ಪದವೀಧರರಿಗೆ ಗುಡ್‌ನ್ಯೂಸ್‌; ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಫೆ.06 ಬೆಂಗಳೂರು: ಸಾರ್ವಜನಿಕ ವಲಯದ ಭಾರತದ ಅತಿದೊಡ್ಡ ಬ್ಯಾಂಕ್‌ ಎಸ್‌ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಮತ್ತೊಮ್ಮೆ ಅರ್ಜಿ ಸರ್ಕಲ್‌ ಬೇಸ್ಡ್‌ ಆಫೀಸರ್ಸ್‌ ಹುದ್ದೆ ಇದಾಗಿದ್ದು (Bank Jobs), ಕರ್ನಾಟಕದಲ್ಲಿಯೇ 211 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆಬ್ರವರಿ 18. ಸರ್ಕಲ್‌ ಬೇಸ್ಡ್‌ ಆಫೀಸರ್ಸ್‌ ಹುದ್ದೆ ಇದಾಗಿದ್ದು, ರೆಗ್ಯುಲರ್‌ 2,050 ಮತ್ತು ಬ್ಯಾಕ್‌ಲಾಗ್‌ 223 ಹುದ್ದೆಗಳಿದೆ. ದೇಶದ ಯಾವುದೇ […]

ಪದವೀಧರರಿಗೆ ಗುಡ್‌ನ್ಯೂಸ್‌; ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಫೆ.06 ಬೆಂಗಳೂರು: ರಾಜ್ಯದಲ್ಲಿ ಮೆಟ್ರೋ ಪ್ರಯಾಣ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ತತ್ತರಿಸುತ್ತಿರುವಾಗಲೇ ವಿದ್ಯುತ್ ದರ ಏರಿಕೆಯ ಬರೆಯೂ ಆಗಲಿದ್ದು, ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.ವಿದ್ಯುತ್ ದರ ಏರಿಕೆ ಮಾಡುವಂತೆ ಕೋರಿ ಎಲ್ಲಾ ಎಸ್ಕಾಂಗಳು ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಯೂನಿಟ್‌ಗೆ ೧ ರೂ. ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಎಸ್ಕಾಂಗಳು ಮನವಿ ಮಾಡಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಎಸ್ಕಾಂಗಳ ಪ್ರಸ್ತಾವನೆ

ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಳ್ತಿಲದಲ್ಲಿ ಮನೆಮಂದಿ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ಚಿನ್ನ ಕಳವು

(ನ್ಯೂಸ್‌ ಕಡಬ) newskadaba.com,ಫೆ.06 ಬಂಟ್ವಾಳ: ಜಾತ್ರೆಗೆ ತೆರಳಿದ ಸಮಯದಲ್ಲಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ನಡೆದಿದೆ. ಸುಮಾರು 9 ಪವನ್ ಚಿನ್ನವನ್ನು ಕಳ್ಳರು ಕದ್ದೊಯ್ದಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮನೆ ಮಾಲಕ ಸತೀಶ್ ಶೆಣೈ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಫೆ.4ರಂದು ಕಶೇಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಜಾತ್ರೋತ್ಸವ ಇದ್ದುದ್ದರಿಂದ ಪತ್ನಿಯೊಂದಿಗೆ ಮನೆಗೆ ಬೀಗ ಹಾಕಿ ಸಂಜೆ 6.45 ಕ್ಕೆ ಮನೆಯಿಂದ

ಬಾಳ್ತಿಲದಲ್ಲಿ ಮನೆಮಂದಿ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ಚಿನ್ನ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬಸ್ ಡಿಕ್ಕಿ ಪ್ರಕರಣ – ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ದೀಪ್ತಿ ತಾಯಿ

(ನ್ಯೂಸ್‌ ಕಡಬ) newskadaba.com,ಫೆ.06: ನಗರದ ನಂತೂರು ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ಸಂಭವಿಸಿದ ಹೃದಯ ವಿದ್ರಾವಕ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ದೀಪ್ತಿ (24) ಎಂಬ ಯುವತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಅತ್ಯಂತ ನೋವಿನ ಅಂಶವೆಂದರೆ, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಅದೇ ಬಸ್‌ನಲ್ಲಿ ಅವರ ತಾಯಿಯೂ ಪ್ರಯಾಣಿಸುತ್ತಿದ್ದರು… ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿರುವ ಶಾಲಿನಿ ಅವರ ಐದು ಹೆಣ್ಣುಮಕ್ಕಳಲ್ಲಿ ದೀಪ್ತಿ ಹಿರಿಯವಳು. ಪ್ರೀತಿಯ ಅಕ್ಕನನ್ನು ಕಳೆದುಕೊಂಡ ಕಿರಿಯ ಸಹೋದರಿಯರ ಆಕ್ರಂದನ

ಮಂಗಳೂರು : ಬಸ್ ಡಿಕ್ಕಿ ಪ್ರಕರಣ – ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ದೀಪ್ತಿ ತಾಯಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ

(ನ್ಯೂಸ್‌ ಕಡಬ) newskadaba.com,ಫೆ.06: ಕುಪ್ಪೆಪದವು-ಕಲ್ಲಾಡಿ-ಪೂವಣಿಬೆಟ್ಟು-ಮಂಗಳೂರು ಮಾರ್ಗದಲ್ಲಿ ಬುಧವಾರ ಸಂಭವಿಸಬಹುದಾಗಿದ್ದ ಭಾರೀ ಅಪಘಾತವೊಂದು ಖಾಸಗಿ ಬಸ್ ಚಾಲಕನ ಜಾಗರೂಕತೆ ಮತ್ತು ಸಮಯೋಚಿತ ನಿರ್ಧಾರದಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ.ಕುಪ್ಪೆಪದವಿನಿಂದ ಕಲ್ಲಾಡಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನೇರಳಿಕೆಯಲ್ಲಿನ ಕೆಳಮುಖ ತಿರುವು ಪಡೆಯುವ ವೇಳೆ ಅಕಸ್ಮಾತ್ತಾಗಿ ಬ್ರೇಕ್ ವೈಫಲ್ಯಕ್ಕೆ ಒಳಗಾಯಿತು. ಪರಿಸ್ಥಿತಿಯ ಗಂಭೀರತೆಯನ್ನು ತಕ್ಷಣವೇ ಅರಿತ ಚಾಲಕ ವಾಸು ಅಲಿಯಾಸ್ ಅಮ್ಮಿ ಅವರು, ಬಸ್ಸನ್ನು ಬಲಭಾಗದಲ್ಲಿರುವ ಗುಡ್ಡದ ಅಂಚಿನ ಚರಂಡಿಯ ಕಡೆಗೆ ತಿರುಗಿಸಿದರು. ಪರಿಣಾಮವಾಗಿ ಬಸ್ಸಿನ ಚಕ್ರಗಳು ಚರಂಡಿಯಲ್ಲಿ ಸಿಲುಕಿಕೊಂಡು ದೊಡ್ಡ

ಮಂಗಳೂರು : ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

WPL 2026 ಫೈನಲ್‌: ಡೆಲ್ಲಿ ಕ್ಯಾಪಿಟಲ್ಸ್‌ನ್ನು 6 ವಿಕೆಟ್‌ಗಳಿಂದ ಮಣಿಸಿದ RCB – ಎರಡನೇ ಬಾರಿ ಚಾಂಪಿಯನ್!

(ನ್ಯೂಸ್‌ ಕಡಬ) newskadaba.com,ಫೆ.06: ಆರ್‌ಸಿಬಿ (RCB) ಅಭಿಮಾನಿಗಳಿಗೆ ಇದೊಂದು ಐತಿಹಾಸಿಕ ಕ್ಷಣ. WPL 2026 ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿ ಬೌಲರ್‌ಗಳ ಸಂಘಟಿತ ದಾಳಿಗೆ ಸಿಲುಕಿ ಸಾಧಾರಣ ಮೊತ್ತಕ್ಕೆ ಕುಸಿಯಿತು. ಆರ್‌ಸಿಬಿಯ ಸ್ಪಿನ್ನರ್‌ಗಳು ಮಧ್ಯದ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಮೂಲಕ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಶ್ರೇಯಾಂಕಾ ಪಾಟೀಲ್ ಅಥವಾ

WPL 2026 ಫೈನಲ್‌: ಡೆಲ್ಲಿ ಕ್ಯಾಪಿಟಲ್ಸ್‌ನ್ನು 6 ವಿಕೆಟ್‌ಗಳಿಂದ ಮಣಿಸಿದ RCB – ಎರಡನೇ ಬಾರಿ ಚಾಂಪಿಯನ್! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಿಫ್ಟ್‌ನಲ್ಲಿ ಅಗ್ನಿ ಅವಘಡ: ಹೈಡ್ರೋಜನ್ ಬಲೂನ್ ಸ್ಫೋಟಗೊಂಡು ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,ಫೆ.06: ಮುಂಬೈಯಲ್ಲಿನ ವಸತಿ ಕಟ್ಟಡವೊಂದರ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿರುವ ಭಯಾನಕ ಘಟನೆ ಸಿಸಿ ಕ್ಯಾಮರಾ ದೃಶ್ಯದಲ್ಲಿ ದಾಖಲಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಲಿಫ್ಟ್ ಒಳಗೆ ಪ್ರವೇಶಿಸುತ್ತಿರುವುದು ಕಾಣುತ್ತದೆ. ಅವರೊಂದಿಗೆ ಮತ್ತೊಬ್ಬ ವ್ಯಕ್ತಿ ಟ್ರಾಲಿ ಬ್ಯಾಗ್ ಹಿಡಿದು ಲಿಫ್ಟ್‌ಗೆ ಬರುತ್ತಾರೆ. ಲಿಫ್ಟ್ ಬಾಗಿಲು ಮುಚ್ಚಿದ ತಕ್ಷಣವೇ ಹೈಡ್ರೋಜನ್ ತುಂಬಿದ ಬಲೂನ್‌ಗಳು ಏಕಾಏಕಿ ಸ್ಫೋಟಗೊಂಡಿವೆ. ಸ್ಫೋಟದ ಪರಿಣಾಮ ಬೆಂಕಿ

ಲಿಫ್ಟ್‌ನಲ್ಲಿ ಅಗ್ನಿ ಅವಘಡ: ಹೈಡ್ರೋಜನ್ ಬಲೂನ್ ಸ್ಫೋಟಗೊಂಡು ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ ಮಹಾಕುಂಭಮೇಳದ ಸುಂದರಿ

(ನ್ಯೂಸ್‌ ಕಡಬ) newskadaba.com,ಫೆ.06: ಮಹಾಕುಂಭಮೇಳದ ವೇಳೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮೊನಾಲಿನಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು ಮಣಿ ಸರಗಳನ್ನು ಮಾರುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ಅವರಿಗೆ ಹಿಂದಿ ಚಿತ್ರರಂಗದಿಂದ ಅವಕಾಶಗಳು ಬಂದಿತ್ತು. ಅವರಿಗೆ ನಾಯಕ ನಟಿಯಾಗುವ ಅವಕಾಶ ಸಿಕ್ಕಿತು. ಇದೀಗ ಅವರು ಶೂಟಿಂಗ್ ಮುಗಿಸಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಮೊನಾಲಿಸಾ

ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ ಮಹಾಕುಂಭಮೇಳದ ಸುಂದರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

(ನ್ಯೂಸ್‌ ಕಡಬ) newskadaba.com,ಫೆ.06: ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ/ ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಹಸ್ತ / ಯೋಗ: ಧೃತಿ / ಕರಣ: ಕೌಲವ ಸೂರ್ಯೋದಯ – 06.46 ಸೂರ್ಯಾಸ್ತ – 6.23 ರಾಹುಕಾಲ – 10.30-12.00 ಯಮಗಂಡ ಕಾಲ – 3.00- 4.30 ಗುಳಿಕ ಕಾಲ – 7.30-9.00 ರಾಶಿಭವಿಷ್ಯ : ಮೇಷ: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,ಫೆ.06: ಪಾಣೆಮಂಗಳೂರು ಸಮೀಪ ಕಂಚಿಕಾರಪೇಟೆ ಬಳಿ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ಮೃತದೇಹವೊಂದು ಪತ್ತೆಯಾಗಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪ್ರಕಾಶ್ (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಂಚಿಕಾರಪೇಟೆ ಸೇತುವೆ ಬಳಿ ನದಿ ಮಧ್ಯೆ ತೇಲಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದು, ಕೂಡಲೇ ದೋಣಿ ಸಹಾಯದಿಂದ ಸ್ಥಳೀಯರ ನೆರವಿನಿಂದ ದಡಕ್ಕೆ ತರಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top