ಸುಳ್ಯ : ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ

(ನ್ಯೂಸ್‌ ಕಡಬ) newskadaba.com,ಮಾ.02: ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿದ್ದ ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಇವರ ಇಬ್ಬರು ಪುತ್ರರು ಹಾಗೂ ಮತ್ತು ಪತಿ ಈ ಮೊದಲೇ ಮೃತಪಟ್ಟಿದ್ದು, […]

ಸುಳ್ಯ : ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳ ದರ್ಶನ ಸಮಯದಲ್ಲಿ ಕೊಂಚ ಬದಲಾವಣೆ

(ನ್ಯೂಸ್‌ ಕಡಬ) newskadaba.com,ಮಾ.02: ಯುಗಾದಿ ಹಬ್ಬಕ್ಕೂ ಮುನ್ನವೇ ಅಂದರೆ ಮಾರ್ಚ್ 3ರಂದು ‘ಕೇತುಗ್ರಸ್ತ ರಕ್ತ ಚಂದ್ರಗ್ರಹಣ’ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳ ಪೂಜೆ ಮತ್ತು ದರ್ಶನದ ಸಮಯದಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಲಾಗಿದೆ. ಬಹುತೇಕ ದೇವಾಲಯಗಳಲ್ಲಿ ಗ್ರಹಣ ಕಾಲದಲ್ಲಿ ದರ್ಶನ ಸ್ಥಗಿತಗೊಳಿಸಿ, ಶುದ್ಧೀಕರಣದ ನಂತರವಷ್ಟೇ ಭಕ್ತರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರಿನ ಪ್ರಮುಖ ದೇವಾಲಯಗಳ ವಿವರ: ಬನಶಂಕರಿ ದೇವಾಲಯ: ಗ್ರಹಣದ ಹಿನ್ನೆಲೆಯಲ್ಲಿ ಯಾವುದೇ ವಿಶೇಷ ಪೂಜೆಗಳಿರುವುದಿಲ್ಲ. ಸಂಜೆ 7 ಗಂಟೆಯ ನಂತರವಷ್ಟೇ

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳ ದರ್ಶನ ಸಮಯದಲ್ಲಿ ಕೊಂಚ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಮಾ.02: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

(ನ್ಯೂಸ್‌ ಕಡಬ) newskadaba.com,ಮಾ.02: ಸುಸೈಡ್‌ ಪಾಯಿಂಟ್‌ ಆಗಿ ಗುರುತಿಸಿಕೊಂಡಿದ್ದ ನೇತ್ರಾವತಿ ಸೇತುವೆಯ ತಡೆಬೇಲಿ ವಾಹನ ಅಪಘಾತದಲ್ಲಿ ಮುರಿದು ಕೆಲವೇ ದಿನಗಳು ಆಗುವ ಮುನ್ನವೇ ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತನನ್ನು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.ಪಂಪ್‌ ವೆಲ್‌ ನಾಗುರಿ ನಿವಾಸಿ ವಯಸ್ಕರೊಬ್ಬರು ರವಿವಾರ ನದಿಗೆ ಸೇತುವೆಯಿಂದ ಹಾರಿದ್ದರು. ಕೆಳಗಡೆ ಮೀನುಗಾರಿಕೆಯಲ್ಲಿ ನಿರತರಾಗಿದ್ದವರು ತಕ್ಷಣವೇ ನದಿಗೆ ಹಾರಿ ವ್ಯಕ್ತಿಯನ್ನು ದೋಣಿಗೆ ಎಳೆದು ಬಳಿಕ ಪ್ರಾಥಮಿಕ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಫೆ.28:  ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು  ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷ ಎಂದು ಗುರುತಿಸಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ,ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ

ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.28:  ರಾಜ್ಯದಲ್ಲಿ ಮತ್ತೊಂದು ಬೃಹತ್ ಜಿಎಸ್ ಟಿ ವಂಚನೆ ಜಾಲ ಬಯಲಾಗಿದ್ದು, ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು.. ರಾಜ್ಯದಲ್ಲಿ ನಡೆದ ಪ್ರಮುಖ ಜಿಎಸ್‌ಟಿ ವಂಚನೆಯ ಶಿಸ್ತುಕ್ರಮದಲ್ಲಿ, ಬೆಳಗಾವಿ ವಲಯ ಘಟಕದ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಅಧಿಕಾರಿಗಳು 593 ಕೋಟಿ ರೂ. ಮೌಲ್ಯದ ವಂಚನೆ ಇನ್‌ವಾಯ್ಸ್‌ಗಳನ್ನು ಒಳಗೊಂಡ ಬೃಹತ್ ನಕಲಿ ಇನ್‌ಪುಟ್ ತೆರಿಗೆ ಕ್ರೆಡಿಟ್ ಜಾಲವನ್ನು ಬಯಲು ಮಾಡಿದ್ದಾರೆ.ಇದು ರಾಜ್ಯಗಳಾದ್ಯಂತ ಕಾರ್ಯನಿರ್ವಹಿಸುತ್ತಿರುವ ಶೆಲ್ ಸಂಸ್ಥೆಗಳ ಅತ್ಯಾಧುನಿಕ

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ

(ನ್ಯೂಸ್‌ ಕಡಬ) newskadaba.com,  ಫೆ.28:  ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶ ಜಗದೀಶ್ ವಿ.ಎನ್ ಶಿಕ್ಷೆಯನ್ನು ಪ್ರಕಟಿಸಿ ಆದೇಶ ಹೊರಡಿಸಿದರು. ದೂರುದಾರರ ಪರವಾಗಿ ಸರ್ಕಾರಿ ಅಭಿಯೋಜಕ ಜ್ಯೋತಿ ನಾಯಕ್ ಪ್ರಕರಣದಲ್ಲಿ

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಫೆ.28:  ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ದರ ಇಂದು ಕೂಡ ಗಗನಮುಖಿಯಾಗಿದೆಯಾಗಿದೆ. ಶನಿವಾರ ಆಭರಣಪ್ರಿಯರ ನಿದ್ದೆಗೆಡಿಸಿ ಹಳದಿಲೋಹದ ಬೆಲೆ ಭಾರಿ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 290 ರುಪಾಯಿ ಏರಿಕೆಯಾಗಿ 15,100 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 316 ಅಧಿಕವಾಗಿದ್ದು, 16,473 ರುಪಾಯಿ ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,800 ರುಪಾಯಿ ಆಗಿದ್ದರೆ,

ಚಿನ್ನದ ದರದಲ್ಲಿ ಭಾರೀ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೇಡಿಕೆ ಈಡೇರಿಸದಿದ್ದರೆ ಸೇವೆ ಸ್ಥಗಿತ- ಎಚ್ಚರಿಕೆ ನೀಡಿದ ಸರಕಾರಿ ವೈದ್ಯಾಧಿಕಾರಿಗಳ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಮಾರ್ಚ್ 10ರೊಳಗೆ ಸರಕಾರಿ ವೈದ್ಯರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರಕಾರಿ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಸರಕಾರಿ ವೈದ್ಯಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಎಚ್ಚರಿಕೆಯನ್ನು ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ದೀಪಕ್ ರೈ, ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ 15ರ ವರೆಗೆ ಕಪ್ಪುಪಟ್ಟಿ ಧರಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ಒದಗಿಸಲಾಗುವುದು. ಮಾರ್ಚ್ 16ರಿಂದ ಸಂಪೂರ್ಣವಾಗಿ ಸೇವೆಯನ್ನು ಸ್ಥಗಿತಗೊಳಿಸುವುದಾಗಿ

ಬೇಡಿಕೆ ಈಡೇರಿಸದಿದ್ದರೆ ಸೇವೆ ಸ್ಥಗಿತ- ಎಚ್ಚರಿಕೆ ನೀಡಿದ ಸರಕಾರಿ ವೈದ್ಯಾಧಿಕಾರಿಗಳ ಸಂಘ Read More »

ಕರಾವಳಿ

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ- ಕಾರು ಜಖಂ

(ನ್ಯೂಸ್ ಕಡಬ) newskadaba.com ಫೆ. 28.  ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸಂಭವಿದೆ. ಘಟನೆಯಲ್ಲಿ ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದರೂ ಭಾರೀ ಅನಾಹುತ ತಪ್ಪಿಹೋಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ- ಕಾರು ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top