ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 05. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಮಂಗಳೂರು ಸಂಸ್ಥೆಯಲ್ಲಿ ಡಿಪ್ಲೊಮಾ ಕೋರ್ಸ್‍ ಗಳಿಗೆ  2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ (DTDM), ಡಿಪ್ಲೊ ಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ (DPM) ಮತ್ತು ಡಿಪ್ಲೊಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲನಿರ್ಂಗ್ (AIML) ಕೋರ್ಸ್‍ ಗಳಲ್ಲಿ ಕೆಲವು ಸೀಟುಗಳು ಖಾಲಿ ಇವೆ. ವಿದ್ಯಾರ್ಥಿಗಳು  ಜೂನ್ 4 ರಿಂದ ನೇರವಾಗಿ […]

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ Read More »

ಕರಾವಳಿ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ

(ನ್ಯೂಸ್‌ ಕಡಬ) newskadaba.com,  ಜೂ.05: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ (Driver) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 2 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಕರ್ಷಕ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ವೇತನ ಶ್ರೇಣಿಯ ಪ್ರಕಾರ 34,100 ರಿಂದ 67,600 ರೂ. ವರೆಗೆ ವೇತನ ದೊರೆಯಲಿದೆ.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newsksdaba.com ಜೂ. 06. ಅಂಗಡಿಗಳು,  ಕಾರ್ಖಾನೆಗಳಿಗೆ, ತೋಟಗಳು, ಇತರೆ ಕೃಷಿ ಸೇರಿದಂತೆ ಅಥವಾ ಅಪಾಯಕಾರಿ ಕೆಲಸಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳದಂತೆ ನಿಯಮಿತ ದಾಳಿ ನಡೆಸಿ, ತಪಾಸಣೆಯನ್ನು ಹೆಚ್ಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕ ಪದ್ಧತಿ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮಗಳನ್ನು

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಳೆಗಾಲದಲ್ಲಿ ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newsksdaba.com ಜೂ. 06. ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ ಅಗೆದಿರುವ ರಸ್ತೆಗಳನ್ನು ಕೂಡಲೇ  ಯಥಾ ಸ್ಥಿತಿಗೆ ತಂದು ಮುಗಿಸಬೇಕು. ಮಳೆ ನೀರಿನ ಸರಾಗ ಹರಿವಿಗೆ  ತೊಂದರೆಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಕಠಿಣ

ಮಳೆಗಾಲದಲ್ಲಿ ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕರಾವಳಿ ನಾಯಕನಿಗೆ ಬಿಗ್ ಪೋರ್ಟ್‌ಫೋಲಿಯೋ: ನೂತನ ಆರೋಗ್ಯ ಸಚಿವರಾಗಿ ಯು.ಟಿ. ಖಾದರ್ ನೇಮಕ!

(ನ್ಯೂಸ್‌ ಕಡಬ) newskadaba.com, ಜೂ.05: ಉಳ್ಳಾಲ ಶಾಸಕ ಯು.ಟಿ. ಖಾದರ್‌ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸ್ಥಾನ ಬೆಂಗಳೂರು: ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ನೂತನ ಸಚಿವರ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರಿಗೆ ಮಹತ್ವದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸ್ಥಾನವನ್ನು ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಸದಸ್ಯರಿಗೆ ಅಧಿಕೃತವಾಗಿ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕರಾವಳಿ ಭಾಗದ ಹಿರಿಯ

ಕರಾವಳಿ ನಾಯಕನಿಗೆ ಬಿಗ್ ಪೋರ್ಟ್‌ಫೋಲಿಯೋ: ನೂತನ ಆರೋಗ್ಯ ಸಚಿವರಾಗಿ ಯು.ಟಿ. ಖಾದರ್ ನೇಮಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರಿನೊಳಗೆ ಸಿಲುಕಿ 3 ವರ್ಷದ ಬಾಲಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಕಾರಿನೊಳಗೆ ಉಸಿರುಗಟ್ಟಿ 3 ವರ್ಷದ ಮಗು ದುರ್ಮರಣ ಕಲಬುರಗಿಯಲ್ಲಿ ಹೃದಯವಿದ್ರಾವಕ ಘಟನೆ; ಆಟವಾಡುತ್ತಿದ್ದ ಮಗು ಕಾರಿನಲ್ಲೇ ಸಿಲುಕಿ ಮೃತ್ಯು ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ಮೂರು ವರ್ಷದ ಮಗು ಮೃತಪಟ್ಟಿದೆ. ಕೊಟ್ಟುರೇಶ್ವರ ಅವರ ಪುತ್ರ ಬಸವಪ್ರಭು ಮೃತ ಬಾಲಕನಾಗಿದ್ದಾನೆ. ಪೋಷಕರು ಮಗುವನ್ನು ಶಾಲೆಗೆ ಕರೆದುಕೊಂಡು ಹೋಗಿ ಕಾರನ್ನು ಪಾರ್ಕ್ ಮಾಡಿ ತೆರಳಿದ ವೇಳೆ, ಆಟವಾಡುತ್ತಿದ್ದ ಮಗು ಕಾರಿನೊಳಗೆ ಪ್ರವೇಶಿಸಿದೆ.

ಕಾರಿನೊಳಗೆ ಸಿಲುಕಿ 3 ವರ್ಷದ ಬಾಲಕ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆಶಿ ನೇತೃತ್ವದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣ ಪ್ರಿಯಾಂಕ್ ಖರ್ಗೆಗೆ ಗೃಹ, ಯು.ಟಿ.ಖಾದರ್ ಗೆ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಜೂ. 05. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ವಹಿಸಿ ರಾಜ್ಯ ಸರಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಚಿವ ಸಂಪುಟ ರಚನೆಯ ನಂತರ ಖಾತೆ ಹಂಚಿಕೆ ಕುರಿತಾಗಿ ತೀವ್ರ ಕುತೂಹಲ ಮೂಡಿದ್ದರೆ, ಇದೀಗ ಅದಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್-ಹಣಕಾಸು, ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಹಾಗೂ ಹಂಚಿಕೆಯಾಗದ ಎಲ್ಲ ಇಲಾಖೆಗಳ ಜವಾಬ್ದಾರಿಯನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ.

ಡಿಕೆಶಿ ನೇತೃತ್ವದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣ ಪ್ರಿಯಾಂಕ್ ಖರ್ಗೆಗೆ ಗೃಹ, ಯು.ಟಿ.ಖಾದರ್ ಗೆ ಆರೋಗ್ಯ ಇಲಾಖೆ Read More »

ಕರ್ನಾಟಕ

ಯುಕೆ ಹೆಲಿಕಾಪ್ಟರ್ ಪತನದಲ್ಲಿ ಏಕೈಕ ಮಹಿಳಾ ಕಮಾಂಡೋ ಸೇರಿ ಮೂವರು ಸೇನಾಧಿಕಾರಿಗಳು ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಸೇನಾಧಿಕಾರಿಗಳ ತರಬೇತಿ ವೇಳೆ ನೌಕಾಪಡೆಯ ಏಕೈಕ ಮಹಿಳಾ ಕಮಾಂಡೋ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಘಟನೆ ಯುಕೆಯಲ್ಲಿ ನಡೆದಿದೆ. ಬ್ರಿಟನ್ ನೇವಿಯ ಏಕೈಕ ಮಹಿಳಾ ಕಮಾಂಡೋ 31ರ ಹರೆಯದ ಲಿಲಿ ಮೇ ಫಿಶರ್ ದುರಂತ ಅಂತ್ಯ ಕಂಡಿದ್ದಾರೆ. ಇಂಗ್ಲೆಂಡ್‌ನ ಸೌತ್‌ವೆಸ್ಟ್ ಭಾಗದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಪತನಕ್ಕೆ ಕಾರಣ ಸ್ಪಷ್ಟವಾಗಿಲ್ಲ. 2022ರಲ್ಲಿ ತರಬೇತಿ ಪೂರ್ಣಗೊಳಿಸಿ ಬ್ರಿಟನ್ ನೇವಿ ಸೇರಿಕೊಂಡಿದ್ದ ಏಕೈಕ ಮಹಿಳಾ ಕಮಾಂಡೋ ಇದೀಗ ಹೆಲಿಕಾಪ್ಚರ್ ಪತನದಲ್ಲಿ ಅಂತ್ಯಕಂಡಿದ್ದಾರೆ. ಬ್ರಿಟನ್ ನೌಕಾಪಡೆ ಭಾವಪೂರ್ಣ ಶ್ರದ್ಧಾಂಜಲಿ

ಯುಕೆ ಹೆಲಿಕಾಪ್ಟರ್ ಪತನದಲ್ಲಿ ಏಕೈಕ ಮಹಿಳಾ ಕಮಾಂಡೋ ಸೇರಿ ಮೂವರು ಸೇನಾಧಿಕಾರಿಗಳು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನ: ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿ

(ನ್ಯೂಸ್‌ ಕಡಬ) newskadaba.com,  ಜೂ.05:  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಖಾತೆ ಸಿಕ್ಕ ಬೆನ್ನಲ್ಲೇ ಸಚಿವರು ಕಾರ್ಯಪ್ರವೃತ್ತರಾಗಿದ್ದು ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಸಭೆ ಕರೆದಿದ್ದಾರೆ. ಇದರ ನಡುವೆ ಜಲಸಂಪನ್ಮೂಲ ಖಾತೆ ಪಡೆದಿರುವ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡಿದ್ದಾರೆ ಏನ್ನಲಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಮತನಾಡಿರುವ ರಾಮಲಿಂಗಾ ರೆಡ್ಡಿ ಇಂದು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ವಿಚಾರಕ್ಕಾಗಿ ರಾಮಲಿಂಗಾ

ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನ: ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾತೆ ಹಂಚಿಕೆಯ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಜೂ. 05. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆ ಕಾರಣದಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಶಾಸಕ ಹಾಗೂ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕಾಗಿ

ಖಾತೆ ಹಂಚಿಕೆಯ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ Read More »

ಕರ್ನಾಟಕ
Scroll to Top