ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.30. ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ‌ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು ಎಂದು ವರದಿಯಾಗಿದೆ. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11, ಮೈ ಸರ್ಕಲ್ ಮುಂತಾದ ಆ್ಯಪ್ […]

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ Read More »

ಕರ್ನಾಟಕ

15ರ ಬಾಲಕನಿಗೆ ಸರ್ಪಕಾಟ – ಎರಡು ತಿಂಗಳ ಅವಧಿಯಲ್ಲಿ 9 ಬಾರಿ ಕಚ್ಚಿದ ನಾಗಪ್ಪ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 30. ಹಾವಿನ ದ್ವೇಷ ಹನ್ನೆರಡು ವರುಷ ಅನ್ನೋ ಮಾತು. ಅದರ ಪ್ರಕಾರ ನಾಗರಹಾವು ತನ್ನ ಸೇಡು ತೀರೋವರೆಗೂ ಬಿಡೋದಿಲ್ಲ ಅಂತಾರೆ. ಇದೇ ರೀತಿಯ ಘಟನೆಯೊಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಹಲಕರ್ಟಿ ಗ್ರಾಮದ ವಿಜಯ್‌ ಕುಮಾರ್ ಹಾಗೂ ಉಷಾ ದಂಪತಿಯ ಪುತ್ರ 15 ವರ್ಷದ ಪ್ರಜ್ವಲ್‌ 9ನೇ ತರಗತಿಯಲ್ಲಿ ಓದುತ್ತಿದ್ದು, ಈತನಿಗೆ 2 ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಕಚ್ಚಿದೆ. ಹಾವಿನ ಕಾಟದಿಂದ ಬೇಸತ್ತಿರುವ

15ರ ಬಾಲಕನಿಗೆ ಸರ್ಪಕಾಟ – ಎರಡು ತಿಂಗಳ ಅವಧಿಯಲ್ಲಿ 9 ಬಾರಿ ಕಚ್ಚಿದ ನಾಗಪ್ಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಆ. 30. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಹಮ್ಮದ್‌ ಕುಂಜ್ಞಾ (78) ಎಂದು ಗುರುತಿಸಲಾಗಿದೆ. ಅಸ್ತಮಾ ಮತ್ತು ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೊಸಾಡು ಗ್ರಾಮದ ಮೊವಾಡಿ ಗಾಣದಮಕ್ಕಿಯಲ್ಲಿರುವ ಬಂಧುಗಳ ಮನೆಗೆ ಬಂದಿದ್ದರು. ಸಮೀಪದ ಗೇರು ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಾಗಿದೆ.

ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಆ. 30. ಶ್ರೀ ನಾರಾಯಣ ಗುರು ಮಂದಿರದ ಕಿಟಿಕಿಯ ಮರದ ಮೂರು ದಳಿಗಳನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಮಂದಿರದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಸುಮಾರು 15,000 ರೂ. ನಗದನ್ನು ಕಳವುಗೈದಿರುವ ಘಟನೆ ಮುದರಂಗಡಿ ಎಂಬಲ್ಲಿ ನಡೆದಿದೆ. ಮಂಗಳವಾರದಂದು ಬೆಳಗ್ಗೆ ಅರ್ಚಕ ಆನಂದ ಪೂಜಾರಿ ಮಂದಿರಕ್ಕೆ ಬಂದಾಗ ಕಳ್ಳತನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಪಡುಬಿದ್ರಿ ಪೊಲೀಸರಿಗೆ ದೂರು ನೀಡಲಾಗಿದೆ.

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಆ. 30. ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಸೆ. 11ರಿಂದ 13ರ ವರೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ‘ಸೌಜನ್ಯಾ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಬಾಲಕೃಷ್ಣ ಡಿ.ಬಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಧರಣಿ ಸತ್ಯಾಗ್ರಹ ಸೆ. 11ರಂದು ಬೆಳಗ್ಗೆ 10ಕ್ಕೆ ಆರಂಭಗೊಂಡು ಮೂರು ದಿನಗಳ ಕಾಲ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಬಳಿಕ ಪ್ರಕರಣದ ಮರುತನಿಖೆ ನಡೆಸುವಂತೆ ಜಿಲ್ಲಾಧಿಕಾರಿ

ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಆ. 30. ಗಂಧದ ಮರ ಕಳ್ಳತನಕ್ಕೆಂದು ಬಂದಿದ್ದವರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಮತ್ತೋರ್ವ ಪರಾರಿಯಾಗಿರುವ ಕುರಿತು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಎಂಬಲ್ಲಿ ನಡೆದಿದೆ. ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಎಂಬವರು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಇಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿದ್ದ ಹಿನ್ನೆಲೆ ಇದನ್ನು ತಡೆಯಲು ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಕಳ್ಳರು ರಾತ್ರಿ

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಆಸ್ತಿ ವಿಚಾರವಾಗಿ ಸಹೋದರನೋರ್ವ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಘಟನೆ ಜಿಲ್ಲೆಯ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಶಿವಲಿಂಗೇಗೌಡ ಹಾಗೂ ಪತ್ನಿ ಭಾರತಿ ಎಂದು ಗುರುತಿಸಲಾಗಿದೆ. ಆರೋಪಿ ಸಹೋದರ ಹನುಮಂತೇಗೌಡ ಎಂಬಾತ ಕೊಲೆ ಕೃತ್ಯವೆಸಗಿದ್ದಾನೆ. ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಶಿವಲಿಂಗೇಗೌಡ ಮತ್ತು ಭಾರತಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿ ಹನುಮಂತೇಗೌಡ, ಅಣ್ಣ ಅತ್ತಿಗೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರುಗಳು ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲೂ ಪ್ರಚಾರಕ್ಕೆ ವಿಶೇಷ ವ್ಯವಸ್ಥೆ ಮಾಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ Read More »

ಕರ್ನಾಟಕ

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 30. ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಗಾಯಗೊಂಡ ಆಟೋ ಚಾಲಕನನ್ನು ಮಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಸಾದಿಕ್ ತನ್ನ ಆಟೋ ರಿಕ್ಷಾದಲ್ಲಿ ಸುರಕ್ಷಾ ಅಧಿಕಾರಿಯೋರ್ವರನ್ನು ಗೂಡಿನಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾಣೆಮಂಗಳೂರು ಕಡೆಯಿಂದ ಬಂದ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ, ರಿಕ್ಷಾ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಯಾಣಿಕರೊಬ್ಬರು

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರ ಸಾಗಾಟ – ಲಕ್ಷಾಂತರ ರೂ. ಮೌಲ್ಯದ ಮರ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 30. ಅಕ್ರಮವಾಗಿ ಮರ ಸಾಗಾಟದ ವೇಳೆ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಅರಣ್ಯ ಇಲಾಖಾಧಿಕಾರಿಗಳು ಆರೋಪಿ ಸಹಿತ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಬಂಟ್ವಾಳ ಮೂಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಬಿಸಿ ರೋಡ್ ಜಂಕ್ಷನ್ ಬಳಿ ನಡೆದಿದೆ. ವಾಹನ ಮತ್ತು ಅಮಾನತು ಪಡಿಸಿದ ಸೊತ್ತಿನ ಮೌಲ್ಯ ಒಟ್ಟು 7 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣದಲ್ಲಿ ಬಂಟ್ವಾಳ ವಲಯ ಅರಣ್ಯ ಅಧಿಕಾರಿ

ಅಕ್ರಮ ಮರ ಸಾಗಾಟ – ಲಕ್ಷಾಂತರ ರೂ. ಮೌಲ್ಯದ ಮರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top