ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 15. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯ ಓದು ಕಾರ್ಯಕ್ರಮವು ಸೆ. 15ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಆಚರಿಸಲಾಗುವುದು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ Read More »

ಕರಾವಳಿ

ಋತುಬಂಧ ಜಾಗೃತಿ ಕಾರ್ಯಗಾರ ಹಾಗೂ ಕರಪತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಮಹಿಳೆಯರ ದೇಹದಲ್ಲಿ ಆಗುವ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮವು ಋತುಬಂಧ ಸಮಸ್ಯೆಯಲ್ಲಿಯು ಆಗುತ್ತದೆ ಇದಕ್ಕೆ ಆಶಾ ಕಾರ್ಯಕರ್ತೆಯರು ಮಹಿಳೆಯರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಅಭಿಪ್ರಾಯಪಟ್ಟರು. ಅವರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಹೆಣ್ಣುಮಕ್ಕಳಿಗೆ ಆರೋಗ್ಯ ಜಾಗೃತಿ ಮೂಡಿಸಬೇಕು. ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಹಾಗೂ

ಋತುಬಂಧ ಜಾಗೃತಿ ಕಾರ್ಯಗಾರ ಹಾಗೂ ಕರಪತ್ರ ಬಿಡುಗಡೆ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಸೆ.16ರಿಂದ ಹಮ್ಮಿಕೊಳ್ಳಲಾಗಿದೆ. ಸೆ. 16ರಂದು ಪುತ್ತೂರು ತಾಲೂಕಿನ ಪಾಣಾಜೆ, ಸೆ. 20ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆ. 26ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು

ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ Read More »

ಕರಾವಳಿ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಬಯಸುವ  ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅಕ್ಟೋಬರ್ 11ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://shp.karnataka.gov.in/ಮೂಲಕ ಅರ್ಜಿ ಸಲ್ಲಿಸಬಹುದು. ತಾಲೂಕುವಾರು

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಸೆ. 21ರಂದು ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಕಚೇರಿ ಹಾಗೂ ಪಂಜಿಮೊಗರಿನ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಎ ಮತ್ತು ಬಿ ವಲಯಗಳ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟವು ಸೆ. 21ರ ಗುರುವಾರದಂದು ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ

ಸೆ. 21ರಂದು ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣೇಶೋತ್ಸವ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದಯುತವಾಗಿ ಮತ್ತು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಂಘಟಕರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರದಂದು ಗಣೇಶೋತ್ಸವ ಸಂದರ್ಭ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಧಿಕಾರಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ

ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಸೆಪ್ಟೆಂಬರ್- 16: “ವಿಶ್ವ ಓಜೋನ್ ದಿನ” ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 16. ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ್ಯಾಸವೆಂದರೆ ಮರುದಿನದಿಂದಲೇ ‘ಓಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುವುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‍ ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ

ಸೆಪ್ಟೆಂಬರ್- 16: “ವಿಶ್ವ ಓಜೋನ್ ದಿನ” ಡಾ. ಮುರಲೀ ಮೋಹನ ಚೂಂತಾರು Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಜಂಟಿಯಾಗಿ ವಿಶ್ವ ಹಿಂದಿ ದಿವಸ್ ಅನ್ನು ಗುರುವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಿಂದಿ ದಿವಸ್ ಅಂಗವಾಗಿ ಹಿಂದಿ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಬಿ ವಿ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಭಾಷಣ, ಹಿಂದಿ ಗೀತೆಗಳು ಹಾಗೂ ನೃತ್ಯಗಳು ಮೂಡಿಬಂತು. ವೇದಿಕೆಯಲ್ಲಿ ಪ್ರೌಢವಿಭಾಗದ ಮುಖ್ಯಗುರುಗಳಾದ ಶ್ರೀಮತಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಕರಾವಳಿ

ದೇವಾಲಯದ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ನಿಷೇಧಕ್ಕೆ ಸರ್ಕಾರ ಚಿಂತನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳ ಸುತ್ತಮುತ್ತ ಬೀಡಿ, ಸಿಗರೇಟ್, ಗುಟ್ಕಾ ಹಾಗೂ ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾದ ಹಿನ್ನೆಲೆ ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು

ದೇವಾಲಯದ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ನಿಷೇಧಕ್ಕೆ ಸರ್ಕಾರ ಚಿಂತನೆ Read More »

ಕರ್ನಾಟಕ

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ- 20 ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮುಜಾಫರ್‌ಪುರ, ಸೆ. 14. 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರದಂದು ಸಂಭವಿಸಿದೆ. ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಮಕ್ಕಳ ಶೋಧ ಕಾರ್ಯ ನಡೆಯುತ್ತಿದ್ದು, ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎನ್ನಲಾಗಿದೆ.

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ- 20 ಮಂದಿಯ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top