ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com, ಮಾ.21: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ.ದಂಪತಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ […]

ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಮಾ.21: ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.   ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ..

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಗ್ಯಾಸ್ ಅಕ್ರಮ ಮರುಪೂರಣ – ಇಬ್ಬರು ಆರೋಪಿಗಳ ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಮಾ.19: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಾ.17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್‌ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಗ್ಯಾಸ್ ಪಾಯಿಂಟ್ ವೊಂದರ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು ಅಕ್ರಮವಾಗಿ ಗ್ಯಾಸ್ ಸಿಲೆಂಡರ್‌ಗಳನ್ನು ಸಂಗ್ರಹಿಸಿ

ಮಂಗಳೂರು : ಗ್ಯಾಸ್ ಅಕ್ರಮ ಮರುಪೂರಣ – ಇಬ್ಬರು ಆರೋಪಿಗಳ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮಕುಂಜದಲ್ಲಿ ಔಷಧಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,ಮಾ.19 ಪುತ್ತೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿ ಸೇವಿಸಿದ ಬಾಲಕನೋರ್ವ ಅಸ್ವಸ್ಥಗೊಂಡು ಮೃತಪಟ್ಟ ದಾರುಣ ಘಟನೆ ರಾಮಕುಂಜದಲ್ಲಿ ಬುಧವಾರ (ಮಾ. 18) ಸಂಭವಿಸಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ, 4ನೇ ತರಗತಿ ವಿದ್ಯಾರ್ಥಿ ‘’ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಬಾಲಕನಿಗೆ ಮನೆಯಲ್ಲಿ ಔಷಧಿ ನೀಡಲಾಗಿತ್ತು. ಆದರೆ, ಔಷಧಿ ಸೇವಿಸಿದ ಕೆಲವೇ ಸಮಯದ ನಂತರ ಬಾಲಕ ತೀವ್ರವಾಗಿ ಅಸ್ವಸ್ಥಗೊಂಡಿದ್ದಾನೆ ಎನ್ನಲಾಗಿದೆ. ಬಾಲಕ ಅಸ್ವಸ್ಥಗೊಳ್ಳುತ್ತಿದ್ದಂತೆ ಗಾಬರಿಗೊಂಡ ಪೋಷಕರು ತಕ್ಷಣವೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಾಮಕುಂಜದಲ್ಲಿ ಔಷಧಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್: ಪಾಕಿಸ್ತಾನದ ‘ಗಣರಾಜ್ಯೋತ್ಸವ’ ಆಚರಣೆ ಅಧಿಕೃತವಾಗಿ ರದ್ದು

(ನ್ಯೂಸ್‌ ಕಡಬ) newskadaba.com,ಮಾ.19: ಇಸ್ಲಾಮಾಬಾದ್: ತೀವ್ರ ಆರ್ಥಿಕ ಮುಗ್ಗಟ್ಟು ಮತ್ತು ಇಂಧನ ಕೊರತೆಯಿಂದ ತತ್ತರಿಸುತ್ತಿರುವ ಪಾಕಿಸ್ತಾನ ಸರ್ಕಾರವು ಈ ಬಾರಿ ಮಾರ್ಚ್ 23 ರಂದು ನಡೆಯಬೇಕಿದ್ದ ತನ್ನ ‘ಗಣರಾಜ್ಯೋತ್ಸವ’ ಆಚರಣೆಯನ್ನು ರದ್ದುಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಮತ್ತು ಅನಿಲ ಬಿಕ್ಕಟ್ಟು ದೇಶದ ಮೇಲೆ ಭೀಕರ ಪರಿಣಾಮ ಬೀರಿದ್ದು, ಈ ಅನಿವಾರ್ಯ ನಿರ್ಧಾರ ಕೈಗೊಳ್ಳಲಾಗಿದೆ. ಅದ್ಧೂರಿತನಕ್ಕೆ ಬ್ರೇಕ್, ಸರಳತೆಗೆ ಆದ್ಯತೆ ಪ್ರತಿ ವರ್ಷ ಮಾರ್ಚ್ 23 ರಂದು ಅದ್ಧೂರಿ ಮಿಲಿಟರಿ ಪರೇಡ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ

ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್: ಪಾಕಿಸ್ತಾನದ ‘ಗಣರಾಜ್ಯೋತ್ಸವ’ ಆಚರಣೆ ಅಧಿಕೃತವಾಗಿ ರದ್ದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

(ನ್ಯೂಸ್‌ ಕಡಬ) newskadaba.com,ಮಾ.19: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇರಾನ್‌ನ ಪ್ರಮುಖ ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಇಸ್ರೇಲ್ ಇನ್ನಷ್ಟು ದಾಳಿ ನಡೆಸುವುದಿಲ್ಲ ಎಂದು ಭರವಸೆ ನೀಡಿದರು. ಆದರೆ ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಅಮೆರಿಕಾ ಪ್ರತೀಕಾರವಾಗಿ ತೈಲ ನಿಕ್ಷೇಪವನ್ನು ಸಂಪೂರ್ಣವಾಗಿ ಭಾರೀ ಪ್ರಮಾಣದಲ್ಲಿ ಸ್ಫೋಟಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಿದರು. ಜಾಗತಿಕ ಇಂಧನ ಮಾರುಕಟ್ಟೆಗಳು ಅಸ್ಥಿರವಾಗಿರುವ ಸಂದರ್ಭದಲ್ಲಿ ಮತ್ತು ಇರಾನ್ ಕ್ಷಿಪಣಿಗಳು ಕತಾರ್ ಗೆ ತಾಕಿದ ಹಿನ್ನೆಲೆಯಲ್ಲಿ, ನಿನ್ನೆ ಬುಧವಾರ ರಾತ್ರಿ

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ

(ನ್ಯೂಸ್‌ ಕಡಬ) newskadaba.com,ಮಾ.19: . ಕಡಬ ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಸೈಂಟ್ ಜೋಕಿಮ್ಸ್  ಕಾಲೇಜು ಮುಂಭಾಗದ ಪಿಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ‘ಜೋಮ್ಸ್ ಅಕಾಡೆಮಿ’ ಸಂಸ್ಥೆಯಲ್ಲಿ ಅಲ್ಪಾವಧಿಯ ವೇಗವರ್ಧಿತ ಕೋರ್ಸ್ (Crash Course) ಮತ್ತು 2026ನೇ ಸಾಲಿನ CET/ NEET ಕೋಚಿಂಗ್ ಪ್ರವೇಶಾತಿ ಆರಂಭಗೊಂಡಿದೆ. ಸೀಮಿತ ಸೀಟುಗಳು ಮಾತ್ರ ಲಭ್ಯವಿದ್ದು, ಬೆಂಗಳೂರು ಮತ್ತು ಮೈಸೂರಿನ 21ಕ್ಕೂ ಹೆಚ್ಚು ವರ್ಷಗಳ ಅನುಭವಿ ಪರಿಣಿತರಿಂದ ತರಬೇತಿ ನೀಡಲಾಗುವುದು. CET ಕೋರ್ಸ್‌ ಗಳು ಮಾರ್ಚ್ 23ರಿಂದ ಎಪ್ರಿಲ್ 22ರ ವರೆಗೆ, NEET

ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಹಬ್ಬದ ದಿನವೇ ಬಾರದ ಲೋಕಕ್ಕೆ ಪಯಣ ಬೈಕ್-ಟಿಪ್ಪರ್ ನಡುವೆ ಅಪಘಾತ, ಸ್ಥಳದಲ್ಲೇ ದಂಪತಿ ಮೃತ್ಯು

(ನ್ಯೂಸ್‌ ಕಡಬ) newskadaba.com,ಮಾ.19 ಯುಗಾದಿ ಹಬ್ಬದಂದೇ ಬೀದರ್‌ನಲ್ಲಿ  ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಚಲಿಸುತ್ತಿದ್ದ ದಂಪತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಬಸವಕಲ್ಯಾಣ ನಗರದ ಖಡಿ ಝಂಡಾ ಕಾಲೋನಿಯ ನಿವಾಸಿ ಸೈಯದ್ ದಸ್ತಗೀರ್ (35) ಮತ್ತು ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಎಂದು ಗುರುತಿಸಲಾಗಿದೆ. ತ್ರಿಪುರಾಂತ ಬಳಿಯ ಕಾಲೋನಿಯೊಂದರಲ್ಲಿ ವಾಸಿಸುತ್ತಿದ್ದ ಮೃತರು, ಬೈಕ್​ನಲ್ಲಿ ಬಸ್ ನಿಲ್ದಾಣ ಕಡೆಯಿಂದ ಖಡಿ ಝಂಡಾ

ಹಬ್ಬದ ದಿನವೇ ಬಾರದ ಲೋಕಕ್ಕೆ ಪಯಣ ಬೈಕ್-ಟಿಪ್ಪರ್ ನಡುವೆ ಅಪಘಾತ, ಸ್ಥಳದಲ್ಲೇ ದಂಪತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಪಂಚಾಯತ್ ಎದುರಿನ ವಿದ್ಯುತ್ ಲೈಟ್ ಕಿತ್ತುಹಾಕಿದ ಪಿಡಿಒ – ದೇವಸ್ಥಾನದ ಸಮಿತಿಯಿಂದ ತೀವ್ರ ವಿರೋಧ.

(ನ್ಯೂಸ್‌ ಕಡಬ) newskadaba.com,ಮಾ.19 ಉಪ್ಪಿನಂಗಡಿ: ಕ್ಷೇತ್ರದ ಶಾಸಕರ ನಿರ್ದೇಶನದನ್ವಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಜಾತ್ರೋತ್ಸವದ ಹಿನ್ನೆಲೆಯಲ್ಲಿ ರಥ ಬೀದಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿದರೆ ಪಂಚಾಯತ್ ಕಟ್ಟಡದ ಮುಂಭಾಗದಲ್ಲಿ ಅಳವಡಿಸಲಾದ ವಿದ್ಯುತ್ ದೀಪಗಳನ್ನು ಉಪ್ಪಿನಂಗಡಿ ಗ್ರಾ.ಪಂ. ಪಂಚಾಯತ್ ಪಿಡಿಒ ತೆರವುಗೊಳಿಸಿರುವುದು ಅತೀವ ಬೇಸರ ತಂದಿದೆ ಎಂದು ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾೖಕ್‌ ತಿಳಿಸಿದ್ದಾರೆ. ದೇವಾಲಯದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯ ಸಮಯದಲ್ಲಿ ಮಾತನಾಡಿದ ಅವರು, ದೇವಾಲಯದ ಜಾತ್ರೋತ್ಸವಕ್ಕೆ ಊರಿನ ಎಲ್ಲಾ ಧರ್ಮಿಯರೂ

ಉಪ್ಪಿನಂಗಡಿ: ಪಂಚಾಯತ್ ಎದುರಿನ ವಿದ್ಯುತ್ ಲೈಟ್ ಕಿತ್ತುಹಾಕಿದ ಪಿಡಿಒ – ದೇವಸ್ಥಾನದ ಸಮಿತಿಯಿಂದ ತೀವ್ರ ವಿರೋಧ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೂಪಾಡಿಕಟ್ಟೆ: ಮುಂಜಾನೆ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾಯಿತು ದೈತ್ಯ ಮೊಸಳೆ; ನಿವಾಸಿಗಳಲ್ಲಿ ಆತಂಕ

(ನ್ಯೂಸ್‌ ಕಡಬ) newskadaba.com,ಮಾ.19 ಬಂಟ್ವಾಳ:  ನೇತ್ರಾವತಿ ನದಿ ತೀರದ ನಿವಾಸಿಯೊಬ್ಬರ ಮನೆಯ ಅಂಗಳಕ್ಕೆ ಸುಮಾರು 7 ಅಡಿ ಉದ್ದದ ಬೃಹತ್ ಮೊಸಳೆಯೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.ಬಂಟ್ವಾಳದ ಪೂಪಾಡಿಕಟ್ಟೆ ನೆಕ್ಕಿಲಾರು ನಿವಾಸಿ ರಾಜೇಶ್ ನಾಯಕ್ ಎಂಬುವವರ ಮನೆಯ ಅಂಗಳಕ್ಕೆ ಈ ಮೊಸಳೆ ಬಂದಿದೆ. ಇವರ ಮನೆ ನೇತ್ರಾವತಿ ನದಿಯಿಂದ ಸುಮಾರು 200 ಮೀಟರ್ ದೂರದಲ್ಲಿದೆ. ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಮನೆಯ ಹೊರಗೆ ಅಸಾಮಾನ್ಯ ಶಬ್ದ ಕೇಳಿಬಂದಿದೆ.ಶಬ್ದ ಕೇಳಿ ಮನೆಯವರು ಹೊರಬಂದು

ಪೂಪಾಡಿಕಟ್ಟೆ: ಮುಂಜಾನೆ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾಯಿತು ದೈತ್ಯ ಮೊಸಳೆ; ನಿವಾಸಿಗಳಲ್ಲಿ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top