ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 17. ಶಾಲೆಯ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ. ಬಂಧಿತನನ್ನು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವರಾಂ ಎಂದು ಗುರುತಿಸಲಾಗಿದೆ.  ಈತ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರ ಬಳಿ ಹೇಳಿಕೊಂಡಿದ್ದರು. ವಿಷಯ ತಿಳಿದ ಪೋಷಕರು ಸಂಘಟನೆಗಳ ಸಹಕಾರದೊಂದಿಗೆ ಮದ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಮುಖ್ಯಶಿಕ್ಷಕ ಶಿವರಾಂನನ್ನು […]

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಸೆ. 17. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೀಸೆ ಮಂಜಯ್ಯ (73) ಎಂದು ಗುರುತಿಸಲಾಗಿದೆ. ಈತನನ್ನು ಸಕಲೇಶಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಗಳಿಗಾದ ಅನ್ಯಾಯದಿಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ತಾಯಿಯು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆದ್ದಾರಿ ಮಧ್ಯೆ ಉರುಳಿಬಿದ್ದ ಫ್ಲೈವುಡ್ ಸಾಗಾಟದ ಲಾರಿ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 17. ಪ್ಲೈವುಡ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಇಂದು ಮುಂಜಾನೆ ನಡೆದಿರುವ ಕುರಿತು ವರದಿಯಾಗಿದೆ.   ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆಯಿಂದ ಪ್ಲೈವುಡ್ ಹೇರಿಕೊಂಡು ಮಹಾರಾಷ್ಟ್ರದ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯದಲ್ಲೇ ಉರುಳಿಬಿದ್ದಿದೆ. ಘಟನಾ

ಹೆದ್ದಾರಿ ಮಧ್ಯೆ ಉರುಳಿಬಿದ್ದ ಫ್ಲೈವುಡ್ ಸಾಗಾಟದ ಲಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಖಕ್ಕೆ ಕೇಕ್ ಹಚ್ಚಿದ ಪತಿ- ಮದುವೆ ಕ್ಯಾನ್ಸಲ್ ಮಾಡಿದ ಯುವತಿ

(ನ್ಯೂಸ್ ಕಡಬ) newskadaba.com ಸೆ. 17. ಮದುವೆ ಕಾರ್ಯಕ್ರಮದಲ್ಲಿ ವರನೋರ್ವ ವಧುವಿನ ಮುಖಕ್ಕೆ ಕೇಕ್​ ಮೆತ್ತಿದ್ದಕ್ಕೆ ಕೋಪಗೊಂಡ ವಧು, ವರನನ್ನೇ ತ್ಯಜಿಸಿದ ವಿಚಿತ್ರ ಘಟನೆಯೊಂದು​ ನಡೆದಿದೆ. ಘಟನೆಯ ಪ್ರಕಾರ, ವಧುವಿಗೆ 17 ವರ್ಷ ಪ್ರಾಯವಿದ್ದಾಗ ಆಕೆಯ ತಾಯಿಯು ಆಕೆಯ ಮುಖಕ್ಕೆ ಬರ್ತಡೇ ಕೇಕ್​ ಮೇಲೆ ಹಾಕಲು ಯತ್ನಿಸಿದ್ದರು. ಇದು ಅವರ ಮನೆಯ ಸಂಪ್ರದಾಯ ಕೂಡ ಆಗಿತ್ತು. ಆದರೆ ಆಕೆಗೆ ತನ್ನ ಕೂದಲು ಹಾಗೂ ಮೇಕಪ್ ಹಾಳು ಮಾಡಿಕೊಳ್ಳುವುದು ಇಷ್ಟವಿರಲಿಲ್ಲ. ಹೀಗಾಗಿ ತಾಯಿಯ ಬಳಿ ಆ ರೀತಿ ಮಾಡಬೇಡ

ಮುಖಕ್ಕೆ ಕೇಕ್ ಹಚ್ಚಿದ ಪತಿ- ಮದುವೆ ಕ್ಯಾನ್ಸಲ್ ಮಾಡಿದ ಯುವತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಬ್ರೆಜಿಲ್, ಸೆ. 17. ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿಗಳು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿರುವ ಘಟನೆ ಬ್ರೆಜಿಲ್‌ನ ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿ.ಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಸಂಭವಿಸಿದ ಕುರಿತು ಪತ್ರಿಕೆಯೊಂದು ವರದಿ ಮಾಡಿದೆ. ರನ್‌ ವೇಯಿಂದ ಹೊರಟ ವಿಮಾನ ಮಳೆಯ ಕಾರಣದಿಂದ ಮಾರ್ಗ ಸರಿಯಾಗಿ ಗೋಚರಿಸದೇ ಇದ್ದಾಗ ಲ್ಯಾಂಡ್‌ ಆಗಲು ಪ್ರಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡ ವಿಮಾನ ಅರಣ್ಯ

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 17. ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ತಲಪಾಡಿ ತಚ್ಚಾಣಿ ಬಳಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ತ್ರಿಶ್ಶೂರ್‌ನ ವಡಕಂಚೇರಿ ಗ್ರಾಮದ ಶೇಕ್‌ ತನ್ವೀರ್‌ (20) ಹಾಗೂ ಕೋಝಿಕ್ಕೋಡ್‌ ಅಂಜೇರಿ ವಡಗೆರೆ ನಿವಾಸಿ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ ಹಾಗೂ ಸಾಗಾಟಕ್ಕೆ ಬಳಸಿದ್ದ ಬೈಕ್‌ ಮತ್ತು ಮೊಬೈಲ್‌ಗ‌ಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎನ್‌ಡಿಪಿಎಸ್‌

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದೈಹಿಕ ಆರೋಗ್ಯಕ್ಕೆ ಕಾಳಜಿ ವಹಿಸಿದಷ್ಟು ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿ- ರವೀಂದ್ರ ಎಂ. ಜೋಶಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಮಾನವನು ದೈಹಿಕ ಆರೋಗ್ಯಕ್ಕೆ ಒತ್ತು ಕೊಡುವ ರೀತಿಯಲ್ಲೇ ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಕೂಡ ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಎಂ. ಜೋಶಿ ಹೇಳಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು

ದೈಹಿಕ ಆರೋಗ್ಯಕ್ಕೆ ಕಾಳಜಿ ವಹಿಸಿದಷ್ಟು ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿ- ರವೀಂದ್ರ ಎಂ. ಜೋಶಿ Read More »

ಕರಾವಳಿ

ಬದುಕು ತ್ಯಜಿಸುವ ಮುನ್ನ ಒಂದು ಕ್ಷಣ ಯೋಚಿಸಿ- ಡಾ. ಸುದರ್ಶನ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಯುವ ಜನರು ವ್ಯಸನದಿಂದ ದೂರ ಉಳಿದು ಸದೃಢ ಮನಸ್ಸನ್ನು ಹೊಂದಿದರೆ ಮಾತ್ರ ಆತ್ಮಹತ್ಯೆಯಂತಹ ಹೇಯ ಕೃತ್ಯಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುದರ್ಶನ್ ತಿಳಿಸಿದರು. ಅವರು ಶನಿವಾರದಂದು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ,

ಬದುಕು ತ್ಯಜಿಸುವ ಮುನ್ನ ಒಂದು ಕ್ಷಣ ಯೋಚಿಸಿ- ಡಾ. ಸುದರ್ಶನ್ Read More »

ಕರಾವಳಿ

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು

(ನ್ಯೂಸ್ ಕಡಬ) newskadaba.com ಸೆ. 16. ಜಗತ್ತಿನೆಲ್ಲೆಡೆ ಅತ್ಯಂತ ಭಯಭಕ್ತಿ ಮತ್ತು ಶ್ರದ್ಧೆಯಿಂದ ಪೂಜಿಸಲ್ಪಡುವ ದೇವನೊಬ್ಬನೆಂದರೆ ಅದು ‘ಗಣಪ’  ಎಂದರೆ ತಪ್ಪಾಗಲಾರದು. ಅತ್ಯಂತ ವರ್ಣಮಯ ವ್ಯಕ್ತಿತ್ವದ ದೇವರಾದ ಗಣಪತಿಯನ್ನು ಜನರು ವಿನಾಯಕ, ವಿಘ್ನರಾಜ, ಗಣಾಧಿಪ, ಗಣಪ, ಗಣೇಶ, ಏಕದಂತ, ಹೇರಂಭ, ಲಂಭೋದರ, ಗಜಾನನ, ಸುಮುಖ ಹೀಗೆ ಹತ್ತಾರು ಹೆಸರುಗಳಿಂದ ಪೂಜಿಸುತ್ತಾರೆ. ಭಾರತ , ಚೀನಾ, ಜಪಾನ್, ಥಾಯ್ ಲ್ಯಾಂಡ್ , ನೇಪಾಳ , ಶ್ರೀ ಲಂಕಾ, ಇಂಡೋನೇಷ್ಯಾ, ಇರಾನ್, ಅಫ್ಘಾನಿಸ್ತಾನ. ಹೀಗೆ ವಿಶ್ವದೆಲ್ಲೆಡೆ ಹಲವು ಹೆಸರುಗಳಿಂದ ಪ್ರಸಿದ್ಧಿಯಾದ

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು Read More »

ಕರಾವಳಿ, ವಿಶೇಷ ಲೇಖನಗಳು

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top