ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಜಿಮ್ ಸ್ಥಾಪನೆಯ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು 2023ರ ಸೆ. 04 ರೊಳಗೆ ಅರ್ಜಿ ಭರ್ತಿ ಮಾಡಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 0824-2451264 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ […]

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಡಿ.ಎಡ್, ಬಿ.ಎಡ್ ನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಡಿ.ಎಡ್ ಹಾಗೂ ಬಿ.ಎಡ್  ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) 25,000 ರೂ.ಗಳ ಪ್ರೋತ್ಸಾಹಧನ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು  ಆನ್‍ಲೈನ್ ಪೋರ್ಟಲ್ https://sevasindhuservices.karnataka.gov.in/ ನ  ಮೂಲಕ ಸೆ. 21 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಒಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ ಇಲ್ಲಿ

ಡಿ.ಎಡ್, ಬಿ.ಎಡ್ ನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮಕ್ಕಳ ಸುರಕ್ಷಾ ನೀತಿ ಕಡ್ಡಾಯ ಮಾಡಲು ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರು ಸೋಮವಾರದಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಮಾಡಲು ಅರಿವು ಮೂಡಿಸುವ ಹಾಗೂ 18 ವರ್ಷದೊಳಗಿನ ಡ್ರಗ್ಸ್ ವ್ಯಸನಕ್ಕೆ ಒಳಗಾದ ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಸೂಚನೆಗಳನ್ನು ನೀಡಿದರು. ಪೋಕ್ಸೋ ಪ್ರಕರಣಗಳು,

ಮಕ್ಕಳ ಸುರಕ್ಷಾ ನೀತಿ ಕಡ್ಡಾಯ ಮಾಡಲು ಸಲಹೆ Read More »

ಕರಾವಳಿ

ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ನಿವೇಶನ ಹಾಗೂ ಕೃಷಿಗಾಗಿ ಅರ್ಹರಿಗೆ ಡಿಸಿ ಮನ್ನಾ ಜಮೀನು ನೀಡಲು ಜಿಲ್ಲೆಯ ಬೆಳ್ತಂಗಡಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನು ಎಂದು ಘೋಷಿಸಲಾಗಿರುವ ಸ್ಥಳಗಳ ಪಟ್ಟಿಯನ್ನು ಒದಗಿಸುವಂತೆ ಸಂಬಂಧಿಸಿದ ತಾಲೂಕುಗಳ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿಸಿ ಮನ್ನಾ ಜಮೀನಿಗೆ ಸಂಬಂಧಿಸಿದಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಡಿಸಿ ಮನ್ನಾ

ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯರನ್ನು ಗಿರಿಜಾ ಮತ್ತು ಸುಲೇಖ ಎಂದು ಗುರುತಿಸಲಾಗಿದೆ. ಮಹಿಳೆಯರಿಬ್ಬರು ಬಡಗನ್ನೂರು ಸಮೀಪದ ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆಯರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಗೋಳಿತೊಟ್ಟು ಮೂಲದ

ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 22. ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗರ ಬೇಕಾಗಿದ್ದ ಆರೋಪಿಯೋರ್ವನನ್ನು ಕಾಫಾ ಕಾಯ್ದೆಯಂತೆ ಕುಂಬಳೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬಂದ್ಯೋಡು ಅಡ್ಕ ಬೈದಳದ ಅಬ್ದುಲ್ ಲತೀಫ್(35) ಎಂದು ಗುರುತಿಸಲಾಗಿದೆ. ಈತನ ಸಹಚರರಾಗಿದ್ದ ಮೀಯಪದವಿನ ರಹೀಮ್ ಮತ್ತು ಲತೀಫ್ ನನ್ನು ಒಂದು ತಿಂಗಳ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಐದು ವರ್ಷದ ಹಿಂದೆ ಉಪ್ಪಳ ಸೋಂಕಾಲ್ ಪುಳಿಕುತ್ತಿಯ ಪೈಂಟಿಂಗ್ ಕಾರ್ಮಿಕ ಅಲ್ತಾಫ್ ನನ್ನು ಉಪ್ಪಳದಿಂದ ಅಪಹರಿಸಿ ಕರ್ನಾಟಕದ

ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ಎಂಡೋ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಆಲಂಕಾರು, ಆ. 22. ದ.ಕ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಮತ್ತು ಆಲಂಕಾರು ಗ್ರಾ.ಪಂ. ಸಹಕಾರದಲ್ಲಿ ಎಂಡೋ ಸಲ್ಫಾನ್ ಸಂತ್ರಸ್ಥರ ಮತ್ತು ವಿಕಲಚೇತನರ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಂಗಳವಾರದಂದು ಆಲಂಕಾರು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು. ಮಂಗಳೂರು ಅತ್ತಾವರ ಕೆ.ಎಂ.ಸಿ.ಆಸ್ಪತ್ರೆಯ ತಜ್ಞ ವೈದ್ಯರು ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಆಲಂಕಾರು, ಪೆರಾಬೆ, ಕುಂತೂರು ಗ್ರಾ.ಪಂ.ವ್ಯಾಪ್ತಿಯ ಎಂಡೋ ಪೀಡಿತರು

ಆಲಂಕಾರು: ಎಂಡೋ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಚಂದ್ರಯಾನ-3 ಲ್ಯಾಂಡಿಂಗ್ ವೀಕ್ಷಣೆಗೆ ಶಾಲಾ ಅವಧಿ ವಿಸ್ತರಣೆ- ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಆ. 22. ಭಾರತೀಯ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ನಾಳೆ ಚಂದ್ರನ ಅಂಗಳದಲ್ಲಿ ಚಂದ್ರಯಾನ 3 ರ ಲ್ಯಾಂಡರ್ ಕಾಲಿಡಲಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪನೆಗೆ ನಾಳೆ ಸಂಜೆ ಇಡೀ ದೇಶವೇ ಸಾಕ್ಷಿಯಾಗಲಿದೆ. ಈ ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಉತ್ತರಪ್ರದೇಶದ ಎಲ್ಲಾ ಶಾಲೆಗಳನ್ನು ಆಗಸ್ಟ್ 23 ರಂದು ಸಂಜೆ 5:15 ರಿಂದ 6:15 ರವರೆಗೆ ತೆರೆದಿಡಲು ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಬಗ್ಗೆ ಸೂಚನೆ ನೀಡಿರುವ ಶಾಲಾ ಶಿಕ್ಷಣ

ಚಂದ್ರಯಾನ-3 ಲ್ಯಾಂಡಿಂಗ್ ವೀಕ್ಷಣೆಗೆ ಶಾಲಾ ಅವಧಿ ವಿಸ್ತರಣೆ- ಶಿಕ್ಷಣ ಇಲಾಖೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ ದೇಗುಲಕ್ಕೆ 7ಲಕ್ಷ ರೂ. ಮೌಲ್ಯದ ಪುಂಗನೂರು ಹಸುಗಳ ಹಸ್ತಾಂತರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ನಾಗರ ಪಂಚಮಿ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ಷೇತ್ರದ ಭಕ್ತ ಮತ್ತು ಹೈದರಾಬಾದ್‌ನ ಎಎಂಆರ್‌ ಗ್ರೂಪ್‌ನ ಆಡಳಿತ ನಿರ್ದೇಶಕ ಎ.ಮಹೇಶ್‌ ರೆಡ್ಡಿ ಅವರು ಸುಮಾರು 7 ಲಕ್ಷ ರೂ. ಮೌಲ್ಯದ ಪುಂಗನೂರು ತಳಿಯ 4 ಗೋವುಗಳನ್ನು ದಾನವಾಗಿ ನೀಡಿದರು. 3 ಬಿಳಿಬಣ್ಣದ ಹಸುಗಳು ಹಾಗೂ 1 ಕರುವನ್ನು ದೇವಸ್ಥಾನದ ನಾಗಪ್ರತಿಷ್ಠಾ ಮಂಟಪದ ಬಳಿಗೆ ಕರೆತಂದು ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಿ ವೈದಿಕ ವಿಧಿ ವಿಧಾನಗಳೊಂದಿಗೆ ದೇಗುಲಕ್ಕೆ

ಸುಬ್ರಹ್ಮಣ್ಯ ದೇಗುಲಕ್ಕೆ 7ಲಕ್ಷ ರೂ. ಮೌಲ್ಯದ ಪುಂಗನೂರು ಹಸುಗಳ ಹಸ್ತಾಂತರ Read More »

ಕರಾವಳಿ

ಅನಧಿಕೃತ ಬ್ಯಾನರ್ ಅಳವಡಿಕೆ – ಡಿಕೆ ಶಿವಕುಮಾರ್ ಗೆ 50 ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 22. ಇಲ್ಲಿನ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಅನಧಿಕೃತವಾಗಿ ಬ್ಯಾನರ್ ಅಳವಡಿಸಿದ ಹಿನ್ನೆಲೆ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ 50 ಸಾವಿರ ರೂ. ದಂಡ ವಿಧಿಸಿ ಬಿಬಿಎಂಪಿ ಆದೇಶಿಸಿದೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಜನ್ಮ ದಿನಾಚರಣೆಯ ಪ್ರಯುಕ್ತ ಅನುಮತಿ ಪಡೆಯದೇ ಕಾಂಗ್ರೆಸ್ ಬ್ಯಾನರ್ ಅಳವಡಿಸಿತ್ತು. ಹೀಗಾಗಿ ದಂಡ ವಿಧಿಸಿದ ಬಿಬಿಎಂಪಿ ದಂಡವನ್ನು ಪಾಲಿಕೆಯ ಮುಖ್ಯ ಆಯುಕ್ತರ

ಅನಧಿಕೃತ ಬ್ಯಾನರ್ ಅಳವಡಿಕೆ – ಡಿಕೆ ಶಿವಕುಮಾರ್ ಗೆ 50 ಸಾವಿರ ರೂ. ದಂಡ Read More »

ಕರ್ನಾಟಕ
Scroll to Top