ಅಕ್ರಮ ಮರಳು ಸಾಗಾಟ- ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ಸೆ. 16. ಅಕ್ರಮ ಮರಳು ಸಾಗಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಟೆಂಪೋ ಸಹಿತ ಮೂವರನ್ನು ಕಾಪು ಪೊಲೀಸರು ಬಂಧಿಸಿರುವ ಘಟನೆ ಮಣಿಪುರ ಗ್ರಾಮದ ದೆಂದೂರುಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರನ್ನು ಟೆಂಪೋ ಚಾಲಕ ಕರಂಬಳ್ಳಿಯ ನಜೀರ್(42), ಕುರ್ಕಾಲಿನ ಜೀವನ್ ಶೆಟ್ಟಿ(38) ಹಾಗೂ ಮಿಥುನ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಆರೋಪಿಗಳು ಇತ್ತೀಚೆಗೆ ಪಾಂಗಾಳ ಹೊಳೆಯಿಂದ ಮರಳನ್ನು ತೆಗೆಸಿ ಖಾಸಗಿ ಜಾಗದಲ್ಲಿ ಸಂಗ್ರಹಿಟ್ಟುಕೊಂಡಿದ್ದು, ಅದನ್ನು ಟೆಂಪೋದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ […]

ಅಕ್ರಮ ಮರಳು ಸಾಗಾಟ- ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ಸೆ. 15) ರಬೀವುಲ್ ಅವ್ವಲ್ ತಿಂಗಳ ಚಂದ್ರದರ್ಶನವಾದ ಯಾವುದೇ ಮಾಹಿತಿ ಇಲ್ಲದ ಕಾರಣ ಸಫರ್ 30 ಪೂರ್ತಿಗೊಳಿಸಿ ಇಂದು ಸೆ. 16ರ ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ರಬೀವುಲ್ ಅವ್ವಲ್ 1 ಆಗಿರುತ್ತದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ. ಸೆ. 28ರಂದು ರಬೀವುಲ್ ಅವ್ವಲ್ 12 ಮೀಲಾದುನ್ನಬೀ ದಿನವಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ Read More »

ಕರಾವಳಿ

ಧರ್ಮಸ್ಥಳದಲ್ಲಿ 48 ಟನ್ ಅಕ್ರಮ ಮರಳು ದಾಸ್ತಾನು ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 16. ತಾಲೂಕಿನ ಬಂದಾರು ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಫೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂದಾರು ಗ್ರಾಮ ಪಂಚಾಯತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಸಂದೇಶ್ ಗೌಡ ಎಂಬವರ ವಿರುದ್ದ ಧರ್ಮಸ್ಥಳ ಪೊಲೀಸರಿಗೆ

ಧರ್ಮಸ್ಥಳದಲ್ಲಿ 48 ಟನ್ ಅಕ್ರಮ ಮರಳು ದಾಸ್ತಾನು ಪತ್ತೆ Read More »

ಕರಾವಳಿ

ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ- ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾರ್ಮಾಡಿ, ಸೆ. 16. ಮಳೆಯಿಂದಾಗಿ ಮಂಜು ಆವರಿಸಿಕೊಂಡಿದ್ದ ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನಡೆದಿದೆ. ನೀರಿನ ಬಾಟಲ್ ಗಳನ್ನು ತುಂಬಿದ್ದ ಲಾರಿ ಶುಕ್ರವಾರದಂದು ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ವೇಳೆ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ದಾರಿ ಕಾಣದೇ ರಸ್ತೆ ತಡೆಗೋಡೆಗೆ ಢಿಕ್ಕಿ ಹೊಡೆದು 100 ಅಡಿ ಪ್ರಪಾತಕ್ಕೆ ಬಿದ್ದಿದೆ. ಈ ವೇಳೆ ಅಲ್ಲೇ ಇದ್ದ ದೈತ್ಯ ಮರಕ್ಕೆ ಲಾರಿ ಸಿಲುಕಿಕೊಂಡ

ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ- ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಶಸ್ತಿ ಪ್ರಧಾನ ಸಮಾರಂಭ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ವತಿಯಿಂದ ತೃತೀಯ ಚರಣ (ಕಬ್) ಸುವರ್ಣ ಗರಿ (ಬುಲ್ ಬುಲ್) ತೃತೀಯ ಸೋಪಾನ (ಸ್ಕೌಟ್ಸ್-ಗೈಡ್ಸ್) ಹಾಗೂ ನಿಪುಣ್(ರೋವರ್ಸ್-ರೇಂಜರ್ಸ್) ಪ್ರಶಸ್ತಿ ಪ್ರಧಾನ ಸಮಾರಂಭ ಸೆಪ್ಟೆಂಬರ್ 17ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಬಲ್ಮಠ ವೃತ್ತದಲ್ಲಿರುವ ಕಲೆಕ್ಟರ್ಸ್ ಗೇಟ್ ನ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಿಗಧಿಯಾಗಿತ್ತು. ಕಾರಣಾಂತರಗಳಿಂದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಾರ್ಯದರ್ಶಿ ಪ್ರಕಟಣೆಯಲ್ಲಿ

ಪ್ರಶಸ್ತಿ ಪ್ರಧಾನ ಸಮಾರಂಭ ಮುಂದೂಡಿಕೆ Read More »

ಕರಾವಳಿ

ಸೆ. 17ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಇವರ ಸಹಯೋಗದಲ್ಲಿ ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.

ಸೆ. 17ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ Read More »

ಕರಾವಳಿ

ಸಂವಿಧಾನವನ್ನು ಭಾರತದ ಪ್ರಜೆಗಳಾದ ನಾವು ಗೌರವಿಸುವುದು ನಮ್ಮ ಕರ್ತವ್ಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ನಮ್ಮ ದೇಶದ ಸಂವಿಧಾನವನ್ನು ಪ್ರತಿಯೊಬ್ಬ ನಾಗರಿಕರು ಗೌರವಿಸಿ ಅದರ ಆಶಯದಂತೆ ನಡೆದುಕೊಂಡಾಗ ಮಾತ್ರ ಸದೃಢ ದೇಶ ನರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದರು. ಅವರು ಶುಕ್ರವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆದ ಸಂವಿಧಾನದ ಪೀಠಿಕೆಯ ಓದು ಕರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ

ಸಂವಿಧಾನವನ್ನು ಭಾರತದ ಪ್ರಜೆಗಳಾದ ನಾವು ಗೌರವಿಸುವುದು ನಮ್ಮ ಕರ್ತವ್ಯ- ಜಿಲ್ಲಾಧಿಕಾರಿ Read More »

ಕರಾವಳಿ

ಸೆ. 17ರಂದು ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವರಾದ ಪುರ್ಷೊತ್ತಮ್ ರೂಪಾಲ ಅವರು ಸೆ.17ರ ಭಾನುವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ:- ಸೆ.16ರ ಶನಿವಾರ ರಾತ್ರಿ 8.50ಕ್ಕೆ ಮಂಗಳೂರಿಗೆ ಆಗಮಿಸುವರು. ಸೆ.17ರಂದು ಬೆಳಗ್ಗೆ 9.55ಕ್ಕೆ ನಗರದ ಟಿ.ಎಂ.ಎ.ಪೈ ಕಾನ್ವೆನ್ಷನ್ ಸೆಂಟರ್ ನಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4. 35ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 17ರಂದು ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವರ ಪ್ರವಾಸ Read More »

ಕರಾವಳಿ

ಪ.ಜಾ, ಪ.ಪಂ. ಅಭ್ಯರ್ಥಿಗಳಿಂದ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮಾರ್ಗಸೂಚಿಯಂತೆ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ಅರ್ಹ ಅಭ್ಯರ್ಥಿಗಳು ಸಿಸ್ಕೋ ಸರ್ಟಿಫೈಡ್ ನೆಟ್ವರ್ಕ್ ಅಸೋಸಿಯೇಟ್ (ಸಿ,ಸಿ,ಎನ್,ಎ) ಸಿಸ್ಕೋ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜಿರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಈಆರ್‍ಪಿ/ ಪ್ರೈಮ್ ಕೋರ್ಸುಗಳಲ್ಲಿ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಗರದ ಕದ್ರಿಹಿಲ್ಸ್‍ನಲ್ಲಿರುವ,

ಪ.ಜಾ, ಪ.ಪಂ. ಅಭ್ಯರ್ಥಿಗಳಿಂದ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top