ಹಿಜಾಬ್ ಸರಿಯಾಗಿ ಧರಿಸದಿದ್ದಲ್ಲಿ 10 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಇರಾನ್​, ಸೆ. 14. ಹೆಣ್ಣುಮಕ್ಕಳು ಹಿಜಾಬ್​ ಸರಿಯಾಗಿ ಧರಿಸದಿದ್ದರೆ ಅವರಿಗೆ 60 ಛಡಿ ಏಟು ಹಾಗೂ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಲಿಂಗ ಭೇದ ಮಸೂದೆಯನ್ನು ಜಾರಿಗೆ ತರಲು ಇರಾನ್ ಸರಕಾರ ಮುಂದಾಗಿದೆ. ಇರಾನ್ ​ನಲ್ಲಿ ಹೆಣ್ಣುಮಕ್ಕಳು ಸಾರ್ವಜನಿಕವಾಗಿ ಕಡ್ಡಾಯವಾಗಿ ಹಿಜಾಬ್ ಧರಿಸಲೇಬೇಕು, ಇಲ್ಲದಿದ್ದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ, ಇದು ಕೊಲೆ ಮತ್ತು ಮಾದಕವಸ್ತು ಕಳ್ಳಸಾಗಣೆಯಷ್ಟೇ ಗಂಭೀರ ಅಪರಾಧ ಎಂದು ಪರಿಗಣಿಸಲಾಗಿದೆ.

ಹಿಜಾಬ್ ಸರಿಯಾಗಿ ಧರಿಸದಿದ್ದಲ್ಲಿ 10 ವರ್ಷ ಜೈಲು ಶಿಕ್ಷೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14. ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಒಡಿಶಾ ಮೂಲದ  ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ. ಇವರಿಬ್ಬರು ಮನೆಯೊಂದಕ್ಕೆ ತಂದ ಗ್ರಾನೈಟ್ ನ್ನು ಲಾರಿಯಿಂದ ಖಾಲಿ ಮಾಡುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ತೆರಿಗೆ ವಂಚನೆ, ಸೋರಿಕೆ ಹಾಗೂ ತೆರಿಗೆ ಕಳ್ಳತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ‌ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತೆರಿಗೆ ಸಂಗ್ರಹದ ಪ್ರಗತಿ ಹೆಚ್ಚಿಸಿ ಎಂದು ಹೇಳಿದ್ದಾರೆ.

ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ Read More »

ಕರ್ನಾಟಕ

ಕಾರುಗಳಲ್ಲಿ 6 ಏರ್ ಬ್ಯಾಗ್ ಕಡ್ಡಾಯವಲ್ಲ – ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಇನ್ನುಮುಂದೆ ಕಾರುಗಳಲ್ಲಿ ಕಡ್ಡಾಯವಾಗಿ 6 ಏರ್‌ ಬ್ಯಾಗ್‌ ಇರಲೇಬೇಕೆಂದು ಕಂಪೆನಿಗಳಿಗೆ ನಿಯಮ ಹೇರುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಳೆದ ವರ್ಷ ಕೇಂದ್ರ ಸರಕಾರ ಹಾಲಿ ವರ್ಷದ ಅಕ್ಟೋಬರ್‌ ಒಳಗಾಗಿ ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳು ಇರಬೇಕು ಎಂದು ಸೂಚಿಸಿತ್ತು. ಆದರೆ ಇನ್ನುಮುಂದೆ ಕಾರುಗಳಲ್ಲಿ ಕಡ್ಡಾಯವಾಗಿ 6 ಏರ್‌ ಬ್ಯಾಗ್‌ ಇರಲೇಬೇಕು ಎಂಬ ಬಗ್ಗೆ ಕಂಪೆನಿಗಳಿಗೆ ನಿಯಮ ಹೇರುವುದಿಲ್ಲ ಎಂದರು.

ಕಾರುಗಳಲ್ಲಿ 6 ಏರ್ ಬ್ಯಾಗ್ ಕಡ್ಡಾಯವಲ್ಲ – ಸಚಿವ ನಿತಿನ್ ಗಡ್ಕರಿ Read More »

ರಾಷ್ಟ್ರೀಯ ನ್ಯೂಸ್

ಚೈತ್ರಾಗೆ ರಕ್ಷಣೆ ನೀಡಿರುವುದು ಸುಳ್ಳು ಸುದ್ದಿ- ಸುರಯ್ಯ ಅಂಜುಂ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14. ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾಳಿಗೆ ನಾನು ಯಾವುದೇ ಆಶ್ರಯವಾಗಲಿ, ರಕ್ಷಣೆಯಾಗಲಿ ನೀಡಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿವಾಹಿಗಳಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳಿಂದ ನನಗೆ ಮಾನಸಿಕ ಹಿಂಸೆಯಾಗುತ್ತಿದೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಅಂಜುಂ ಅವರು ಸ್ಪಷ್ಟಪಡಿಸಿದ್ದಾರೆ.  

ಚೈತ್ರಾಗೆ ರಕ್ಷಣೆ ನೀಡಿರುವುದು ಸುಳ್ಳು ಸುದ್ದಿ- ಸುರಯ್ಯ ಅಂಜುಂ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಸೆಪ್ಟೆಂಬರ್ 19ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ

ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ Read More »

ಕರಾವಳಿ

ಸುಳ್ಯ ವಿಧಾನಸಭಾ ಕ್ಷೇತ್ರ ; ಅಕ್ರಮ- ಸಕ್ರಮ ಸಮಿತಿಗೆ ಬಿಜೆಪಿ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 13. ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇರುವಾಗ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ- ಸಕ್ರಮ ಸಮಿತಿ ಸದಸ್ಯರು ಬಿಜೆಪಿಗರಾಗಿರುವುದು ವಿಶೇಷ. ಸರಕಾರದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷರಾಗಿ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಅರಂತೋಡಿನ ಬಿಜೆಪಿ ನಾಯಕಿ

ಸುಳ್ಯ ವಿಧಾನಸಭಾ ಕ್ಷೇತ್ರ ; ಅಕ್ರಮ- ಸಕ್ರಮ ಸಮಿತಿಗೆ ಬಿಜೆಪಿ ಸದಸ್ಯರ ನೇಮಕ Read More »

ಕರಾವಳಿ

ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಇಲ್ಲಿನ ಗೃಹರಕ್ಷಕ ದಳದ ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು.   ಈ ಕಾರ್ಯಕ್ರಮದಲ್ಲಿ ಶ್ರೀ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗೃಹರಕ್ಷಕರು ಒಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ, ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ

ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ Read More »

ಕರಾವಳಿ

ಸೆ. 23ರಂದು ಹಿರಿಯ ನಾಗರಿಕರಿಗೆ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲಾಮಟ್ಟದಲ್ಲಿ ಹಿರಿಯ ನಾಗರಿಕ ಇಲಾಖೆಯಿಂದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ. 23ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಎಜುಕೇಶನ್ ಸೊಸೈಟಿ ಕೆಸೆಸ್ ಕಾಂಪೌಂಡ್ ಬಲ್ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಗಳು ಇಂತಿವೆ: 60ರಿಂದ 69 ವರ್ಷ ವಯೋಮಿತಿಯ ಪುರುಷರಿಗೆ 200 ಮೀ. ನಡಿಗೆ ಮತ್ತು ರಿಂಗ್ ಬಗೆಟ್‍ನಲ್ಲಿ ಎಸೆಯುವುದು ಮತ್ತು ಮ್ಯೂಸಿಕಲ್ ಚೇರ್. 70ರಿಂದ 79 ವರ್ಷ ವಯೋಮಿತಿಯವರಿಗೆ 100

ಸೆ. 23ರಂದು ಹಿರಿಯ ನಾಗರಿಕರಿಗೆ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸರ್ಕಾರಿ ಹಾಗೂ ಮ್ಯಾನೇಜ್‍ ಮೆಂಟ್ ಕೋಟಾದ ಕೋರ್ಸ್‍ಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಪ್ರೊಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಅಡ್ವಾನ್ಸ್‍ಡ್ ಸಿ.ಎನ್.ಸಿ ಮ್ಯಾಚಿಂಗ್ ಕೋರ್ಸ್ ಸೇರಲು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹರು ಕದ್ರಿಯಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಅದೇ ದಿನದಂದು

ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ
Scroll to Top