ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1227 – News Kadaba

ನಿಲ್ಲಿಸಿದ್ದ ಲಾರಿಗಳ ಬ್ಯಾಟರಿ ಕಳವು – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 08. ರಸ್ತೆ ಬದಿ ನಿಲುಗಡೆಗೊಳಿಸಿದ್ದ ಲಾರಿ ಸೇರಿದಂತೆ ಹಲವು ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುತ್ತಿದ್ದ ಇಬ್ಬರನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಾಯಮ್ಮರ ಮೂಲೆಯ ಎನ್. ಎ. ಮಿರ್ಷಾದ್ ಅಲಿ ಮತ್ತು ಮುಹಮ್ಮದ್ ಜಶೀರ್ ಟಿ. ಎ. ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ವಿದ್ಯಾನಗರ ಪರಿಸರದಲ್ಲಿ ನಿಲ್ಲಿಸಲಾಗಿದ್ದ ಲಾರಿಗಳಿಂದ ಬ್ಯಾಟರಿ ಕಳವುಗೈದ ಬಗ್ಗೆ ಪೊಲೀಸರಿಗೆ ಬಂದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಂಡದಲ್ಲಿ ಇನ್ನಷ್ಟು […]

ನಿಲ್ಲಿಸಿದ್ದ ಲಾರಿಗಳ ಬ್ಯಾಟರಿ ಕಳವು – ಇಬ್ಬರು ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚಾರಿ ನಿಯಮ ಉಲ್ಲಂಘನೆ – 170 ಮಂದಿಯ ಡಿ ಎಲ್ ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ170 ಮಂದಿಯ ಲೈಸೆನ್ಸ್ನ್ನು ಆರ್.ಟಿಒ ಅಧಿಕಾರಿಗಳು ರದ್ದುಗೊಳಿಸಿರುವ ಕುರಿತು ವರದಿಯಾಗಿದೆ. ವಾಹನ ಸವಾರರು ವಿವಿಧ ರೀತಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ ಚಾಲಕರ ಅನುಜ್ಞಾ ಪತ್ರವನ್ನು ರದ್ದು ಪಡಿಸಲಾಗಿದೆ. 24 ಅಪಘಾತ ಪ್ರಕರಣಗಳು, 12 ಅತಿಯಾದ ವೇಗದ ಪ್ರಕರಣಗಳು, 11 ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ವಿಚಾರ, 95 ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ನಡೆಸಿದ ಪ್ರಕರಣಗಳು, 13 ಸೀಟ್ ಬೆಲ್ಟ್ ಧರಿಸದೇ ಚಾಲನೆ, 7 ರೆಡ್ ಸಿಗ್ನಲ್ ಜಂಪ್, 5 ಚಾಲನೆ ಸಂದರ್ಭ ಮೊಬೈಲ್

ಸಂಚಾರಿ ನಿಯಮ ಉಲ್ಲಂಘನೆ – 170 ಮಂದಿಯ ಡಿ ಎಲ್ ರದ್ದು Read More »

ಕರಾವಳಿ

ಚಾಕೊಲೇಟ್‌ನಲ್ಲಿ ಗಾಂಜಾ ಪತ್ತೆ – ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ಎರಡು ಅಂಗಡಿಗಳಿಂದ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಬಾಂಗ್‌ ಚಾಕೊಲೇಟ್‌ಗಳಲ್ಲಿ ಗಾಂಜಾ ಅಂಶ ಇರುವುದು ದೃಢಪಟ್ಟಿದ್ದು, ಅದನ್ನು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಮನೋಹರ ಶೇಟ್ ಹಾಗೂ ಬೆಚನ್‌ ಸೋನ ಎಂಬವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜು. 19ರಂದು ಕಾಋಯಾಚರಣೆ ನಡೆಸಿದ್ದ ಮಂಗಳೂರು ನಗರದ ಉತ್ತರ ಠಾಣೆಯ ಪೊಲೀಸರು, ನಗರದ ಕಾರ್‌ಸ್ಟ್ರೀಟ್‌ನಲ್ಲಿ ಅಂಗಡಿ ನಡೆಸುತ್ತಿದ್ದ ಮನೋಹರ್‌ ಶೇಟ್‌ ಮಾರಾಟ ಮಾಡುತ್ತಿದ್ದ 48,000 ರೂ. ಮೌಲ್ಯದ ತಲಾ 40 ಬಾಂಗ್‌ ಚಾಕೊಲೆಟ್‌

ಚಾಕೊಲೇಟ್‌ನಲ್ಲಿ ಗಾಂಜಾ ಪತ್ತೆ – ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತನ ವಿರುದ್ದ ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮತ್ತೆ ವಿದೇಶ ಪ್ರವಾಸ ಕೈಗೊಂಡ ಮಾಜಿ ಸಿಎಂ ಹೆಚ್‌ .ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಇತ್ತೀಚೆಗಷ್ಟೇ ಕುಟುಂಬ ಸಮೇತ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ, ಇದೀಗ ಮತ್ತೆ ತನ್ನ ಆಪ್ತರೊಂದಿಗೆ ಸೋಮವಾರದಂದು ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಆಪ್ತರ ಜೊತೆಗೆ ಮಲೇಶಿಯಾದ ಕೌಲಾಲಂಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಕುಮಾರಸ್ವಾಮಿ ಸೇರಿದಂತೆ ಒಟ್ಟು ಐವರು ಸೋಮವಾರ ರಾತ್ರಿ 12 ಗಂಟೆಯ ವಿಮಾನದಲ್ಲಿ ಮಲೇಶಿಯಾದ ಕೌಲಾಲಂಪುರಕ್ಕೆ ತೆರಳಿದ್ದಾರೆ. ಇನ್ನು ಈ ಬಾರಿಯ ವಿದೇಶ ಪ್ರವಾಸಕ್ಕೆ ಕುಮಾರಸ್ವಾಮಿಗೆ ಮಾಜಿ ಸಚಿವ ಸಾರಾ ಮಹೇಶ್,

ಮತ್ತೆ ವಿದೇಶ ಪ್ರವಾಸ ಕೈಗೊಂಡ ಮಾಜಿ ಸಿಎಂ ಹೆಚ್‌ .ಡಿ ಕುಮಾರಸ್ವಾಮಿ Read More »

ಕರ್ನಾಟಕ

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 08. ಪಾದಚಾರಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಳುವಾರು ನಿವಾಸಿ ತೀರ್ಥರಾಮ ಎಂದು ಗುರುತಿಸಲಾಗಿದೆ. ತೀರ್ಥರಾಮ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓಮ್ನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಇಲ್ಲಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ವರ್ಷದ ಅವಧಿಯ 2023-24ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ನೇರ ಪ್ರವೇಶಾತಿ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9880591219, 7975621917 ಕರೆ ಮಾಡಿ ಸಂಪರ್ಕಿಸುವಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಕೇರಳದಿಂದ ಜಾನುವಾರು ಸಾಗಾಟ ನಿಷೇಧಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಕಾಲುಬಾಯಿ ಜ್ವರ ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿರುವುದರಿಂದ ಕೇರಳದಲ್ಲಿ ರೋಗೋದ್ರೇಕ ಹತೋಟಿಗೆ ಬರುವವರೆಗೆ ಕೇರಳ ರಾಜ್ಯದಿಂದ ಜಿಲ್ಲೆಗೆ ಬರುವ ಹಾಗೂ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಜಾನುವಾರುಗಳನ್ನು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.   ಕೇರಳ ರಾಜ್ಯದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗೋದ್ರೇಕವು ಕಂಡುಬಂದಿದ್ದು, ಅದು ವೈರಸ್‍ನಿಂದ ಬಹುಬೇಗ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತದೆ. ಈ ರೋಗ ಜಾನುವಾರುಗಳಿಗೆ ಮರಣಾಂತಿಕವಾಗಿರುವುದರಿಂದ ಕೇರಳ

ಕೇರಳದಿಂದ ಜಾನುವಾರು ಸಾಗಾಟ ನಿಷೇಧಿಸಿ ಆದೇಶ Read More »

ಕರ್ನಾಟಕ

ಆ. 26ರಂದು ಗಡಿನಾಡ ಕನ್ನಡ ಉತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದೇ ಮಾಹೆಯ 26ರಂದು ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮ ತಲಪಾಡಿಯ ವಿಶ್ವಾಸ ಸಭಾಂಗಣದಲ್ಲಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಇದೇ ವೇಳೆ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಹಲವು ಸಂಘಸಂಸ್ಥೆಗಳ ಪದಾಧಿಕಾರಿಗಳು, ಕವಿಗಳು ಸಾಹಿತ್ಯ

ಆ. 26ರಂದು ಗಡಿನಾಡ ಕನ್ನಡ ಉತ್ಸವ Read More »

ಕರಾವಳಿ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಗೆ ಚಾಲನೆ – ಅಗತ್ಯ ಲಸಿಕೆ ಕೊಡಿಸಲು ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಉತ್ತಮ ಆರೋಗ್ಯದಿಂದ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ, ಈ ದಿಸೆಯಲ್ಲಿ ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಇಲಾಖೆಯಿಂದ ನಿಯಮಿತವಾಗಿ ನೀಡಲಾಗುವ ಲಸಿಕೆಗಳನ್ನು ಪೋಷಕರು ತಮ್ಮ ಮಕ್ಕಳಿಗೆ ಕೊಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕರೆ ನೀಡಿದರು. ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸುರತ್ಕಲ್‍ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಗೆ ಚಾಲನೆ – ಅಗತ್ಯ ಲಸಿಕೆ ಕೊಡಿಸಲು ಜಿಲ್ಲಾಧಿಕಾರಿ ಕರೆ Read More »

ಕರಾವಳಿ
Scroll to Top