ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಮಾ.26: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶಿಕಾಂತ್ ಶೆಟ್ಟಿ (44) ಎಂಬಾತನ ಮೇಲಿನ ಆರೋಪಗಳು 10 ವರ್ಷಗಳ ನಂತರ ಸಾಬೀತಾಗಿದ್ದು, ಕುಂದಾಪುರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣ ದಾಖಲಾದ ನಂತರ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ಕುಂದಾಪುರ ಗ್ರಾಮಾಂತರ ಪೊಲೀಸರು ಮಾರ್ಚ್ 1 ರಂದು ಪಶ್ಚಿಮ ಬಂಗಾಳದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿಯ ಪತ್ನಿ ನೀಡಿದ […]

ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.26: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಏಪ್ರಿಲ್ 16ರಿಂದ 20ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ “ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವ ವೈಭವ-2026” ಕಾರ್ಯಕ್ರಮಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಆಹ್ವಾನಿಸಲಾಯಿತು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯೊಂದಿಗೆ ದೇವಸ್ಥಾನದ ಪ್ರಸಾದವನ್ನು ನೀಡಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು.

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಣ್ಮೂರು ನೇಮೋತ್ಸವಕ್ಕೆ ಸಜ್ಜಾಗುತ್ತಿರುವ ಗರಡಿ: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಭಕ್ತಿಪೂರ್ವಕ ಶ್ರಮದಾನ

(ನ್ಯೂಸ್‌ ಕಡಬ) newskadaba.com,  ಮಾ.26:ಎಣ್ಮೂರು ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವವು ಏಪ್ರಿಲ್ 1ರಂದು ಅದ್ಧೂರಿಯಾಗಿ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಈ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕರು ಗರಡಿಯ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶದಲ್ಲಿ ವ್ಯಾಪಕವಾಗಿ ಸ್ವಚ್ಛತಾ ಕಾರ್ಯವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಕಟ್ಟಬೀಡು ರಾಮಕೃಷ್ಣ ಶೆಟ್ಟಿ, ಅನೂಪ್ ಅಳ್ವ ಸೇರಿದಂತೆ ಹಲವರು ಉಪಸ್ಥಿತರಿದ್ದು, ನೇಮೋತ್ಸವ ಯಶಸ್ವಿಗಾಗಿ ಸಹಕಾರ ನೀಡಿದರು.

ಎಣ್ಮೂರು ನೇಮೋತ್ಸವಕ್ಕೆ ಸಜ್ಜಾಗುತ್ತಿರುವ ಗರಡಿ: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಭಕ್ತಿಪೂರ್ವಕ ಶ್ರಮದಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಯಾಮರಣ: ಸಾವಿನ ನಿರೀಕ್ಷೆಯ ಮೌನ ಆಕ್ರಂದನ !

(ನ್ಯೂಸ್‌ ಕಡಬ) newskadaba.com,  ಮಾ.26: ತನ್ನ ಬದುಕಿನ ದಾರಿ ಸುಗಮಗೊಳಿಸುವ ನೆಪ ಮಾಡಿಕೊಂಡು, ಒಬ್ಬ ಮತ್ತೊಬ್ಬನನ್ನು ಸಾಯಿಸಲು ಕಾರಣ-ನೆಪ ಹುಡುಕುವ ಘಟನೆಗಳನ್ನು ಕಾಲಾಂತರದಲ್ಲಿ ಈ ಜಗತ್ತು ನೋಡಿದೆ! ಶಾಂತಿ ಸ್ಥಾಪನೆ, ಸ್ಥಳೀಯ ಜನರ ಸುರಕ್ಷತೆ ಮುಂತಾದ ಹೆಸರಿನಲ್ಲಿ ಅಮೆರಿಕ, ರಷ್ಯಾ ಮುಂತಾದ ದೇಶಗಳು ನಡೆಸುತ್ತಿರುವ ನರಮೇಧಗಳೂ ನಮ್ಮ ಕಣ್ಣೆದುರು ಇವೆ. ಹೀಗೆ ಸಾಯಿಸುವುದಕ್ಕೆ ನೂರಾರು ಕಾರಣಗಳು, ಸಾವಿರಾರು ಸಮರ್ಥನೆಗಳು. ಇವೆಲ್ಲವೂ ತಂತಮ್ಮ ಮೂಗಿನ ನೇರಕ್ಕೆ ಮಾತ್ರ ಸರಿ ತೋರುವ ವಿಚಾರಗಳು- ಲೋಕದ ದೃಷ್ಟಿಯಲ್ಲಿ ಇಂತಹವೆಲ್ಲವೂ ಜನರ ಮಾರಣ

ದಯಾಮರಣ: ಸಾವಿನ ನಿರೀಕ್ಷೆಯ ಮೌನ ಆಕ್ರಂದನ ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಕುಂಭಾಶಿಯಲ್ಲಿ ರಾ.ಹೆ. ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ

(ನ್ಯೂಸ್‌ ಕಡಬ) newskadaba.com,  ಮಾ.26 ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ, ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಶಿಲೆಕಲ್ಲು ಜಲ್ಲಿ ಸಾಗಿಸುತ್ತಿದ್ದ ಲಾರಿ, ಕುಂಭಾಶಿ ತಲುಪಿದಾಗ ಹಠಾತ್ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬಂದ ಲಾರಿ ಡಿವೈಡರ್ ಏರಿ ರಸ್ತೆಯ ವಿರುದ್ಧ ದಿಕ್ಕಿಗೆ ಚಲಿಸಿ ಕೊನೆಗೆ ರಸ್ತೆ ಪಕ್ಕದ ಹೊಂಡಗೆ ಬಿದ್ದಿದೆ. ಅಪಘಾತದ ತೀವ್ರತೆಗೆ

ಕುಂದಾಪುರ: ಕುಂಭಾಶಿಯಲ್ಲಿ ರಾ.ಹೆ. ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,  ಮಾ.26  ರಾಜ್ಯದಲ್ಲಿ ಪೆಟ್ರೋಲ್ ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ಚಿಕ್ಕಬಳ್ಳಾಪುರದ ನಯಾರ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಲಾಗಿದೆ… ಪೆಟ್ರೋಲ್‌ ಪ್ರತಿ ಲೀಟರ್‌ ಮೇಲಿನ ದರ (Petrol Price) 5 ರೂಪಾಯಿ ಹಾಗೂ ಡೀಸೆಲ್‌ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ 1 ಲೀಟರ್‌ ಪೆಟ್ರೋಲ್‌ ಬೆಲೆ

ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಹಿತಿ ವೈ.ಎಸ್. ಹರಗಿ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಮಾ.26  ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಖ್ಯಾತ ಸಾಹಿತಿ ವೈ.ಎಸ್. ಹರಗಿ ಅವರ “ಇಮಾಮ್ ಸಾಹೇಬರ ಕುದುರೆ” ಕಾದಂಬರಿಗೆ 2025ನೇ ಸಾಲಿನ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2024ನೇ ಸಾಲಿನ ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಪ್ರಶಸ್ತಿಯೊಂದಿಗೆ ರೂ.25,000 ನಗದು ಬಹುಮಾನ, ಫಲಕ ಹಾಗೂ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈ.ಎಸ್. ಹರಗಿ ಅವರು ಕನ್ನಡ

ಸಾಹಿತಿ ವೈ.ಎಸ್. ಹರಗಿ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಣ್ಮೂರುನಲ್ಲಿ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ

(ನ್ಯೂಸ್‌ ಕಡಬ) newskadaba.com,  ಮಾ.26 ಎಣ್ಮೂರು: ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮವು ಮಾರ್ಚ್ 25ರಂದು ಭಕ್ತಿಭಾವದಿಂದ ನೆರವೇರಿತು. ಈ ಕಾರ್ಯಕ್ರಮವು ಅನುವಂಶಿಕ ಆಡಳಿತದಾರರಾದ ಕಟ್ಟ ಬೀಡು ರಾಮಕೃಷ್ಣ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದಿದ್ದು, ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ನೇಮೋತ್ಸವದ ಅಂಗವಾಗಿ ನಡೆದ ಈ ಗೊನೆ ಮುಹೂರ್ತ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದರು. ಮುಂದಿನ ದಿನಗಳಲ್ಲಿ ನಡೆಯಲಿರುವ ನೇಮೋತ್ಸವಕ್ಕೆ ಗ್ರಾಮಸ್ಥರು ಹಾಗೂ ಭಕ್ತರಲ್ಲಿ

ಎಣ್ಮೂರುನಲ್ಲಿ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.26;  ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದು ಹಾಸನ, ಚಿಕ್ಕಮಗಳೂರು, ಹುಬ್ಬಳ್ಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ

ಬೆಳ್ತಂಗಡಿ : ತ್ಯಾಜ್ಯ ಎಸೆಯುವವರ ವಿರುದ್ಧ ಪಂಚಾಯತ್‌ ವಿನೂತನ ಕ್ರಮ!

(ನ್ಯೂಸ್‌ ಕಡಬ) newskadaba.com,  ಮಾ.24: ನದಿಗೆ ತ್ಯಾಜ್ಯ ಸುರಿದು ಪರಿಸರ ಮಾಲಿನ್ಯ ಉಂಟುಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬೆಳ್ತಂಗಡಿ ತಾಲ್ಲೂಕಿನ ನಾವೂರು ಗ್ರಾಮ ಪಂಚಾಯತ್ ವಿನೂತನ ಕ್ರಮ ಕೈಗೊಂಡಿದೆ.ನದಿಯ ಸಮೀಪ ಅಳವಡಿಸಿರುವ ಸೂಚನಾ ಫಲಕದಲ್ಲಿ, ತ್ಯಾಜ್ಯ ಎಸೆಯುವವರಿಗೆ ರೂ. 5,000 ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಅಂತಹ ವ್ಯಕ್ತಿಗಳನ್ನು ಗುರುತಿಸಲು ಮಾಹಿತಿ ನೀಡುವವರಿಗೆ ರೂ. 1,000 ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿದೆ. ಗ್ರಾಮಸ್ಥರ ಪ್ರಕಾರ, ಬಳಸಿದ ಪ್ಲಾಸ್ಟಿಕ್ ವಸ್ತುಗಳು, ಪೇಪರ್ ಪ್ಲೇಟ್‌ಗಳು, ಪ್ಲಾಸ್ಟಿಕ್

ಬೆಳ್ತಂಗಡಿ : ತ್ಯಾಜ್ಯ ಎಸೆಯುವವರ ವಿರುದ್ಧ ಪಂಚಾಯತ್‌ ವಿನೂತನ ಕ್ರಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top