ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1210 – News Kadaba

ಪಡಿತರ ಅಕ್ಕಿಯಲ್ಲಿ ಅವ್ಯವಹಾರ – ಸೂಕ್ತ ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಪಡಿತರ ಚೀಟಿದಾರರಿಗೆ ವಿತರಿಸಲು ಆಹಾರ ಇಲಾಖೆಯಿಂದ ನೀಡಲಾಗಿದ್ದ ಅಕ್ಕಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅವ್ಯವಹಾರ ನಡೆದಿರುವ ಕುರಿತು ಬಂಟ್ವಾಳದಿಂದ ವರದಿಯಾಗಿದೆ. ಸುಮಾರು 1 ಕೋಟಿ 32 ಲಕ್ಷದ 36 ಸಾವಿರದ 30 ರೂ ಮೌಲ್ಯದ 3892.95.450 ಕಿಂಟ್ವಾಲ್ ಅಕ್ಕಿಯ ಕೊರತೆ ಕಂಡು ಬಂದಿದ್ದು, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮದ ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ನೀಡಿದ ದೂರಿನಂತೆ ಹಾಂಡ ನಗರ ಠಾಣೆಯಲ್ಲಿ […]

ಪಡಿತರ ಅಕ್ಕಿಯಲ್ಲಿ ಅವ್ಯವಹಾರ – ಸೂಕ್ತ ತನಿಖೆಗೆ ಆಗ್ರಹ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಇಂದು ಕೊನೇ ದಿನಾಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ತಾಲೂಕಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಸೆಪ್ಟೆಂಬರ್ 18ರೊಳಗೆ ಅರ್ಜಿ ಅಹ್ವಾನಿಸಲಾಗಿದೆ. ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತ್ತರ ಪದವಿ ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9008434151 ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಇಂದು ಕೊನೇ ದಿನಾಂಕ Read More »

ಉದ್ಯೋಗ, ಕರಾವಳಿ

ಹ್ಯಾಕರ್ಸ್ ಗಳ ಮೋಸದಾಟಕ್ಕೆ ಬಲಿಯಾದ ಕಡಬದ ಯುವಕ- ಕಂಬಿ ಎಣಿಸುವ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಸ್ವಂತ ದುಡಿಮೆಯ ಮೂಲಕ ಕುಟುಂಬ ನಿರ್ವಹಿಸಬೇಕು. ಅದರ ಮೂಲಕ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊತ್ತಿದ್ದ ಕಡಬ ಮೂಲದ ಯುವಕನೋರ್ವ ವಿದೇಶದಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದನು. ಅದರಂತೆ ಸೌದಿ ಅರೇಬಿಯಾದಲ್ಲಿ ಉತ್ತಮ ಉದ್ಯೋಗ ದೊರೆತು ಕೈತುಂಬಾ ಸಂಪಾದನೆಯೂ ಪಡೆಯುತ್ತಿದ್ದನು. ಆದರೆ, ಇದೀಗ ಹ್ಯಾಕರ್ಸ್ ಗಳ ಮೋಸದಾಟಕ್ಕೆ ಸಿಲುಕಿದ ಆತ ಜೈಲುಕಂಬಿಗಳನ್ನು ಎಣಿಸುವ ಪರಿಸ್ಥಿತಿಗೆ ಬಂದು ತಲುಪಿದ್ದಾನೆ. ಹೌದು, ಈತ ಕಡಬ ತಾಲೂಕಿನ ಐತ್ತೂರು ಗ್ರಾಮದ ಮುಜೂರು ದಿ. ಕೆಂಚಪ್ಪ ಗೌಡ

ಹ್ಯಾಕರ್ಸ್ ಗಳ ಮೋಸದಾಟಕ್ಕೆ ಬಲಿಯಾದ ಕಡಬದ ಯುವಕ- ಕಂಬಿ ಎಣಿಸುವ ಪರಿಸ್ಥಿತಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಡಾನೆ ತುಳಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸಕಲೇಶಪುರ, ಆ. 18. ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಡೂರು ಗ್ರಾಮದಿಂದ ವರದಿಯಾಗಿದೆ. ಮೃತ ಮಹಿಳೆಯನ್ನು ಕೂಲಿ ಕಾರ್ಮಿಕ ಮಹಿಳೆ ಪೂರ್ಣಿಮಾ (40) ಎಂದು ಗುರುತಿಸಲಾಗಿದೆ. ಕಾಡಾನೆಯು ಮಹಿಳೆಯ ಸೊಂಟದ ಭಾಗಕ್ಕೆ ಬಲವಾಗಿ ತುಳಿದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವಿನಿಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ

ಕಾಡಾನೆ ತುಳಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಖಾಸಗಿ ಆಸ್ಪತ್ರೆಯಲ್ಲಿ ವಿಕಲಚೇತನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸುತ್ತಿದ್ದ ಮುಂಬೈ ಮೂಲದ ವ್ಯಕ್ತಿ ಹಾಗೂ ಆತನಿಗೆ ಸಹಕರಿಸಿದ ಮಹಿಳೆಯನ್ನು ಮಹಿಳಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮುಂಬೈನಲ್ಲಿ ನೆಲೆಸಿರುವ ಬಿಹಾರ ಮೂಲದ ಅಬ್ದುಲ್ ಹಲೀಂ (37) ಮತ್ತು ಕುಲಶೇಖರ ನಿವಾಸಿ ಶಮೀನಾ ಬಾನು (22) ಎಂದು ಗುರುತಿಸಲಾಗಿದೆ. ಇವರಿಬ್ಬರನ್ನೂ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಸಂತ್ರಸ್ತೆ ಮಹಿಳೆಯ ಕಿರಿಯ ಸಹೋದರ

ಅಪ್ರಾಪ್ತ ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇಂದು ಶೂನ್ಯ ನೆರಳು ದಿನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 18. ಇಂದಿನ ದಿನವನ್ನು (ಆ.18ರ ಶುಕ್ರವಾರ) ಶೂನ್ಯ ನೆರಳಿನ ದಿನ ಎಂದು ಕರೆಯಲಾಗುತ್ತದೆ. ಈ ಪ್ರಕಾರ ಬೆಳಗ್ಗೆ ಸೂರ್ಯನ ಬೆಳಕು ವ್ಯಕ್ತಿಯ ಮೇಲೆ ಬಿದ್ದಾಗ ಆ ನೆರಳು ಉದ್ದವಾಗಿರುತ್ತದೆ. ಮತ್ತು ಮಧ್ಯಾಹ್ನವಾಗುತ್ತಿದ್ದಂತೆ (ಮಧ್ಯಾಹ್ನ 12.35ಕ್ಕೆ) ನೆರಳು ಶೂನ್ಯವಾಗುತ್ತದೆ. ಪುನಃ ಸಾಯಂಕಾಲ ನೆರಳು ಉದ್ದವಾಗುತ್ತದೆ. ಪ್ರತಿಯೊಬ್ಬರು ಇದನ್ನು ವೀಕ್ಷಿಸಬಹುದು ಇಂಥ ವಿದ್ಯಮಾನ ವರ್ಷದಲ್ಲಿ ಎರಡು ಬಾರಿ ಮಾತ್ರ ಸಂಭವಿಸುತ್ತದೆ (ಮಂಗಳೂರಿನಲ್ಲಿ ಆಗಸ್ಟ್ 18 ಮತ್ತು ಏಪ್ರಿಲ್ 24ರಂದು) ಈ ಶೂನ್ಯ ನೆರಳಿನ ವಿದ್ಯಮಾನವು

ಮಂಗಳೂರು: ಇಂದು ಶೂನ್ಯ ನೆರಳು ದಿನ Read More »

ಕರ್ನಾಟಕ

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.‌ 18. ಸ್ವತಃ ತಂದೆಯೋರ್ವ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಕೃತ್ಯ ಗೋಳಿತ್ತೊಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಗೋಳಿತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದಲ್ಲಿ ಏರುಪೇರಾಗಿರುವುದನ್ನು ಗಮನಿಸಿದ ತಾಯಿ ಮಗಳನ್ನು ಆ. 16ರಂದು ಆಸ್ಪತ್ರೆಗೆ ಕರೆದು ಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಚಂದ್ರಯಾನ- 3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ಜುಲೈ ತಿಂಗಳಲ್ಲಿ ಉಡಾವಣೆಗೊಂಡಿದ್ದ ಚಂದ್ರಯಾನ- 3 ಪ್ರಕ್ರಿಯೆಯಲ್ಲಿ ಇಸ್ರೋ ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಪ್ರಕಟಣೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಇಂದು ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನಲಾಗಿದೆ. ಜುಲೈ 14ರಂದು

ಚಂದ್ರಯಾನ- 3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಲ್ಪೆ, ಆ. 18. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರರೋರ್ವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಮೀನುಗಾರನನ್ನು ಗೋಪಾಲ ಶನಿಯಾರ್‌ ನಾಯ್ಕ (35) ಎಂದು ಗುರುತಿಸಲಾಗಿದೆ. ಇವರು ಆ. 11ರಂದು ಇತರ ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಬೋಟಿನಲ್ಲಿ ತೆರಳಿದ್ದು, ಆ. 13ರಂದು ಮಧ್ಯಾಹ್ನದ ವೇಳೆ ಮೀನುಗಾರಿಕೆ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ತಕ್ಷಣವೇ ಬೋಟಿನಲ್ಲಿದ್ದವರು ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿರಲಿಲ್ಲ. ಈ ಕುರಿತು ಮಲ್ಪೆ

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೇಯಲು ಬಿಟ್ಟಿದ್ದ ದನ ಕರುಗಳ ಕಳವು – ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.17. ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರು ಮತ್ತು ಎರಡು ದನಗಳು ಕಳವಾಗಿದ್ದು, ಮೇಯಲು ಹೋಗಿದ್ದ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ. ಈ ಕುರಿತು ಹುಡುಕಾಟ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು. ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ

ಮೇಯಲು ಬಿಟ್ಟಿದ್ದ ದನ ಕರುಗಳ ಕಳವು – ಪ್ರಕರಣ ದಾಖಲು Read More »

ಕರಾವಳಿ
Scroll to Top