ಪ.ಜಾ, ಪ.ಪಂ. ವಿದ್ಯಾರ್ಥಿಗಳಿಂದ ವಸತಿನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅಕ್ಟೋಬರ್ 11ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://shp.karnataka.gov.inಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿ ನಿಲಯಗಳಲ್ಲಿ […]

ಪ.ಜಾ, ಪ.ಪಂ. ವಿದ್ಯಾರ್ಥಿಗಳಿಂದ ವಸತಿನಿಲಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಲ್ಪಸಂಖ್ಯಾತ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಒಳಪಡುವ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೆ.16ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://dom.karnataka.gov.in ವೆಬ್ ಸೈಟ್ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನ Read More »

ಕರಾವಳಿ

ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ- 2017ರ ಅಡಿಯಲ್ಲಿ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಮತ್ತು ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಕಾರ್ಯಗಾರ ಶನಿವಾರ ಬೆಳಿಗ್ಗೆ 9.30ಕ್ಕೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ

ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಕಾರ್ಯಗಾರ Read More »

ಕರಾವಳಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ -2023

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಇವರ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ 2023ನ್ನು ಇಂದು ಮಧ್ಯಾಹ್ನ 2.30ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ -2023 Read More »

ಕರಾವಳಿ

ನಾಳೆ(ಸೆ. 16) ಸಂವಾದ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪ್ರತಿ ತಿಂಗಳ 3ನೇ ಶನಿವಾರದಂದು ನಡೆಸಲಾಗುವುದು. ಆದ್ದರಿಂದ ಸಪ್ಟೆಂಬರ್ ತಿಂಗಳ ಸಂವಾದ ಕಾರ್ಯಕ್ರಮವು ಸೆ. 16ರ ಶನಿವಾರ ಬೆಳಿಗ್ಗೆ 10.30ರಿಂದ 1.30ರ ವರೆಗೆ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ(ಸೆ. 16) ಸಂವಾದ ಕಾರ್ಯಕ್ರಮ Read More »

ಕರಾವಳಿ

ಮಹಿಳೆಗೆ ಹಲ್ಲೆಗೈದು ಸರ ಅಪಹರಣ

(ನ್ಯೂಸ್ ಕಡಬ) newskadaba.com ಸಾಗರ, ಸೆ. 15. ವಿಳಾಸ ಕೇಳುವ ನೆಪದಲ್ಲಿ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಹಿಳೆಗೆ ಹಲ್ಲೆ ಮಾಡಿ ಮಾಂಗಲ್ಯ ಸರ ಅಪಹರಿಸಿಕೊಂಡು ಪರಾರಿಯಾಗಿರುವ ಘಟನೆ ವಿನೋಬ ನಗರದಲ್ಲಿ ಶುಕ್ರವಾರದಂದು ನಡೆದಿದೆ. ಸಂತ್ರಸ್ತ ಮಹಿಳೆ ವಿಜಯಮ್ಮ ಎಂಬವರು ಅಂಗಡಿಯಿಂದ ಹಿಂದುರುಗುತ್ತಿದ್ದ ಸಂದರ್ಭ ನಂಬರ್ ಪ್ಲೇಟ್ ಇಲ್ಲದ ಬೈಕಿನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಮಹಿಳೆಯ ಪ್ರಕಾರ ಬೈಕಿನಿಂದ ಇಳಿದು ಬಂದ ಒಬ್ಬಾತ ಮುಖಕ್ಕೆ ಹೊಡೆದು ಮಾಂಗಲ್ಯ ಸರ ಎಳೆದಿದ್ದಾನೆ. ಆದರೆ ನಾನು ಮಾಂಗಲ್ಯ

ಮಹಿಳೆಗೆ ಹಲ್ಲೆಗೈದು ಸರ ಅಪಹರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರ ನೇಮಕ- ಸಿಎಂ ಸ್ಟಾಲಿನ್ ಘೋಷಣೆ

(ನ್ಯೂಸ್ ಕಡಬ) newskadaba.com  ಚೆನ್ನೈ, ಸೆ. 15. ದ್ರಾವಿಡ ಮಾದರಿಯ ಆಡಳಿತದ ನೀತಿಯಂತೆ, ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮಹಿಳೆಯರು ದೇವಾಲಯದಲ್ಲಿ ಆರ್ಚಕರಾಗಿ ಕಾರ್ಯನಿರ್ವಹಿಸಲಿದ್ದಾರೆಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ. ಮಹಿಳೆಯರು ಪೈಲಟ್ ಗಳು ಹಾಗೂ ಬಾಹ್ಯಾಕಾಶಯಾತ್ರಿಗಳಾಗಿ ಸಾಧನೆ ಮಾಡಿರುವ ಹೊರತಾಗಿಯೂ ಅವರನ್ನು ಅಪವಿತ್ರವೆಂದು ಪರಿಗಣಿಸಿ ದೇವಾಲಯಲ್ಲಿ ಪೌರೋಹಿತ್ಯದಂತಹ ಪವಿತ್ರವಾದ ಪಾತ್ರಗಳನ್ನು ನಿರ್ವಹಿಸುವುದರಿಂದ ದೂರವಿಡಲಾಗಿದೆ. ಸ್ತ್ರೀದೇವತೆಗಳ ದೇವಾಲಯದಲ್ಲೂ ಅವರನ್ನು ದೂರವಿಡಲಾಗಿದೆ. ಆದರೆ ಕೊನೆಗೂ ಇಲ್ಲಿ ಬದಲಾವಣೆಯಾಗಿದೆ ಎಂದು ಸ್ಟಾಲಿನ್ ಅವರು ಸಾಮಾಜಿಕ ಜಾಲತಾಣ ‘x’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರ ನೇಮಕ- ಸಿಎಂ ಸ್ಟಾಲಿನ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಕೆಲ ತಿಂಗಳಿಂದ ಹುದ್ದೆಯ ನಿರೀಕ್ಷೆಯಲ್ಲಿದ್ದ ಡಿ. ರೂಪಾಗೆ ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿ ಹುದ್ದೆಗೆ ನೇಮಿಸಿ ಸರಕಾರ ಆದೇಶಿಸಿದೆ. ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗ (ಸಂಚಾರ) ಡಿಸಿಪಿಯಾಗಿ ನೇಮಿಸಿದೆ. ಶಿವಪ್ರಕಾಶ್ ದೇವರಾಜ್ ರವರಿಗೆ ದಕ್ಷಿಣ ವಿಭಾಗ (ಸಂಚಾರ) ಹುದ್ದೆ ನೀಡಿ ಆದೇಶಿಸಿದೆ.

ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ Read More »

ಕರ್ನಾಟಕ

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಜನನ ಸರ್ಟಿಫಿಕೇಟ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 15. ಶಿಕ್ಷಣ ಸಂಸ್ಥೆಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು, ಮತದಾರರ ಪಟ್ಟಿ ತಿದ್ದುಪಡಿ, ಆಧಾರ್ ಸಂಖ್ಯೆ, ಮದುವೆ ನೋಂದಣಿ ಹಾಗೂ ಸರ್ಕಾರಿ ಉದ್ಯೋಗ ನೇಮಕಾತಿ ಮೊದಲಾದ ಸೇವೆಗಳನ್ನು ಪಡೆಯಲು ಅಕ್ಟೋಬರ್ 1ರಿಂದ, ಜನನ ಪ್ರಮಾಣಪತ್ರ ಕಡ್ಡಾಯ ದಾಖಲೆಯಾಗಿರುತ್ತದೆ ಎಂದು ಜನನ ಮತ್ತು ಮರಣಗಳ ನೋಂದಣಿ ಕಾಯಿದೆ 2023ರ ಅನುಷ್ಠಾನವನ್ನು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ. ಜನನ ಪ್ರಮಾಣಪತ್ರ ಪಡೆಯುವುದರಿಂದ ಜನನ ಮತ್ತು ಮರಣಗಳ ಡೇಟಾ ಬೇಸ್ ರಚನೆಗೆ ಸಹಾಯವಾಗುತ್ತದೆ ಮತ್ತು

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಜನನ ಸರ್ಟಿಫಿಕೇಟ್ ಕಡ್ಡಾಯ..! Read More »

ಕರ್ನಾಟಕ

ಬಳಕೆದಾರರ ಗಮನಕ್ಕೆ ತಾರದೇ ಗೌಪ್ಯ ಮಾಹಿತಿ ಸಂಗ್ರಹ – ಗೂಗಲ್ ಗೆ 7000 ಕೋಟಿ ರೂ. ದಂಡ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 15. ಬಳಕೆದಾರರಿಗೆ ತಿಳಿಸದೇ ಅವರ ಸ್ಥಳದ ಮಾಹಿತಿಯನ್ನು ಗೌಪ್ಯವಾಗಿ ಸಂಗ್ರಹಿಸುತ್ತಿರುವ ಆರೋಪದ ಹಿನ್ನೆಲೆ ಇದೀಗ ಗೂಗಲ್‌ ಸಂಸ್ಥೆಯು 7000 ಕೋಟಿ ರೂ. ದಂಡ ಪಾವತಿಸಬೇಕಾಗಿದೆ ಎಂದು ವರದಿಯೊಂದು ತಿಳಿಸಿದೆ. ಬಳಕೆದಾರರು ಲೊಕೇಷನ್‌ ಹಿಸ್ಟರಿ ಆಫ್‌ ಮಾಡಿದ್ದರೂ ಅವರು ಇರುವ ಸ್ಥಳದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಗೂಗಲ್‌ ತನ್ನ ಬಳಕೆದಾರರ ಗಮನಕ್ಕೆ ತಾರದೇ ಅವರ ವಿವಿಧ ಮಾಹಿತಿಗಳನ್ನು ಗೌಪ್ಯವಾಗಿ ಸಂಗ್ರಹಿಸುತ್ತಿದೆ. ಇದರಿಂದ ಗೂಗಲ್‌ ಬಳಕೆದಾರರಿಗೆ ಅಪಾಯ ಎದುರಾಗಬಹುದು. ಖಾಸಗಿತನಕ್ಕೆ ಇದು ಧಕ್ಕೆ ಆಗುತ್ತಿದೆ

ಬಳಕೆದಾರರ ಗಮನಕ್ಕೆ ತಾರದೇ ಗೌಪ್ಯ ಮಾಹಿತಿ ಸಂಗ್ರಹ – ಗೂಗಲ್ ಗೆ 7000 ಕೋಟಿ ರೂ. ದಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ
Scroll to Top