ಸೌಜನ್ಯ ಪರ ಹೋರಾಟಗಾರ ತಿಮರೋಡಿ ವಿರುದ್ದ 3ನೇ ಬಾರಿ ಗಡಿಪಾರು ಆದೇಶ

(ನ್ಯೂಸ್‌ ಕಡಬ) newskadaba.com ಮಾ. 17. ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ 6 ತಿಂಗಳುಗಳ ಕಾಲ ರಾಯಚೂರುಜಿಲ್ಲೆಯ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ.   ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ.

ಸೌಜನ್ಯ ಪರ ಹೋರಾಟಗಾರ ತಿಮರೋಡಿ ವಿರುದ್ದ 3ನೇ ಬಾರಿ ಗಡಿಪಾರು ಆದೇಶ Read More »

ಕರಾವಳಿ

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮಾ.17 ಐಸಿಸ್ (ISIS) ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.. ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್‌ ಅಲಿ ಬಂಧಿತ ಆರೋಪಿ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಈತನನ್ನು ಬಂಧಿಸಿದೆ… ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ಸಂದರ್ಭದಲ್ಲಿ ಈತನನ್ನು

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಬಾವಿಗೆ ಬಿದ್ದ ಎರಡು ವರ್ಷದ ಮಗು- ರಕ್ಷಣೆ

(ನ್ಯೂಸ್‌ ಕಡಬ) newskadaba.com ಮಾ. 17. ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ. ಭುವಿ (2) ಬಾವಿಗೆ ಬಿದ್ದು ಅದೃಷ್ಟವಶಾತ್ ಬದುಕುಳಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದಾಗ ಬಾವಿಯ ಬಳಿ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದೊಂದಿಗೆ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ ಇಳಿಸಲಾಗಿದ್ದ ಪಂಪ್ ಪೈಪ್‌ನ್ನು ಗಟ್ಟಿಯಾಗಿ

ಬಾವಿಗೆ ಬಿದ್ದ ಎರಡು ವರ್ಷದ ಮಗು- ರಕ್ಷಣೆ Read More »

ಕರ್ನಾಟಕ

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.17 ಮಂಗಳೂರು/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮುಂದುವರಿದಿರುವ ನಡುವೆಯೂ ದೇಶದ ಅಡುಗೆ ಅನಿಲ ಪೂರೈಕೆಯ ಕುರಿತು ಉಂಟಾಗಿದ್ದ ಆತಂಕ ಕಡಿಮೆಯಾಗಿದೆ. ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಹೊರ್ಮುಜ್ ಜಲಸಂಧಿಯನ್ನು ಯಾವುದೇ ಅಡಚಣೆಯಿಲ್ಲದೆ ದಾಟಿ ಗುಜರಾತ್‌ನ ಮುಂದ್ರಾ ಬಂದರನ್ನು ಸುರಕ್ಷಿತವಾಗಿ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್)ಗಾಗಿ ತರಲಾಗುತ್ತಿರುವ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯಲ್ಲಿ, ಮೊದಲ ಹಂತವಾಗಿ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್ ಅನಿಲವನ್ನು ಇಳಿಸಲಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಕ್ಯಾಂಟೀನ್ ಖರೀದಿಸಲು ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಾ. 17. 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಮೊಬೈಲ್ ಕ್ಯಾಂಟೀನ್ ಖರೀದಿಸಲು ಸಹಾಯ ಕಾರ್ಯಕ್ರಮದಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಜಿದಾರರು ಅರ್ಜಿ ನಮೂನೆಯನ್ನು ಪಡೀಲ್ `ಪ್ರಜಾ ಸೌಧ’ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರದಲ್ಲಿರುವ  ಪ್ರವಾಸೋದ್ಯಮ ಇಲಾಖೆ  ಉಪ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು. ಸಹಾಯ ಕಾರ್ಯಕ್ರಮದಡಿ ಮೊಬೈಲ್ ಕ್ಯಾಂಟೀನ್ ಖರೀದಿಸಲು ಅರ್ಜಿ ಸಲ್ಲಿಸಲು ಏಪ್ರಿಲ್ 6  ಕೊನೆಯ ದಿನ.

ಮೊಬೈಲ್ ಕ್ಯಾಂಟೀನ್ ಖರೀದಿಸಲು ಅರ್ಜಿ ಆಹ್ವಾನ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್‌ ಕಡಬ) newskadaba.com ಮಾ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ  ಏರ್ಪಡಿಸಲಾಗಿದೆ. ಮಾರ್ಚ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಮಾರ್ಚ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಮಾರ್ಚ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಮಹಿಳಾ ಸಂಪನ್ಮೂಲ ಕೇಂದ್ರ ಹಸ್ತಾಂತರ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಮಾ. 17. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರವನ್ನು  ಉದ್ಘಾಟಿಸಲಾಯಿತು. ಮುತ್ತೂಟ್ ಫೈನಾನ್ಸ್  ಸಂಸ್ಥೆಯ ಸಿ.ಎಸ್.ಆರ್ ಅನುದಾನದಲ್ಲಿ ಜಿಲ್ಲಾ ಮಹಿಳಾ ಸಂಪನ್ಮೂಲ ಕೇಂದ್ರವನ್ನು ಎಲ್ಲಾ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲಾಗಿದ್ದು, ಮಹಿಳಾ ದಿನಾಚರಣೆಯನ್ನು ಆಚರಿಸುವ ಮೂಲಕ ಲೋಕಾರ್ಪಣೆ ಮಾಡಲಾಯಿತು. ಮುತ್ತೂಟ್ ಫೈನಾನ್ಸ್, ಪ್ರಾದೇಶಿಕ ವ್ಯವಸ್ಥಾಪಕ ಪ್ರಶಾಂತ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಇಂದಿನ ಸಮಾಜದಲ್ಲಿ ಮಹಿಳೆಯರು

ಮಹಿಳಾ ಸಂಪನ್ಮೂಲ ಕೇಂದ್ರ ಹಸ್ತಾಂತರ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಕಸ ಸ್ವಚ್ಛಗೊಳಿಸುವಾಗ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಮಾ.17 ಕಸವನ್ನು ಸ್ವಚ್ಛಗೊಳಿಸುವ ವೇಳೆ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯೋರ್ವರನ್ನು ರಕ್ಷಿಸಿದ ಘಟನೆ ಮಂಗಳೂರು ನಗರದ ಬೋಳಾರದ ಮುಳಿಹಿತ್ತಲು ಬಳಿ ನಡೆದಿದೆ. ಬೆಳಗಾವಿಯ ಸವದತ್ತಿ ತಾಲೂಕಿನ ಪಂಚಪ್ಪ(44) ಎಂಬುವವರು ಬಾವಿಯ ಸುತ್ತಮುತ್ತಲಿನ ಕಸವನ್ನು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಹಗ್ಗ ತುಂಡಾಗಿ ಬಾವಿಗೆ ಬಿದ್ದಿದ್ದಾರೆ. ಬಳಿಕ ಅವರನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿ ಹಾಗು ಸಿಬ್ಬಂದಿಯವರು ಬಾವಿಗೆ ಇಳಿದು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಗಳೂರು: ಕಸ ಸ್ವಚ್ಛಗೊಳಿಸುವಾಗ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com ಮಾ. 17. ಕಡಬ ತಾಲೂಕಿನ ನೆಲ್ಯಾಡಿ ನಿವಾಸಿಯೊಬ್ಬರು ಉಡುಪಿ ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣ ಸಮೀಪದ ವಸತಿ ಗೃಹದ ಬಾಡಿಗೆ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸಮಜಲು ಗುಡ್ಡೆ ನಿವಾಸಿ ಮಥಾಯಿ ಅವರ ಪುತ್ರ ಜಿನ್ಸನ್‌ ಪಿ ಎಂ ಎಂದು ಗುರುತಿಸಲಾಗಿದೆ. ಮಂಗಳೂರು ಬರ್ಕೆಯ ಕೋಸ್ಟಲ್‌ ಗಾರ್ಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಜಿನ್ಸನ್‌ ಅವರು ಪತ್ನಿ ಇಬ್ಬರು ಮಕ್ಕಳ

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು ಜಾತ್ರೆಗೆ ದೇವರ ಪೂರ್ಣಾನುಗ್ರಹ: ಭಕ್ತರಲ್ಲಿ ಹರ್ಷ

(ನ್ಯೂಸ್‌ ಕಡಬ) newskadaba.com,  ಮಾ.17 ಬಿಲ್ವಪತ್ರೆ-ಮಲ್ಲಿಗೆ ಭೂಸ್ಪರ್ಶ- ಬ್ರಹ್ಮರಥ ಕಟ್ಟುವ ಕೆಲಸ ಆರಂಭ ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಏ.೧೦ರಿಂದ ನಡೆಯಲಿರುವ ‘ಪುತ್ತೂರ್‍ದ ಜಾತ್ರೆಗೆ ಬ್ರಹ್ಮರಥೋತ್ಸವದ ಸಿದ್ಧತೆಗಾಗಿ ಸೋಮವಾರ ರಥಮಂದಿರದಿಂದ ಬ್ರಹ್ಮರಥವನ್ನು ರಥಬೀದಿಗೆ ತರುವ ಮುಹೂರ್ತ ನಡೆಯಿತು. ರಥಕಟ್ಟು ಸ್ಥಳದಲ್ಲಿ ಬಿಲ್ವಪತ್ರೆ ಮತ್ತು ಮಲ್ಲಿಗೆ ಭೂಸ್ಪರ್ಶಗೊಂಡು ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸುವುದರೊಂದಿಗೆ ಜಾತ್ರೆಯ ಕ್ಷಣಗಣನೆ ಆರಂಭಗೊಂಡಿದೆ. ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ,

ಪುತ್ತೂರು ಜಾತ್ರೆಗೆ ದೇವರ ಪೂರ್ಣಾನುಗ್ರಹ: ಭಕ್ತರಲ್ಲಿ ಹರ್ಷ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top