಳಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 22. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ.   ಮೃತ ಯುವಕನನ್ನು ಸೋಣಂದೂರು ಮುಂಡಾಡಿ ನಿವಾಸಿ ಪ್ರಶಾಂತ್‌ ಎಂದು ಗುರುತಿಸಲಾಗಿದೆ. ಈತ ಸೆ.18ರಂದು ರಾತ್ರಿ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಮನೆಯವರು ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಇದೀಗ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯ ಬಗ್ಗೆ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತ್ಯು..! Read More »

ಕರಾವಳಿ

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆದೆ. ಒಟ್ಟು 24 ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 8ರಂದಜ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಯ

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರಾವಳಿ

ಪ್ರಚೋದನಕಾರಿ ಹೇಳಿಕೆ ಆರೋಪ- ಮುತಾಲಿಕ್ ಗಡಿಪಾರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 22. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅನ್ಯ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರಿಗೆ ದೂರು ನೀಡಿದ್ದಾರೆ. ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಸಂದರ್ಭ ಮುತಾಲಿಕ್​​

ಪ್ರಚೋದನಕಾರಿ ಹೇಳಿಕೆ ಆರೋಪ- ಮುತಾಲಿಕ್ ಗಡಿಪಾರಿಗೆ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಕರ್ನಾಟಕ ಲೋಕಸೇವಾ ಆಯೋಗ 2016, 2017, 2018, 2019, 2020ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿದ್ದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಇದೀಗ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಎಸ್.ಬಿಸಿಬಿ, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿವಿಧ ವಿಷಯಗಳ ಶಿಕ್ಷಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಜಲಸಂಪನ್ಮೂಲ ಅಭಿವೃದ್ಧಿ ನಿಗಮ, ನವೋದಯ ಶಾಲೆಗಳ ಶಿಕ್ಷಕರು, ಮೌಲಾನಾ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ Read More »

ಉದ್ಯೋಗ, ಕರ್ನಾಟಕ

ಪುತ್ತೂರು: ಅಗ್ನಿಶಾಮಕ ದಳದ ರುಕ್ಮಯ್ಯ ಗೌಡ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 22. ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ರುಕ್ಮಯ್ಯ ಗೌಡ ಅವರಿಗೆ 2023ನೇ ಸಾಲಿನ ‘ಮುಖ್ಯಮಂತ್ರಿಗಳ ಚಿನ್ನದ ಪದಕ’ವನ್ನು ಸೆ. 22ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ಸೆ. 22ರಂದು ಬೆಳಗ್ಗೆ 8.30ಕ್ಕೆ ಏರ್ಪಡಿಸಿರುವ ಮುಖ್ಯಮಂತ್ರಿ ಪದಕ ಪ್ರಧಾನ ಹಾಗೂ ಅಗ್ನಿಶಾಮಕ ಠಾಣಾಧಿಕಾರಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪದಕ ಪ್ರದಾನ ಮಾಡಿದರು. ರುಕ್ಮಯ್ಯ ಗೌಡ ಅವರು

ಪುತ್ತೂರು: ಅಗ್ನಿಶಾಮಕ ದಳದ ರುಕ್ಮಯ್ಯ ಗೌಡ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ Read More »

ಕರಾವಳಿ

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಧರ್ಮಸ್ಥಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದ ಯುವತಿಯೋರ್ವಳು ಅಪಾರ್ಟ್‌‌ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೃತ ಯುವತಿಯನ್ನು ವಿಜಯಲಕ್ಷ್ಮಿ (17) ಎಂದು ಗುರುತಿಸಲಾಗಿದೆ. ಖಿನ್ನತೆಗೊಳಗಾಗಿದ್ದ ವಿಜಯಲಕ್ಷ್ಮೀ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಕ್ಕೂ ಮೊದಲು ಧರ್ಮಸ್ಥಳಕ್ಕೆ ಹೋಗಿದ್ದ ಆಕೆ ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರಿಬ್ಬರು ರಕ್ಷಣೆ ಮಾಡಿ ಬುದ್ಧಿ

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಯುವಕನೊಂದಿಗೆ ಬೈಕ್ ನಲ್ಲಿ ತೆರಳಿದ ಯುವತಿ; ತಿಂಗಳ ಬಳಿಕ ವಿಡಿಯೋ ವೈರಲ್- ದೂರು ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 22. ತಿಂಗಳ ಹಿಂದೆ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಆಗುಂಬೆ ಸಮೀಪದ ಫಾಲ್ಸ್ ಗೆ ಹೋಗಿ ವಾಪಸ್ ಬರುವಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಣೆ ಮಾಡಿ ಕಳುಹಿಸಿದ್ದರು. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ- ತಿಂಗಳ ಹಿಂದೆ ಬೈಕ್ ನಲ್ಲಿ ಆಗುಂಬೆಯ ಜಲಪಾತಕ್ಕೆ ತೆರಳಿದ ವಿದ್ಯಾರ್ಥಿಗಳಿಬ್ಬರು ಅಲ್ಲಿಂದ ಮರಳುತ್ತಿದ್ದ ವೇಳೆ ಬೈಕ್ ಅನ್ನು

ಅನ್ಯಕೋಮಿನ ಯುವಕನೊಂದಿಗೆ ಬೈಕ್ ನಲ್ಲಿ ತೆರಳಿದ ಯುವತಿ; ತಿಂಗಳ ಬಳಿಕ ವಿಡಿಯೋ ವೈರಲ್- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ. ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ,

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top