ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.17 ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ. ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ರವಿರಾಜ್ ಎಚ್. ಪಿ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ […]

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಮಾ.17 ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸೋಮವಾರ ಸಂಭವಿಸಿದೆ…. ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಣೂರು ಮೂಲದ ಶಿವಪ್ರಸಾದ್ ಎಂಬುವವರು ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದು ಇವರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.17 ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ) ಬಸ್ ಮೈಮೇಲೆ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ. ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮಾದಕ ವಸ್ತು ಸೇವನೆ ಆರೋಪ- 6 ಮಂದಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಮಾ. 17. ಸಾರ್ವಜನಿಕ ಸ್ಥಳದಲ್ಲಿ ವಿವಿಧೆಡೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಡಿಯಲ್ಲಿ ಆರು ಮಂದಿ ಯುವಕರನ್ನು ಕಂಕನಾಡಿ ನಗರ ಹಾಗೂ ಕಾವೂರು ಠಾಣೆಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಕಿರಣ ಪ್ರಸಾದ್ (22), ಸಲ್ಮಾನ್ (18), ಪ್ರಜ್ವಲ್ (23), ಕಾರ್ತಿಕ್ (24), ಪ್ರಜ್ವಲ್ ಅಶ್ವತ್ಥ್ ವೇಗಸ್ (25) ಮತ್ತು ಅನ್ಸಿಲ್ ಗ್ರಿಪ್ಥ್ ಅಲ್ಪ್ರೇಡ್ (24) ಎಂದು ಗುರುತಿಸಲಾಗಿದೆ.

ಮಾದಕ ವಸ್ತು ಸೇವನೆ ಆರೋಪ- 6 ಮಂದಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸೌಜನ್ಯ ಪರ ಹೋರಾಟಗಾರ ತಿಮರೋಡಿ ವಿರುದ್ದ 3ನೇ ಬಾರಿ ಗಡಿಪಾರು ಆದೇಶ

(ನ್ಯೂಸ್‌ ಕಡಬ) newskadaba.com ಮಾ. 17. ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ 6 ತಿಂಗಳುಗಳ ಕಾಲ ರಾಯಚೂರುಜಿಲ್ಲೆಯ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ.   ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ.

ಸೌಜನ್ಯ ಪರ ಹೋರಾಟಗಾರ ತಿಮರೋಡಿ ವಿರುದ್ದ 3ನೇ ಬಾರಿ ಗಡಿಪಾರು ಆದೇಶ Read More »

ಕರಾವಳಿ

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮಾ.17 ಐಸಿಸ್ (ISIS) ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.. ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್‌ ಅಲಿ ಬಂಧಿತ ಆರೋಪಿ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಈತನನ್ನು ಬಂಧಿಸಿದೆ… ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ಸಂದರ್ಭದಲ್ಲಿ ಈತನನ್ನು

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಬಾವಿಗೆ ಬಿದ್ದ ಎರಡು ವರ್ಷದ ಮಗು- ರಕ್ಷಣೆ

(ನ್ಯೂಸ್‌ ಕಡಬ) newskadaba.com ಮಾ. 17. ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ. ಭುವಿ (2) ಬಾವಿಗೆ ಬಿದ್ದು ಅದೃಷ್ಟವಶಾತ್ ಬದುಕುಳಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದಾಗ ಬಾವಿಯ ಬಳಿ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದೊಂದಿಗೆ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ ಇಳಿಸಲಾಗಿದ್ದ ಪಂಪ್ ಪೈಪ್‌ನ್ನು ಗಟ್ಟಿಯಾಗಿ

ಬಾವಿಗೆ ಬಿದ್ದ ಎರಡು ವರ್ಷದ ಮಗು- ರಕ್ಷಣೆ Read More »

ಕರ್ನಾಟಕ

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.17 ಮಂಗಳೂರು/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮುಂದುವರಿದಿರುವ ನಡುವೆಯೂ ದೇಶದ ಅಡುಗೆ ಅನಿಲ ಪೂರೈಕೆಯ ಕುರಿತು ಉಂಟಾಗಿದ್ದ ಆತಂಕ ಕಡಿಮೆಯಾಗಿದೆ. ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಹೊರ್ಮುಜ್ ಜಲಸಂಧಿಯನ್ನು ಯಾವುದೇ ಅಡಚಣೆಯಿಲ್ಲದೆ ದಾಟಿ ಗುಜರಾತ್‌ನ ಮುಂದ್ರಾ ಬಂದರನ್ನು ಸುರಕ್ಷಿತವಾಗಿ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್)ಗಾಗಿ ತರಲಾಗುತ್ತಿರುವ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯಲ್ಲಿ, ಮೊದಲ ಹಂತವಾಗಿ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್ ಅನಿಲವನ್ನು ಇಳಿಸಲಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಕ್ಯಾಂಟೀನ್ ಖರೀದಿಸಲು ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಾ. 17. 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಮೊಬೈಲ್ ಕ್ಯಾಂಟೀನ್ ಖರೀದಿಸಲು ಸಹಾಯ ಕಾರ್ಯಕ್ರಮದಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಜಿದಾರರು ಅರ್ಜಿ ನಮೂನೆಯನ್ನು ಪಡೀಲ್ `ಪ್ರಜಾ ಸೌಧ’ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರದಲ್ಲಿರುವ  ಪ್ರವಾಸೋದ್ಯಮ ಇಲಾಖೆ  ಉಪ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು. ಸಹಾಯ ಕಾರ್ಯಕ್ರಮದಡಿ ಮೊಬೈಲ್ ಕ್ಯಾಂಟೀನ್ ಖರೀದಿಸಲು ಅರ್ಜಿ ಸಲ್ಲಿಸಲು ಏಪ್ರಿಲ್ 6  ಕೊನೆಯ ದಿನ.

ಮೊಬೈಲ್ ಕ್ಯಾಂಟೀನ್ ಖರೀದಿಸಲು ಅರ್ಜಿ ಆಹ್ವಾನ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್‌ ಕಡಬ) newskadaba.com ಮಾ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ  ಏರ್ಪಡಿಸಲಾಗಿದೆ. ಮಾರ್ಚ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಮಾರ್ಚ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಮಾರ್ಚ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ
Scroll to Top